Homeಮುಖಪುಟಸಿಎಂ ಬೊಮ್ಮಾಯಿ ವಿರುದ್ಧ ಸಾವಿರಾರು ಕೋಟಿ ಭ್ರಷ್ಟಾಚಾರದ ಆರೋಪ ಮಾಡಿದ ಓಲೇಕಾರ್ ರಾಜೀನಾಮೆ

ಸಿಎಂ ಬೊಮ್ಮಾಯಿ ವಿರುದ್ಧ ಸಾವಿರಾರು ಕೋಟಿ ಭ್ರಷ್ಟಾಚಾರದ ಆರೋಪ ಮಾಡಿದ ಓಲೇಕಾರ್ ರಾಜೀನಾಮೆ

- Advertisement -
- Advertisement -

ಹಾವೇರಿ ಎಸ್‌ಸಿ ಮೀಸಲು ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ನೆಹರು ಓಲೇಕಾರ್‌ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪಿದ್ದರಿಂದ ಕ್ರೋಧಗೊಂಡಿರುವ ಅವರು ಸಿಎಂ ಬೊಮ್ಮಾಯಿ ವಿರುದ್ಧ ಹರಿಹಾಯ್ದಿದ್ದಾರೆ. ಬೊಮ್ಮಾಯಿಯವರು ಹನಿ ನೀರಾವರಿ ಯೋಜನೆಯಲ್ಲಿ ಕಳಪೆ ಕಾಮಗಾರಿಯಿಂದ 15,000 ಕೋಟಿ ರೂ ಭ್ರಷ್ಟಾಚಾರವೆಸಗಿದ್ದಾರೆ ಎಂದು ಆರೋಪಿಸಿದ್ದಲ್ಲದೇ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಹಾವೇರಿ ಕ್ಷೇತ್ರಕ್ಕೆ ಗವಿಸಿದ್ಧಪ್ಪ ದ್ಯಾಮಣ್ಣವರವರಿಗೆ ಬಿಜೆಪಿ ಟಿಕೆಟ್‌ ನೀಡಿದೆ. ಇದರಿಂದ ಕುಪಿತಗೊಂಡಿರುವ ಓಲೇಕಾರ್ ಸಿಎಂ ವಿರುದ್ಧ ಏಕವಚನದಲ್ಲೇ ಮಾತನಾಡಿ“ಬೊಮ್ಮಾಯಿ ಅವರು ಮಾಡಿರುವ ಹಗರಣಗಳನ್ನು ಬಹಿರಂಗಪಡಿಸುತ್ತೇನೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆದ ನಂತರ ಮತ್ತು ಅದಕ್ಕಿಂತ ಪೂರ್ವದಲ್ಲಿ ಹಲವಾರು ಹಗರಣಗಳನ್ನು ಮಾಡಿದ್ದಾರೆ. ಅವರಲ್ಲಿ ಹಲವಾರು ನ್ಯೂನತೆಗಳಿವೆ. ಮಂದಿನ ದಿನಗಳಲ್ಲಿ ಅವುಗಳನ್ನು ಸಾರ್ವಜನಿಕರ ಗಮನಕ್ಕೆ ತರಲಾಗುವುದು” ಎಂದು ಹೇಳಿದ್ದಾರೆ.

ಓಲೇಕಾರ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿಯವರು, ‘15,000 ಕೋಟಿ ಹನಿ ನೀರಾವರಿ ಹಣವನ್ನು ಕೊಳ್ಳೆ ಹೊಡೆದಿದ್ದರೆ ಅದರ ದಾಖಲೆ ತೋರಿಸಲಿ. ದಾಖಲೆ ಸಮೇತ ಆರೋಪ ಮಾಡಲಿ, ಹೇಳಿಕೆಯಿಂದ ಎಲ್ಲವೂ ನಿಜವಾಗುವುದಿಲ್ಲ. ಯಾವ ಆರೋಪ ಬೇಕಾದರೂ ಮಾಡಲಿ. ಯಾವುದೇ ಆರೋಪ ದಾಖಲೆ ಸಮೇತ ಮಾಡಲಿ’ ಎಂದಿದ್ದಾರೆ.

2008ರಲ್ಲಿ ಕ್ಷೇತ್ರ ಮರುವಿಂಗಡಣೆ ಬಳಿಕ ಹಾವೇರಿಯು ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾಗಿ ಬದಲಾಯಿತು. 2008ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನೆಹರು ಓಲೇಕಾರ್‌ ಶಾಸಕರಾಗಿದ್ದರು. 2013ರಲ್ಲಿ ಕೆಜೆಪಿ ಯಿಂದ ಸ್ಪರ್ಧಿಸಿ ಸೋತಿದ್ದರು. 2018ರ‌ಲ್ಲಿ ಮತ್ತೆ ಬಿಜೆಪಿಯಿಂದ ಸ್ಪರ್ಧಿಸಿ ಶಾಸಕರಾಗಿದ್ದರು.

ಸದ್ಯ ಬಿಜೆಇ ತೊರೆಯುವುದಾಗಿ ಘೋಷಿಸಿರುವ ಅವರು ಜೆಡಿಎಸ್ ಸೇರಿದಂತೆ ಮತ್ತೆರೆಡು ಪಕ್ಷದಿಂದ ಟಿಕೆಟ್ ನೀಡುವ ಆಫರ್ ಬಂದಿದೆ ಎಂದು ಸಹ ಹೇಳಿದ್ದಾರೆ.

ಲಕ್ಷ್ಮಣ ಸವದಿ, ಆರ್ ಶಂಕರ್, ಎಂ.ಪಿ ಕುಮಾರಸ್ವಾಮಿ, ಎಸ್.ಅಂಗಾರರ ನಂತರ ಪಕ್ಷದ ತೊರೆದ ಮತ್ತೊಬ್ಬ ಶಾಸಕ ನೆಹರೂ ಓಲೇಕಾರ್ ಆಗಿದ್ದಾರೆ. ಸುಮಾರು 50ಕ್ಕೆ ಹೆಚ್ಚು ಟಿಕೆಟ್ ಆಕಾಂಕ್ಷಿಗಳು ಬಿಜೆಪಿ ವಿರುದ್ಧ ಬಂಡಾಯ ಸಾರಿದ್ದು, ಪಕ್ಷೇತರರಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ; ಬಿಜೆಪಿ ಟಿಕೆಟ್ ಸಿಗದ ಕಾರಣಕ್ಕೆ ಇದುವರೆಗೂ ಬಂಡಾಯವೆದ್ದ ಆಕಾಂಕ್ಷಿಗಳ ಪಟ್ಟಿ ಇಲ್ಲಿದೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ನಾನು ಆರ್‌ಎಸ್‌ಎಸ್ ಸದಸ್ಯ, ಕರೆದರೆ ಸಂಸ್ಥೆಗೆ ಹಿಂತಿರುಗಲು ಸಿದ್ಧ..’; ಬೀಳ್ಕೊಡುಗೆ ಸಮಾರಂಭದಲ್ಲಿ ಘೋಷಿಸಿದ ಹೈಕೋರ್ಟ್‌...

0
ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಸೋಮವಾರ ನಿವೃತ್ತರಾದ ನ್ಯಾಯಮೂರ್ತಿ ಚಿತ್ತ ರಂಜನ್ ದಾಶ್ ಅವರು, 'ನಾನು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸದಸ್ಯ' ಎಂದು ಹೇಳಿದ್ದಾರೆ. ನ್ಯಾಯಾಧೀಶರು ಮತ್ತು ಬಾರ್‌ ಕೌನ್ಸಿಲ್‌ ಸದಸ್ಯರ ಸಮ್ಮುಖದಲ್ಲಿ...