Homeಕ್ರೀಡೆಒಲಂಪಿಕ್ಒಲಿಂಪಿಯನ್‌ ವಂದನಾ ಅವರ ಜಾತಿ ನಿಂದನೆ; ಮತ್ತೊಬ್ಬನ ಬಂಧನ

ಒಲಿಂಪಿಯನ್‌ ವಂದನಾ ಅವರ ಜಾತಿ ನಿಂದನೆ; ಮತ್ತೊಬ್ಬನ ಬಂಧನ

- Advertisement -
- Advertisement -

ರಾಷ್ಟ್ರೀಯ ಮಹಿಳಾ ಹಾಕಿ ತಂಡದ ಪ್ರಮುಖ ಆಟಗಾರ್ತಿ, ಒಲಿಂಪಿಕ್‌ ಸಾಧಕಿ ವಂದನಾ ಕಟಾರಿಯಾ ಅವರ ಕುಟುಂಬದ ಮೇಲೆ ಜಾತಿ ನಿಂದನೆ ಮಾಡಿದ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಬಂಧನಕ್ಕೆ ಒಳಗಾದವರ ಸಂಖ್ಯೆ ಮೂರಕ್ಕೆ ಏರಿದೆ.

ಇಪ್ಪತ್ತೆರಡು ವರ್ಷದ ಸುಮಿತ್ ಚೌಹಾಣ್‌ನನ್ನು ಶನಿವಾರದಂದು ಆತನ ಮನೆಯಿಂದ ಬಂಧಿಸಲಾಗಿದೆ ಎಂದು ಹರಿದ್ವಾರ ಎಸ್‌ಎಸ್‌ಪಿ ಸೆಂಥಿಲ್ ಆವೊದೈ ಕೃಷ್ಣರಾಜ್ ಎಸ್ ಹೇಳಿದ್ದಾರೆ.

ಇದನ್ನೂ ಓದಿ: ವಂದನಾ ಜಾತಿ ನಿಂದನೆ ಪ್ರಕರಣ; ಘಟನೆ ನಾಚಿಕೆಗೇಡು ಎಂದ ಹಾಕಿ ತಂಡದ ನಾಯಕಿ

ಆತನ ಬಂಧನದೊಂದಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಮೂವರನ್ನು ಬಂಧಿಸಲಾಗಿದೆ. ವಿಜಯ್ ಪಾಲ್ ಮತ್ತು ಆತನ ಸಹೋದರ ಅಂಕುರ್ ಪಾಲ್‌ನನ್ನು ಈ ಮೊದಲು ಬಂಧಿಸಲಾಗಿತ್ತು ಎಂದು ಸೆಂಥಿಲ್‌ ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆಯ ಸೆಕ್ಷನ್ 504 (ಶಾಂತಿಯ ಉಲ್ಲಂಘನೆಯನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಅವರೆಲ್ಲರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಸೆಂಥಿಲ್‌ ತಿಳಿಸಿದ್ದಾರೆ.

ಭಾರತೀಯ ಮಹಿಳಾ ಹಾಕಿ ತಂಡವು ಒಲಿಂಪಿಕ್ಸ್ ಸೆಮಿಫೈನಲ್‌ನಲ್ಲಿ ಅರ್ಜೆಂಟೀನಾ ವಿರುದ್ಧ ಸೋತ ತಕ್ಷಣ ವಂದನಾ ಅವರ ಮನೆಯ ಹೊರಗೆ ಸಂಭ್ರಮ ವ್ಯಕ್ತಪಡಿಸಿ, ಪಟಾಕಿಗಳನ್ನು ಸಿಡಿಸಿ ಜೊತೆಗೆ ಜಾತಿ ಮತ್ತು ಜನಾಂಗೀಯ ನಿಂದನೆಯನ್ನು ದುಷ್ಕರ್ಮಿಗಳು ಮಾಡಿದ್ದರು.

ಇದನ್ನೂ ಓದಿ: ‘ತಂಡದಲ್ಲಿ ದಲಿತರು ಹೆಚ್ಚು ಇದ್ದಿದ್ದರಿಂದ ಸೋಲಾಯಿತು!’; ಸಾಧಕಿ ವಂದನಾಗೆ ಜಾತಿ ನಿಂದನೆ

“ದಲಿತ ಆಟಗಾರರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಿದ್ದರಿಂದಲೇ ಆಟ ಸೋತಿದೆ. ದಲಿತರನ್ನು ಎಲ್ಲಾ ಆಟದಿಂದ ಹೊರಗೆ ಇಡಬೇಕು” ಎಂದು ದುಷ್ಕರ್ಮಿಗಳು ಹೇಳಿದ್ದಾರೆ ಎಂದು ವಂದನಾ ಅವರ ಸಹೋದರ ಶೇಖರ್‌ ಹೇಳಿದ್ದಾರೆ.

ಈತನ್ಮಧ್ಯೆ, ಕುಟುಂಬದ ಭದ್ರತೆಗಾಗಿ ಉತ್ತರಾಖಂಡ್‌ನ ರೊಷನಾಬಾದ್ ಪ್ರದೇಶದಲ್ಲಿ ಇರುವ ಒಲಿಂಪಿಯನ್ ವಂದನಾ ಅವರ ಮನೆಯ ಹೊರಗೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಒಲಿಂಪಿಕ್ಸ್‌ನಲ್ಲಿ ವಂದನಾ ಅವರ ಉತ್ತಮ ಪ್ರದರ್ಶನವನ್ನು ಗುರುತಿಸಿ ಅವರಿಗೆ 25 ಲಕ್ಷ ಬಹುಮಾನವನ್ನು ಘೋಷಿಸಿದ್ದಾರೆ. ಶನಿವಾರ ವಂದನಾ ಅವರೊಂದಿಗೆ ಮಾತನಾಡಿ ಅವರನ್ನು ಅಭಿನಂದಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: Fact Check: ಮುಸ್ಲಿಮರಿಂದ ಕಲ್ಲು ತೂರಾಟ- ಯುಪಿ ವೈದ್ಯೆ ವಂದನಾ ತಿವಾರಿ ಸಾವು: ಈ ಸುದ್ದಿ ನಿಜವಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...