ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಪುರುಷರ ಫ್ರೀಸ್ಟೈಲ್ 57 ಕೆಜಿ ವಿಭಾಗದ ಸೆಮಿ ಫೈನಲ್ ಪಂದ್ಯದಲ್ಲಿ ಕಜಕಿಸ್ತಾನದ ನುರಿಸ್ಲಾಮ್ ಸನಾಯೆವ್ ಎದುರು ಭರ್ಜರಿ ಜಯಗಳಿಸಿದ ಭಾರತದ ಕುಸ್ತಿಪಟು ರವಿ ದಹಿಯಾ ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ. ಈ ಮೂಲಕ ಭಾರತಕ್ಕೆ ಚಿನ್ನ ಅಥವಾ ಬೆಳ್ಳಿ ಪದಕ ಖಚಿತವಾಗಿದೆ.
ಕಜಕಿಸ್ತಾನದ ನುರಿಸ್ಲಾಮ್ ಸನಾಯೆವ್ ಎದುರು ಆರಂಭಿಕ ಹಂತದಲ್ಲಿ ಹಿನ್ನೆಡೆ ಅನುಭವಿಸಿದ್ದ ರವಿ ದಹಿಯಾ ಫಾಲ್ ಆಧಾರದಲ್ಲಿ ಜಯಗಳಿಸಿ ಫೈನಲ್ ಪ್ರವೇಶಿಸಿದ್ದಾರೆ.
RAVI ADVANCES TO FINAL!!#IND #RaviDahiya advances to the Final of Men’s freestyle 57 Kg by Victory by fall (VFA) against #KAZ Nurislam Sanayev
With this India is guaranteed their 4th medal in #Tokyo2020#Wrestling#Olympics#Cheer4India pic.twitter.com/AnyB1Hld9I
— SAIMedia (@Media_SAI) August 4, 2021
ಮತ್ತೊಬ್ಬ ಭಾರತದ ಕುಸ್ತಿಪಟು ದೀಪಕ್ ಪುನಿಯಾ ಪುರುಷರ ಫ್ರೀಸ್ಟೈಲ್ 86 ಕೆಜಿ ವಿಭಾಗದ ಸೆಮಿ ಫೈನಲ್ ಪಂದ್ಯದಲ್ಲಿ ಅಮೆರಿಕದ ಡೇವಿಡ್ ಟೈಲರ್ ವಿರುದ್ಧ ಸೆಣಸುತ್ತಿದ್ದಾರೆ. ಇನ್ನೂ ಫಲಿತಾಂಶ ಪ್ರಕಟವಾಗಿಲ್ಲ.
ಇದನ್ನೂ ಓದಿ: ಒಲಿಂಪಿಕ್ ಕುಸ್ತಿ: ಸೆಮಿಫೈನಲ್‌ಗೆ ಲಗ್ಗೆಯಿಟ್ಟ ಭಾರತದ ರವಿ ದಹಿಯಾ, ದೀಪಕ್ ಪುನಿಯಾ


