Homeಕ್ರೀಡೆಒಲಂಪಿಕ್ಒಲಿಂಪಿಕ್: ಭಾರತದ ಡಿಸ್ಕಸ್‌ ಎಸೆತ ಆಟಗಾರ್ತಿ‌ ಕಮಲ್‌‌ಪ್ರೀತ್‌ ಕೌರ್‌ ಫೈನಲ್‌ಗೆ

ಒಲಿಂಪಿಕ್: ಭಾರತದ ಡಿಸ್ಕಸ್‌ ಎಸೆತ ಆಟಗಾರ್ತಿ‌ ಕಮಲ್‌‌ಪ್ರೀತ್‌ ಕೌರ್‌ ಫೈನಲ್‌ಗೆ

- Advertisement -
- Advertisement -

ಭಾರತದ ಡಿಸ್ಕಸ್ ಎಸೆತಗಾರ್ತಿ‌ ಕಮಲ್‌ಪ್ರೀತ್ ಕೌರ್ ಒಲಿಂಪಿಕ್ಸ್‌ನಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡಿದ್ದು, ಅರ್ಹತಾ ಸುತ್ತಿನಲ್ಲಿ ಎರಡನೇ ಸ್ಥಾನ ಪಡೆದು ಫೈನಲ್‌ಗೆ ತಲುಪಿದ್ದಾರೆ. 25 ವರ್ಷದ ಕಮಲ್‌ಪ್ರೀತ್‌‌‌ ಬಿ ಗ್ರೂಪ್‌ನಲ್ಲಿದ್ದು ತನ್ನ ಮೂರನೇ ಮತ್ತು ಅಂತಿಮ ಎಸೆತದಲ್ಲಿ ಡಿಸ್ಕಸ್ ಅನ್ನು 64 ಮೀಟರ್ ದೂರಕ್ಕೆ ಎಸೆದು ಎರಡನೆ ಸ್ಥಾನಕ್ಕೆ ತಲುಪಿದ್ದಾರೆ. ಫೈನಲ್‌ ಪಂದ್ಯವು ಆಗಸ್ಟ್‌‌ 2ರ ಸೋಮವಾರದಂದು ನಡೆಯಲಿದ್ದು, ಒಟ್ಟ 12 ಮಂದಿ ಸ್ಪರ್ಧಿಗಳಿದ್ದಾರೆ.

ಪಂಜಾಬ್ ಮೂಲದ ಕಮಲ್‌ಪ್ರೀತ್‌‌‌ ಈ ವರ್ಷ ಉತ್ತಮ ಫಾರ್ಮ್‌ನಲ್ಲಿದ್ದು, ಇತ್ತೀಚೆಗೆ ಎರಡು ಬಾರಿ 65 ಮೀಟರ್ ದೂರ ಡಿಸ್ಕಸ್‌ ಎಸೆದು ದಾಖಲೆ ಮಾಡಿದ್ದರು. ಮಾರ್ಚ್‌ನಲ್ಲಿ ನಡೆದ ಫೆಡರೇಶನ್ ಕಪ್‌ನಲ್ಲಿ ಅವರು 65.06 ಮೀಟರ್ ಎಸೆದು ರಾಷ್ಟ್ರೀಯ ದಾಖಲೆಯನ್ನು ಮುರಿದ್ದರು. ಈ ಮೂಲಕ 65 ಮೀಟರ್ ದೂರಕ್ಕೆ ಡಿಸ್ಕಸ್ ಎಸೆದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ನಂತರ ಜೂನ್‌ನಲ್ಲಿ, ಇಂಡಿಯನ್ ಗ್ರ್ಯಾಂಡ್ ಪ್ರಿಕ್ಸ್ -4 ರ ಸಮಯದಲ್ಲಿ 66.59 ಮೀಟರ್ ಎಸೆತದೊಂದಿಗೆ ತನ್ನದೇ ರಾಷ್ಟ್ರೀಯ ದಾಖಲೆಯನ್ನು ಮುರಿದ ಅವರು ವಿಶ್ವ ಆರನೇ ಸ್ಥಾನಕ್ಕೇರಿದ್ದಾರೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌‌: ಬ್ಯಾಡ್ಮಿಂಟನ್‌ ತಾರೆ ‘ಪಿವಿ ಸಿಂಧು’ ಸೆಮಿಫೈನಲ್‌ಗೆ ಲಗ್ಗೆ!

ಶುಕ್ರವಾರ ನಡೆದ ಮಹಿಳಾ ಬ್ಯಾಡ್ಮಿಂಟನ್ ಸಿಂಗಲ್ಸ್‌ನ ಕ್ವಾರ್ಟರ್ ಫೈನಲ್‌ನಲ್ಲಿ ಜಪಾನ್‌ನ ಅಕಾನೆ ಯಮಗುಚಿಯನ್ನು ಭಾರತದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು 21-13, 22-20 ಅಂತರದಲ್ಲಿ ಸೋಲಿಸಿದ್ದಾರೆ. ಇಂದು ಸಂಜೆ 03:20 ಕ್ಕೆ ಅವರು ಚೈನೀಸ್‌ ತೈಪೆಯ ಥಾಯ್ ತ್ಸು ಯಿಂಗ್ ಅವರನ್ನು ಎದುರಿಸಲಿದ್ದಾರೆ.

ಭಾರತದ ಬಾಕ್ಸರ್‌‌‌ ಲವ್ಲಿನಾ ಬೊರ್ಗೊಹೈನ್‌ ಅವರು ಈ ಹಿಂದಿನ ವಿಶ್ವ ಚಾಂಪಿಯನ್‌ ಚೀನಾದ ತೈಪೆಯ ಚೆನ್ ನಿಯೆನ್ ಚಿನ್ ಅವರನ್ನು ಸೋಲಿಸಿ ಮಹಿಳಾ ವೆಲ್ಟರ್‌ವೈಟ್ (69 ಕೆಜಿ) ವಿಭಾಗದ ಸೆಮಿಫೈನಲ್‌ಗೆ ತಲುಪಿದ್ದಾರೆ. ಈ ಮೂಲಕ ಅವರು ಭಾತರಕ್ಕೆ ಕಂಚಿನ ಪದಕವನ್ನು ಖಾತ್ರಿ ಪಡಿಸಿದ್ದಾರೆ. ಲವ್ಲಿನಾ ಮುಂದಿನ ಪಂದ್ಯವನ್ನು ಆಗಸ್ಟ್‌‌ 4 ರ ಬುಧವಾರದಂದು ಟರ್ಕಿಯ ಬುಸೆನಾಜ್ ಸುರ್ಮೆನೆಲಿ ವಿರುದ್ದ ಸೆಣಸಲಿದ್ದಾರೆ. ಅಲ್ಲಿ ಗೆದ್ದರೆ ಅವರು ಚಿನ್ನದ ಪದಕ ಪಡೆಯಲು ಒಂದು ಪಂದ್ಯವನ್ನು ಆಡಬೇಕಿದೆ.

ಭಾರತೀಯ ಮಹಿಳಾ ಹಾಕಿ ತಂಡವು ಶುಕ್ರವಾರ ಐರ್ಲೆಂಡ್ ವಿರುದ್ಧ 1-0 ಅಂತರದಲ್ಲಿ ತನ್ನ ಮೊದಲ ಗೆಲುವನ್ನು ದಾಖಲಿಸಿದ್ದು, ಇಂದು ಮತ್ತೆ ಎರಡನೆ ಗೆಲುವನ್ನು ಸೌತ್‌ ಆಫ್ರಿಕಾ ತಂಡ ಎದುರು ಸಾಧಿಸಿದೆ. ‘ಎ’ ಫೋಲ್‌ನಲ್ಲಿರುವ ಭಾರತ ಮಹಿಳಾ ತಂಡವು ಸೌತ್‌ ಆಫ್ರಿಕಾ ಎದುರು 4-3 ಅಂತರದಲ್ಲಿ ಗೆದ್ದುಕೊಂಡಿದೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಭಾರತಕ್ಕೆ ಮತ್ತೊಂದು ಪದಕ ಖಚಿತ!

ಪುರುಷರ ಸೂಪರ್‌ ಹೆವಿ ವೈಟ್‌ ಬಾಕ್ಸಿಂಗ್‌ನಲ್ಲಿ ಗುರುವಾರದಂದು ಭಾರತದ ಸತೀಶ್ ಕುಮಾರ್ ಅವರು ಜಮೈಕಾದ ರಿಕಾರ್ಡೊ ಬ್ರೌನ್ ವಿರುದ್ಧ 4: 1 ರ ಸುತ್ತಿನಲ್ಲಿ ಗೆದ್ದು, ಕ್ವಾರ್ಟರ್ ಫೈನಲ್ ತಲುಪಿದ್ದಾರೆ. ಭಾನುವಾರದಂದು ಉಜ್ಬೇಕಿಸ್ತಾನದ ಬಾಖೋದಿರ್‌ ಜಲಾಲೋವ್ ಅವರನ್ನು ಎದುರಿಸಲಿದ್ದಾರೆ.

ಪುರುಷರ ಹಾಕಿ ಪಂದ್ಯದಲ್ಲಿ ಭಾರತವು ಜಪಾನ್‌ ವಿರುದ್ದ 5-3 ಅಂತರದಲ್ಲಿ ಜಯಭೇರಿ ಬಾರಿಸಿ, ಕ್ವಾರ್ಟರ್‌ ಫೈನಲ್‌ ತಲುಪಿದೆ. ಮುಂದಿನ ಪಂದ್ಯವು ಗ್ರೇಟ್‌ ಬ್ರಿಟನ್ ಜೊತೆ ಭಾನುವಾರ ಸಂಜೆ 05:30 ಗೆ ನಡೆಯಲಿದೆ.

ಇನ್ನು, ಗುರುವಾರ ಪುರುಷರ ವೈಯಕ್ತಿಕ ಬಿಲ್ಲುಗಾರಿಕೆಯಲ್ಲಿ ಅತನು ದಾಸ್ ಅವರು 2012 ರ ಚಾಂಪಿಯನ್‌ ದಕ್ಷಣ ಕೊರಿಯಾದ ಓಹ್ ಜಿನ್ ಹೈಕಿನ್ ಅವರನ್ನು ಸೋಲಿಸಿ ಪ್ರೀ ಕ್ವಾಟರ್‌ ಫೈನಲ್‌ಗೆ ತಲುಪಿದ್ದರು. ಆದರೆ ಶನಿವಾರ(ಇಂದು) ನಡೆದ ಜಪಾನಿನ ತಕಹಾರು ಫುರುಕವ ಅವರ ವಿರುದ್ದ 4-6 ಅಂತರದಲ್ಲಿ ಅವರು ಸೋಲುಂಡಿದ್ದಾರೆ.

ಟೋಕಿಯೊ ಒಲಿಂಪಿಕ್‌ನಲ್ಲಿ 49 ಕೆಜಿ ವೈಟ್‌ಲಿಫ್ಟಿಂಗ್‌ ವಿಭಾಗದಲ್ಲಿ ಮಣಿಪುರ ಮೂಲದ ಮಿರಾಬಾಯಿ ಚಾನು ಅವರು ಬೆಳ್ಳಿ ಗೆದ್ದುಕೊಂಡಿದ್ದರು. ಇದರ ನಂತರ ಭಾರತಕ್ಕೆ ಬಾಕ್ಸರ್‌‌‌ ಲವ್ಲಿನಾ ಬೊರ್ಗೊಹೈನ್‌ ಮೂಲಕ ಎರಡನೆ ಪದಕ ಖಚಿತಗೊಂಡಿದೆ.

ಇದನ್ನೂ ಓದಿ: ಒಂದಿಡೀ ಸಮುದಾಯ ಮತ್ತು ದೇಶ ಸಂಭ್ರಮಿಸುವ ಕ್ರೀಡಾಸ್ಪೂರ್ತಿ ರಾಷ್ಟ್ರೀಯತೆಯ ಒಲಿಂಪಿಕ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...