Homeಕರೋನಾ ತಲ್ಲಣಒಮೈಕ್ರಾನ್ ಆತಂಕ: ದೆಹಲಿಯಲ್ಲಿ ಕ್ರಿಸ್ಮಸ್‌ ಮತ್ತು ಹೊಸ ವರ್ಷಾಚರಣೆ ನಿಷೇಧ

ಒಮೈಕ್ರಾನ್ ಆತಂಕ: ದೆಹಲಿಯಲ್ಲಿ ಕ್ರಿಸ್ಮಸ್‌ ಮತ್ತು ಹೊಸ ವರ್ಷಾಚರಣೆ ನಿಷೇಧ

- Advertisement -
- Advertisement -

ಕೊರೊನಾ ವೈರಸ್ ಪ್ರಕರಣಗಳ ಹೆಚ್ಚಳ ಮತ್ತು ಒಮೈಕ್ರಾನ್‌ ರೂಪಾಂತರದ ಆತಂಕದಿಂದಾಗಿ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ)ವು ರಾಜ್ಯದಲ್ಲಿ ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಕೂಟ ನಡೆಯದಂತೆ ನೋಡಿಕೊಳ್ಳಲು ಬುಧವಾರ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ಜೊತೆಗೆ ಕ್ರಿಸ್‌ಮಸ್ ಮತ್ತು ಹೊಸ ವರ್ಷಕ್ಕೆ ಮುಂಚಿತವಾಗಿ ಸಂಭಾವ್ಯ ಕೊರೊನಾ ಸೂಪರ್‌ಸ್ಪ್ರೆಡರ್ ಪ್ರದೇಶಗಳನ್ನು ಗುರುತಿಸಲು ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳಿಗೆ (DMs) ಆದೇಶಿಸಿದೆ. ಜನರು ಸಾಮಾಜಿಕ ಅಂತರದ ಮಾನದಂಡಗಳನ್ನು ಅನುಸರಿಸುವುದನ್ನು ಮತ್ತು ಮಾಸ್ಕ್‌ಗಳನ್ನು ಧರಿಸುವ ಬಗ್ಗೆ ಖಚಿತಪಡಿಸಿಕೊಳ್ಳಲು ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಉಪ ಕಮಿಷನರ್‌ಗಳಿಗೆ (ಡಿಸಿಪಿಗಳು) ಪ್ರಾಧಿಕಾರವು ನಿರ್ದೇಶನ ನೀಡಿದೆ.

ಇದನ್ನೂ ಓದಿ: ಒಮೈಕ್ರಾನ್ ಆತಂಕದ ನಡುವೆಯೂ ಭಾರತದಲ್ಲಿ ಹೊಸ ಪ್ರಕರಣಗಳಲ್ಲಿ ಇಳಿಕೆ

“ಎಲ್ಲಾ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ತಮ್ಮ ವ್ಯಾಪ್ತಿಗೆ ಬರುವ ಸಂಪೂರ್ಣ ಪ್ರದೇಶದ ತೀವ್ರ ಸಮೀಕ್ಷೆಯನ್ನು ನಡೆಸಬೇಕು. ಕೊರೊನಾ ವೈರಸ್ ಮತ್ತು ಅದರ ಒಮೈಕ್ರಾನ್ ರೂಪಾಂತರದ ಸೂಪರ್‌ಸ್ಪ್ರೆಡರ್‌ಗಳಾಗುವ ಸಾಮರ್ಥ್ಯವನ್ನು ಹೊಂದಿರುವ ಕಾಲೋನಿಗಳ ಮಾರುಕಟ್ಟೆಗಳು ಮತ್ತು ಕಿಕ್ಕಿರಿದ ಸ್ಥಳಗಳನ್ನು ಗುರುತಿಸಬೇಕು” ಎಂದು ಡಿಡಿಎಂಎ ಆದೇಶದಲ್ಲಿ ತಿಳಿಸಿದೆ.

ಕೊರೊನಾ ಪ್ರಕರಣಗಳಲ್ಲಿ ಯಾವುದೇ ಸಂಭವನೀಯ ಉಲ್ಬಣವನ್ನು ತಪ್ಪಿಸಲು ಕೋವಿಡ್-ಸೂಕ್ತ ನಡವಳಿಕೆಯನ್ನು ಕಟ್ಟುನಿಟ್ಟಾಗಿ ಅನುಸರಿಸಲು ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚಿನ ನಿಗಾ ಇರಿಸಲು ಎಲ್ಲಾ DM ಗಳು ಮತ್ತು DCP ಗಳು ಪ್ರದೇಶಗಳಲ್ಲಿ ಸಾಕಷ್ಟು ಸಂಖ್ಯೆಯ ಜಾರಿ ತಂಡಗಳನ್ನು ನಿಯೋಜಿಸಬೇಕು ಎಂದು ಅದು ಹೇಳಿದೆ.

ಭಾರತದಾದ್ಯಂತ ಇಲ್ಲಿಯವರೆಗೆ 213 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ದೆಹಲಿಯಲ್ಲಿ 57 ಪ್ರಕರಣಗಳು ದಾಖಲಾಗಿದ್ದು, ಇದು ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗಿಂತ ಹೆಚ್ಚಗಿದೆ. ಉಳಿದಂತೆ ಮಹಾರಾಷ್ಟ್ರ (54), ತೆಲಂಗಾಣ (24), ಕರ್ನಾಟಕ (19), ರಾಜಸ್ಥಾನ (18) , ಕೇರಳ (15) ಮತ್ತು ಗುಜರಾತ್ (14) ಪ್ರಕರಣಗಳು ದಾಖಲಾಗಿದೆ.

ಇದನ್ನೂ ಓದಿ: ಒಮೈಕ್ರಾನ್ ವಿರುದ್ಧದ ಹೋರಾಟದಲ್ಲಿ ‘ಲಾಕ್‌ಡೌನ್’ ಕೊನೆಯ ಅಸ್ತ್ರವಾಗಿಬೇಕು: WHO

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ಕೇಜ್ರಿವಾಲ್ ಸಹಾಯಕ ಬಂಧನ

0
ಎಎಪಿ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಮತ್ತು ಮಾಜಿ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರನ್ನು ಶನಿವಾರ ದೆಹಲಿ...