Homeಕರೋನಾ ತಲ್ಲಣಓಮೈಕ್ರಾನ್ ಆತಂಕ: ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ ಘೋಷಣೆ

ಓಮೈಕ್ರಾನ್ ಆತಂಕ: ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ ಘೋಷಣೆ

- Advertisement -
- Advertisement -

ದೆಹಲಿಯಲ್ಲಿ ಕೊರೊನಾ ಪ್ರಕರಣಗಳಲ್ಲಿ ಹೆಚ್ಚಿನ ಏರಿಕೆ ಕಂಡುಬಂದಿರುವ ಕಾರಣ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ದೆಹಲಿಯಲ್ಲಿ ವಾರಾಂತ್ಯದ ಕರ್ಫ್ಯೂ ವಿಧಿಸಲು ಮಂಗಳವಾರ ನಿರ್ಧರಿಸಿದೆ. ಈ ಕರ್ಫ್ಯೂ ಅವಧಿಯಲ್ಲಿ ಅಗತ್ಯ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗುವುದು ಎಂದು ಅದು ಹೇಳಿದೆ.

ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 10 ರಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿದ್ದರೆ, ಇತರ ನಿರ್ಬಂಧಗಳು ರಾತ್ರಿ ಕರ್ಫ್ಯೂ ಜೊತೆಗೆ ಮುಂದಿನ ಆದೇಶದವರೆಗೆ ಮುಂದುವರಿಯುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: 3 ಡೋಸ್ ಲಸಿಕೆ ಪಡೆದ ಯುವಕನಲ್ಲಿಯೂ ಓಮಿಕ್ರಾನ್ ಸೋಂಕು: ಮುಂಬೈ ಪಾಲಿಕೆ

ಈ ಮಧ್ಯೆ, ಅತ್ಯಗತ್ಯ ಕಚೇರಿಗಳನ್ನು ಹೊರತುಪಡಿಸಿ ಉಳಿದ ಸರ್ಕಾರಿ ನೌಕರರನ್ನು ಮನೆಯಿಂದಲೇ ಕೆಲಸ ಮಾಡಲು ಕೇಳಲಾಗಿದ್ದು, ಖಾಸಗಿ ಕಚೇರಿಗಳು 50% ಸಾಮರ್ಥ್ಯದೊಂದಿಗೆ ಕೆಲಸ ಮಾಡುವಂತೆ ಆದೇಶಿಸಲಾಗಿದೆ.

ಬಸ್‌ಗಳು ಮತ್ತು ಮೆಟ್ರೋಗಳು ಪೂರ್ಣ ಸಾಮರ್ಥ್ಯದಲ್ಲಿ ಓಡುತ್ತವೆ

ಡಿಡಿಎಂಎ ಆದೇಶವನ್ನು ಘೋಷಿಸುವಾಗ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, “ಮೆಟ್ರೋಗಳ ಹೊರಗೆ ದೀರ್ಘ ಸರತಿ ಸಾಲುಗಳು ಮತ್ತು ಬಸ್ ನಿಲ್ದಾಣಗಳಲ್ಲಿ ಅವ್ಯವಸ್ಥೆ ಕಂಡುಬಂದಿದೆ. ಇದು ನಗರದಲ್ಲಿ ಓಮೈಕ್ರಾನ್ ಹರಡಲು ಸುಲಭವಾಗಿ ಕಾರಣವಾಗಬಹುದು. ಸಾರ್ವಜನಿಕ ಸಾರಿಗೆಗಳಾದ ಬಸ್‌ಗಳು ಮತ್ತು ಮೆಟ್ರೋಗಳು ಇಂದಿನಿಂದ ಪೂರ್ಣ ಸಾಮರ್ಥ್ಯದಲ್ಲಿ ಆದರೆ ಕಟ್ಟುನಿಟ್ಟಿನ ಕ್ರಮಗಳೊಂದಿಗೆ ಓಡಿಸಲು ಸರ್ಕಾರ ನಿರ್ಧರಿಸಿದೆ” ಎಂದು ಹೇಳಿದ್ದಾರೆ.

ಕಳೆದ ವಾರ ಸರ್ಕಾರವು ಬಸ್‌ಗಳು ಮತ್ತು ಮೆಟ್ರೋಗಳ ಸಾಮರ್ಥ್ಯವನ್ನು 50% ಕ್ಕೆ ನಿರ್ಬಂಧಿಸಲಾಗಿತ್ತು. ಹೀಗಾಗಿ ನಗರದ ಬಸ್ ನಿಲ್ದಾಣಗಳು ಮತ್ತು ಮೆಟ್ರೋ ನಿಲ್ದಾಣಗಳಲ್ಲಿ ಅವ್ಯವಸ್ಥೆ ಕಂಡುಬಂದಿತ್ತು.

ಇದನ್ನೂ ಓದಿ:2 ಡೋಸ್‌ ಪಡೆದವರಿಗಷ್ಟೇ ಮಾಲ್, ಥಿಯೇಟರ್‌‌ಗೆ ಪ್ರವೇಶ: ರಾಜ್ಯ ಸರ್ಕಾರ ನಿರ್ಧಾರ

ಅಗತ್ಯವಿದ್ದಲ್ಲಿ ಅಥವಾ ಅಗತ್ಯ ಸೇವೆಗಳಿಗಾಗಿ ಮಾತ್ರ ನಿವಾಸಿಗಳು ತಮ್ಮ ಮನೆಯಿಂದ ಹೊರಬರಬೇಕು ಎಂದು ಮನೀಶ್‌ ಸಿಸೋಡಿಯಾ ಒತ್ತಿ ಹೇಳಿದ್ದಾರೆ.

ಸೋಮವಾರ ದೆಹಲಿಯಲ್ಲಿ 4,099 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಸೋಂಕಿನಿಂದಾಗಿ ಒಬ್ಬರು ಸಾವನ್ನಪ್ಪಿದ್ದಾರೆ. 1,509 ಮಂದಿ ಚೇತರಿಸಿಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ಕಳೆದ 8-10 ದಿನಗಳಲ್ಲಿ, ದೆಹಲಿಯಲ್ಲಿ 11000 ಪಾಸಿಟಿವ್‌‌ ಪ್ರಕರಣಗಳು ವರದಿಯಾಗಿವೆ. ಅದರಲ್ಲಿ 350 ರೋಗಿಗಳು ಆಸ್ಪತ್ರೆಯಲ್ಲಿದ್ದಾರೆ. ಇವುಗಳಲ್ಲಿ 124 ಜನರು ಕೃತಕ ಆಮ್ಲಜನಕದ ಆರೈಕೆಯಲ್ಲಿದ್ದರೆ, ಏಳು ಜನರು ವೆಂಟಿಲೇಟರ್‌ಗಳಲ್ಲಿದ್ದಾರೆ ಎಂದು ಸಿಸೋಡಿಯಾ ಹೇಳಿದ್ದಾರೆ.

“ಓಮೈಕ್ರಾನ್ ಗ್ರಾಫ್ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ದೆಹಲಿ ಕೂಡಾ ಪ್ರಪಂಚದ ಇತರ ದೇಶಗಳಂತೆಯೇ ಅದೇ ಪ್ರವೃತ್ತಿಯನ್ನು ಹೊಂದಿದೆ. ಇದು ಯಾವುದೇ ಹಾನಿಗೆ ಕಾರಣವಾಗುವುದಿಲ್ಲ. ತಜ್ಞರ ಪ್ರಕಾರ, ಓಮಿಕ್ರಾನ್ ಸೌಮ್ಯವಾಗಿರುತ್ತದೆ ಮತ್ತು ಹೆಚ್ಚಿನ ರೋಗಿಗಳು ಲಕ್ಷಣರಹಿತವಾಗಿರುತ್ತಾರೆ. ಜನರು ಬೇಗನೆ ಸುಧಾರಿಸುತ್ತಿದ್ದಾರೆ. ನಾವು ಕೋವಿಡ್ ಬಗ್ಗೆ ಬಹಳ ಜಾಗರೂಕರಾಗಿರಬೇಕು ಮತ್ತು ಸರ್ಕಾರ ಸಿದ್ಧಪಡಿಸಿದ ಹೋಮ್ ಐಸೋಲೇಶನ್ ಮಾಡ್ಯೂಲ್ ಅನ್ನು ಅನುಸರಿಸಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಪ್ರಕರಣ ಹೆಚ್ಚಾದರೆ ಶಾಲೆ ಮುಚ್ಚಲು ಹಿಂದೆ ಸರಿಯುವುದಿಲ್ಲ: ಶಿಕ್ಷಣ ಸಚಿವ ನಾಗೇಶ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಭಾರತದಲ್ಲಿ ಬಿಕ್ಕಟ್ಟಿನಲ್ಲಿ ಪತ್ರಿಕಾ ಸ್ವಾತಂತ್ರ್ಯ: ವರದಿ

0
ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಸ್ಥಿತಿ ಅತ್ಯಂತ ಕಟ್ಟದಾಗಿದ್ದು, ನೆರೆಯ ಪಾಕಿಸ್ತಾನ, ಶ್ರೀಲಂಕಾ, ನೇಪಾಳಕ್ಕಿಂತಲೂ ಕಳಪೆಯಾಗಿದೆ. ಇದು ಪ್ರಜಾಪ್ರಭುತ್ವ ದೇಶಕ್ಕೆ ಯೋಗ್ಯವಾದ ಬೆಳವಣಿಗೆಯಲ್ಲ ಎಂದು ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ (ಆರ್‌ಎಸ್‌ಎಫ್) ಬಿಡುಗಡೆ ಮಾಡಿದ 2024ರ...