Homeಕೊರೊನಾ3 ಡೋಸ್ ಲಸಿಕೆ ಪಡೆದ ಯುವಕನಲ್ಲಿಯೂ ಓಮಿಕ್ರಾನ್ ಸೋಂಕು: ಮುಂಬೈ ಪಾಲಿಕೆ

3 ಡೋಸ್ ಲಸಿಕೆ ಪಡೆದ ಯುವಕನಲ್ಲಿಯೂ ಓಮಿಕ್ರಾನ್ ಸೋಂಕು: ಮುಂಬೈ ಪಾಲಿಕೆ

- Advertisement -
- Advertisement -

ನ್ಯೂಯಾರ್ಕ್‌ನಿಂದ ದೇಶಕ್ಕೆ ಹಿಂದಿರುಗಿದ 29 ವರ್ಷದ ಯುವಕ ಶುಕ್ರವಾರ ಕೊರೊನಾ ರೂಪಾಂತರ ತಳಿ ಓಮೈಕ್ರಾನ್ ಸೋಂಕಿಗೆ ಒಳಗಾಗಿದ್ದಾರೆ ಎಂದು ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಪ್ರಕಟಣೆಯಲ್ಲಿ ತಿಳಿಸಿದೆ.

ಈ ಪ್ರಕರಣದಲ್ಲಿ ವಿಶೇಷವೆಂದರೆ, ಯಾವುದೇ ರೋಗಲಕ್ಷಣಗಳಿಲ್ಲದ ಈ ಯುವಕ, ಫಿಜರ್‌ನ ಕೊರೋನ ವೈರಸ್ ಲಸಿಕೆಯನ್ನು ಮೂರು ಡೋಸ್ ತೆಗೆದುಕೊಂಡಿದ್ದಾರೆ ಎಂಬುದು. ಆದರೂ ಕೂಡ ಸೋಂಕು ಆವರಿಸಿದೆ.

ನವೆಂಬರ್ 9 ರಂದು ವಿಮಾನ ನಿಲ್ದಾಣದಲ್ಲಿ ನಡೆಸಿದ ಪರೀಕ್ಷೆಯಲ್ಲಿ ಅವರು ಕೊರೊನಾ ಸೋಂಕಿಗೆ ಒಳಗಾಗಿರುವುದು ಪತ್ತೆಯಾಗಿತ್ತು. ಬಳಿಕ ಅವರ ಮಾದರಿಗಳನ್ನು ಜೀನೋಮ್ ಸಿಕ್ವೀನ್ಸಿಂಗ್‌ಗಾಗಿ ಕಳುಹಿಸಲಾಯಿತು. ಅಲ್ಲಿ ಅವರು ಓಮಿಕ್ರಾನ್‌ಗೆ ಒಳಗಾಗಿದ್ದಾರೆ ಎಂಬುದು ಪತ್ತೆಯಾಗಿದೆ.

ಇದನ್ನೂ ಓದಿ: ವಿಶ್ವದೆಲ್ಲೆಡೆ ಕೊರೊನಾ ಹೊಸ ರೂಪಾಂತರ ‘ಓಮಿಕ್ರಾನ್’ ಆತಂಕ: ತಜ್ಞರು ಹೇಳುವುದೇನು?

” ಯುವಕನ ಸಂಪರ್ಕದಲ್ಲಿದ್ದ ಇಬ್ಬರು ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ. ರೋಗಿಯನ್ನು ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಯಾವುದೇ ರೋಗಲಕ್ಷಣಗಳಿಲ್ಲ” ಎಂದು ನಾಗರಿಕ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಮುಂಬೈನಲ್ಲಿ ಓಮಿಕ್ರಾನ್ ರೋಗಿಗಳ ಸಂಖ್ಯೆ 15 ಕ್ಕೆ ಏರಿಕೆಯಾಗಿದೆ, ಇದರಲ್ಲಿ ಐದು ಮಂದಿ ಮುಂಬೈ ಹೊರಗಿನವರು ಸೇರಿದ್ದಾರೆ. ಆದರೆ ಈ ಪೈಕಿ 13 ರೋಗಿಗಳು ಈಗಾಗಲೇ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

ನಗರದಲ್ಲಿ ಇದುವರೆಗೆ ಕಂಡುಬಂದ 15 ಓಮಿಕ್ರಾನ್ ರೋಗಿಗಳಲ್ಲಿ ಯಾರಲ್ಲೂ ತೀವ್ರತರವಾದ ರೋಗಲಕ್ಷಣಗಳು ಇರಲಿಲ್ಲ ಎಂದು BMC ಹೇಳಿದೆ. ಮಹಾರಾಷ್ಟ್ರದಲ್ಲಿ ಒಟ್ಟು ಓಮಿಕ್ರಾನ್ ರೋಗಿಗಳ ಸಂಖ್ಯೆ 40 ಕ್ಕೆ ಏರಿಕೆಯಾಗಿದೆ.


ಇದನ್ನೂ ಓದಿ: ಮಹಾರಾಷ್ಟ್ರದ ಮೊದಲ ಒಮೈಕ್ರಾನ್‌ ರೋಗಿ ಗುಣಮುಖ; ಆಸ್ಪತ್ರೆಯಿಂದ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...