Homeಕರ್ನಾಟಕರಾಜ್ಯದಲ್ಲಿ ’ಓಮಿಕ್ರಾನ್’ ಆತಂಕ: ಗಡಿ ಜಿಲ್ಲೆಗಳಲ್ಲಿ ಸೋಂಕು ನಿಯಂತ್ರಣಕ್ಕೆ ಕಟ್ಟೆಚ್ಚರ- ಸಿಎಂ

ರಾಜ್ಯದಲ್ಲಿ ’ಓಮಿಕ್ರಾನ್’ ಆತಂಕ: ಗಡಿ ಜಿಲ್ಲೆಗಳಲ್ಲಿ ಸೋಂಕು ನಿಯಂತ್ರಣಕ್ಕೆ ಕಟ್ಟೆಚ್ಚರ- ಸಿಎಂ

- Advertisement -
- Advertisement -

ವಿಶ್ವದಲ್ಲಿ ’ಓಮಿಕ್ರಾನ್’ ಬಗ್ಗೆ ಹೆಚ್ಚುತ್ತಿರುವ ಆತಂಕದ ಮಧ್ಯೆಯೇ ರಾಜ್ಯದಲ್ಲಿಯೂ ಸೋಂಕು ನಿಯಂತ್ರಣಕ್ಕೆ ಕ್ರಮ ವಹಿಸುತ್ತಿದ್ದು, ಗಡಿ ಜಿಲ್ಲೆಗಳಲ್ಲಿ ಸೋಂಕು ನಿಯಂತ್ರಣಕ್ಕೆ ಕಟ್ಟೆಚ್ಚರ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

“ರಾಜ್ಯಕ್ಕೆ ಕೇರಳದಿಂದ ಬರುವವರಿಂದ ಸೋಂಕು ಹರಡುತ್ತಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗುತ್ತಿದೆ. ಕೇರಳದಿಂದ ಬಂದಿರುವ ಅರೆವೈದ್ಯಕೀಯ ಸಿಬ್ಬಂದಿಗಳಲ್ಲಿ ಸೋಂಕು ಹೆಚ್ಚು ಕಾಣಿಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಕೇರಳ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಮಡಿಕೇರಿ, ಚಾಮರಾಜನಗರ, ಮೈಸೂರು ಗಡಿಗಳಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು. ಆರ್ ಟಿಸಿಪಿಆರ್ ಪರೀಕ್ಷೆ ನಡೆಸಿ ನೆಗಟಿವ್ ರಿಪೋರ್ಟ್ ಬಂದರೆ ಮಾತ್ರ ರಾಜ್ಯದೊಳಗೆ ಪ್ರವೇಶಕ್ಕೆ ಅನುಮತಿ ನೀಡಲಾಗುವುದು. ಕೇರಳ ರಾಜ್ಯದಿಂದ ಬರುವವರು ಎರಡೂ ಡೋಸ್‌ ಲಸಿಕೆ ಪಡೆದಿರಬೇಕು. RTPCR ಪರೀಕ್ಷೆಗಳನ್ನು ಹೆಚ್ಚಿಸಲು ಸೂಚನೆ ನೀಡಲಾಗಿದೆ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

“ಗಡಿ ಭಾಗಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಹೆಚ್ಚಿನ ಎಚ್ಚರಿಕೆ ನೀಡುವ ಬಗ್ಗೆ ಉತ್ತರ ನೀಡುತ್ತಾ, ಗಡಿಗಳನ್ನು ಸಂಪೂರ್ಣವಾಗಿ ತಪಾಸಣೆಗೆ ಒಳಪಡಿಸುವುದು. 16 ದಿನಗಳ ಹಿಂದೆ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಆರ್ ಟಿ ಸಿಪಿಆರ್ ಪರೀಕ್ಷೆ ಮಾಡಿಸುವುದು ಹಾಗೂ ಹಾಸ್ಟೆಲ್ ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ನೆಗಟಿವ್ ರಿಪೋರ್ಟ್ ಬಂದ ನಂತರದ 7 ನೇ ದಿನಕ್ಕೆ ಮತ್ತೊಮ್ಮೆ ಆರ್ ಟಿಸಿಪಿಆರ್ ಪರೀಕ್ಷೆ ಮಾಡಿಸಲು ಸೂಚನೆ ನೀಡಲಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಓಮಿಕ್ರಾನ್ ಆತಂಕ: ಹೆಚ್ಚಿನ ಪರೀಕ್ಷೆ, ಹಾಟ್‌ಸ್ಪಾಟ್‌ಗಳ ಮೇಲೆ ನಿಗಾ ಇರಿಸಲು ರಾಜ್ಯಗಳಿಗೆ ಕೇಂದ್ರದ ಸೂಚನೆ

“ದಕ್ಷಿಣ ಆಫ್ರಿಕಾ, ಹಾಂಕಾಂಗ್, ಬೊಟ್ಸ್ವಾನಾ ದೇಶಗಳಲ್ಲಿ ಹರಡುತ್ತಿರುವ ಸೋಂಕಿನ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ಪ್ರಧಾನಿಯವರು ಕೋವಿಡ್ ರೂಪಾಂತರಿ ನಿಯಂತ್ರಣಕ್ಕೆ ಹಲವಾರು ನಿರ್ದೇಶನಗಳನ್ನು ನೀಡಿದ್ದಾರೆ. ರಾಜ್ಯದಲ್ಲಿ ಇದುವರೆಗೂ ಹೊಸ ಪ್ರಬೇಧದ ಸೋಂಕಿನ ಪ್ರಕರಣ ಕಂಡುಬಂದಿಲ್ಲ. ಧಾರವಾಡ , ಮೈಸೂರು, ಬೆಂಗಳೂರಿನ ವಿದ್ಯಾರ್ಥಿ ಹಾಸ್ಟೆಲ್ ಗಳಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಹಾಸ್ಟೆಲ್ ಗಳನ್ನು ಕಂಟೈನ್ಮೆಂಟ್ ಮಾಡಿ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. SDM ಕಾಲೇಜನ ವೈದ್ಯರು, ಸಿಬ್ಬಂದಿಯನ್ನು ತಪಾಸಣೆಗೆ ಒಳಪಡಿಸಲಾಗುತ್ತಿದ್ದು, ಹೊರರೋಗಿಗಳನ್ನು ನಿರ್ಬಂಧಿಸಲಾಗಿದೆ. ಮೈಸೂರಿನಲ್ಲಿಯೂ ಸೋಂಕು ಕಾಣಿಸಿಕೊಂಡಿರುವ ಜಾಗಗಳನ್ನು ಕಂಟೇನಮೆಂಟ್ ಮಾಡಿ ತೀವ್ರ ನಿಗಾ ವಹಿಸಲಾಗಿದೆ. ಕೋವಿಡ್ ಪರೀಕ್ಷೆ ಮಾತ್ರವಲ್ಲದೇ ಚಿಕಿತ್ಸೆಯನ್ನು ನೀಡಲು ಪ್ರಾರಂಭಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಹೊರ ದೇಶದಿಂದ ಆಗಮಿಸುವ ಜನರನ್ನು ತಪಾಸಣೆಗೆ ಒಳಪಡಿಸಿ ನೆಗಟಿವ್ ರಿಪೋರ್ಟ್ ಬಂದರೆ ಮಾತ್ರ ನಗರ ಪ್ರವೇಶಕ್ಕೆ ಅನುಮತಿ ನೀಡುವುದು. ಇಲ್ಲವಾದಲ್ಲಿ ಕಂಟೈನ್‌ಮೆಂಟ್ ಸ್ಥಳಕ್ಕೆ ಸ್ಥಳಾಂತರಿಸುವುದು. ವಿಶೇಷವಾಗಿ ಓಮಿಕ್ರಾನ್ ಹೊಸ ಕೋವಿಡ್ ಸೋಂಕು ಕಾಣಿಸಿಕೊಂಡಿರುವ ಈ ಮೂರು ದೇಶಗಳಿಂದ ನಗರಕ್ಕೆ ಪ್ರಯಾಣಿಕರ ಆಗಮನವನ್ನು ಸಂಪೂರ್ಣವಾಗಿ ನಿಷೇದಿಸಬೇಕೆನ್ನುವ ಬೇಡಿಕೆಯನ್ನು ಕೇಂದ್ರ ಸರ್ಕಾರಕ್ಕೆ ಇಡಲಾಗಿದೆ” ಎಂದಿದ್ದಾರೆ.

ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಲು ಕೇಂದ್ರದ ಅನುಮತಿಗೆ ಪತ್ರ ಬರೆಯಲಾಗಿದೆ. ಮಾಲ್, ಸಾರ್ವಜನಿಕ ಸ್ಥಳಗಳು, ಕಚೇರಿಗಳಲ್ಲಿ ಎಲ್ಲರಿಗೂ ಎರಡೂ ಡೋಸ್ ಆಗಿರಲೇಬೇಕು. ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವವರೂ ಕೂಡ ಎರಡು ಡೋಸ್ ಪಡೆದಿರಬೇಕು. ಮಾಲ್ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಹಾಕುವ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ರಾಜ್ಯದಲ್ಲಿ 80 ಲಕ್ಷ ಲಸಿಕೆ ಲಭ್ಯವಿದ್ದು, ಈಗಾಗಲೆ ಮೊದಲನೇ ಡೋಸ್ 91 ಲಕ್ಷವಾಗಿದೆ. ಡಿಸೆಂಬರ್ ಅಂತ್ಯದೊಳಗೆ 70% ರಷ್ಟು ಎರಡನೇ ಡೋಸ್ ನೀಡುವ ಗುರಿಯನ್ನು ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.


ಇದನ್ನೂ ಓದಿ: ವಿಶ್ವದೆಲ್ಲೆಡೆ ಕೊರೊನಾ ಹೊಸ ರೂಪಾಂತರ ‘ಓಮಿಕ್ರಾನ್’ ಆತಂಕ: ತಜ್ಞರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...