Homeಕರ್ನಾಟಕಓಮಿಕ್ರಾನ್ ಆತಂಕ: ರಾಜ್ಯದಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಸರ್ಕಾರದಿಂದ ನಿರ್ಬಂಧ

ಓಮಿಕ್ರಾನ್ ಆತಂಕ: ರಾಜ್ಯದಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಸರ್ಕಾರದಿಂದ ನಿರ್ಬಂಧ

- Advertisement -
- Advertisement -

ದೇಶಾದ್ಯಂತ ಕೊರೊನಾ ಪ್ರಕರಣಗಳು ವರದಿಯಾಗುತ್ತಿದ್ದು, ಸೋಂಕಿನ ಆತಂಕವಿನ್ನು ಕಡಿಮೆಯಾಗಿಲ್ಲ. ಇದರ ಜೊತೆಗೆ ಓಮಿಕ್ರಾನ್ ರೂಪಾಂತರಿಯ ಆತಂಕ ಮನೆಮಾಡಿದೆ. ಈ ಕಾರಣದಿಂದ ರಾಜ್ಯದಲ್ಲಿಯೂ ಹೊಸ ವರ್ಷದ ಸಂಭ್ರಮಾಚರಣೆಗೆ ಸರ್ಕಾರ ನಿರ್ಬಂಧ ವಿಧಿಸಿದೆ.

ಕೋವಿಡ್ ನಿಯಂತ್ರಣ ಕ್ರಮಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್‌, ಉನ್ನತ ಶಿಕ್ಷಣ, ಐಟಿಬಿಟಿ ಸಚಿವ ಅಶ್ವತ್ಥ್‌ ನಾಯಾರಣ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಆರೋಗ್ಯ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಹೊಸ ವರ್ಷದ ಸಂಭ್ರಮಾಚರಣೆ ಆರಂಭವಾಗಲಿರುವ ಡಿಸೆಂಬರ್ 30 ರಿಂದ ಜನವರಿ 2ರ ವರೆಗೆ ರಾಜ್ಯದಾದ್ಯಂತ ನಿರ್ಬಂಧ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ಡಿಜೆ, ಬಹಿರಂಗ ಸಂಭ್ರಮಾಚರಣೆಗೆ ಅವಕಾಶ ಇರುವುದಿಲ್ಲ. ಬಾರ್, ರೆಸ್ಟೋರೆಂಟ್ ಮತ್ತಿತರ ಸ್ಥಳಗಳಲ್ಲಿ 50 % ಮಂದಿಗೆ ಮಾತ್ರ ಪ್ರವೇಶ ನೀಡಬೇಕು ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ ಚರ್ಚೆ: ಅಧಿಕಾರ ಶಾಶ್ವತವಲ್ಲ ಎಂದ ಬಸವರಾಜ ಬೊಮ್ಮಾಯಿ

ಜೊತೆಗೆ ಬ್ರಿಗೇಡ್ ರಸ್ತೆ ಶಾಪ್ಸ್ ಅಂಡ್ ಅಸ್ಟಾಬ್ಲಿಷ್ ಮೆಂಟ್ ಅಸೋಸಿಯೇಷನ್ ಕೂಡ ಈ ವರ್ಷ ಕೂಡ ಸಂಭ್ರಮಾಚರಣೆ ಮಾಡದಿರಲು ಮುಂದಾಗಿದೆ.

ಹೀಗಾಗಿ ಈ ಬಾರಿಯೂ ನಗರದ ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಇರುವುದಿಲ್ಲ. ಸರ್ಕಾರ ಕ್ರಿಸ್‌ಮಸ್ ಆಚರಣೆಗೆ ಯಾವುವೇ ನಿರ್ಬಂಧ ಹೇರಿಲ್ಲ. ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಿಕೊಂಡು ಹಬ್ಬ ಆಚರಿಸಬಹುದಾಗಿದೆ.


ಇದನ್ನೂ ಓದಿ: ಐತಿಹಾಸಿಕ ನಿರ್ಧಾರ:ಟ್ರಾನ್ಸ್‌ಜೆಂಡರ್‌ಗಳನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಿದ ರಾಜ್ಯ ಪೊಲೀಸ್‌ ಇಲಾಖೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...