Homeಮುಖಪುಟಏಪ್ರಿಲ್ 16 ರಂದು ಮತಾಂತರ ವಿರೋಧಿ ಕಾಯ್ದೆಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್‌

ಏಪ್ರಿಲ್ 16 ರಂದು ಮತಾಂತರ ವಿರೋಧಿ ಕಾಯ್ದೆಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್‌

- Advertisement -
- Advertisement -

ಧಾರ್ಮಿಕ ಮತಾಂತರಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಏಪ್ರಿಲ್ 16 ರಂದು ಸುಪ್ರೀಂಕೋರ್ಟ್ ನಡೆಸಲಿದೆ. ದೇಶದ ಹಲವಾರು ರಾಜ್ಯಗಳಲ್ಲಿನ ಮತಾಂತರ ವಿರೋಧಿ ಕಾನೂನುಗಳ ಬಗ್ಗೆ ಕೆಲವು ಅರ್ಜಿಗಳು ಪ್ರಶ್ನಿಸಿದ್ದರೆ, ಮತ್ತೊಂದು ಅರ್ಜಿ ಬಲವಂತದ ಧಾರ್ಮಿಕ ಮತಾಂತರಗಳ ವಿರುದ್ಧ ಪರಿಹಾರ ಕೋರಿ ಸಲ್ಲಿಸಲಾಗಿದೆ.

ಸುಪ್ರೀಂಕೋರ್ಟ್ ವೆಬ್‌ಸೈಟ್‌ನಲ್ಲಿ ಏಪ್ರಿಲ್ 16 ರಂದು ಪ್ರಕಟವಾದ ಪ್ರಕರಣದ ಪಟ್ಟಿಯಲ್ಲಿ, ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ.ವಿ. ವಿಶ್ವನಾಥನ್ ಅವರ ಪೀಠದ ಮುಂದೆ ಈ ಅರ್ಜಿಗಳು ವಿಚಾರಣೆಗೆ ಬರಲಿದೆ ಎಂದು ಹೇಳಿದೆ.

ಜನವರಿ 2023 ರಲ್ಲಿ ನಡೆಸಲಾದ ವಿಚಾರಣೆಯ ಸಂದರ್ಭದಲ್ಲಿ, ಧಾರ್ಮಿಕ ಮತಾಂತರಗಳು ಗಂಭೀರ ವಿಷಯವಾಗಿದ್ದು ಅದಕ್ಕೆ ರಾಜಕೀಯ ಬಣ್ಣ ನೀಡಬಾರದು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿತ್ತು.

ವಂಚನೆಯ ಧಾರ್ಮಿಕ ಮತಾಂತರಗಳನ್ನು ನಿಯಂತ್ರಿಸಲು ಕೇಂದ್ರ ಮತ್ತು ರಾಜ್ಯಗಳಿಗೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶನ ಕೋರಿ ಸಲ್ಲಿಸಲಾದ ಅರ್ಜಿಯಲ್ಲಿ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರ ಸಹಾಯವನ್ನು ಸುಪ್ರಿಂಕೋರ್ಟ್ ಕೋರಿತ್ತು.

“ಬೆದರಿಕೆ, ಉಡುಗೊರೆಗಳು ಮತ್ತು ಹಣಕಾಸಿನ ನೆರವುಗಳ ಮೂಲಕ ಮೋಸ ಮಾಡುವ ಆಮಿಷ”ದ ಮೂಲಕ ಧಾರ್ಮಿಕ ಮತಾಂತರಗಳನ್ನು ತಡೆಯುವಂತೆ ಅರ್ಜಿಯಲ್ಲಿ ಕೋರಲಾಗಿತ್ತು.

ಸುಪ್ರೀಂ ಕೋರ್ಟ್ 2023 ರಲ್ಲಿ ಹಲವಾರು ರಾಜ್ಯಗಳ ಮತಾಂತರ ವಿರೋಧಿ ಕಾನೂನುಗಳನ್ನು ಪ್ರಶ್ನಿಸುವವರ ಅರ್ಜಿಗಳನ್ನು ಹೈಕೋರ್ಟ್‌ಗಳಿಂದ ಸುಪ್ರೀಂಕೋರ್ಟ್‌ಗೆ ವರ್ಗಾಯಿಸಲು ಸಾಮಾನ್ಯ ಅರ್ಜಿಯನ್ನು ಸಲ್ಲಿಸುವಂತೆ ಕೇಳಿಕೊಂಡಿತ್ತು.

“ಅಲಹಾಬಾದ್ ಹೈಕೋರ್ಟ್ ಮುಂದೆ; ಮಧ್ಯಪ್ರದೇಶ ಹೈಕೋರ್ಟ್ ಮುಂದೆ ಏಳು; ಗುಜರಾತ್ ಮತ್ತು ಜಾರ್ಖಂಡ್ ಹೈಕೋರ್ಟ್‌ಗಳಲ್ಲಿ ತಲಾ ಎರಡು; ಹಿಮಾಚಲ ಪ್ರದೇಶದ ಮುಂದೆ ಮೂರು ಮತ್ತು ಕರ್ನಾಟಕ ಮತ್ತು ಉತ್ತರಾಖಂಡ್ ಹೈಕೋರ್ಟ್‌ಗಳಲ್ಲಿ ತಲಾ ಒಂದು ಸೇರಿದಂತೆ ಇಂತಹ ಕನಿಷ್ಠ ಐದು ಅರ್ಜಿಗಳು ಸಲ್ಲಿಕೆಯಾಗಿವೆ” ಎಂದು ಅದು ಹೇಳಿತ್ತು.

ಮತಾಂತರದ ಕುರಿತಾದ ತಮ್ಮ ಕಾನೂನುಗಳ ಕೆಲವು ನಿಬಂಧನೆಗಳನ್ನು ತಡೆಹಿಡಿದ ಆಯಾ ಹೈಕೋರ್ಟ್‌ಗಳ ಮಧ್ಯಂತರ ಆದೇಶಗಳನ್ನು ಪ್ರಶ್ನಿಸಿ ಗುಜರಾತ್ ಮತ್ತು ಮಧ್ಯಪ್ರದೇಶ ರಾಜ್ಯಗಳು ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿವೆ.

ಜಮಿಯತ್ ಉಲಮಾ-ಐ-ಹಿಂದ್ ಸಂಘಟನೆಯು ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದ ಮತಾಂತರ ವಿರೋಧಿ ಕಾನೂನುಗಳ ವಿರುದ್ಧವೂ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತು ಮತ್ತು ಅಂತರ್ಧರ್ಮೀಯ ದಂಪತಿಗಳಿಗೆ “ಕಿರುಕುಳ” ನೀಡಲು ಮತ್ತು ಅವರನ್ನು ಕ್ರಿಮಿನಲ್ ಪ್ರಕರಣಗಳಲ್ಲಿ ಸಿಲುಕಿಸಲು ಅವುಗಳನ್ನು ಜಾರಿಗೆ ತರಲಾಗಿದೆ ಎಂದು ವಾದಿಸಿತ್ತು.

ಐದು ರಾಜ್ಯಗಳ ಎಲ್ಲಾ ಸ್ಥಳೀಯ ಕಾನೂನುಗಳ ನಿಬಂಧನೆಗಳು ವ್ಯಕ್ತಿಯೊಬ್ಬ ತನ್ನ ನಂಬಿಕೆಯನ್ನು ಬಹಿರಂಗಪಡಿಸುವಂತೆ ಒತ್ತಾಯಿಸುತ್ತವೆ ಮತ್ತು ಈ ಮೂಲಕ ಅವರ ಗೌಪ್ಯತೆಯ ಉಲ್ಲಂಘನೆ ಮಾಡುತ್ತದೆ ಎಂದು ಜಮಿಯತ್ ಉಲಮಾ-ಐ-ಹಿಂದ್ ಹೇಳಿತ್ತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಾಂಗ್ಲಾದೇಶ| ಶೇಖ್ ಹಸೀನಾ ಸೇರಿದಂತೆ 19 ಜನರ ವಿರುದ್ಧ ಬಂಧನ ವಾರಂಟ್

ಬಾಂಗ್ಲಾದೇಶ| ಶೇಖ್ ಹಸೀನಾ ಸೇರಿದಂತೆ 19 ಜನರ ವಿರುದ್ಧ ಬಂಧನ ವಾರಂಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...