Homeಮುಖಪುಟಏಪ್ರಿಲ್ 16ರಂದು ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧದ ಅರ್ಜಿಗಳ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್‌

ಏಪ್ರಿಲ್ 16ರಂದು ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧದ ಅರ್ಜಿಗಳ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್‌

- Advertisement -
- Advertisement -

ವಕ್ಫ್ (ತಿದ್ದುಪಡಿ) ಕಾಯ್ದೆ, 2025 ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (AIMPLB) ಸೇರಿದಂತೆ 10 ಅರ್ಜಿಗಳನ್ನು ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಸುಪ್ರೀಂಕೋರ್ಟ್ ಪೀಠವು ಏಪ್ರಿಲ್ 16ರಂದು  ನಡೆಸಲಿದೆ. ಸುಪ್ರೀಂಕೋರ್ಟ್ ವೆಬ್‌ಸೈಟ್ ಪ್ರಕಾರ, ವಿಚಾರಣೆಗಾಗಿ ತ್ರಿಸದಸ್ಯ ಪೀಠ ರಚನೆಯಾಗಿದ್ದು, ಮುಖ್ಯನ್ಯಾಯಮೂರ್ತಿ ಜೊತೆಗೆ, ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ.ವಿ. ವಿಶ್ವನಾಥನ್ ಇರಲಿದ್ದಾರೆ.

AIMPLB ಯ ಅರ್ಜಿಯ ಜೊತೆಗೆ, ಎಎಪಿ ನಾಯಕ ಅಮಾನತುಲ್ಲಾ ಖಾನ್, ನಾಗರಿಕ ಹಕ್ಕುಗಳ ರಕ್ಷಣಾ ಸಂಘ, ಅರ್ಷದ್ ಮದನಿ, ಸಮಸ್ತ ಕೇರಳ ಜಮಿಯತುಲ್ ಉಲೇಮಾ, ಅಂಜುಮ್ ಖಾದರಿ, ತೈಯಬ್ ಖಾನ್ ಸಲ್ಮಾನಿ, ಮೊಹಮ್ಮದ್ ಶಫಿ, ಮೊಹಮ್ಮದ್ ಫಜ್ಲುರ್ರಹೀಮ್ ಮತ್ತು ಆರ್‌ಜೆಡಿ ನಾಯಕ ಮನೋಜ್ ಕುಮಾರ್ ಝಾ ಅವರು ಸಲ್ಲಿಸಿರುವ ಅರ್ಜಿಗಳನ್ನು ವಿಚಾರಣೆಗೆ ಪಟ್ಟಿ ಮಾಡಲಾಗಿದೆ. ಸುಪ್ರೀಂಕೋರ್ಟ್ ರಿಜಿಸ್ಟ್ರಿ ಇನ್ನೂ ಕೆಲವು ಅರ್ಜಿಗಳನ್ನು ಪೀಠದ ಮುಂದೆ ಪಟ್ಟಿ ಮಾಡಬೇಕಾಗಿದೆ.

ಏಪ್ರಿಲ್ 8 ರಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿ, ಈ ವಿಷಯದಲ್ಲಿ ಯಾವುದೇ ಆದೇಶ ಹೊರಡಿಸುವ ಮೊದಲು ವಿಚಾರಣೆ ನಡೆಸುವಂತೆ ಕೋರಿತು. ಹೈಕೋರ್ಟ್‌ಗಳು ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಸಾಮಾನ್ಯವಾಗಿ ಒಂದು ಕಡೆಯವರು ಕೇವಿಯಟ್ ಸಲ್ಲಿಸಿ, ಅದನ್ನು ವಿಚಾರಣೆ ಮಾಡದೆ ಯಾವುದೇ ಆದೇಶಗಳನ್ನು ಹೊರಡಿಸದಂತೆ ನೋಡಿಕೊಳ್ಳುತ್ತದೆ.

ಕೇಂದ್ರ ಸರ್ಕಾರ ಮಂಗಳವಾರ ವಕ್ಫ್ (ತಿದ್ದುಪಡಿ) ಕಾಯ್ದೆ, 2025 ಅನ್ನು ಅಧಿಸೂಚನೆ ಮಾಡಿದೆ. ಈ ಕಾಯ್ದೆಯನ್ನು ಎರಡೂ ಸದನಗಳಲ್ಲಿ ಭಾರಿ ಚರ್ಚೆಗಳ ನಂತರ ಸಂಸತ್ತಿನಲ್ಲಿ ಅಂಗೀಕಾರ ಮಾಡಲಾಗಿತ್ತು. ನಂತರ ಏಪ್ರಿಲ್ 5 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಒಪ್ಪಿಗೆಯನ್ನು ಪಡೆಯಿತು. ಮಸೂದೆಯನ್ನು ರಾಜ್ಯಸಭೆಯಲ್ಲಿ 128 ಸದಸ್ಯರು ಪರವಾಗಿ ಮತ್ತು 95 ಸದಸ್ಯರು ವಿರೋಧಿಸಿ ಮತ ಚಲಾಯಿಸುವ ಮೂಲಕ ಅಂಗೀಕರಿಸಲಾಯಿತು. ಲೋಕಸಭೆಯಲ್ಲಿ 288 ಸದಸ್ಯರು ಬೆಂಬಲಿಸಿದರು ಮತ್ತು 232 ಸದಸ್ಯರು ವಿರುದ್ಧವಾಗಿ ಮತ ಚಲಾಯಿಸಿದರು.

ಜಮಿಯತ್ ಉಲಮಾ-ಇ-ಹಿಂದ್, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ), ಕಾಂಗ್ರೆಸ್ ಸಂಸದರಾದ ಇಮ್ರಾನ್ ಪ್ರತಾಪ್‌ಗಢಿ ಮತ್ತು ಮೊಹಮ್ಮದ್ ಜಾವೇದ್ ಇತರ ಪ್ರಮುಖ ಅರ್ಜಿದಾರರಾಗಿದ್ದಾರೆ. ಏಪ್ರಿಲ್ 7 ರಂದು, ಸಿಜೆಐ ನೇತೃತ್ವದ ಪೀಠವು ಜಮಿಯತ್ ಉಲಮಾ-ಇ-ಹಿಂದ್ ಪರ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್ ಅವರಿಗೆ ಅರ್ಜಿಗಳನ್ನು ಪಟ್ಟಿ ಮಾಡುವುದನ್ನು ಪರಿಗಣಿಸುವುದಾಗಿ ಭರವಸೆ ನೀಡಿತ್ತು.

ಡಿಎಂಕೆ ತನ್ನ ಉಪ ಪ್ರಧಾನ ಕಾರ್ಯದರ್ಶಿ ಎ. ರಾಜಾ ಮೂಲಕ ಉನ್ನತ ನ್ಯಾಯಾಲಯಕ್ಕೆ ಮನವಿ ಮಾಡಿತ್ತು ಮತ್ತು ಪತ್ರಿಕಾ ಪ್ರಕಟಣೆಯಲ್ಲಿ, “ವ್ಯಾಪಕ ವಿರೋಧದ ಹೊರತಾಗಿಯೂ, ಜೆಪಿಸಿ ಸದಸ್ಯರು ಮತ್ತು ಇತರ ಪಾಲುದಾರರು ಎತ್ತಿದ ಆಕ್ಷೇಪಣೆಗಳನ್ನು ಸರಿಯಾಗಿ ಪರಿಗಣಿಸದೆ ಕೇಂದ್ರ ಸರ್ಕಾರವು ವಕ್ಫ್ ತಿದ್ದುಪಡಿ ಮಸೂದೆ, 2025 ಅನ್ನು ಅಂಗೀಕರಿಸಿದೆ” ಎಂದು ಹೇಳಿದೆ.

ವಕ್ಫ್ (ತಿದ್ದುಪಡಿ) ಕಾಯ್ದೆ, 2025 ರ ತಕ್ಷಣದ ಅನುಷ್ಠಾನವು ತಮಿಳುನಾಡಿನಲ್ಲಿ ಸುಮಾರು 50 ಲಕ್ಷ ಮುಸ್ಲಿಮರು ಮತ್ತು ದೇಶದ ಇತರ ಭಾಗಗಳಲ್ಲಿರುವ 20 ಕೋಟಿ ಮುಸ್ಲಿಮರ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಮತ್ತು ಪೂರ್ವಾಗ್ರಹ ಪೀಡಿತವಾಗಿದೆ ಎಂದು ಡಿಎಂಕೆ ಹೇಳಿದೆ. ಏಪ್ರಿಲ್ 16ರಂದು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅತ್ಯಾಚಾರಕ್ಕೆ ಸಂತ್ರಸ್ತೆಯನ್ನೆ ಹೊಣೆಯಾಗಿಸಿದ ಅಲಹಾಬಾದ್ ಹೈಕೋರ್ಟ್‌!

ಅತ್ಯಾಚಾರಕ್ಕೆ ಸಂತ್ರಸ್ತೆಯನ್ನೆ ಹೊಣೆಯಾಗಿಸಿದ ಅಲಹಾಬಾದ್ ಹೈಕೋರ್ಟ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...