Homeಮುಖಪುಟಡಿಸೆಂಬರ್ 12ರಂದು ಪೂಜಾ ಸ್ಥಳಗಳ ಕಾಯ್ದೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್

ಡಿಸೆಂಬರ್ 12ರಂದು ಪೂಜಾ ಸ್ಥಳಗಳ ಕಾಯ್ದೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್

- Advertisement -
- Advertisement -

1991ರ ಆರಾಧನಾ ಸ್ಥಳಗಳ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ನ ವಿಶೇಷ ಪೀಠವು ಡಿಸೆಂಬರ್ 12ರಂದು ಮಧ್ಯಾಹ್ನ 3:30 ಕ್ಕೆ ನಡೆಸಲಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ನೇತೃತ್ವದ ಪೀಠವು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ ವಿ ವಿಶ್ವನಾಥನ್ ಅವರನ್ನು ಒಳಗೊಂಡಿರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

1991ರ ಆರಾಧನಾ ಸ್ಥಳಗಳ ಕಾಯ್ದೆಯು ಯಾವುದೇ ಆರಾಧನಾ ಸ್ಥಳಗಳ ಸ್ವರೂಪ ಬದಲಾವಣೆಯನ್ನು ನಿಷೇಧಿಸಿದೆ. ಬಾಬರಿ ಮಸೀದಿಯೊಂದನ್ನು ಬಿಟ್ಟು, ಆಗಸ್ಟ್ 15, 1947ರಂದು ಅಸ್ತಿತ್ವದಲ್ಲಿದ್ದ ಸ್ವರೂಪದಲ್ಲೇ ಮುಂದುವರಿಯುವಂತೆ ಕಾಯ್ದೆಯು ಹೇಳುತ್ತದೆ. ಜೊತೆಗೆ, ಯಾವುದೇ ಬಾಕಿ ಉಳಿದಿರುವ ಪ್ರಕ್ರಿಯೆಯು ಸ್ಥಗಿತಗೊಳ್ಳುತ್ತದೆ. ಡಿಸೆಂಬರ್ 12ರಂದು

ಕಾಯ್ದೆಯು ಸಂವಿಧಾನದ ಮೂಲಭೂತ ಲಕ್ಷಣವಾದ ನ್ಯಾಯಾಂಗ ಪರಿಶೀಲನೆಯ ಪರಿಹಾರವನ್ನು ಇದು ನಿರ್ಬಂಧಿಸುತ್ತದೆ ಮತ್ತು ಸಂಸತ್ತಿನ ಶಾಸಕಾಂಗ ಸಾಮರ್ಥ್ಯದಿಂದ ಹೊರಗಿದೆ ಎಂದು ಹಲವಾರು ಅರ್ಜಿಗಳು ಕಾಯ್ದೆಯನ್ನು ಪ್ರಶ್ನಿಸಿವೆ. ಈ ಕಾಯ್ದೆಯು ಜಾತ್ಯತೀತತೆಯ ತತ್ವವನ್ನೂ ಉಲ್ಲಂಘಿಸುತ್ತದೆ ಎಂದು ಅರ್ಜಿದಾರರು ಹೇಳಿದ್ದಾರೆ.

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಅಝೀಝ್ ಮುಶಬ್ಬರ್ ಅಹ್ಮದಿ ಅವರ ಸ್ಮರಣಾರ್ಥ ಸ್ಥಾಪಿಸಲಾದ ಅಹ್ಮದಿ ಫೌಂಡೇಶನ್‌ನ ಉಪನ್ಯಾಸ ಕಾರ್ಯಕ್ರಮದಲ್ಲಿ ಇತ್ತಿಚೆಗೆ ಮಾತನಾಡಿದ್ದ ನ್ಯಾಯಮೂರ್ತಿ ನಾರಿಮನ್, ಅಯೋಧ್ಯೆ ತೀರ್ಪನ್ನು ‘ಜಾತ್ಯತೀತತೆಗೆ ನ್ಯಾಯದ ಅಪಹಾಸ್ಯ’ ಎಂದು ಬಣ್ಣಿಸಿದ್ದು, 1991ರ ಆರಾಧನಾ ಸ್ಥಳಗಳ ಕಾಯ್ದೆಯನ್ನು ಎತ್ತಿ ಹಿಡಿದ ಭಾಗವನ್ನು ಅವರು ಪ್ರಶಂಸಿಸಿದ್ದರು.

ಅಯೋಧ್ಯೆ ವಿವಾದದ ಕುರಿತು ಸಂವಿಧಾನ ಪೀಠದ ತೀರ್ಪಿನ ಐದು ಪುಟಗಳು ಈ ಹಿಂದೆ ದೇವಾಲಯಗಳ ಮೇಲೆ ನಿರ್ಮಿಸಲಾಗಿದೆ ಎಂದು ಆರೋಪಿಸಲಾದ ಮಸೀದಿಗಳ ಸಮೀಕ್ಷೆಯನ್ನು ಕೋರಿ ದೇಶದಾದ್ಯಂತ ನಡೆಯುತ್ತಿರುವ ವ್ಯಾಜ್ಯಗಳಿಗೆ ಉತ್ತರವಾಗಿದೆ. ಈ ಐದು ಪುಟಗಳು, ದೇಶದಾದ್ಯಂತ ಮಸೀದಿಗಳನ್ನು ಗುರಿಯಾಗಿಸಿಕೊಂಡು ಹೆಚ್ಚುತ್ತಿರುವ ಪ್ರಕರಣಗಳನ್ನು ಪರಿಹರಿಸಲು ನಿರ್ಣಾಯಕ ಸಾಧನವಾಗಿ ಕಾರ್ಯನಿರ್ವಹಿಸಬಹುದು ಎಂದು ನ್ಯಾಯಮೂರ್ತಿ ನಾರಿಮನ್ ಹೇಳಿದ್ದರು.

1991ರ ಆರಾಧನಾ ಸ್ಥಳಗಳ ಕಾಯ್ದೆಯು ಯಾವುದೇ ಆರಾಧನಾ ಸ್ಥಳಗಳ ಸ್ವರೂಪ ಬದಲಾವಣೆಯನ್ನು ನಿಷೇಧಿಸಿದೆ. ಆಗಸ್ಟ್ 15, 1947ರಂದು ಅಸ್ತಿತ್ವದಲ್ಲಿದ್ದ ಸ್ವರೂಪದಲ್ಲೇ ಮುಂದುವರಿಯುವಂತೆ ಹೇಳುತ್ತದೆ. ಇದು ಪ್ರಸ್ತುತ ಸುಪ್ರೀಂ ಕೋರ್ಟ್‌ನಲ್ಲಿ ಸವಾಲಾಗಿದೆ. ಇದನ್ನು ತಡೆಗಟ್ಟುವ ಏಕೈಕ ಮಾರ್ಗವೆಂದರೆ ಅಯೋಧ್ಯೆಯ ತೀರ್ಪಿನ ಐದು ಪುಟಗಳನ್ನು ರಾಷ್ಟ್ರವ್ಯಾಪಿ ನ್ಯಾಯಾಲಯಗಳಲ್ಲಿ ಅನ್ವಯಿಸುವುದಾಗಿದೆ ಎಂದು ಹೇಳಿದ್ದಾರೆ.

ಬಾಬರಿ ಮಸೀದಿ ಧ್ವಂಸ ಕ್ರಿಮಿನಲ್ ಪಿತೂರಿ ಪ್ರಕರಣದ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಧೀಶರು ನಿವೃತ್ತಿಯ ನಂತರ ಉತ್ತರ ಪ್ರದೇಶದ ಉಪ ಲೋಕಾಯುಕ್ತರಾಗಿ ನೇಮಕಗೊಂಡರು ಎಂದು ಹೇಳಿರುವ ನ್ಯಾಯಮೂರ್ತಿ ರೋಹಿಂಟನ್ ನಾರಿಮನ್, ʼಕೊಡು-ಕೊಳ್ಳುವಿಕೆʼ ನೇಮಕಾತಿಗಳ ಬಗ್ಗೆ ಗಮನಸೆಳೆದಿದ್ದಾರೆ.

ಇದನ್ನೂ ಓದಿ: ದ್ವೇಷ, ಹಿಂಸೆಯ ಮೇಲೆ ನಿರ್ಮಾಣವಾದ ಆರಾಧನಾ ಸ್ಥಳವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ: ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ

ದ್ವೇಷ, ಹಿಂಸೆಯ ಮೇಲೆ ನಿರ್ಮಾಣವಾದ ಆರಾಧನಾ ಸ್ಥಳವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ: ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...