Homeಚಳವಳಿಮಹಾ ಶಿವರಾತ್ರಿಯಂದು ವಿಶ್ವವಿದ್ಯಾಲಯ ಮೆಸ್‌ನಲ್ಲಿ ಮಾಂಸಹಾರ | ಎಬಿವಿಪಿ ದುಷ್ಕರ್ಮಿಗಳಿಂದ ಗೂಂಡಾಗಿರಿ

ಮಹಾ ಶಿವರಾತ್ರಿಯಂದು ವಿಶ್ವವಿದ್ಯಾಲಯ ಮೆಸ್‌ನಲ್ಲಿ ಮಾಂಸಹಾರ | ಎಬಿವಿಪಿ ದುಷ್ಕರ್ಮಿಗಳಿಂದ ಗೂಂಡಾಗಿರಿ

- Advertisement -
- Advertisement -

ಮಹಾ ಶಿವರಾತ್ರಿಯ ಹಬ್ಬದ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಕ್ಯಾಂಟೀನ್‌ನಲ್ಲಿ ಮಾಂಸಹಾರ ಬಡಿಸಲಾಗುತ್ತಿದೆ ಎಂದು ಆರೋಪಿಸಿ ಎಬಿವಿಪಿಯ ದುಷ್ಕರ್ಮಿಗಳು ವಿದ್ಯಾರ್ಥಿನಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ಬುಧವಾರ ದೆಹಲಿಯ ದಕ್ಷಿಣ ಏಷ್ಯಾ ವಿಶ್ವವಿದ್ಯಾಲಯದಲ್ಲಿ ನಡೆದಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಘಟನೆಯ ವಿಡಿಯೊ ವೈರಲ್ ಆಗಿದ್ದು, ಅದರಲ್ಲಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ ಹೊಡೆದಾಟ ದಾಖಲಾಗಿದೆ. ಮಹಾ ಶಿವರಾತ್ರಿಯಂದು

ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಮತ್ತು ಎಬಿವಿಪಿ ಘರ್ಷಣೆಗೆ ಪ್ರಚೋದನೆ ನೀಡಿವೆ ಎಂದು ಪರಸ್ಪರ ಆರೋಪಿಸಿಕೊಂಡಿವೆ. ಎಸ್‌ಎಫ್‌ಐ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಜೊತೆಗೆ ಸಂಯೋಜಿತವಾಗಿದ್ದು, ಎಬಿವಿಪಿಯು ಆರೆಸ್ಸೆಸ್‌ನ ವಿದ್ಯಾರ್ಥಿ ವಿಭಾಗವಾಗಿದೆ.

ಮಹಾ ಶಿವರಾತ್ರಿಯಂದು ಕ್ಯಾಂಟೀನ್‌ನಲ್ಲಿ ಮಾಂಸ ಬಡಿಸಬಾರದು ಎಂಬ ತನ್ನ “ಕಠಿಣ ಮತ್ತು ಪ್ರಜಾಪ್ರಭುತ್ವ ವಿರೋಧಿ ಬೇಡಿಕೆ”ಯನ್ನು ಪಾಲಿಸದ ವಿದ್ಯಾರ್ಥಿಗಳ ಮೇಲೆ ಎಬಿವಿಪಿ ಸದಸ್ಯರು ಹಲ್ಲೆ ನಡೆಸಿದ್ದಾರೆ ಎಂದು ಎಸ್‌ಎಫ್‌ಐ ಹೇಳಿಕೊಂಡಿದೆ. ಎಸ್‌ಎಫ್‌ಐ ಸದಸ್ಯರು ಮಾಂಸಾಹಾರವನ್ನು ಬಲವಂತವಾಗಿ ಬಡಿಸಿ ವಿದ್ಯಾರ್ಥಿಗಳ ಉಪವಾಸ ಮುರಿಯಲು ಪ್ರಯತ್ನಿಸಿದರು ಎಂದು ಎಬಿವಿಪಿ ಆರೋಪಿಸಿದೆ.

ದಿನದ ಹಿಂದೆ, ಶಿವರಾತ್ರಿ ಹಬ್ಬದ ದಿನದಂದು ಕ್ಯಾಂಟೀನ್‌ನಲ್ಲಿ ಸಸ್ಯಾಹಾರಿ ಆಹಾರವನ್ನು ಮಾತ್ರ ನೀಡಬೇಕೆಂದು ಎಬಿವಿಪಿ ಸದಸ್ಯರು ವಿನಂತಿಸಿದ್ದರು ಎಂದು ಎರಡನೇ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಯೊಬ್ಬರು ಹೇಳಿರುವುದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ವಿಶ್ವವಿದ್ಯಾಲಯದಲ್ಲಿ ಎರಡು ಮೆಸ್‌ಗಳಿವೆ. ಅವುಗಳಲ್ಲಿ ಒಂದು ಕ್ಯಾಂಟೀನ್‌ನಲ್ಲಿ ಇಂದು ಮೀನಿನ ಕರಿಯನ್ನು ನೀಡಲಾಗುತ್ತಿತ್ತು. ಎಬಿವಿಪಿಯೊಂದಿಗೆ ಸಂಬಂಧ ಹೊಂದಿದ್ದಾರೆ ಎನ್ನಲಾದ ಕೆಲವು ವಿದ್ಯಾರ್ಥಿಗಳು ಪ್ರವೇಶಿಸಿ ಮೀನಿನ ಕರಿಯನ್ನು ಕಸಿದುಕೊಳ್ಳಲು ಪ್ರಯತ್ನಿಸಿದರು. ಈ ವೇಳೆ ಮೆಸ್ ಸಮಿತಿಯ ಭಾಗವಾಗಿರುವ ಒಬ್ಬ ವಿದ್ಯಾರ್ಥಿನಿ ಅದನ್ನು ಆಕ್ಷೇಪಿಸಿದ್ದು, ಈ ವೇಳೆ ಎಬಿವಿಪಿ ದುಷ್ಕರ್ಮಿಗಳು ಅವರ ಮೇಲೆ ಹಲ್ಲೆ ನಡೆಸಿದ್ದಾರೆ.” ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

ವಿದ್ಯಾರ್ಥಿನಿ ಮತ್ತು ಆಕೆಯ ಸ್ನೇಹಿತರು ವಿದ್ಯಾರ್ಥಿಗಳ ಡೀನ್ ಕಚೇರಿಗೆ ದೂರು ನೀಡಿದಾಗ, ಅಧಿಕಾರಿಗಳು ಈ ವಿಷಯವನ್ನು ವಿಲೇವಾರಿ ಮಾಡುವ ಬದಲು ಹಲ್ಲೆಗೊಳಗಾದ ವಿದ್ಯಾರ್ಥಿಗಳ ಮೇಲೆ ಪರೋಕ್ಷವಾಗಿ ಹೊಣೆಯನ್ನು ಹೊರಿಸುವ ಮೂಲಕ ಅದನ್ನು ಅವರ ತಲೆಗೆ ಹೊರಿಸಲು ಪ್ರಯತ್ನಿಸಿದರು ಎಂದು ಎಸ್‌ಎಫ್‌ಐ ಆರೋಪಿಸಿದೆ.

 

ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ಕ್ರಮ ಕೈಗೊಳ್ಳಲಾಗುವುದು ಎಂದು ವಿಶ್ವವಿದ್ಯಾಲಯ ತಿಳಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಆದಾಗ್ಯೂ, ಎಬಿವಿಪಿ ರಾಜ್ಯ ಕಾರ್ಯದರ್ಶಿ ಸಾರ್ಥಕ್ ಶರ್ಮಾ ಅವರು ವಿದ್ಯಾರ್ಥಿಗಳಿಗೆ ತಮ್ಮ ನಂಬಿಕೆಗಳನ್ನು ಅನುಸರಿಸುವ ಹಕ್ಕಿದೆ ಎಂದು ಹೇಳಿದ್ದಾರೆ. “ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿಯು ಸ್ವತಃ ಮೆಸ್‌ನಲ್ಲಿ ಸಾತ್ವಿಕ ಆಹಾರವನ್ನು ವ್ಯವಸ್ಥೆ ಮಾಡಿತ್ತು. ಆದರೆ ಈ ವೇಳೆ ಮಾಂಸಾಹಾರವನ್ನು ಬಲವಂತವಾಗಿ ಬಡಿಸಲು ಪ್ರಯತ್ನಿಸುವುದು ಅಸಂವೇದನಾಶೀಲ ಮಾತ್ರವಲ್ಲ, ಸೈದ್ಧಾಂತಿಕ ಭಯೋತ್ಪಾದನೆಯೂ ಆಗಿದೆ” ಎಂದು ಅವರು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಇಂಟರ್ನೆಟ್ ಸ್ಥಗಿತ | ಮಿಲಿಟರಿ ಆಡಳಿತದ ಮ್ಯಾನ್ಮಾರ್ 1ನೇ, ಭಾರತ 2ನೇ ಸ್ಥಾನ!

ಇಂಟರ್ನೆಟ್ ಸ್ಥಗಿತ | ಮಿಲಿಟರಿ ಆಡಳಿತದ ಮ್ಯಾನ್ಮಾರ್ 1ನೇ, ಭಾರತ 2ನೇ ಸ್ಥಾನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...