Homeಮುಖಪುಟಗಣರಾಜ್ಯೋತ್ಸವದಂದು ದೇಶದ 500 ಜಿಲ್ಲೆಗಳಲ್ಲಿ ರೈತರಿಂದ ಟ್ರ್ಯಾಕ್ಟರ್ ಪರೇಡ್

ಗಣರಾಜ್ಯೋತ್ಸವದಂದು ದೇಶದ 500 ಜಿಲ್ಲೆಗಳಲ್ಲಿ ರೈತರಿಂದ ಟ್ರ್ಯಾಕ್ಟರ್ ಪರೇಡ್

- Advertisement -
- Advertisement -

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ದೇಶದಾದ್ಯಂತ ಸುಮಾರು 500 ಜಿಲ್ಲೆಗಳಲ್ಲಿ ಗಣರಾಜ್ಯೋತ್ಸವ ದಿನದಂದು ಟ್ರ್ಯಾಕ್ಟರ್ ಪರೇಡ್ ನಡೆಸಲಿದೆ ಎಂದು ಸಂಘಟನೆಯು ಗುರುವಾರ ಪ್ರಕಟಣೆಯಲ್ಲಿ ತಿಳಿಸಿದೆ. ರಾಷ್ಟ್ರ ರಾಜಧಾನಿಯಲ್ಲಿ ಔಪಚಾರಿಕ ಗಣರಾಜ್ಯೋತ್ಸವ ಪರೇಡ್‌ನ ಮುಕ್ತಾಯದ ನಂತರ ಟ್ರ್ಯಾಕ್ಟರ್ ಪರೇಡ್ ನಡೆಯಲಿದೆ ಎಂದು ಅದು ಹೇಳಿದೆ.

“ಎಸ್‌ಕೆಎಂ ಜನವರಿ 26,2024ರಂದು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಟ್ರಾಕ್ಟರ್ ಪರೇಡ್ ನಡೆಸಲಿದೆ. ಕನಿಷ್ಠ 500 ಜಿಲ್ಲೆಗಳಲ್ಲಿ ಪರೇಡ್ ನಡೆಯುವ ನಿರೀಕ್ಷೆಯಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ಎಸ್‌ಕೆಎಂ ಮನವಿ ಮಾಡುತ್ತದೆ. ದೆಹಲಿಯಲ್ಲಿ ಗಣರಾಜ್ಯೋತ್ಸವದ ಔಪಚಾರಿಕ ಮೆರವಣಿಗೆಯ ಸಮಾರೋಪದ ಬಳಿಕ ಟ್ರ್ಯಾಕ್ಟರ್ ಪರೇಡ್ ನಡೆಯಲಿದೆ” ಎಂದು ಸಂಘಟನೆ ಪ್ರಕಟನೆಯಲ್ಲಿ ತಿಳಿಸಿದೆ.

ಪರೇಡ್‌ನಲ್ಲಿ ಭಾಗವಹಿಸುವ ರೈತರು ಸಂಘ, ಸಂಸ್ಥೆಗಳ ಧ್ವಜದೊಂದಿಗೆ ರಾಷ್ಟ್ರಧ್ವಜವನ್ನು ಹಾರಿಸಲಿದ್ದಾರೆ. ಭಾರತದ ಸಂವಿಧಾನದಲ್ಲಿರುವ ಪ್ರಜಾಪ್ರಭುತ್ವ, ಒಕ್ಕೂಟ, ಜಾತ್ಯತೀತತೆ ಮತ್ತು ಸಮಾಜವಾದದ ತತ್ವಗಳನ್ನು ರಕ್ಷಿಸಲು ರೈತರು ಪ್ರತಿಜ್ಞೆ ಮಾಡಲಿದ್ದಾರೆ. ಟ್ರ್ಯಾಕ್ಟರ್‌ಗಳ ಜೊತೆಗೆ, ಇತರ ವಾಹನಗಳು ಮತ್ತು ಮೋಟಾರು ಸೈಕಲ್‌ಗಳು ಕೂಡ ಪರೇಡ್‌ನಲ್ಲಿ ಸೇರಿಕೊಳ್ಳಲಿವೆ” ಎಂದು ಎಸ್‌ಕೆಎಂ ಹೇಳಿದೆ.

20 ರಾಜ್ಯಗಳಲ್ಲಿನ ಎಸ್‌ಕೆಎಂ ರಾಜ್ಯ ಘಟಕಗಳು ಮುಂದಿನ ವರ್ಷ ಜನವರಿ 10 ರಿಂದ20 ರವರೆಗೆ ಭಾರತದಾದ್ಯಂತ ಮನೆ-ಮನೆ ಭೇಟಿ ಮತ್ತು ಕರಪತ್ರಗಳ ವಿತರಣೆಯ ಮೂಲಕ “ಜನ ಜಾಗರಣ” ಅಭಿಯಾನವನ್ನು ನಡೆಸಲಿವೆ. ಕೇಂದ್ರ ಸರ್ಕಾರದ “ಕಾರ್ಪೊರೇಟ್ ಪರ ಆರ್ಥಿಕ ನೀತಿಗಳನ್ನು ಬಹಿರಂಗಪಡಿಸುವುದು” ಸಾಮೂಹಿಕ ಅಭಿಯಾನದ ಉದ್ದೇಶವಾಗಿದೆ ಎಂದು ಅದು ಮಾಹಿತಿ ನೀಡಿದೆ.

“ಕೋಮುವಾದ, ಜಾತಿವಾದಿ ಧ್ರುವೀಕರಣದ ಮೂಲಕ ಜನರನ್ನು ಶೋಷಿಸುವ ಮತ್ತು ವಿಭಜಿಸುವ ಕಾರ್ಪೊರೇಟ್-ಕೋಮುವಾದಿ ನಂಟು” ತೊಡೆದುಹಾಕಲು ಅಭಿಯಾನ ಮತ್ತು ಮೆರವಣಿಗೆಯನ್ನು ಯಶಸ್ವಿಗೊಳಿಸುವಂತೆ ಎಸ್‌ಕೆಎಂ ಭಾರತದಾದ್ಯಂತ ರೈತರಿಗೆ ಕರೆ ನೀಡಿದೆ.

ಕೇಂದ್ರ ಸರ್ಕಾರ ನಮ್ಮ ಎಲ್ಲ ಬೇಡಿಕೆಗಳನ್ನು ಈಡೇರಿಸುವವರೆಗೆ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಜನವರಿ 26, 2021ರಂದು, ಕೇಂದ್ರದ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ ರೈತ ಸಂಘಗಳು ಆಯೋಜಿಸಿದ್ದ ಟ್ರ್ಯಾಕ್ಟರ್ ರ್‍ಯಾಲಿ ವೇಳೆ ಪ್ರತಿಭಟನಾನಿರತ ಸಾವಿರಾರು ರೈತರು ಮತ್ತು ಪೊಲೀಸ ನಡುವೆ ಘರ್ಷಣೆ ನಡೆದಿತ್ತು. ಕೆಲವು ಪ್ರತಿಭಟನಾಕಾರರು ಕೆಂಪು ಕೋಟೆ ಮೇಲೆ ಧಾರ್ಮಿಕ ಧ್ವಜಗಳನ್ನು ಹಾರಿಸಿದ್ದರು ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ : ಇಡಿ, ಸಿಬಿಐ ಬಳಸಿ ಹಣ ಲೂಟಿ: ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು 'ಪ್ರಿವೆಂಟಿವ್ ಅರೆಸ್ಟ್' ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ...

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...