Homeಮುಖಪುಟಮೋದಿಯ ₹8000 ಕೋಟಿ ವಿಮಾನದ ಬಗ್ಗೆ ಪ್ರಶ್ನೆ ಯಾಕಿಲ್ಲ?- ರಾಹುಲ್ ಗಾಂಧಿ

ಮೋದಿಯ ₹8000 ಕೋಟಿ ವಿಮಾನದ ಬಗ್ಗೆ ಪ್ರಶ್ನೆ ಯಾಕಿಲ್ಲ?- ರಾಹುಲ್ ಗಾಂಧಿ

’ನಾನು ಸೋಫಾ​ ಮೇಲೆ ಕುಳಿತಿದ್ದನ್ನು ಎಲ್ಲರೂ ಬೆರಳು ಮಾಡಿ ತೋರಿಸುತ್ತಿದ್ದಾರೆ. ಇಷ್ಟು ದೊಡ್ಡ ಮೊತ್ತಕ್ಕೆ ಖರೀದಿಸಿದ ಬೋಯಿಂಗ್ 777 ಬಗ್ಗೆ ಯಾರೂ ಕೇಳುತ್ತಿಲ್ಲ ಎಂಬುದು ವಿಚಿತ್ರ’ - ರಾಹುಲ್ ಗಾಂಧಿ

- Advertisement -
- Advertisement -

ವಿವಾದಿತ ಕೃಷಿ ಮಸೂದೆಗಳನ್ನು ವಿರೋಧಿಸಿ ಪಂಜಾಬ್‌ನಲ್ಲಿ ನಡೆದ ಟ್ರ್ಯಾಕ್ಟರ್ ರ್‍ಯಾಲಿಯಲ್ಲಿ ಸೋಫಾ ಮೇಲೆ ಕುಳಿತಿದ್ದನ್ನು ಟೀಕಿಸಿದ ಆಡಳಿತ ಪಕ್ಷಗಳಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ಪ್ರಧಾನ ಮಂತ್ರಿಗಳು ಐಷಾರಾಮಿ ವಿಮಾನಗಳ ಖರೀದಿಗೆ ಸಾವಿರಾರು ಕೋಟಿಗಳನ್ನು ವ್ಯರ್ಥ ಮಾಡುತ್ತಿದ್ದಾರೆ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಕಸ್ಟಮ್ ನಿರ್ಮಿತ ಬೋಯಿಂಗ್ ವಿಮಾನಗಳು “ಕೇವಲ ಒಂದು ಸೋಫಾ ಹೊಂದಿಲ್ಲ, ಅವರಿಗಾಗಿ ಇಡೀ ವಿಮಾನದ ತುಂಬಾ ಐಷಾರಾಮಿ ಹಾಸಿಗೆಗಳೇ ಇವೆ. ಈ ಬಗ್ಗೆ ನೀವು ಅವರನ್ನು ಯಾಕೆ ಪ್ರಶ್ನಿಸಬಾರದು..?” ಎಂದರು.

“ನಾನು ಸೋಫಾ​ ಮೇಲೆ ಕುಳಿತಿದ್ದನ್ನ ಎಲ್ಲರೂ ಬೆರಳು ಮಾಡಿ ತೋರಿಸುತ್ತಿದ್ದಾರೆ. ಇಷ್ಟು ದೊಡ್ಡ ಮೊತ್ತಕ್ಕೆ ಖರೀದಿಸಿದ ಬೋಯಿಂಗ್ 777 ಬಗ್ಗೆ ಯಾರೂ ಕೇಳುತ್ತಿಲ್ಲ ಎಂಬುದು ವಿಚಿತ್ರ” ಎಂದು ಪಟಿಯಾಲದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ್ದಾರೆ.

ಇದನ್ನೂ ಓದಿ: ದೆಹಲಿಗೆ ಆಗಮಿಸಿದ ಪ್ರಧಾನಿಯ ಪ್ರಯಾಣಕ್ಕೆಂದೆ ವಿಶೇಷವಾಗಿ ತಯಾರಾದ ವಿಮಾನ!

ಭಾರತ-ಚೀನಾ ಗಡಿಯಲ್ಲಿ ಚೀನಾದೊಂದಿಗೆ ಬಿಕ್ಕಟ್ಟು ಹೆಚ್ಚಾಗಿದ್ದು, ಸರ್ಕಾರ ಅಗತ್ಯ ಶಸ್ತ್ರಾಸ್ತ್ರ, ಗುಂಡುಮದ್ದುಗಳು, ಇಂಧನ, ಆಹಾರ, ನೀರು ಮತ್ತು ಚಳಿಗಾಲದ ಅಗತ್ಯ ವಸ್ತುಗಳನ್ನು ಪೂರ್ವ ಲಡಾಖ್‌ಗೆ ಕಳಿಸುತ್ತಿದೆ. ಇಂತಹ ಸಮಯದಲ್ಲಿ ಎರಡು ವಿಶೇಷ ವಿಮಾನಗಳಿಗೆ ಇಷ್ಟೊಂದು ಹಣ ಖರ್ಚು ಮಾಡಿದ್ದಾರೆ. ಯಾಕೆಂದರೆ ತನ್ನ ಸ್ನೇಹಿತ ಅಮೆರಿಕಾ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಬಳಿ ಅಂಥದ್ದೇ ವಿಮಾನ ಇದೆ ಅನ್ನೋ ಕಾರಣಕ್ಕೆ ಎಂದು ಅವರು ಟ್ರೋಲ್ ಮಾಡಿದವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಒಂದೆಡೆ ಪ್ರಧಾನಿ ಮೋದಿ 8,000 ಕೋಟಿ ರೂಪಾಯಿ ಮೌಲ್ಯದ ಎರಡು ವಿಮಾನಗಳನ್ನು ಖರೀದಿಸಿದ್ದಾರೆ. ಮತ್ತೊಂದೆಡೆ, ಚೀನಾ ನಮ್ಮ ಗಡಿಯಲ್ಲಿದೆ ಮತ್ತು ನಮ್ಮ ಭದ್ರತಾ ಪಡೆಗಳು ಚಳಿಯಲ್ಲಿ ನಡುಗುತ್ತಾ ನಮ್ಮನ್ನ ರಕ್ಷಣೆ ಮಾಡ್ತಿದ್ದಾರೆ” ಎಂದು ಅವರು ಹೇಳಿದರು, ಜೊತೆಗೆ ಸೋಫಾಗಳನ್ನು ತಮ್ಮ ಹಿತೈಷಿಗಳು ಅಲ್ಲಿ ಇರಿಸಿದ್ದರು ಎಂದಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪ್ರಧಾನಿ ಉದ್ಘಾಟಿಸಿದ ಅಟಲ್ ಸುರಂಗ ಎಂದು ಅಮೇರಿಕಾ ಸುರಂಗದ ಚಿತ್ರ ಹಂಚಿಕೊಂಡ ಮಾಧ್ಯಮಗಳು!

ಇತ್ತ ಸರ್ಕಾರ ವಿಮಾನಗಳ ಖರೀದಿಯನ್ನು ಸಮರ್ಥಿಸಿಕೊಂಡಿದ್ದು, ವಿಮಾನಗಳು ಭಾರತೀಯ ವಾಯುಪಡೆಗೆ ಸೇರಿವೆ. ಅದು ಕೇವಲ ಪ್ರಧಾನಮಂತ್ರಿಯ ವಿಮಾನ ಅಲ್ಲ, ಇತರ ವಿವಿಐಪಿಗಳ ಬಳಕೆಗಾಗಿವೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.

ಭಾರತದ ರಾಷ್ಟ್ರಪತಿ, ಉಪರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿಯಂತಹ ಗಣ್ಯವಕ್ತಿಗಳು ಪ್ರಯಾಣಿಸಲೆಂದೇ ವಿಶೇಷವಾಗಿ ತಯಾರಿಸಲಾಗಿರುವ B777(ಏರ್​ ಇಂಡಿಯಾ ಒನ್) ವಿಮಾನ ತಿಂಗಳ ಆರಂಭದಲ್ಲಿ ಅಮೆರಿಕಾದಿಂದ ದೆಹಲಿಗೆ ಬಂದಿಳಿದಿತ್ತು.

ಪ್ರಸ್ತುತ ರಾಷ್ಟ್ರಪತಿ, ಉಪರಾಷ್ಟ್ರಪತಿ ಹಾಗೂ ಪ್ರಧಾನಿಗಳು ಏರ್​ ಇಂಡಿಯಾದ ಬಿ747 ವಿಮಾನವನ್ನ ಪ್ರಯಾಣಕ್ಕಾಗಿ ಬಳಸುತ್ತಿದ್ದು, ಇದನ್ನು ಏರ್​ ಇಂಡಿಯಾ ಪೈಲಟ್​ಗಳೇ ಚಾಲನೆ ಮಾಡುತ್ತಾರೆ. ಆದರೆ ಹೊಸದಾಗಿ ಆಗಮಿಸಿರುವ ವಿಶೇಷ ವಿಮಾನವನ್ನು ಏರ್​ ಇಂಡಿಯಾ ಪೈಲಟ್​ಗಳ ಬದಲಾಗಿ ಭಾರತೀಯ ವಾಯುಸೇನೆಯ ಪೈಲಟ್​​ಗಳು ಚಾಲನೆ ಮಾಡಲಿದ್ದಾರೆ.


ಇದನ್ನೂ ಓದಿ: ಪ್ರಧಾನಿ ಮೋದಿಯ 58 ದೇಶಗಳ ಭೇಟಿಗೆ 517 ಕೋಟಿ ವೆಚ್ಚ: ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...