Homeಮುಖಪುಟಚುನಾವಣೆ ಸೋತ ದಿನ ಬಿಜೆಪಿ ಕೂಡಾ ಟ್ರಂಪ್ ಬೆಂಬಲಿಗರಂತೆಯೆ ವರ್ತಿಸುತ್ತದೆ: ಮಮತಾ

ಚುನಾವಣೆ ಸೋತ ದಿನ ಬಿಜೆಪಿ ಕೂಡಾ ಟ್ರಂಪ್ ಬೆಂಬಲಿಗರಂತೆಯೆ ವರ್ತಿಸುತ್ತದೆ: ಮಮತಾ

- Advertisement -
- Advertisement -

ಚುನಾವಣೆಯಲ್ಲಿ ಸೋತ ದಿನ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆಂಬಲಿಗರಂತೆಯೆ ಭಾರತೀಯ ಜನತಾ ಪಕ್ಷವೂ ವರ್ತಿಸುತ್ತದೆ ಎಂದು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

“ನೀವು ಅವರನ್ನು ನೋಡಲಿಲ್ಲವೇ? ಸೋತರೂ ತಾನು ಗೆದ್ದಿದ್ದೇನೆ ಎಂದು ಟ್ರಂಪ್ ಹೇಳುತ್ತಲೇ ಇದ್ದಾರೆ. ಯಾವಾಗ ಬಿಜೆಪಿ ಸೋಲುತ್ತದೆಯೋ ಅಂದು ’ನಾವು ಗೆದ್ದಿದ್ದೇವೆ, ನಾವು ಗೆದ್ದಿದ್ದೇವೆ’  ಎಂದು ಹೇಳುತ್ತದೆ, ಇದರಲ್ಲಿ ಯಾವುದೇ ವ್ಯತ್ಯಾಸವಿಲ್ಲ” ಎಂದು ನಾಡಿಯಾ ಜಿಲ್ಲೆಯಲ್ಲಿ ನಡೆದ ರ್‍ಯಾಲಿಯನ್ನುದ್ದೇಶಿಸಿ ಮಾತನಾಡುತ್ತಾ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಅಧ್ಯಕ್ಷರಾಗಿ ಚುನಾಯಿತರಾದ ಜೋ ಬಿಡೆನ್ ವಿಜಯವನ್ನು ಅಮೆರಿಕ ಸಂಸತ್ತು ಪ್ರಮಾಣೀಕರಿಸುವ ಕಾರ್ಯಕ್ರಮದಂದು ಡೊನಾಲ್ಡ್ ಟ್ರಂಪ್ ಬೆಂಬಲಿಗರು ಸಂಸತ್‌ನ ಭದ್ರತೆಯನ್ನು ಉಲ್ಲಂಘಿಸಿ ಗಲಭೆ ನಡೆಸಿದರು. ಹಿಂಸಾಚಾರದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: IPS ಅಧಿಕಾರಿಗಳ ವರ್ಗಾವಣೆ: ಮಮತಾ ಬ್ಯಾನರ್ಜಿ ಬೆನ್ನಿಗೆ ನಿಂತ ಕೇಜ್ರೀವಾಲ್

ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ದ ದಾಳಿ ಮಾಡಿದ ಮಮತಾ, “ಹರಿಯಾಣದಲ್ಲಿ ರೈತರು ಪ್ರತಿಭಟಿಸಿದಾಗ ನೀವು ಎಲ್ಲಿದ್ದೀರಿ? ಅವರು ಕಳೆದ ಒಂದು ತಿಂಗಳಿನಿಂದ ಬಿಸಿಲು ಮತ್ತು ಮಳೆಯೆನ್ನದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಕೆಲವರು ಚಳಿಯಲ್ಲಿ ಮೃತಪಟ್ಟಿದ್ದಾರೆ, ಆದರೆ ನಿಮಗೆ ನ್ಯಾಯ ಕೊಡಲಾಗಿಲ್ಲ” ಎಂದು ಕಿಡಿಕಾರಿದರು.

“ಜೀವನ ಅಷ್ಟು ಸುಲಭವಲ್ಲ ನನ್ನ ಸಹೋದರ. ನೀವು ಯಶಸ್ಸನ್ನು ಸಾಧಿಸಲು ಬಯಸಿದರೆ ಬೀದಿಗಿಳಿಯಬೇಕಾಗುತ್ತದೆ. ಆದರೆ ನಿಮ್ಮ ಬಟ್ಟೆಗಳ ಮೇಲೆ ಒಂದು ಕಳೆಯು ಇಲ್ಲ” ಎಂದು ಅವರು ಬಿಜೆಪಿ ನಾಯಕರನ್ನು ಹಂಗಿಸಿದರು.

ಬಿಜೆಪಿಯನ್ನು ಜಂಕ್ ಪಾರ್ಟಿ ಎಂದು ಕರೆದ ಅವರು, “ಬಿಜೆಪಿ ನನ್ನ ಬಗ್ಗೆ ಭಯಭೀತವಾಗಿದೆ, ಯಾಕೆಂದರೆ ನನ್ನನ್ನು ಖರೀದಿಸಲು ಸಾಧ್ಯವಿಲ್ಲ ಎಂದು ಅವರಿಗೆ ಚೆನ್ನಾಗಿ ತಿಳಿದಿದೆ. ನಾನು ಹೋರಾಟದಲ್ಲಿ ಮುಂದೆಯೆ ನಿಲ್ಲುತ್ತೇನೆ, ಅವರಿಗೆ ಬಂಗಾಳವನ್ನು ಮಾರಾಟ ಮಾಡಲು ಬಿಡುವುದಿಲ್ಲ” ಎಂದು ಹೇಳಿದರು.

ಇದನ್ನೂ ಓದಿ:ಜಾತ್ಯತೀತತೆಯ ಮೇಲೆ ದ್ವೇಷ ರಾಜಕೀಯ ಸವಾರಿ ಮಾಡಲು ಠಾಗೋರರ ನೆಲ ಬಿಡುವುದಿಲ್ಲ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...