Homeಮುಖಪುಟಬಿಜೆಪಿಯಿಂದ ಸ್ಪರ್ಧಿಸಲು ಗೋಯಲ್‌ ರಾಜೀನಾಮೆ ನೀಡಿರಬಹುದು: ಜೈರಾಮ್ ರಮೇಶ್

ಬಿಜೆಪಿಯಿಂದ ಸ್ಪರ್ಧಿಸಲು ಗೋಯಲ್‌ ರಾಜೀನಾಮೆ ನೀಡಿರಬಹುದು: ಜೈರಾಮ್ ರಮೇಶ್

- Advertisement -
- Advertisement -

ಲೋಕಸಭೆ ಚುನಾವಣೆಗೆ ಕೆಲವೇ ವಾರಗಳು ಬಾಕಿ ಇರುವಾಗ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್‌ ರಾಜೀನಾಮೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ ನಾಯಕ ಜೈರಾಮ್ ರಮೇಶ್, ಚುನಾವಣಾ ಆಯುಕ್ತರ ರಾಜೀನಾಮೆಗೆ ಕಾರಣವಾದ ಮೂರು ಸಾಧ್ಯತೆಗಳನ್ನು ಪ್ರಸ್ತಾಪಿಸಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಮಾದ್ಯಮ ಉಸ್ತುವಾರಿ ಜೈರಾಮ್ ರಮೇಶ್ ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಚುನಾವಣಾ ಆಯೋಗವು ನ್ಯಾಯಯುತ ಸಂಸ್ಥೆಯಾಗಬೇಕು, ಅದು ಸಾಂವಿಧಾನಿಕ ಸಂಸ್ಥೆಯಾಗಿದೆ. ಅರುಣ್ ಗೋಯೆಲ್ ನಿನ್ನೆ ರಾಜೀನಾಮೆ ನೀಡಿದ್ದಾರೆ. ಇದಕ್ಕೆ ಮೂರು ಕಾರಣಗಳು ಅವಲೋಕಿಸಬಹುದು. ಮೊದಲನೆಯದಾಗಿ ಮುಖ್ಯ ಚುನಾವಣಾ ಆಯುಕ್ತರಿಗೂ ಅವರಿಗೂ ಏನಾದರೂ ಭಿನ್ನಾಭಿಪ್ರಾಯಗಳಿವೆಯೇ? ಇಲ್ಲವಾದರೆ ಮುಂದಿನ ಸೀಟಿನಲ್ಲಿ ಕುಳಿತು ವಾಹನ ಚಲಾಯಿಸುವ ಮೋದಿ ಸರಕಾರಕ್ಕೂ ಅವರಿಗೂ ಏನಾದರೂ ಭಿನ್ನಾಭಿಪ್ರಾಯಗಳಿವೆಯಾ? ಎರಡನೆಯದಾಗಿ ಕೆಲವು ವೈಯಕ್ತಿಕ ಕಾರಣಗಳಿರಬಹುದು. ಮೂರನೆಯದಾಗಿ ಇತ್ತೀಚೆಗೆ ಕಲ್ಕತ್ತಾ ಹೈಕೋರ್ಟ್‌ ನ್ಯಾಯಮೂರ್ತಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರಿದ್ದಾರೆ, ಅದರಂತೆ ಅವರು ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಲು ರಾಜೀನಾಮೆ ನೀಡಿದ್ದಾರೆಯೇ? ಈ ಬಗ್ಗೆ ಮುಂದಿನ ದಿನಗಳಲ್ಲಿ ಸ್ಪಷ್ಟತೆ ಸಿಗಲಿದೆ ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಇದೇನು ಚುನಾವಣಾ ಆಯೋಗವೇ ಅಥವಾ ಚುನಾವಣಾ ಲೋಪವೇ?  ಲೋಕಸಭೆ ಚುನಾವಣೆ ದಿನಾಂಕ ಘೋಷಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಚುನಾವಣಾ ಆಯೋಗದ ಸಮಿತಿಯಲ್ಲಿ ಕೇವಲ ಒಬ್ಬರು ಸದಸ್ಯರಷ್ಟೇ ಇದ್ದಾರೆ.  ಇದು ಏಕೆ? ಎಂದು ಪ್ರಶ್ನಿಸಿದ್ದರು.

ನಾನು ಈ ಹಿಂದೆಯೇ ಹೇಳಿದಂತೆ, ಸ್ವತಂತ್ರ ಸಂಸ್ಥೆಗಳ ವ್ಯವಸ್ಥಿತ ನಾಶವನ್ನು ನಿಲ್ಲಿಸದಿದ್ದರೆ, ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಿರಂಕುಶ ಪ್ರಭುತ್ವವು ಅತಿಕ್ರಮಿಸಲಿದೆ. ಕುಸಿಯುತ್ತಿರುವ ಸಾಂವಿಧಾನಿಕ ಸಂಸ್ಥೆಗಳ ಪಟ್ಟಿಗೆ ಇದೀಗ ಚುನಾವಣಾ ಆಯೋಗವೂ ಸೇರ್ಪಡೆಯಾಗಿದೆ. ಚುನಾವಣಾ ಆಯೋಗದ ಸಮಿತಿಯಲ್ಲಿ ಮೂವರು ಸದಸ್ಯರು ಇರಬೇಕು. ಆದರೆ, ಗೋಯಲ್‌ ಅವರು ತಮ್ಮ ಸ್ಥಾನ ತೊರೆದಿರುವುದರಿಂದ, ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ಮಾತ್ರವೇ ಉಳಿದಿದ್ದಾರೆ. ಸಮಿತಿಯಲ್ಲಿದ್ದ ಮತ್ತೊಬ್ಬ ಚುನಾವಣಾ ಆಯುಕ್ತರಾಗಿ ಅನೂಪ್ ಚೌಧರಿ ಪಾಂಡೆ ಅವರು ಫೆಬ್ರವರಿಯಲ್ಲಿ ನಿವೃತ್ತರಾಗಿದ್ದರು. ಚುನಾವಣಾ ಆಯುಕ್ತರ ನೇಮಕದ ಹೊಸ ಪ್ರಕ್ರಿಯೆ ಆರಂಭವಾದಾಗಿನಿಂದ ಆಡಳಿತ ಪಕ್ಷ ಮತ್ತು ಪ್ರಧಾನಿಗೆ ಪರಿಣಾಮಕಾರಿಯಾದ ಅಧಿಕಾರ ದೊರೆತಿದೆ. ಆದರೂ, ಹಿಂದಿನ ಚುನಾವಣಾ ಆಯುಕ್ತರ ಅವಧಿ ಮುಗಿದ 23 ದಿನಗಳ ನಂತರವೂ ಹೊಸಬರನ್ನು ಏಕೆ ನೇಮಿಸಿಲ್ಲ? ಮೋದಿ ಸರ್ಕಾರ ಇದಕ್ಕೆ ಉತ್ತರಿಸಲೇಬೇಕು. ಸೂಕ್ತ ವಿವರಣೆಯನ್ನೂ ನೀಡಬೇಕು ಎಂದು ಖರ್ಗೆ ಆಗ್ರಹಿಸಿದ್ದರು.

ಇದನ್ನು ಓದಿ: ಬಿಜೆಪಿ 400 ಸೀಟ್ ಗೆದ್ದರೆ ಸಂವಿಧಾನ ತಿದ್ದುಪಡಿ: ಹಿಡನ್‌ ಅಜೆಂಡಾ ಬಿಚ್ಚಿಟ್ಟ ಬಿಜೆಪಿ ಸಂಸದ ಅನಂತ್‌ ಕುಮಾರ್‌ ಹೆಗಡೆ

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಿರ್ಗಿಸ್ತಾನ್‌ನಲ್ಲಿ ಹಿಂಸಾಚಾರ: ಮನೆಬಿಟ್ಟು ಹೊರಬರದಂತೆ ಭಾರತೀಯ ವಿದ್ಯಾರ್ಥಿಗಳಿಗೆ ಸೂಚನೆ

0
ಕಿರ್ಗಿಸ್ತಾನ್‌ನ ರಾಜಧಾನಿ ಬಿಷ್ಕೆಕ್‌ನಲ್ಲಿ ವಿದೇಶಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಗುಂಪು ಹಿಂಸಾಚಾರದ ವರದಿಗಳ ಮಧ್ಯೆ ಭಾರತ ಮತ್ತು ಪಾಕಿಸ್ತಾನವು ಶನಿವಾರ ಬಿಷ್ಕೆಕ್‌ನಲ್ಲಿರುವ ವಿದ್ಯಾರ್ಥಿಗಳಿಗೆ ತಾವು ತಂಗಿರುವ ಹಾಸ್ಟೆಲ್‌, ಮನೆಗಳಿಂದ ಹೊರಗೆ ಬರದಂತೆ ಸೂಚಿಸಿದೆ. ಕಿರ್ಗಿಸ್ತಾನ್‌ನಲ್ಲಿರುವ ಭಾರತದ...