Homeಮುಖಪುಟಕೃಷಿ ಕಾನೂನುಗಳಿಗೆ ಒಂದೂವರೆ ವರ್ಷ ತಡೆ - ಕೇಂದ್ರದ ಪ್ರಸ್ತಾವ ತಿರಸ್ಕರಿಸಿದ ರೈತರು

ಕೃಷಿ ಕಾನೂನುಗಳಿಗೆ ಒಂದೂವರೆ ವರ್ಷ ತಡೆ – ಕೇಂದ್ರದ ಪ್ರಸ್ತಾವ ತಿರಸ್ಕರಿಸಿದ ರೈತರು

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ಹೋರಾಟ ಮಾಡುತ್ತಿರುವ ರೈತರೊಡನೆ ಕೇಂದ್ರ ಸರ್ಕಾರ 10 ನೇ ಸುತ್ತಿನ ಮಾತುಕತೆ ನಡೆಸಿದ್ದು, “ಕೃಷಿ ಕಾಯ್ದೆಗಳ ಅನುಷ್ಠಾನವನ್ನು ಒಂದೂವರೆ ವರ್ಷ ತಡೆಹಿಡಿಯಲಾಗುವುದು” ಎಂದು ಹೇಳಿತ್ತು.

- Advertisement -
- Advertisement -

ಮೂರು ಕೃಷಿ ಕಾನೂನುಗಳ ಜಾರಿಯನ್ನು ಒಂದೂವರೆ ವರ್ಷ ತಡೆಹಿಡಿಯಲಾಗುವುದು ಎಂದು ಕೇಂದ್ರ ಸರ್ಕಾರ ಜನವರಿ 20 ರಂದು ರೈತರೊಂದಿಗೆ ನಡೆದ 10 ನೇ ಸುತ್ತಿನ ಮಾತುಕತೆಯಲ್ಲಿ ಹೇಳಿತ್ತು. ಆದರೆ ಈ ಪ್ರಸ್ತಾವವನ್ನು ರೈತ ಒಕ್ಕೂಟ ಇಂದು (ಜನವರಿ 21) ತಿರಸ್ಕರಿಸಿವೆ.

“ಕೃಷಿ ಕಾನೂನುಗಳನ್ನು ರದ್ದುಗೊಳಿಸಿ, ಕನಿಷ್ಟ ಬೆಂಬಲ ಬೆಲೆಯ ಭರವಸೆ ನೀಡಬೇಕು. ಇಲ್ಲದಿದ್ದರೆ ನಮ್ಮ ಹೋರಾಟವನ್ನು ಹಿಂತೆಗೆದುಕೊಳ್ಳುವುದಿಲ್ಲ” ಎಂದು ರೈತ ಮುಖಂಡರು ಹೇಳಿದ್ದಾರೆ.

“ಅದಾಗ್ಯೂ ಗಣರಾಜ್ಯೋತ್ಸವದಂದು ನಡೆಯಲಿರುವ ಟ್ರ್ಯಾಕ್ಟರ್ ರ್ಯಾಲಿಯನ್ನು ನಡೆಸಿಯೇ ತೀರುತ್ತೇವೆ. ಇದರಿಂದ ಸರ್ಕಾರದ ಯಾವುದೇ ಕಾರ್ಯಕ್ರಮಗಳಿಗೆ ತೊಂದರೆಯಾಗುವುದಿಲ್ಲ” ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ‘ನಾನು ತೇಜಸ್ವಿ ಯಾದವ್ ಮಾತಾಡುತ್ತಿದ್ದೇನೆ’: ಡಿಸಿಯೊಂದಿಗಿನ ಖಡಕ್ ಸಂಭಾಷಣೆ ವೈರಲ್

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ಹೋರಾಟ ಮಾಡುತ್ತಿರುವ ರೈತರೊಡನೆ ಕೇಂದ್ರ ಸರ್ಕಾರ 10 ನೇ ಸುತ್ತಿನ ಮಾತುಕತೆ ನಡೆಸಿದ್ದು, “ಕೃಷಿ ಕಾಯ್ದೆಗಳ ಅನುಷ್ಠಾನವನ್ನು ಒಂದೂವರೆ ವರ್ಷ ತಡೆಹಿಡಿಯಲಾಗುವುದು” ಎಂದು ಹೇಳಿತ್ತು.

ಈ ಕುರಿತು ಅಖಿಲ ಭಾರತ ಕಿಸಾನ್ ಸಭಾ ಪ್ರಧಾನ ಕಾರ್ಯದರ್ಶಿ ಹನ್ನನ್ ಮೊಲ್ಲಾ, “ಒಂದೂವರೆ ವರ್ಷದವರೆಗೆ ಕಾನೂನುಗಳ ಅನುಷ್ಠಾನವನ್ನು ಸ್ಥಗಿತಗೊಳಿಸಲಾಗುವುದು ಎಂದು ನ್ಯಾಯಾಲಯದಲ್ಲಿ ಅಫಿಡವಿಟ್ ಸಲ್ಲಿಸಲು ಕೇಂದ್ರ ಸರ್ಕಾರ ಸಿದ್ಧವಾಗಿರುವುದಾಗಿ ಹೇಳಿದೆ” ಎಂದು ಹೇಳಿದ್ದರು.

ಇದನ್ನೂ ಓದಿ: ‘ಗೋಲಿ ಮಾರೋ ಸಾಲೋಂಕೋ’ ಘೋಷಣೆ – ಬಿಜೆಪಿ ಮುಖಂಡ ಸೇರಿ 3 ಕಾರ್ಯಕರ್ತರ ಬಂಧನ

“ಕನಿಷ್ಟ ಬೆಂಬಲ ಬೆಲೆ ಮತ್ತು ಕೃಷಿ ಕಾನೂನುಗಳ ಬಗ್ಗೆ ಸಮಿತಿಯನ್ನು ರಚಿಸಲಾಗುವುದು. ಜೊತೆಗೆ ಸಮಿತಿಯ ಶಿಫಾರಸುಗಳನ್ನು ಜಾರಿಗೆ ತರಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ. ನಾವು ನಾಳೆ ಸಭೆ ನಡೆಸಿ, ಈ ಪ್ರಸ್ತಾಪದ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ” ಎಂದು ಹನ್ನನ್ ಮೊಲ್ಲಾ ಹೇಳಿದ್ದರು.

ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಕಳೆದ ಎರಡು ತಿಂಗಳಿನಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಈ ಬಿಕ್ಕಟ್ಟಿನ ಕುರಿತು ಕೇಂದ್ರ ಸರ್ಕಾರ ಮತ್ತು ರೈತರ ನಡುವೆ 10 ಸುತ್ತಿನ ಮಾತುಕತೆಗಳು ನಡೆದಿದ್ದು, ಎಲ್ಲವೂ ವಿಫಲವಾಗಿವೆ. ಕಾಯ್ದೆಗಳನ್ನು ಹಿಂತೆಗೆದುಕೊಳ್ಳಬೆಕು ಎಂದು ರೈತರು ಒತ್ತಾಯಿಸುತ್ತಿದ್ದರೆ, ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯುತ್ತಿಲ್ಲ.


ಇದನ್ನೂ ಓದಿ: ಖಾತೆ ಬದಲಾವಣೆ: ಯಡಿಯೂರಪ್ಪಗೆ ಸೆಡ್ಡು ಹೊಡೆದು ಶೆಟ್ಟರ್ ಪಾಳಯಕ್ಕೆ ಜಿಗಿದರೆ ಮಾಧುಸ್ವಾಮಿ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದ್ವೇಷ ಭಾಷಣ: ಮೋದಿಗೆ ಕಳುಹಿಸುವ ಬದಲು ‘ಜೆ.ಪಿ.ನಡ್ಡಾ’ಗೆ ನೊಟೀಸ್‌ ನೀಡಿದ ಚುನಾವಣಾ ಆಯೋಗ!

0
ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ದೂರುಗಳ ಆಧಾರದ ಮೇಲೆ ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆ ಉಲ್ಲಂಘನೆಗಾಗಿ ನೋಟಿಸ್ ನೀಡಿದೆ. ಆದರೆ, ಈ ನೊಟೀಸ್‌ನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಕಳುಹಿಸಲಾಗಿದ್ದು,...