Homeಕರ್ನಾಟಕ'ಒಂದು ದೇಶ ಒಂದು ಚುನಾವಣೆ' | ಒಕ್ಕೂಟ ವ್ಯವಸ್ಥೆಗೆ ವಿರುದ್ಧ ಮತ್ತು ಅನುಷ್ಠಾನ ಅಸಾಧ್ಯ -...

‘ಒಂದು ದೇಶ ಒಂದು ಚುನಾವಣೆ’ | ಒಕ್ಕೂಟ ವ್ಯವಸ್ಥೆಗೆ ವಿರುದ್ಧ ಮತ್ತು ಅನುಷ್ಠಾನ ಅಸಾಧ್ಯ – ಸಿದ್ದರಾಮಯ್ಯ

ತರಾತುರಿಯ ಅನುಷ್ಠಾನಕ್ಕೆ ಹೊರಟಿದ್ದು ನರೇಂದ್ರ ಮೋದಿ ಸರ್ಕಾರದ ದುಷ್ಠ ಉದ್ದೇಶದ ಅನಾವರಣ ಎಂದು ಸಿದ್ದರಾಮಯ್ಯ

- Advertisement -
- Advertisement -

ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ‘‘ಒಂದು ದೇಶ ಒಂದು ಚುನಾವಣೆ’’ ಯ ಪ್ರಸ್ತಾವ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು ಮಾತ್ರವಲ್ಲ ‘‘ಅನುಷ್ಠಾನಗೊಳಿಸಲು ಕೂಡಾ ಅಸಾಧ್ಯವಾದುದು’’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಅವರು, “ಇಂತಹದ್ದೊಂದು ಮಹತ್ವದ ಪ್ರಸ್ತಾವದ ಬಗ್ಗೆ ವಿರೋಧ ಪಕ್ಷಗಳ ಜೊತೆ ಸಮಾಲೋಚನೆಯನ್ನೂ ಮಾಡದೆ ತರಾತುರಿಯಲ್ಲಿ ಅನುಷ್ಠಾನಕ್ಕೆ ತರಲು ಹೊರಟಿರುವುದು ನರೇಂದ್ರ ಮೋದಿ ಸರ್ಕಾರದ ದುಷ್ಠ ಉದ್ದೇಶವನ್ನು ಅನಾವರಣಗೊಳಿಸಿದೆ” ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂಓದಿ: ದಲಿತರ ಮನೆಗಳಿಗೆ ಬೆಂಕಿ: ಬಿಹಾರದ ಎನ್‌ಡಿಎ ಸರ್ಕಾರದ ವಿರುದ್ಧ ಕಾಂಗ್ರೆಸ್, ಬಿಎಸ್‌ಪಿ ವಾಗ್ದಾಳಿ

“ಒಂದು ಸರ್ಕಾರದ ಆದ್ಯತೆಗಳು ಏನಿರಬೇಕೆಂಬ ಸಾಮಾನ್ಯ ಜ್ಞಾನವೂ ಕೇಂದ್ರ ಸರ್ಕಾರಕ್ಕಾಗಲಿ, ಪ್ರಧಾನಮಂತ್ರಿಯವರಿಗಾಗಲಿ ಇದ್ದ ಹಾಗೆ ಕಾಣುವುದಿಲ್ಲ. ದೇಶಾದ್ಯಂತ ನಿರುದ್ಯೋಗ ತಾಂಡವವಾಡುತ್ತಿದೆ, ಹಣದುಬ್ಬರದಿಂದ ದೇಶದ ಆರ್ಥಿಕತೆ ತತ್ತರಿಸುತ್ತಿದೆ. ಅಗತ್ಯವಸ್ತುಗಳ ಬೆಲೆ ಏರಿಕೆಯಿಂದ ಜನ ಬವಣೆಪಡುತ್ತಿದ್ದಾರೆ. ದೇಶಾದ್ಯಂತ ಕಾನೂನು ಸುವ್ಯವಸ್ಥೆ ಮೇಲಿನ ನಿಯಂತ್ರಣ ತಪ್ಪಿಹೋಗಿದ್ದು, ದಲಿತರು ಮತ್ತು ಮಹಿಳೆಯರ ಮೇಲೆ ದೌರ್ಜನ್ಯಗಳು ಮಿತಿಮೀರಿ ಹೋಗುತ್ತಿದೆ.

ಈ ಬಗ್ಗೆ ಯೋಚನೆ ಮಾಡಲು ಕೂಡಾ ಪುರುಸೊತ್ತಿಲ್ಲದ ಪ್ರಧಾನ ಮಂತ್ರಿಗಳು ‘ಒಂದು ದೇಶ ಒಂದು ಚುನಾವಣೆ’ ಎಂಬ ಗಿಮಿಕ್ ಮೂಲಕ ಜನರ ಗಮನವನ್ನು ಬೇರೆ ಕಡೆ ಸೆಳೆದು ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಹೊರಟಿದ್ದಾರೆ” ಎಂದು ಹೇಳಿದ್ದಾರೆ.

“ಆಡಳಿತಾರೂಢ ಬಿಜೆಪಿ ಪಕ್ಷದ ಗುಪ್ತ ಅಜೆಂಡಾವನ್ನು ಒಳಗೊಂಡಿರುವ ‘ಒಂದು ದೇಶ ಒಂದು ಚುನಾವಣೆ’ ಪ್ರಸ್ತಾವವನ್ನು ಸಂಸತ್ ನ ಒಳಗೆ ಮತ್ತು ಹೊರಗೆ ನಮ್ಮ ಪಕ್ಷ ಎದುರಿಸಲಿದೆ. ದೇಶದ ಜನಾಭಿಪ್ರಾಯವೂ ‘ಒಂದು ದೇಶ ಒಂದು ಚುನಾವಣೆ’ ಯ ವ್ಯವಸ್ಥೆಗೆ ವಿರುದ್ಧವಾಗಿದೆ.” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: ಜಮ್ಮು ಕಾಶ್ಮೀರದ ರಾಜ್ಯ ಸ್ಥಾನಮಾನ ಮರುಸ್ಥಾಪನೆ | ಪ್ರಧಾನಿ ಭರವಸೆ

“ಒಂದು ದೇಶ ಒಂದು ಚುನಾವಣೆಯ ವ್ಯವಸ್ಥೆ ಸಂಪೂರ್ಣವಾಗಿ ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಲೋಕಸಭೆ ಇಲ್ಲವೆ ವಿಧಾನಸಭೆಯಲ್ಲಿ ಆಡಳಿತಾರೂಢ ಪಕ್ಷ ವಿಶ್ವಾಸಮತ ಗಳಿಸಲು ಸೋತುಹೋಗುವ ಸಂದರ್ಭದಲ್ಲಿ ಎದುರಾಗುವ ಬಿಕ್ಕಟ್ಟಿಗೆ ಪ್ರಸ್ತಾವದಲ್ಲಿ ಪರಿಹಾರ ಇಲ್ಲ. ಇಂತಹ ಸಂದರ್ಭದಲ್ಲಿ ಮಧ್ಯಂತರ ಚುನಾವಣೆಯೊಂದೇ ಯೋಗ್ಯ ಪರಿಹಾರವಾಗಿದೆ. ಇದರ ಬದಲಿಗೆ ಸದನದಲ್ಲಿ ವಿಶ್ವಾಸ ಮತ ಗಳಿಸಲು ವಿಫಲವಾದ ಅಲ್ಪಸಂಖ್ಯಾತ ಪಕ್ಷ ಅಧಿಕಾರದಲ್ಲಿ ಮುಂದುವರಿಯಲು ಅವಕಾಶ ನೀಡಿದರೆ ಅದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಗೆಯುವ ದ್ರೋಹವಾಗುತ್ತದೆ.” ಎಂದು ಅವರು ಹೇಳಿದ್ದಾರೆ.

“ಇಡೀ ದೇಶದಲ್ಲಿ ಒಂದೇ ಬಾರಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ನಡೆಸುವ ಶಕ್ತಿ-ಸಾಮರ್ಥ್ಯ ನಮ್ಮ ಈಗಿನ ಚುನಾವಣಾ ಆಯೋಗಕ್ಕೆ ಇಲ್ಲ. ಇದಕ್ಕಾಗಿ ನಮ್ಮ ಚುನಾವಣಾ ವ್ಯವಸ್ಥೆಯನ್ನು ದುಪ್ಪಟ್ಟು ಪ್ರಮಾಣದಲ್ಲಿ ವಿಸ್ತರಿಸಬೇಕಾಗುತ್ತದೆ. ಇವೆಲ್ಲವೂ ಅವಸರದಿಂದ ಮಾಡುವ ಕೆಲಸ ಅಲ್ಲ.
ಹೊಸ ಚುನಾವಣಾ ವ್ಯವಸ್ಥೆ ಜಾರಿಗೆ ಬರಬೇಕಾದರೆ ಮೊದಲು ಪ್ರಜಾಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ಮಾಡಬೇಕಾಗಿದೆ. ಇದರ ಜೊತೆಗೆ ಸಂವಿಧಾನದ ಕನಿಷ್ಠ ಐದು ಪರಿಚ್ಛೇದಗಳಿಗೆ ತಿದ್ದುಪಡಿ ತರಬೇಕಾಗಿದೆ” ಎಂದು ಅವರು ಹೇಳಿದ್ದಾರೆ.

“ಈಗಿನ ವ್ಯವಸ್ಥೆಯಲ್ಲಿ ಸಂವಿಧಾನ ತಿದ್ದುಪಡಿಗೆ ಬೇಕಾದಷ್ಟು ಸದಸ್ಯರ ಸಂಖ್ಯೆಯನ್ನು ಹೊಂದಿಸಿಕೊಳ್ಳುವುದು ಎನ್‌ಡಿಎ ಗೆ ಕೂಡಾ ಕಷ್ಟ ಸಾಧ್ಯ. ಇವೆಲ್ಲವೂ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಗೊತ್ತಿದ್ದರೂ ಕೇವಲ ಜನರಲ್ಲಿ ಗೊಂದಲವನ್ನು ಹುಟ್ಟುಹಾಕಿ ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಈ ಪ್ರಸ್ತಾವವನ್ನು ಸಚಿವ ಸಂಪುಟ ಅಂಗೀಕರಿಸಿದೆ” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ವಿಡಿಯೊ ನೋಡಿ: ಗುರುಪ್ರಸಾದ್ ಕಂಟಲಗೆರೆ ಅವರ ‘ಅಟ್ರಾಸಿಟಿ’ ಕಾದಂಬರಿ ಕುರಿತ ಚರ್ಚೆಯಲ್ಲಿ ಲೇಖಕಿ ದು.ಸರಸ್ವತಿ ಅವರ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...