Homeಮುಖಪುಟವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಸಚಿವ ಬಿ ನಾಗೇಂದ್ರ ರಾಜೀನಾಮೆ ಸಾಧ್ಯತೆ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಸಚಿವ ಬಿ ನಾಗೇಂದ್ರ ರಾಜೀನಾಮೆ ಸಾಧ್ಯತೆ

- Advertisement -
- Advertisement -

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಹಗರಣಕ್ಕೆ ಸಂಬಂಧಿಸಿ ಸಚಿವ ಬಿ ನಾಗೇಂದ್ರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ರಾಜೀನಾಮೆ ನೀಡುವಂತೆ ಸೂಚಿಸಿದ್ದು, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಇಂದು ರಾಜೀನಾಮೆ ನೀಡುವ ಸಾಧ್ಯತೆ ಇದೆ.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಶರಣಾಗಿ 5 ಪುಟಗಳ ಡೆತ್ ನೋಟ್ ಬರೆದ ನಂತರ ಬೆಳಕಿಗೆ ಬಂದ ಬಹುಕೋಟಿ ಹಗರಣದಲ್ಲಿ ನಾಗೇಂದ್ರ ಅವರ ಹೆಸರು ಕೇಳಿಬಂದಿದೆ. ಡೆತ್‌ನೋಟ್‌ನಲ್ಲಿ ಚಂದ್ರಶೇಖರನ್ ತಮ್ಮ ಮೇಲಧಿಕಾರಿಗಳು ಮತ್ತು ಸಚಿವರ ಹೆಸರನ್ನು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ಎಸ್ಟಿ ಕಲ್ಯಾಣಕ್ಕಾಗಿ ಮೀಸಲಿರಿಸಲಾಗಿದ್ದ 187 ಕೋಟಿ ರೂ.ಗಳಲ್ಲಿ 90 ಕೋಟಿ ರೂ.ಗಳ ಹಣವನ್ನು ಬಹು ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲು ಮೌಖಿಕವಾಗಿ ಸೂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಯೂನಿಯನ್ ಬ್ಯಾಂಕ್ ನೀಡಿದ ದೂರಿನ ಆಧಾರದ ಮೇಲೆ ಸಿಬಿಐ ಎಫ್‌ಐಆರ್ ದಾಖಲಿಸಿದ ಸುದ್ದಿ ಹೊರಬಿದ್ದ ನಂತರ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈ ಕುರಿತು ಸಭೆ ನಡೆಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿಸಿಎಂ ಡಿಕೆ ಶಿವಕುಮಾರ್ ಅವರು ನಾಗೇಂದ್ರ ಅವರನ್ನು ಕರೆಸಿ ರಾಜೀನಾಮೆ ಕೇಳಲು ಕಾರಣವಾದ ಸಂದರ್ಭಗಳನ್ನು ವಿವರಿಸಿದ್ದಾರೆ ಎಂದು ವರದಿಯಾಗಿದೆ. ಪ್ರಕರಣದಲ್ಲಿ ಕ್ಲೀನ್‌ ಚಿಟ್‌ ಸಿಕ್ಕರೆ ಅವರನ್ನು ಸಂಪುಟಕ್ಕೆ ಮತ್ತೆ ಸೇರಿಸುವುದಾಗಿ ಉಭಯ ನಾಯಕರು ಭರವಸೆ ನೀಡಿದ ನಂತರವೇ ನಾಗೇಂದ್ರ ರಾಜೀನಾಮೆ ನೀಡಲು ಒಪ್ಪಿಕೊಂಡರು ಎಂದು  ವರದಿಯಾಗಿದೆ.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 94.73 ಕೋಟಿ ಮೊತ್ತವನ್ನು ಯೂನಿಯನ್ ಬ್ಯಾಂಕ್‌ನ ವಸಂತನಗರ ಶಾಖೆಯಿಂದ ಎಂ.ಜಿ. ರಸ್ತೆಯ ಶಾಖೆಗೆ ವರ್ಗಾಯಿಸಲಾಗಿತ್ತು. ಅಲ್ಲಿಂದ ಹೈದರಾಬಾದ್‌ನ ಫಸ್ಟ್ ಫೈನಾನ್ಸ್ ಕೋ ಆಪರೇಟಿವ್‌ ಸೊಸೈಟಿಯ 18 ಖಾತೆಗಳಿಗೆ ವರ್ಗಾವಣೆ ಮಾಡಲಾಗಿತ್ತು. ಸೊಸೈಟಿಯ ಖಾತೆಗಳಿಂದ ಹೈದರಾಬಾದ್‌ನ ರತ್ನಾಕರ ಬ್ಯಾಂಕ್ ಲಿಮಿಟೆಡ್‌ಗೆ (ಆರ್‌ಬಿಎಲ್‌) ವರ್ಗಾಯಿಸಿ, ಅಲ್ಲಿಂದ ಹಣವನ್ನು ಡ್ರಾ ಮಾಡಿಕೊಳ್ಳಲಾಗಿತ್ತು ಎಂಬ ಆರೋಪ ಇದೆ.

ಈ ಅಕ್ರಮದ ತನಿಖೆಗೆ ಮನೀಷ್ ಖರ್ಬೀಕರ್ ನೇತೃತ್ವದಲ್ಲಿ ಸರಕಾರ ಎಸ್ಐಟಿ ತನಿಖೆಗೆ ಆದೇಶಿಸಿದೆ. ತನಿಖಾಧಿಕಾರಿಗಳು ಇದೀಗ ನಿಗಮದ ಅಧಿಕಾರಿಗಳನ್ನು ಹಾಗೂ ಸಚಿವ ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್ ಅವರನ್ನು ಈಗಾಗಲೇ ಬಂಧಿಸಿದೆ.

ಸಚಿವ ನಾಗೇಂದ್ರ ರಾಜೀನಾಮೆ ಜೂ.6ರವರೆಗೆ ಗಡುವು ನೀಡಿರುವ ಬಿಜೆಪಿಗರು, ಇಂದು ರಾಜಭವನ ಚಲೋ ಹಮ್ಮಿಕೊಂಡಿದ್ದಾರೆ. ಪ್ರತಿಪಕ್ಷಗಳು ಈ ವಿಚಾರನ್ನು ದೊಡ್ಡದಾಗಿ ಮಾಡಿ ರಾಜಕೀಯ ಮಾಡುವ ಮೊದಲೇ ಸಿಎಂ ಮಹತ್ವದ ನಿರ್ಧಾರ ತೆಗೆದುಕೊಂಡು ಬಿ.ನಾಗೇಂದ್ರ ಅವರಿಗೆ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

ಇದನ್ನು ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ: ಡೆತ್‌ನೋಟ್‌ನಲ್ಲಿ ಹೆಸರಿಸಿದ್ದ ಇಬ್ಬರು ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...