Homeಕರ್ನಾಟಕಪ್ರಜ್ವಲ್‌ ರೇವಣ್ಣ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಪ್ರಜ್ವಲ್‌ ರೇವಣ್ಣ ವಿರುದ್ಧ ಮತ್ತೊಂದು ಪ್ರಕರಣ ದಾಖಲು

- Advertisement -
- Advertisement -

ಪೆನ್‌ಡ್ರೈವ್‌ ವಿಡಿಯೋ ವೈರಲ್‌ ಬಳಿಕ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ.

ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಬೆದರಿಕೆಯೊಡ್ಡಿರುವ ಆರೋಪದಡಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮಹಿಳೆಯೊಬ್ಬರು ಪ್ರಕರಣ ದಾಖಲಿಸಿದ್ದಾರೆ.

ಈ ಕುರಿತು ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ‌ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್‌, ರೇವಣ್ಣ ಅವರು ಇಂದು ಅಧಿಕಾರಿಗಳ ಮುಂದೆ ಹಾಜರಾಗುತ್ತೆನೆ ಎಂದು ಹೇಳಿದ್ದಾರೆ. ಲುಕ್ ಔಟ್ ನೋಟಿಸ್ ನೀಡಲಾಗಿದೆ. ಪ್ರಜ್ವಲ್ ರೇವಣ್ಣ ಅವರು ವಕೀಲರ ಮೂಲಕ 6 ದಿನ ಕಾಲಾವಕಾಶ ಕೇಳಿದ್ದಾರೆ. ನಿನ್ನೆ ಮತ್ತೊಬ್ಬ ಮಹಿಳೆ ದೂರು ನೀಡಿದ್ದಾರೆ. ಇದು ಎರಡನೇ ದೂರು. ಮಹಿಳೆಯರು ಧೈರ್ಯವಾಗಿ ಬಂದು ದೂರು ನೀಡಬಹುದು. ತಮಗೆ ಸರ್ಕಾರ ಎಲ್ಲ ರೀತಿಯ ಭದ್ರತೆ ನೀಡಲಿದೆ ಎಂದು ಹೇಳಿದ್ದಾರೆ.

ಇಂತಹ ಸೂಕ್ಷ್ಮ ವಿಚಾರದಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುವುದು ಕಷ್ಟ, ಮೊದಲು ಸಂತ್ರಸ್ತ ಮಹಿಳೆಯರು ಬಂದು ದೂರು ಕೊಡಬೇಕು, ಪ್ರಜ್ವಲ್ ರೇವಣ್ಣ ಡಿಪ್ಲೊಮೆಟಿಕ್ ಪಾಸ್ ಪೋರ್ಟ್‌ ಮೂಲಕ ವಿದೇಶಕ್ಕೆ ಹೋಗಿದ್ದು ಸತ್ಯ, ಕೇಂದ್ರ ಸರಕಾರ ಡಿಪ್ಲೊಮೆಟಿಕ್ ಪಾಸ್ ಪೋರ್ಟ್‌ ಕೊಟ್ಟಿದೆ. ಹೀಗಾಗಿ ರಾತ್ರೋ ರಾತ್ರಿ ಹೋಗಿದ್ದಾರೆ ಎಂದು ಹೇಳಿದ್ದಾರೆ.

ಮನೆ ಕೆಲಸದ ಮಹಿಳೆ ಹಾಗೂ ಅವರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಹಾಗೂ ಅವರ‌ ಮಗ ಪ್ರಜ್ವಲ್ ವಿರುದ್ಧ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಮೊದಲ ಪ್ರಕರಣ ದಾಖಲಾಗಿತ್ತು. ಈ ಕುರಿತ ಪ್ರಕರಣದ ತನಿಖೆಯ ಹೊಣೆಯನ್ನು ಎಸ್‌ಐಟಿಗೆ ವಹಿಸಲಾಗಿದೆ.

ಎಸ್‌ಐಟಿ ಅಧಿಕಾರಿಗಳು ಎಚ್.ಡಿ. ರೇವಣ್ಣ ಮತ್ತು ಪ್ರಜ್ವಲ್‌ ರೇವಣ್ಣಗೆ ತನಿಖೆಗೆ ಹಾಜರಾಗುವಂತೆ ನೊಟೀಸ್‌ ಜಾರಿ ಮಾಡಿದ್ದಾರೆ. 24 ಗಂಟೆಗಳ ಒಳಗೆ ಎಸ್‌ಐಟಿ ಮುಂದೆ ಹಾಜರಾಗುವಂತೆ ಸೂಚಿಸಿದ್ದರು. ಆದರೆ ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ‌ ಇಲ್ಲದ ಕಾರಣ, ಕಾಲಾವಕಾಶ ಕೋರಿ ನಾನು ನನ್ನ ವಕೀಲರ ಮೂಲಕ ಮನವಿ ಸಲ್ಲಿಸಿದ್ದೇನೆ ಎಂದು ಪ್ರಜ್ವಲ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ನಿನ್ನೆ ಪೋಸ್ಟ್ ಮಾಡಿದ್ದರು.

ಪ್ರಜ್ವಲ್ ವಿದೇಶದಲ್ಲಿರುವ ಬಗ್ಗೆ ಎಸ್ಐಟಿ ಅಧಿಕಾರಿಗಳು ಈಗ ಮಾಹಿತಿ ಕಲೆ‌ ಹಾಕಿದ್ದಾರೆ. ಪ್ರಜ್ವಲ್ ಪತ್ತೆಗಾಗಿ‌ ಲುಕ್ ಔಟ್ ನೋಟಿಸ್ ಜಾರಿ‌ ಮಾಡಿ, ವಿಮಾನ ನಿಲ್ದಾಣ ಅಧಿಕಾರಿಗಳು ಹಾಗೂ ಅಂತರಾಷ್ಟ್ರೀಯ ತನಿಖಾ ಸಂಸ್ಥೆಗಳಿಗೆ ರವಾನಿಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಲುಕ್‌ಔಟ್ ನೋಟಿಸ್ ಬಳಿಕವೂ ಪ್ರಜ್ವಲ್‌ ಪತ್ತೆಯಾಗದಿದ್ದರೆ, ಆತನ ಪತ್ತೆಗೆ ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್ ಜಾರಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಮಹಿಳೆಯರಿಗೆ ಕಿರುಕುಳ ನೀಡಿದ್ದಾರೆ ಎನ್ನಲಾದ ಸಾವಿರಾರು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಇದು ಪಕ್ಷ ಮತ್ತು ನಾಯಕತ್ವಕ್ಕೆ ಭಾರೀ ಮುಜುಗರ ಉಂಟು ಮಾಡಿತ್ತು. ಇದರ ಬೆನ್ನಲ್ಲಿ ಪ್ರಜ್ವಲ್‌ ರೇವಣ್ಣ ಅವರನ್ನು ಜೆಡಿಎಸ್‌ ಪಕ್ಷದಿಂದ ಅಮಾನತು ಮಾಡಲಾಗಿದೆ.

ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ಸಂತ್ರಸ್ತೆಯೊಬ್ಬರು ಹೊಳೆನರಸೀಪುರ ಪೊಲೀಸ್‌ ಠಾಣೆಗೆ ಎಚ್‌ಡಿ ರೇವಣ್ಣ-ಪ್ರಜ್ವಲ್ ರೇವಣ್ಣ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು. ಅಪ್ಪ-ಮಗನ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 354 (ಎ), 354 (ಡಿ) ಮತ್ತು 506, 509 ಅಡಿಯಲ್ಲಿ ದೂರು ದಾಖಲಿಸಲಾಗಿತ್ತು.

ಇದನ್ನು ಓದಿ: ಮಣಿಪುರ ಸಂಘರ್ಷಕ್ಕೆ ಒಂದು ವರ್ಷ: ಮೈತೈ, ಕುಕಿ ಸಮುದಾಯಗಳಿಂದ ಪ್ರತ್ಯೇಕ ಕಾರ್ಯಕ್ರಮ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸಿಎಎ ಅಡಿ ಪೌರತ್ವ ನೀಡಿದ ಕೇಂದ್ರ ಸರ್ಕಾರ: ಸುಪ್ರೀಂ ಮೆಟ್ಟಿಲೇರಲು ನಿರ್ಧರಿಸಿದ ಮುಸ್ಲಿಂ ಲೀಗ್

0
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಡಿ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಮುಸ್ಲಿಮೇತರರಿಗೆ ಭಾರತೀಯ ಪೌರತ್ವ ನೀಡುವ ಪ್ರಕ್ರಿಯೆಯನ್ನು ಕೇಂದ್ರ ಗೃಹ ಇಲಾಖೆ ಪ್ರಾರಂಭಿಸಿದೆ. ಈಗಾಗಲೇ ಮೊದಲ ಹಂತದಲ್ಲಿ ಅರ್ಜಿ ಸಲ್ಲಿಸಿದ 300ಕ್ಕೂ ಅಧಿಕ...