Homeಮುಖಪುಟ'ಒಂದು ರಾಷ್ಟ್ರ, ಒಂದು ಚುನಾವಣೆ' ಪ್ರಜಾಪ್ರಭುತ್ವ ವಿರೋಧಿ: ಮಲ್ಲಿಕಾರ್ಜುನ ಖರ್ಗೆ

‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಜಾಪ್ರಭುತ್ವ ವಿರೋಧಿ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಒಂದು ರಾಷ್ಟ್ರ ಒಂದು ಚುನಾವಣೆ ಪರಿಕಲ್ಪಣೆಯನ್ನು ಕಾಂಗ್ರೆಸ್ ಬಲವಾಗಿ ವಿರೋಧಿಸಿದ್ದು, ಇದು ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ದವಾಗಿದೆ ಎಂದಿದೆ.

ಒಂದು ರಾಷ್ಟ್ರ, ಒಂದು ಚುನಾವಣೆಯ ಸಾಧ್ಯತೆಯ ಬಗ್ಗೆ ಪರಿಶೀಲಿಸಲು ರಚಿಸಿರುವ ಮಾಜಿ ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ನೇತೃತ್ವದ ಸಮಿತಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದು, ಸಮಿತಿಯನ್ನು ವಿಸರ್ಜಿಸುವಂತೆ ಕೋರಿದ್ದಾರೆ.

ಸಂವಿಧಾನ ಮತ್ತು ಸಂಸದೀಯ ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡುವುದರೊಂದಿಗೆ ಮಾಜಿ ರಾಷ್ಟ್ರಪತಿಗಳ ಕಚೇರಿಯನ್ನು ದುರುಪಯೋಗಪಡಿಸಿಕೊಳ್ಳಲು ಕೇಂದ್ರ ಸರ್ಕಾರಕ್ಕೆ ಅವಕಾಶ ನೀಡದಂತೆ ಕೋವಿಂದ್ ಅವರಿಗೆ ಕಾಂಗ್ರೆಸ್ ಮನವಿ ಮಾಡಿದೆ.

‘ಒಂದು ರಾಷ್ಟ್ರ ಒಂದು ಚುನಾವಣೆ’ ಕುರಿತ ಕೇಂದ್ರದ ಉನ್ನತ ಮಟ್ಟದ ಸಮಿತಿಯ ಕಾರ್ಯದರ್ಶಿ ಡಾ.ನಿತಿನ್ ಚಂದ್ರ ಅವರಿಗೆ ಬರೆದ ನಾಲ್ಕು ಪುಟಗಳ ಪತ್ರದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಮಿತಿಯ ರಚನೆ ಮತ್ತು ಲೋಕಸಭೆಯ ಅವಧಿಪೂರ್ವ ವಿಸರ್ಜನೆಯಿಂದ ಹಿಡಿದು ಹಲವು ವಿಷಯಗಳನ್ನು ಒತ್ತಿ ಹೇಳಿದ್ದಾರೆ.

ಅಕ್ಟೋಬರ್‌ 18ರಂದು ಸಮಿತಿಯ ಕಾರ್ಯದರ್ಶಿಯಾದ ನಿತಿನ್ ಚಂದ್ರ ಅವರು ಸಮಿತಿಯ ಪರಿಗಣನೆಗಾಗಿ ಸಲಹೆಗಳನ್ನು ಆಹ್ವಾನಿಸಿದ ನಂತರ ಖರ್ಗೆಯವರು ಪತ್ರ ಬರೆದಿದ್ದಾರೆ. ಸಮಿತಿಯು ಈಗಾಗಲೇ ಯೋಜನೆ ಬಗ್ಗೆ ಮನಸ್ಸು ಮಾಡಿದೆ ಕಣ್ಣೊರೆಸುವ ಸಲುವಾಗಿ ಸಲಹೆಗಳನ್ನು ಆಹ್ವಾನಿಸಲಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಹಲವು ರಾಜ್ಯ ಸರ್ಕಾರಗಳಿರುವ ವಿರೋಧ ಪಕ್ಷಗಳಿಗೆ ಗಣನೀಯ ಪ್ರಾಮುಖ್ಯತೆ ನೀಡದೆ ಸಮಿತಿಯನ್ನು ರಚಿಸಿರುವುದು ಪಕ್ಷಪಾತದಿಂದ ಕೂಡಿದೆ. ಕೇಂದ್ರದಲ್ಲಿದ್ದ ಒಂದು ಪಕ್ಷವು ಪಕ್ಷಾಂತರ ವಿರೋಧ ಕಾನೂನನ್ನು ದುರ್ಬಲಗೊಳಿಸಿ ಅನೈತಿಕ ರಾಜಕಾರಣ ನಡೆಸಿದ ಪರಿಣಾಮ ಕಳೆದ 10 ವರ್ಷಗಳಲ್ಲಿ ಅನೇಕ ಮುಖ್ಯಮಂತ್ರಿಗಳು ಅಧಿಕಾರ ಕಳೆದುಕೊಂಡಿರುವ ನಿದರ್ಶನಗಳಿವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ರಾಹುಲ್ ಗಾಂಧಿಯ ಲೋಕಸಭೆ ಸದಸ್ಯತ್ವ ಮರುಸ್ಥಾಪನೆ ಪ್ರಶ್ನಿಸಿ ಪಿಐಎಲ್‌: ವಕೀಲನಿಗೆ ₹1ಲಕ್ಷ ದಂಡ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮಿತ್‌ ಶಾ ಸ್ಪರ್ಧಿಸುವ ಗಾಂಧಿನಗರದಲ್ಲಿ ಸ್ಪರ್ಧಿಸದಂತೆ ಅಭ್ಯರ್ಥಿಗಳಿಗೆ ಬಿಜೆಪಿ ನಾಯಕರು ಮತ್ತು ಪೊಲೀಸರಿಂದ ಬೆದರಿಕೆ?

0
ಗುಜರಾತ್‌ನ ಸೂರತ್ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಈಗಾಗಲೇ ಅವಿರೋಧವಾಗಿ ಗೆದ್ದುಕೊಂಡಿದೆ. ಇದರ ಬೆನ್ನಲ್ಲಿ ಅಮಿತ್ ಶಾ ಪ್ರತಿನಿಧಿಸುವ ಗಾಂಧಿನಗರ ಕ್ಷೇತ್ರದಲ್ಲಿ ಅಭ್ಯರ್ಥಿಗಳಿಗೆ ತಮ್ಮ ನಾಮಪತ್ರವನ್ನು ಹಿಂತೆಗೆದುಕೊಳ್ಳುವಂತೆ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಗುಜರಾತ್‌ನ...