Homeಮುಖಪುಟಲೋಕಸಭೆಯಲ್ಲಿ 'ಒಂದು ರಾಷ್ಟ್ರ, ಒಂದು ಚುನಾವಣೆ' ಮಸೂದೆ ಮಂಡನೆ : ಪ್ರತಿಪಕ್ಷಗಳಿಂದ ತೀವ್ರ ವಿರೋಧ

ಲೋಕಸಭೆಯಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಮಂಡನೆ : ಪ್ರತಿಪಕ್ಷಗಳಿಂದ ತೀವ್ರ ವಿರೋಧ

- Advertisement -
- Advertisement -

ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಇಂದು (ಡಿ.17) ಲೋಕಸಭೆ ಮತ್ತು ರಾಜ್ಯ ವಿಧಾನಸಭಾ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಅನುವಾಗುವ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಜಾರಿಗೆ ತರಲು ಸಾಂವಿಧಾನಿಕ ತಿದ್ದುಪಡಿ ಸೇರಿದಂತೆ ಎರಡು ಮಸೂದೆಗಳನ್ನು ಮಂಡಿಸಿದರು.

ಬಿಜೆಪಿಯ ಪ್ರಮುಖ ಪ್ರತಿಜ್ಞೆಗಳಲ್ಲಿ ಒಂದಾದ ಈ ಮಸೂದೆಗಳನ್ನು ಅದರ ಮಿತ್ರ ಪಕ್ಷಗಳಾದ ಟಿಡಿಪಿ, ಜನಸೇನಾ ಪಕ್ಷ ಮತ್ತು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಬೆಂಬಲಿಸಿದರೆ, ನಿರೀಕ್ಷೆಯಂತೆ ಪ್ರತಿಪಕ್ಷಗಳು ವಿರೋಧಿಸಿದವು.

ಪ್ರತಿಪಕ್ಷಗಳು ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದವು “ಮಸೂದೆಯು ಪ್ರಜಾಪ್ರಭುತ್ವ ವಿರೋಧಿ ಮತ್ತು ಸಂವಿಧಾನದ ಮೂಲ ರಚನೆಯ ಉಲ್ಲಂಘನೆಯಾಗಿದೆ” ಎಂದು ಆರೋಪಿಸಿದವು.

‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯು ಸಂವಿಧಾನದ ಮೂಲ ರಚನೆಯ ಸಿದ್ಧಾಂತದ ಮೇಲಿನ ಆಕ್ರಮಣ ಎಂದು ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಆಕ್ಷೇಪ ವ್ಯಕ್ತಡಿಸಿದರು. ಮಸೂದೆಯ ಮಂಡನೆ ಮತ್ತು ಪರಿಗಣನೆಯು ಸದನದ ಶಾಸಕಾಂಗದ ಸಾಮರ್ಥ್ಯವನ್ನು ಮೀರಿದೆ ಎಂದು ಪ್ರತಿಪಾದಿಸಿದರು. ಮಸೂದೆಯನ್ನು ಹಿಂಪಡೆಯಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಸಮಾಜವಾದಿ ಪಕ್ಷದ ಸಂಸದ ಧರ್ಮೇಂದ್ರ ಯಾದವ್ ಕೂಡ ಮಸೂದೆಗಳನ್ನು ವಿರೋಧಿಸಿದರು. ಇದು ದೇಶದಲ್ಲಿ ‘ಸರ್ವಾಧಿಕಾರವನ್ನು ಜಾರಿಗೆ ತರುವ’ ಬಿಜೆಪಿಯ ಪ್ರಯತ್ನ ಎಂದು ಬಣ್ಣಿಸಿದರು.

ತಮ್ಮ ಪಕ್ಷದ ಆಕ್ಷೇಪವನ್ನು ವ್ಯಕ್ತಪಡಿಸಿದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು, ಪ್ರಧಾನಿ ನರೇಂದ್ರ ಮೋದಿ ವಿರುದ್ದ ಕಟುವಾದ ವಾಗ್ದಾಳಿ ನಡೆಸಿದರು. ಈ ಮಸೂದೆಗಳು ಚುನಾವಣಾ ಸುಧಾರಣೆಯಲ್ಲ. ಇದು ಒಬ್ಬ ವ್ಯಕ್ತಿಯ ಆಸೆ ಮತ್ತು ಕನಸಿನ ಈಡೇರಿಕೆ’ ಎಂದು ಹೇಳಿದರು.

ಶಿವಸೇನಾ (ಯುಬಿಟಿ) ನಾಯಕ ಅನಿಲ್ ದೇಸಾಯಿ ಮತ್ತು ಮುಸ್ಲಿಂ ಲೀಗ್‌ನ ಇ.ಟಿ ಮೊಹಮ್ಮದ್ ಬಶೀರ್ ಸೇರಿದಂತೆ ಇಂಡಿಯಾ ಮೈತ್ರಿಕೂಟದ ಇತರ ಪಕ್ಷಗಳ ನಾಯಕರು ಕೂಡ ಮಸೂದೆಗಳ ಮಂಡನೆಯನ್ನು ವಿರೋಧಿಸಿದರು. ಡಿಎಂಕೆ ಸಂಸದ ಟಿಆರ್ ಬಾಲು ಮಸೂದೆಗೆ ವಿರೋಧ ವ್ಯಕ್ತಪಡಿಸಿ, ಅದನ್ನು ಜಂಟಿ ಸಂಸದೀಯ ಸಮಿತಿಗೆ ವರ್ಗಾಯಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಗಮನಾರ್ಹ ಸಂಗತಿಯೆಂದರೆ, ಕೇಂದ್ರ ಸರ್ಕಾರ ಮಂಡಿಸಿರುವ ಎರಡು ಮಸೂದೆಗಳಿಗೆ ಅನುಮೋದನೆ ಪಡೆಯುವುದು ಕೊಂಚ ಸವಾಲಾಗಿದೆ.

ಕೇಂದ್ರಾಡಳಿತ ಪ್ರದೇಶಗಳ ಮಸೂದೆಗೆ ಉಭಯ ಸದನಗಳಲ್ಲಿ ಸರಳ ಬಹುಮತದ ಅಗತ್ಯವಿದ್ದರೂ, ಸಾಂವಿಧಾನಿಕ ತಿದ್ದುಪಡಿ ಮಸೂದೆ ಅಂಗೀಕಾರವಾಗಲು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮೂರನೇ ಎರಡರಷ್ಟು ಸದಸ್ಯರ ಬೆಂಬಲದ ಅಗತ್ಯವಿದೆ.

ಬಿಜೆಪಿಯ ಮಿತ್ರಪಕ್ಷಗಳಾದ ಟಿಡಿಪಿ, ಜನತಾದಳ (ಯುನೈಟೆಡ್), ಮತ್ತು ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ಸೇರಿದಂತೆ ಕೇಂದ್ರ ಸಂಪುಟದಲ್ಲಿ ಸ್ಥಾನ ಪಡೆದಿರುವ ಎಲ್ಲರೂ ಮಸೂದೆಯನ್ನು ಬೆಂಬಲಿಸಿದರೂ, ಎನ್‌ಡಿಎ ಸರ್ಕಾರಕ್ಕೆ ವಿರೋಧ ಪಕ್ಷಗಳ ಸದಸ್ಯರ ಬೆಂಬಲವೂ ಅಗತ್ಯವಿದೆ. ಇದರ ಜೊತೆಗೆ ಬಿಆರ್‌ಎಸ್‌, ಬಿಜೆಡಿ, ವೈಎಸ್‌ಆರ್‌ ಕಾಂಗ್ರೆಸ್ ಸೇರಿದಂತೆ ಇತರ ತಟಸ್ಥ ಪಕ್ಷಗಳ ಬೆಂಬಲ ಬೇಕಾಗಿದೆ.

ಇದನ್ನೂ ಓದಿ : ಮಾ. 2026ರೊಳಗೆ ನಕ್ಸಲೀಯರ ಸಂಪೂರ್ಣ  ತೊಡೆದು ಹಾಕಲು ಜಂಟಿ ಸಿದ್ಧತೆ: ಅಮಿತ್ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...