Homeಮುಖಪುಟ'ಒಂದು ರಾಷ್ಟ್ರ, ಒಂದು ಚುನಾವಣೆ' ಪರಿಕಲ್ಪನೆ ಒಪ್ಪಲು ಸಾಧ್ಯವಿಲ್ಲ: ಮಮತಾ ಬ್ಯಾನರ್ಜಿ

‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆ ಒಪ್ಪಲು ಸಾಧ್ಯವಿಲ್ಲ: ಮಮತಾ ಬ್ಯಾನರ್ಜಿ

- Advertisement -
- Advertisement -

‘ಒಂದು ರಾಷ್ಟ್ರ, ಒಂದು ಚುನಾವಣೆ’ ಕಲ್ಪನೆಯನ್ನು ವಿರೋಧಿಸಿರುವ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ‘ಇದು ಸಂವಿಧಾನದ ಮೂಲ ರಚನೆಯನ್ನು ಬುಡಮೇಲು ಮಾಡುವ ವಿನ್ಯಾಸವಾಗಿದೆ’ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಗುರುವಾರ ಮಾತನಾಡಿರುವ ಅವರು, ‘ಪ್ರಜಾಪ್ರಭುತ್ವದಲ್ಲಿ ನಿರಂಕುಶ ಪ್ರಭುತ್ವವನ್ನು ಅನುಮತಿಸುವ ವ್ಯವಸ್ಥೆಯನ್ನು ರಚಿಸಿದ್ದಾರೆ. ಆದರೆ, ನಾನು ನಿರಂಕುಶಾಧಿಕಾರದ ವಿರುದ್ಧವಿದ್ದೇನೆ. ಒಂದು ರಾಷ್ಟ್ರ, ಒಂದು ಚುನಾವಣೆ ಕಲ್ಪನೆಯನ್ನು ಒಪ್ಪಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ತೀವ್ರವಾಗಿ ಟೀಸಿದ ಮಮತಾ ಬ್ಯಾನರ್ಜಿ, ‘ಅವರು ದೇಶದ ಒಕ್ಕೂಟ ರಚನೆಯನ್ನು ಬುಡಮೇಲು ಮಾಡಿದ್ದಾರೆ. ನೀವು ಕೆಲವು ರೀತಿಯ ಏಕಪಕ್ಷೀಯ ತೀರ್ಮಾನ ತೆಗೆದುಕೊಳ್ಳುವಂತೆ ತೋರುತ್ತಿದೆ. ಕೇಂದ್ರ ಸರ್ಕಾರವು ಈಗಾಗಲೇ ತೆಗೆದುಕೊಂಡಿರುವ ‘ನಿರ್ಧಾರ’ವು ನಿಜವಾದ ಪ್ರಜಾಸತ್ತಾತ್ಮಕ ಮತ್ತು ಒಕ್ಕೂಟ ಮನೋಭಾವಕ್ಕೆ ವಿರುದ್ಧವಾದ ರಚನೆಯನ್ನು ಹೇರುತ್ತದೆ’ ಎಂದು ಆರೋಪಿಸಿದ್ದಾರೆ.

ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಕಾರ್ಯದರ್ಶಿ ಡಾ. ನಿತೇನ್ ಚಂದ್ರ ಅವರಿಗೆ ಬರೆದ ವಿವರವಾದ ಪತ್ರದಲ್ಲಿ ‘ಕೇಂದ್ರ ಸರ್ಕಾರದ ಒಂದು ರಾಷ್ಟ್ರ, ಒಂದು ಚುನಾವಣೆ ತತ್ವದಲ್ಲಿರುವ ಮೂಲಭೂತ ಪರಿಕಲ್ಪನಾ ತೊಂದರೆಗಳ’ ಬಗ್ಗೆ ಪ್ರಶ್ನಿಸಿದ್ದಾರೆ.

‘ಒಂದು ರಾಷ್ಟ್ರ’ ಎಂಬ ಪದದ ಸಾಂವಿಧಾನಿಕ ಮತ್ತು ರಚನಾತ್ಮಕ ಪರಿಣಾಮಗಳ ಬಗ್ಗೆ ಹಾಗೂ ಅಸ್ತಿತ್ವದಲ್ಲಿರುವ ಸಂಸತ್ ಮತ್ತು ವಿಧಾನಸಭೆ ಚುನಾವಣೆಗಳ ಸಮಯದಲ್ಲಿ ಕುರಿತಾದ ಗೊಂದಲಗಳ ಬಗ್ಗೆ ಸ್ಪಷ್ಟನೆ ಕೇಳಿದ್ದಾರೆ.

‘1952 ರಲ್ಲಿ, ಮೊದಲ ಸಾರ್ವತ್ರಿಕ ಚುನಾವಣೆಯನ್ನು ಕೇಂದ್ರ ಮತ್ತು ರಾಜ್ಯಗಳಿಗೆ ಏಕಕಾಲದಲ್ಲಿ ನಡೆಸಲಾಯಿತು. ಕೆಲವು ವರ್ಷಗಳಿಂದ ಅಂತಹ ಏಕಕಾಲಿಕತೆ ಇತ್ತು. ಆದರೆ ನಂತರ ಈ ವ್ಯವಸ್ಥೆ ಛಿದ್ರಗೊಂಡಿದೆ. ವಿವಿಧ ರಾಜ್ಯಗಳು ಈಗ ವಿಭಿನ್ನ ಚುನಾವಣಾ ಕ್ಯಾಲೆಂಡರ್‌ಗಳನ್ನು ಹೊಂದಿವೆ. ಅವು ರಾಜಕೀಯ ಬೆಳವಣಿಗೆಗಳಿಂದಾಗಿ ಬದಲಾವಣೆಗಳಿಗೆ ಒಳಗಾಗುತ್ತವೆ. ಚುನಾವಣೆಗಳನ್ನು ನಿರೀಕ್ಷಿಸದ ರಾಜ್ಯಗಳು ಸಹಬಾಳ್ವೆಯ ಪರಿಚಯಕ್ಕಾಗಿ (ಅವುಗಳನ್ನು) ನಡೆಸುವಂತೆ ಒತ್ತಾಯಿಸಬಾರದು’ ಎಂದು ಅವರು ಒತ್ತಿ ಹೇಳಿದರು.

‘ಲೋಕಸಭೆ ಅಥವಾ ವಿಧಾನಸಭೆಯು ಅಕಾಲಿಕ ವಿಸರ್ಜನೆಗೆ ಒಳಪಟ್ಟರೆ ಒಂದು ರಾಷ್ಟ್ರ, ಒಂದು ಚುನಾವಣೆ’ ಕಲ್ಪನೆಯಲ್ಲಿ ಮೂಡುವ ಸಂಭಾವ್ಯ ಬಿರುಕುಗಳನ್ನು ಸಹ ಸಹ ಬ್ಯಾನರ್ಜಿ ಗುರುತಿಸಿದ್ದಾರೆ. ‘ಕೇಂದ್ರ ಸರ್ಕಾರದ ಅಸ್ಥಿರತೆಯು ರಾಜ್ಯ ಶಾಸಕಾಂಗಗಳನ್ನು ಅಸ್ಥಿರಗೊಳಿಸಬಾರದು’ ಅವರು ಎಚ್ಚರಿಸಿದರು.

‘ಸಹಬಾಳ್ವೆಯ ಪರಿಚಯದ ಈ ಮೂಲಭೂತ ಸಮಸ್ಯೆಯನ್ನು ನಿಮ್ಮ ಗೌರವಾನ್ವಿತ ಸಮಿತಿಯು ಹೇಗೆ ಪರಿಹರಿಸಲಿದೆ ಎಂಬುದು ಸ್ಪಷ್ಟವಾಗಿಲ್ಲ’ ಎಂದು ತಮ್ಮ ಪತ್ರದಲ್ಲಿ ಉಲ್ಲೇಖಿಸಿರುವ ಅವರು, ಸಾಮಾನ್ಯ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದು ಸೇರಿದಂತೆ ಹಲವಾರು ಸಣ್ಣ ಆಕ್ಷೇಪಣೆಗಳನ್ನು ಸಹ ಅವರು ಗುರುತಿಸಿದ್ದಾರೆ. ಜತೆಗೆ, ಸಮಿತಿಯಲ್ಲಿ ರಾಜ್ಯದ ಮುಖ್ಯಮಂತ್ರಿಗಳನ್ನು ಸೇರಿಸುವಲ್ಲಿ ಅವರು ವಿಫಲವಾಗಿದ್ದಾರೆ ಎಂದು ಟೀಕಿಸಿದ್ದಾರೆ.

‘ನಿಮ್ಮ ಪತ್ರವ್ಯವಹಾರದ ಅವಧಿ ಮತ್ತು ನೀವು ಅರೆಬೆಂದ ಊಹೆಗಳನ್ನು ಸತ್ಯವೆಂದು ಒಪ್ಪಿಕೊಳ್ಳುವ ವಿಧಾನದಿಂದ, ಪ್ರಕರಣದ ನ್ಯೂನತೆಗಳನ್ನು ವಿಶ್ಲೇಷಿಸಲು ಸಮಿತಿಯು ಗಂಭೀರವಾಗಿ ಆಸಕ್ತಿ ಹೊಂದಿದೆಯೇ ಎಂದು ನಾವು ಅನುಮಾನಿಸಬೇಕಾಗುತ್ತದೆ. ಈ ಸನ್ನಿವೇಶದಲ್ಲಿ, ನೀವು ರೂಪಿಸಿರುವ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆಯನ್ನು ನಾನು ಒಪ್ಪಲು ಸಾಧ್ಯವಿಲ್ಲ. ನಿಮ್ಮ ಸೂತ್ರೀಕರಣ ಮತ್ತು ಪ್ರಸ್ತಾಪವನ್ನು ನಾವು ಒಪ್ಪುವುದಿಲ್ಲ’ ಎಂದು ಒತ್ತಿ ಹೇಳಿದ್ದಾರೆ.

‘1967 ರವರೆಗೆ, ಚುನಾವಣೆಗಳು ಏಕಕಾಲದಲ್ಲಿ ನಡೆಯುತ್ತಿದ್ದವು; ಅಂತಹ ನಾಲ್ಕು ಚುನಾವಣೆಗಳು ರೀತಿಯಲ್ಲಿ ನಡೆಯಿತು. 1970ರಲ್ಲಿ ಲೋಕಸಭೆಯಂತೆಯೇ ಕೆಲವು ರಾಜ್ಯಗಳ ಅಸೆಂಬ್ಲಿಗಳು ಅವಧಿಗೆ ಮುನ್ನವೇ ವಿಸರ್ಜನೆಯಾದ ನಂತರ 1968-69ರಲ್ಲಿ ಈ ಪದ್ಧತಿಯನ್ನು ನಿಲ್ಲಿಸಲಾಯಿತು.

ಇದನ್ನೂ ಓದಿ; ರಾಜೌರಿ-ಪೂಂಚ್‌ನಲ್ಲಿ ಭಯೋತ್ಪಾದನೆ ಹೆಚ್ಚಳ; ಕಳವಳ ವ್ಯಕ್ತಪಡಿಸಿದ ಸೇನಾ ಮುಖ್ಯಸ್ಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....