‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ಪ್ರಧಾನಿ ಮೋದಿಯವರ ಹೇಳಿಕೆಯನ್ನು ಗುರುವಾರ ತಳ್ಳಿಹಾಕಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸತ್ತಿನಲ್ಲಿ ಒಮ್ಮತವಿಲ್ಲದೆ ಇದನ್ನು ಜಾರಿಗೆ ತರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ, ”ಪ್ರಧಾನಿ ಮೋದಿ ಏನು ಹೇಳಿದ್ದಾರೋ ಅದನ್ನು ಮಾಡಲು ಸಾಧ್ಯವಿಲ್ಲ. ಏಕೆಂದರೆ ಅದು ಸಂಸತ್ತಿಗೆ ಬಂದಾಗ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಆಗ ಮಾತ್ರ ಇದು ಜಾರಿ ಮಾಡಲು ಸಾಧ್ಯ, ಅಲ್ಲಿವರೆಗೆ ‘ಒಂದು ನೇಷನ್ ಒನ್ ಎಲೆಕ್ಷನ್’ ಅಸಾಧ್ಯ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮತ್ತು ‘ಜಾತ್ಯಾತೀತ ನಾಗರಿಕ ಸಂಹಿತೆ’ಯನ್ನು ಸಾಧಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ಮೋದಿ ಗುರುವಾರ ಹೇಳಿದ್ದಾರೆ.
ಗುಜರಾತ್‌ನ ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿನದ ಮೆರವಣಿಗೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ನಾವು ಈಗ ಒಂದು ರಾಷ್ಟ್ರ ಒಂದು ಚುನಾವಣೆಯ ಕಡೆಗೆ ಕೆಲಸ ಮಾಡುತ್ತಿದ್ದೇವೆ. ಇದು ಭಾರತದ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. ದೇಶವು ಕನಸನ್ನು ನನಸಾಗಿಸುವಲ್ಲಿ ಹೊಸ ವೇಗವನ್ನು ಪಡೆಯುತ್ತದೆ. ಅಭಿವೃದ್ಧಿ ಹೊಂದಿದ ಭಾರತ ಇಂದು, ಒಂದು ರಾಷ್ಟ್ರ ಒಂದು ನಾಗರಿಕ ಸಂಹಿತೆಯತ್ತ ಸಾಗುತ್ತಿದೆ. ಅದುವೆ ಸೆಕ್ಯುಲರ್ ಸಿವಿಲ್ ಕೋಡ್ ಆಗಿದೆ” ಎಂದು ಹೇಳಿದ್ದಾರೆ.
“ಈ ಹಿಂದೆ ಭಾರತದಲ್ಲಿ ವಿಭಿನ್ನ ತೆರಿಗೆ ವ್ಯವಸ್ಥೆಗಳಿದ್ದವು. ಆದರೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಒಂದು ರಾಷ್ಟ್ರ, ಒಂದು ತೆರಿಗೆ ವ್ಯವಸ್ಥೆಯ ಮೂಲಕ ಜಿಎಸ್‌ಟಿಯನ್ನು ರಚಿಸಿತು” ಎಂದು ಅವರು ಹೇಳಿದ್ದಾರೆ.
“ಇಂದು ನಾವೆಲ್ಲರೂ ಒನ್ ನೇಷನ್ ಐಡೆಂಟಿಟಿಯಾದ ಆಧಾರ್‌ನ ಯಶಸ್ಸನ್ನು ನೋಡುತ್ತಿದ್ದೇವೆ. ಜಗತ್ತು ಇದರ ಬಗ್ಗೆ ಚರ್ಚಿಸುತ್ತಿದೆ. ಈ ಹಿಂದೆ, ಭಾರತದಲ್ಲಿ ವಿಭಿನ್ನ ತೆರಿಗೆ ವ್ಯವಸ್ಥೆಗಳಿದ್ದವು, ಆದರೆ ನಾವು ಒಂದು ರಾಷ್ಟ್ರ ಒಂದು ತೆರಿಗೆ ವ್ಯವಸ್ಥೆಯ ಮೂಲಕ ಜಿಎಸ್‌ಟಿಯನ್ನು ರಚಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.
“ಒಂದು ರಾಷ್ಟ್ರ ಒಂದು ಪವರ್ ಗ್ರಿಡ್‌ನೊಂದಿಗೆ ನಾವು ದೇಶದ ವಿದ್ಯುತ್ ಕ್ಷೇತ್ರವನ್ನು ಬಲಪಡಿಸಿದ್ದೇವೆ. ನಾವು ಒಂದು ರಾಷ್ಟ್ರ ಒಂದು ರೇಷನ್ ಕಾರ್ಡ್ ಮೂಲಕ ಬಡವರಿಗೆ ಲಭ್ಯವಿರುವ ಸೌಲಭ್ಯಗಳನ್ನು ಸಂಯೋಜಿಸಿದ್ದೇವೆ. ನಾವು ಆಯುಷ್ಮಾನ್ ಭಾರತ್ ಮೂಲಕ ದೇಶದ ಜನರಿಗೆ ಒಂದು ರಾಷ್ಟ್ರ ಒಂದು ಆರೋಗ್ಯ ವಿಮೆಯ ಸೌಲಭ್ಯವನ್ನು ರೂಪದಲ್ಲಿ ಒದಗಿಸಿದ್ದೇವೆ” ಎಂದು ಹೇಳಿದ್ದಾರೆ.
ಸೆಪ್ಟೆಂಬರ್ 18 ರಂದು ಕೇಂದ್ರ ಸಚಿವ ಸಂಪುಟವು ಸರ್ಕಾರದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಯನ್ನು ಅಂಗೀಕರಿಸಿದೆ. ಇದರ ಮೂಲಕ ದೇಶದಾದ್ಯಂತ ಏಕಕಾಲದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ನಡೆಸವು ಬಗ್ಗೆ ಪ್ರಸ್ತಾಪಿಸುತ್ತದೆ.
ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಸಮಿತಿಯ ವರದಿಯಲ್ಲಿ ಈ ಶಿಫಾರಸುಗಳನ್ನು ಮಾಡಲಾಗಿದೆ.
ಇದನ್ನೂ ಓದಿ: ಮಹಾರಾಷ್ಟ್ರ | ನವೆಂಬರ್ 6 ರಂದು ಚುನಾವಣಾ ಪ್ರಚಾರ ಪ್ರಾರಂಭಿಸಲಿರುವ ಎಂವಿಎ
ಮಹಾರಾಷ್ಟ್ರ | ನವೆಂಬರ್ 6 ರಂದು ಚುನಾವಣಾ ಪ್ರಚಾರ ಪ್ರಾರಂಭಿಸಲಿರುವ ಎಂವಿಎ


