Homeಮುಖಪುಟಒಂದು ದೇಶ, ಒಂದು ಪಕ್ಷ ಎನ್ನುವ ಬಿಜೆಪಿಯಿಂದ ಲಸಿಕೆಗೆ ಒಂದು ಬೆಲೆ ಯಾಕಿಲ್ಲ? ಮಮತಾ ಪ್ರಶ್ನೆ

ಒಂದು ದೇಶ, ಒಂದು ಪಕ್ಷ ಎನ್ನುವ ಬಿಜೆಪಿಯಿಂದ ಲಸಿಕೆಗೆ ಒಂದು ಬೆಲೆ ಯಾಕಿಲ್ಲ? ಮಮತಾ ಪ್ರಶ್ನೆ

ವ್ಯಾಕ್ಸಿನೇಷನ್‌ಗಾಗಿ ಪಶ್ಚಿಮ ಬಂಗಾಳ ಸರ್ಕಾರ 100 ಕೋಟಿ ರೂಪಾಯಿ ಮೀಸಲಿಟ್ಟಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.

- Advertisement -
- Advertisement -

ಕೇಂದ್ರ, ರಾಜ್ಯ ಸರ್ಕಾರ ಮತ್ತು ಖಾಸಗಿ ಆಸ್ಪತ್ರೆಗಳಿಗೆ ನೀಡುವ ಕೊರೊನಾ ಲಸಿಕೆಗೆ ವಿವಿಧ ಬೆಲೆಗಳನ್ನು ನಿಗದಿ ಪಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲವು ರಾಜಕೀಯ ನಾಯಕರು ಈ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದರು.

ಲಸಿಕಿಗೆ ಕೇಂದ್ರ ಅಥವಾ ರಾಜ್ಯ ಯಾರು ಪಾವತಿಸಿದರೂ ಕೇಂದ್ರ ಸರ್ಕಾರವು ಒಂದೇ ಬೆಲೆಯನ್ನು ನಿಗದಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮಮತಾ ಬ್ಯಾನರ್ಜಿ, ಒಂದು ರಾಷ್ಟ್ರ, ಒಂದು ಪಕ್ಷ, ಒಬ್ಬ ನಾಯಕ ಎಂದು ಹೇಳುವ ಬಿಜೆಪಿ,ಆದರೆ ಜೀವ ಉಳಿಸುವ ಲಸಿಕೆಗೆ ಒಂದು ಬೆಲೆ ಮಾಡುವುದಿಲ್ಲ ಎಂದಿದ್ದಾರೆ.

ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ತನ್ನ ಕೊರೊನಾ ವೈರಸ್ ವಿರೋಧಿ ಲಸಿಕೆ, ಕೋವಿಶೀಲ್ಡ್ ಅನ್ನು ರಾಜ್ಯ ಸರ್ಕಾರಗಳಿಗೆ 400 ರೂಪಾಯಿ ಮತ್ತು ದೇಶದ ಖಾಸಗಿ ಆಸ್ಪತ್ರೆಗಳಿಗೆ 600 ರೂಪಾಯಿಗೆ ಮಾರಾಟ ಮಾಡುವುದಾಗಿ ಬುಧವಾರ ಪ್ರಕಟಿಸಿದೆ.

ಇದನ್ನೂ ಓದಿ: ‘ಒಂದು ದೇಶ, ಒಂದು ದರ’ ಯಾಕಾಗಬಾರದು?; ಲಸಿಕೆ ವಿಷಯದಲ್ಲಿ ರಾಜ್ಯಗಳ ಪರ ನಿಂತ ಕಾಂಗ್ರೆಸ್

 

“ಯಾವಾಗಲೂ ಒಂದು ರಾಷ್ಟ್ರ, ಒಂದು ಪಕ್ಷ, ಒಬ್ಬ ನಾಯಕ ಎಂದು ಕೂಗುವ ಬಿಜೆಪಿ, ಜೀವ ಉಳಿಸಲು ಬೇಕಾದ ಲಸಿಕೆಗಾಗಿ ಒಂದು ಬೆಲೆ ನಿಗದಿಪಡಿಸುವುದಿಲ್ಲ. ಪ್ರತಿಯೊಬ್ಬ ಭಾರತೀಯನಿಗೂ ವಯಸ್ಸು, ಜಾತಿ, ಮತ, ಸ್ಥಳ ಏನೇ ಇರಲಿ ಉಚಿತ ಲಸಿಕೆ ನೀಡಬೇಕು. ಕೇಂದ್ರ ಅಥವಾ ರಾಜ್ಯಗಳನ್ನು ಯಾರು ಪಾವತಿಸುತ್ತಾರೆ ಎಂಬುದನ್ನುಲೆಕ್ಕಿಸದೆ ಕೋವಿಡ್ ಲಸಿಕೆಗೆ ಭಾರತ ಸರ್ಕಾರ ಒಂದು ಬೆಲೆಯನ್ನು ನಿಗದಿಪಡಿಸಬೇಕು” ಎಂದು ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ.

ಕೊರೊನಾ ಲಸಿಕೆ ತಯಾರಕರಿಗೆ ತಮ್ಮ ಲಸಿಕೆಯನ್ನು ಪೂರ್ವ ನಿರ್ಧಾರಿತ ದರದಲ್ಲಿ ಭಾರತದ ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಕೇಂದ್ರವು ಸೋಮವಾರ ಅನುಮತಿ ನೀಡಿದೆ. ನಂತರ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ದರ ಘೋಷಣೆ ಮಾಡಿತ್ತು.

ಬುಧವಾರ (ಏಪ್ರಿಲ್ 21) ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ್ದ ಮಮತಾ ಬ್ಯಾನರ್ಜಿ, ಲಸಿಕೆಗಳ ಬೆಲೆಯಲ್ಲಿನ ವ್ಯತ್ಯಾಸದ ಬಗ್ಗೆ ಪ್ರಧಾನಿಗೆ ಪತ್ರ ಬರೆಯುವುದಾಗಿ ಹೇಳಿ, ಮಧ್ಯಪ್ರವೇಶಿಸುವಂತೆ ಕೇಂದ್ರವನ್ನು ಒತ್ತಾಯಿಸಿದ್ದರು.

ಚುನಾವಣಾ ಫಲಿತಾಂಶ ಘೋಷಣೆಯಾದ ಕೂಡಲೇ ಮೇ 5 ರಂದು ನಡೆಯಲಿರುವ ಸಾರ್ವತ್ರಿಕ ವ್ಯಾಕ್ಸಿನೇಷನ್‌ಗಾಗಿ ಪಶ್ಚಿಮ ಬಂಗಾಳ ಸರ್ಕಾರ 100 ಕೋಟಿ ರೂಪಾಯಿ ಮೀಸಲಿಟ್ಟಿದೆ ಎಂದು ಮುಖ್ಯಮಂತ್ರಿ ಈಗಾಗಲೇ ಘೋಷಿಸಿದ್ದಾರೆ.


ಇದನ್ನೂ ಓದಿ: ಲಸಿಕೆಗಳು ಸಾರ್ವಜನಿಕ ಸ್ವತ್ತು, ಅವನ್ನು ರಾಜ್ಯಗಳಿಗೆ ಉಚಿತವಾಗಿ ಪೂರೈಸಬೇಕು: ಪ್ರಧಾನಿಗೆ ಕೇರಳ ಸಿಎಂ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ| ಪಂಚಾಯತ್ ಚುನಾವಣೆಯ ನಂತರ 500 ಬೀದಿ ನಾಯಿಗಳ ಸಾಮೂಹಿಕ ಕೊಲೆ; ‘ನಾಯಿ ಮುಕ್ತ ಗ್ರಾಮ’ದ ಭರವಸೆ ನೀಡಿದ್ದ ಅಭ್ಯರ್ಥಿಗಳು

ತೆಲಂಗಾಣದ ಹನಮಕೊಂಡ ಮತ್ತು ಕಾಮರೆಡ್ಡಿ ಜಿಲ್ಲೆಗಳಿಂದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಜನವರಿಯ ಮೊದಲ ಎರಡು ವಾರಗಳಲ್ಲಿ ಸುಮಾರು 500 ನಾಯಿಗಳನ್ನು ವಿಷ ಹಾಕಿ ಕೊಂದಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ....

ಕಾನ್ಪುರ ದೇಹತ್‌ನಲ್ಲಿ ನೆರೆಯವರ ಹಲ್ಲೆಯಿಂದ ದಲಿತ ರೈತ ಸಾವು; ಆರು ಮಂದಿ ಬಂಧನ

ಉತ್ತರ ಪ್ರದೇಶದ ಕಾನ್ಪುರ ದೇಹತ್ ಜಿಲ್ಲೆಯಲ್ಲಿ 50 ವರ್ಷದ ದಲಿತ ರೈತನೊಬ್ಬ ತನ್ನ ನೆರೆಹೊರೆಯವರು ಮತ್ತು ಅವರ ಸಂಬಂಧಿಕರಿಂದ ಥಳಿತಕ್ಕೊಳಗಾಗಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮತ್ತು ಆತನ...

ಸರ್ಕಾರದ ಅಧಿಕೃತ ದಾಖಲೆಗಳಲ್ಲಿ ‘ಹರಿಜನ-ಗಿರಿಜನ’ ಪದಗಳನ್ನು ನಿಷೇಧಿಸಿದ ಹರಿಯಾಣ ಸರ್ಕಾರ

ಹರಿಯಾಣ ಸರ್ಕಾರವು ತನ್ನ ಎಲ್ಲಾ ಅಧಿಕೃತ ಸಂವಹನಗಳಲ್ಲಿ 'ಹರಿಜನ' ಮತ್ತು 'ಗಿರಿಜನ' ಪದಗಳ ಬಳಕೆಯನ್ನು ನಿಷೇಧಿಸಿದೆ. ಇಲಾಖೆಗಳು 'ಪರಿಶಿಷ್ಟ ಜಾತಿ (ಎಸ್‌ಸಿ)' ಮತ್ತು 'ಪರಿಶಿಷ್ಟ ಪಂಗಡ (ಎಸ್‌ಟಿ)' ಅಥವಾ ಅವುಗಳ ಸಮಾನ ಪದಗಳನ್ನು...

ಐಎಎಸ್ ಅಧಿಕಾರಿ ಮಾನನಷ್ಟ ಮೊಕದ್ದಮೆ ಪ್ರಕರಣ: ಎನ್‌ಟಿವಿ ಸಂಪಾದಕ, ಇಬ್ಬರು ಪತ್ರಕರ್ತರ ಬಂಧನ

ತೆಲಂಗಾಣ ಸರ್ಕಾರದ ರಸ್ತೆ ಮತ್ತು ಕಟ್ಟಡಗಳ ಸಚಿವ ಕೋಮತಿರೆಡ್ಡಿ ವೆಂಕಟ್ ರೆಡ್ಡಿ ಹಾಗೂ ಮಹಿಳಾ ಐಎಎಸ್ ಅಧಿಕಾರಿ ಅವರ ಕುರಿತು ವಿವಾದಾತ್ಮಕ ಸುದ್ದಿ ವರದಿಗೆ ಸಂಬಂಧಿಸಿದಂತೆ, ಹೈದರಾಬಾದ್ ಕೇಂದ್ರ ಅಪರಾಧ ಠಾಣೆ...

ಇರಾನ್: ಪ್ರತಿಭಟನಾಕಾರರ ಮೇಲೆ ನಡೆದ ದಮನ ಕಾರ್ಯಾಚರಣೆಯಲ್ಲಿ ಸಾವಿನ ಸಂಖ್ಯೆ 2571ಕ್ಕೆ ಏರಿಕೆ 

ಇರಾನ್‌ನಲ್ಲಿ ಪ್ರತಿಭಟನೆಗಳ ಮೇಲೆ ನಡೆದ ದಮನ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಕನಿಷ್ಠ 2,571 ಕ್ಕೆ ಏರಿದೆ ಎಂದು ಮಾನವ ಹಕ್ಕುಗಳ ಕಾರ್ಯಕರ್ತರು ಬುಧವಾರ ತಿಳಿಸಿದ್ದಾರೆ. ಈ ಅಂಕಿ ಅಂಶವು ಅಮೆರಿಕ ಮೂಲದ ಮಾನವ ಹಕ್ಕುಗಳ...

ಕಾಂಗ್ರೆಸ್‌ ಮುಖಂಡನ ಗೂಂಡಾವರ್ತನೆ : ಫ್ಲೆಕ್ಸ್‌ ತೆರವುಗೊಳಿಸಿದ್ದಕ್ಕೆ ಪೌರಾಯುಕ್ತೆಗೆ ಧಮ್ಕಿ, ಅವಾಚ್ಯ ಶಬ್ದಗಳಿಂದ ನಿಂದನೆ

ಸಚಿವ ಝಮೀರ್ ಅಹ್ಮದ್ ಅವರ ಮಗ ಝೈದ್ ಖಾನ್ ನಟನೆಯ 'ಕಲ್ಟ್' ಸಿನಿಮಾದ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ ವಿಚಾರವಾಗಿ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಜಿ. ಅಮೃತಗೌಡ ಅವರೊಂದಿಗೆ ಗೂಂಡಾವರ್ತನೆ...

ಹಿಂದಿ ಶೈಕ್ಷಣಿಕ ಪದ್ಧತಿ ಹೇರಿಕೆಯಿಂದ ಉತ್ತರದ ಜನರಿಂದ ದಕ್ಷಿಣಕ್ಕೆ ವಲಸೆ: ಮಾರನ್

ಇಂಗ್ಲಿಷ್ ಶಿಕ್ಷಣವನ್ನು ನಿರುತ್ಸಾಹಗೊಳಿಸುತ್ತಾ, ವಿದ್ಯಾರ್ಥಿಗಳು ಹಿಂದಿ ಮಾತ್ರ ಕಲಿಯಲು ಪ್ರೋತ್ಸಾಹಿಸುತ್ತಿದ್ದಾರೆ. ಉತ್ತರ ರಾಜ್ಯಗಳ ಈ ನೀತಿಗಳಿಂದ ಉದ್ಯೋಗ ಸಿಗದೆ ದಕ್ಷಿಣದ ರಾಜ್ಯಗಳಿಗೆ ವಲಸೆ ಬರುತ್ತಿದ್ದಾರೆ ಎಂದು ಡಿಎಂಕೆ ಸಂಸದ ದಯಾನಿಧಿ ಮಾರನ್ ಉತ್ತರ...

ಚಿಕ್ಕಮಗಳೂರು| ದಲಿತರ ಜಮೀನಿಗೆ ನುಗ್ಗಿ ಬೆಳೆ ನಾಶ; ಪ್ರಬಲ ಜಾತಿ ಜನರಿಂದ ವಿನಾಕಾರಣ ತೊಂದರೆ

ಚಿಕ್ಕಮಗಳೂರು ತಾಲೂಕಿನ ಆಲ್ದೂರು ಹೋಬಳಿಯ ಸತ್ತಿಹಳ್ಳಿ ಗ್ರಾಮದ ದಲಿತ ಸಮುದಾಯದ ರೈತರಿಗೆ ಅದೇ ಊರಿನ ಪ್ರಬಲ ಜಾತಿಗೆ ಸೇರಿದ ಜನರು ವಿನಾಕಾರಣ ತೊಂದರೆ ನಿಡುತ್ತಿದ್ದು, ಜಮೀನಿಗೆ ನುಗ್ಗಿ ಬೆಳೆ ನಾಶ ಮಾಡಿದ್ದಾರೆ ಎಂಬ...

ಎಲ್‌ಡಿಎಫ್‌ನ ‘ಕೇರಳಂ’ ಮರುನಾಮಕರಣ ಕ್ರಮ ಬೆಂಬಲಿಸಿದ ರಾಜ್ಯ ಬಿಜೆಪಿ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಮನವಿ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೇರಳ ಘಟಕವು, ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್‌) ಸರ್ಕಾರದ 'ಕೇರಳಂ' ಮರುನಾಕರಣ ಪ್ರಸ್ತಾವನೆಯನ್ನು ಬೆಂಬಲಿಸಿದೆ. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಮಧ್ಯಸ್ಥಿಕೆ ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಲ್ಲಿ...

ರಾಯಚೂರು ಕೃಷಿ ವಿವಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ತಡೆಗೆ ಸಂಚು ಆರೋಪ: ನಿಗದಿತ ದಿನಾಂಕದಂದು ಪರೀಕ್ಷೆ ನಡೆಸಲು ಒತ್ತಾಯ 

ಬೆಂಗಳೂರು: ರಾಯಚೂರು ಕೃಷಿ ವಿವಿಯಲ್ಲಿನ 75 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ನಿಗದಿತ ದಿನಾಂಕಗಳಾದ ಜನವರಿ.17 ಮತ್ತು ಜನವರಿ.18ರಂದೇ ನಡೆಸಬೇಕು. ಪಟ್ಟಭದ್ರ ಹಿತಾಸಕ್ತಿಗಳ ಒತ್ತಾಯಕ್ಕೆ ಮಣಿದು ಪರೀಕ್ಷೆಯನ್ನು ಮುಂದೂಡಬಾರದು ಎಂದು ಅಭ್ಯರ್ಥಿಗಳು...