Homeರಾಷ್ಟ್ರೀಯ‘ಪೊಲೀಸರಿಗೆ ಒಂದು ರಾಷ್ಟ್ರ, ಒಂದು ಸಮವಸ್ತ್ರ’ ಪ್ರಸ್ತಾಪ: ಇದು ಹೇರಿಕೆ ಅಲ್ಲ ಎಂದ ಪ್ರಧಾನಿ

‘ಪೊಲೀಸರಿಗೆ ಒಂದು ರಾಷ್ಟ್ರ, ಒಂದು ಸಮವಸ್ತ್ರ’ ಪ್ರಸ್ತಾಪ: ಇದು ಹೇರಿಕೆ ಅಲ್ಲ ಎಂದ ಪ್ರಧಾನಿ

ಹಳೆಯ ಕಾನೂನುಗಳನ್ನು ಪರಿಶೀಲಿಸಿ, ಪ್ರಸ್ತುತ ಸಂದರ್ಭಕ್ಕೆ ತಿದ್ದುಪಡಿ ಮಾಡಬೇಕು ಎಂದು ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ

- Advertisement -
- Advertisement -

ಪೊಲೀಸರಿಗೆ “ಒಂದು ರಾಷ್ಟ್ರ, ಒಂದು ಸಮವಸ್ತ್ರ” ಎಂಬ ಕಲ್ಪನೆಯನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಪ್ರಸ್ತಾಪಿಸಿದ್ದಾರೆ. ಇದು “ಕೇವಲ ಕಲ್ಪನೆ”ಯಾಗಿದೆ ಹೊರತು ಹೇರಿಕೆ ಅಲ್ಲ ಎಂದು ಹೇಳಿದ ಅವರು, “ಇದನ್ನು ಕೇವಲ ಸಲಹೆಯಾಗಿ ಯೋಚಿಸುವಂತೆ ರಾಜ್ಯಗಳನ್ನು ಕೇಳಿದ್ದಾರೆ.

“ಪೊಲೀಸರಿಗೆ ‘ಒಂದು ರಾಷ್ಟ್ರ, ಒಂದು ಸಮವಸ್ತ್ರ’ ಎಂಬ ಕೇವಲ ಒಂದು ಕಲ್ಪನೆ. ನಾನು ಅದನ್ನು ನಿಮ್ಮ ಮೇಲೆ ಹೇರಲು ಪ್ರಯತ್ನಿಸುತ್ತಿಲ್ಲ. ಸುಮ್ಮನೆ ಯೋಚಿಸಿ; ಇದು ಸಾಧ್ಯವಿದೆ, ಐದು, 50, ಅಥವಾ 100 ವರ್ಷಗಳಲ್ಲಿ ಆಗಬಹುದು. ಆದರೆ ನಾವು ಸ್ವಲ್ಪ ಯೋಚಿಸಬೇಕು” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯ ಗೃಹ ಮಂತ್ರಿಗಳ ‘ಚಿಂತನ್ ಶಿಬಿರ್’ ಅನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ದೇಶಾದ್ಯಂತ ಪೊಲೀಸರ ಗುರುತು ಒಂದೇ ಆಗಲಿ ಎಂದು ತಾನು ಭಾವಿಸುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಪ್ರಧಾನಿ ಮೋದಿ ಟಾಯ್ಲೆಟ್‌‌ಗೆ ಕೂಡಾ ಕ್ಯಾಮರಾಮ್ಯಾನನ್ನು ಕರೆದುಕೊಂಡು ಹೋದರೆ?

ಅಪರಾಧಗಳು ಮತ್ತು ಅಪರಾಧಿಗಳನ್ನು ನಿಭಾಯಿಸಲು ರಾಜ್ಯಗಳ ನಡುವೆ ನಿಕಟ ಸಹಕಾರವನ್ನು ಪ್ರಧಾನಿ ಮೋದಿ ಪ್ರತಿಪಾದಿಸಿದ್ದಾರೆ.

ಏಕರೂಪದ ಕಾನೂನು ಮತ್ತು ಸುವ್ಯವಸ್ಥೆ ನೀತಿಗಾಗಿ ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರ ಕರೆಯನ್ನು ಅವರು ಬೆಂಬಲಿಸಿ,“ಸಹಕಾರಿ ಒಕ್ಕೂಟವು ಸಂವಿಧಾನದ ಭಾವನೆ ಮಾತ್ರವಲ್ಲದೆ ರಾಜ್ಯಗಳು ಮತ್ತು ಕೇಂದ್ರದ ಜವಾಬ್ದಾರಿಯಾಗಿದೆ” ಎಂದು ಹೇಳಿದ್ದಾರೆ.

ಸಂವಿಧಾನದ ಪ್ರಕಾರ ಕಾನೂನು ಮತ್ತು ಸುವ್ಯವಸ್ಥೆ ರಾಜ್ಯದ ವಿಷಯವಾಗಿದ್ದರೂ, ಅವು ದೇಶದ ಏಕತೆ ಮತ್ತು ಸಮಗ್ರತೆಯೊಂದಿಗೆ ಸಮಾನವಾಗಿ ಸಂಬಂಧ ಹೊಂದಿವೆ ಎಂದು ಪ್ರಧಾನಿ ಹೇಳಿದ್ದಾರೆ.

ಇದನ್ನೂ ಓದಿ: ಶತಮಾನಕ್ಕೊಮ್ಮೆ ಬರುವ ಸಾಂಕ್ರಾಮಿಕದ ಅಡ್ಡ ಪರಿಣಾಮ 100 ದಿನಗಳಲ್ಲಿ ಮಾಯವಾಗುವುದಿಲ್ಲ: ಉದ್ಯೋಗ ಮೇಳದಲ್ಲಿ ಪ್ರಧಾನಿ ಮೋದಿ

ಪ್ರತಿಯೊಂದು ರಾಜ್ಯವೂ ಕಲಿಯಬೇಕು, ಪರಸ್ಪರ ಸ್ಫೂರ್ತಿ ಪಡೆಯಬೇಕು ಮತ್ತು ಆಂತರಿಕ ಭದ್ರತೆಗಾಗಿ ಒಟ್ಟಾಗಿ ಕೆಲಸ ಮಾಡಬೇಕು ಎಂದು ಹೇಳಿದ್ದು,“ಆಂತರಿಕ ಭದ್ರತೆಗಾಗಿ ರಾಜ್ಯಗಳು ಒಟ್ಟಾಗಿ ಕೆಲಸ ಮಾಡುವುದು ಸಾಂವಿಧಾನಿಕ ಆದೇಶ ಮತ್ತು ರಾಷ್ಟ್ರದ ಬಗ್ಗೆಗಿನ ಜವಾಬ್ದಾರಿಯಾಗಿದೆ” ಎಂದು ಅವರು ಹೇಳಿದ್ದಾರೆ.

ಒಕ್ಕೂಟ ಸರ್ಕಾರ ಮತ್ತು ರಾಜ್ಯಗಳು ದಕ್ಷತೆ, ಉತ್ತಮ ಫಲಿತಾಂಶಗಳು ಮತ್ತು ಸಾಮಾನ್ಯ ಜನರಿಗೆ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಪರಸ್ಪರ ಸಹಕರಿಸಬೇಕು ಎಂದು ಅವರು ಹೇಳಿದ್ದಾರೆ.

ಕಾನೂನು-ಸುವ್ಯವಸ್ಥೆ ಮತ್ತು ಭದ್ರತೆಯ ಸವಾಲುಗಳನ್ನು ಎದುರಿಸಲು ಎಲ್ಲಾ ಏಜೆನ್ಸಿಗಳ ಸಂಘಟಿತ ಕ್ರಮದ ಬಗ್ಗೆ ಮಾತನಾಡಿದ ಅವರು, ಹಳೆಯ ಕಾನೂನುಗಳನ್ನು ಪರಿಶೀಲಿಸಬೇಕು ಮತ್ತು ಪ್ರಸ್ತುತ ಸಂದರ್ಭಕ್ಕೆ ತಿದ್ದುಪಡಿ ಮಾಡಬೇಕೆಂದು ಅವರು ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಬಿಡುಗಡೆಗೆ ಒಪ್ಪಿದ ಮೋದಿ ಸರ್ಕಾರ; ಏನೇನಾಯ್ತು ಈ ವರೆಗೆ? | ಸಂಕ್ಷಿಪ್ತ ವರದಿ

ನಕಲಿ ಸುದ್ದಿಗಳ ಪ್ರಸಾರವನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ, ನಕಲಿ ಸುದ್ದಿಗಳ ಬಗ್ಗೆ ಫ್ಯಾಕ್ಟ್‌‌ಚೆಕ್‌ ಮಾಡುವುದು ಅತ್ಯಗತ್ಯವಾಗಿದೆ ಮತ್ತು ತಂತ್ರಜ್ಞಾನವು ಇದರಲ್ಲಿ ದೊಡ್ಡ ಪಾತ್ರವನ್ನು ವಹಿಸುತ್ತದೆ ಎಂದು ಹೇಳಿದ್ದಾರೆ. “ಸಂದೇಶಗಳನ್ನು ಫಾರ್ವರ್ಡ್ ಮಾಡುವ ಮೊದಲು ಅವುಗಳನ್ನು ಪರಿಶೀಲಿಸುವ ಕಾರ್ಯವಿಧಾನಗಳ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು” ಎಂದು ಅವರು ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ರಾಜಸ್ಥಾನ: ಬಿಜೆಪಿ ಸರ್ಕಾರದ ಯೋಜನೆಯಲ್ಲಿ 1,140 ಕೋಟಿ ರೂ.ನಷ್ಟ: ತಮ್ಮದೇ ಸರಕಾರದ ವಿರುದ್ಧ ಆರೋಪಿಸಿದ...

0
ರಾಜಸ್ಥಾನದ ಬಿಜೆಪಿ ಸರಕಾರ ಅಧಿಕಾರಕ್ಕೇರಿದ ಆರು ತಿಂಗಳಲ್ಲೇ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಮುಖ್ಯಮಂತ್ರಿಯ ಅಧೀನದ ಇಲಾಖೆಯಲ್ಲಿನ ವಸತಿ ಯೋಜನೆಯಲ್ಲಿನ ಲೋಪದೋಷವನ್ನು ಕ್ಯಾಬಿನೆಟ್ ಸಚಿವರೋರ್ವರು ಬಹಿರಂಗಪಡಿಸಿದ್ದು, ಇದರಿಂದ ಸರಕಾರದ ಬೊಕ್ಕಸಕ್ಕೆ 1,146 ಕೋಟಿ ರೂ. ನಷ್ಟವಾಗಿದೆ...