HomeಮುಖಪುಟEmergency @50 | ಪ್ರಜಾಪ್ರಭುತ್ವ ಇತಿಹಾಸದ ಅತ್ಯಂತ ಕರಾಳ ಅಧ್ಯಾಯ: ಪ್ರಧಾನಿ ಮೋದಿ

Emergency @50 | ಪ್ರಜಾಪ್ರಭುತ್ವ ಇತಿಹಾಸದ ಅತ್ಯಂತ ಕರಾಳ ಅಧ್ಯಾಯ: ಪ್ರಧಾನಿ ಮೋದಿ

- Advertisement -
- Advertisement -

ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಯಾಗಿ 50 ವರ್ಷದ ಅಂಗವಾಗಿ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, “ತುರ್ತು ಪರಿಸ್ಥಿತಿ ಭಾರತದ ಪ್ರಜಾಪ್ರಭುತ್ವದ ಇತಿಹಾಸದ ಅತ್ಯಂತ ಕರಾಳ ಅಧ್ಯಾಯಗಳಲ್ಲಿ ಒಂದು. ಸಂವಿಧಾನದ ಆಶಯವನ್ನು ಉಲ್ಲಂಘಿಸಿದ ಮತ್ತು ಸಂಸತ್ತಿನ ಧ್ವನಿಯನ್ನು ಹತ್ತಿಕ್ಕಿದ ರೀತಿಯನ್ನು ಯಾವುದೇ ಭಾರತೀಯ ಮರೆಯಲು ಸಾಧ್ಯವಿಲ್ಲ” ಎಂದಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಸಂಬಂಧ ಪೋಸ್ಟ್ ಹಾಕಿರುವ ಅವರ, “ಭಾರತದ ಪ್ರಜಾಪ್ರಭುತ್ವದ ಇತಿಹಾಸದ ಕರಾಳ ಅಧ್ಯಾಯಗಳಲ್ಲಿ ಒಂದಾದ ತುರ್ತು ಪರಿಸ್ಥಿತಿ ಹೇರಿಕೆಗೆ ಇಂದು ಐವತ್ತು ವರ್ಷಗಳು ತುಂಬುತ್ತಿವೆ. ಭಾರತದ ಜನರು ಈ ದಿನವನ್ನು ‘ಸಂವಿಧಾನ ಹತ್ಯೆ’ಯ ದಿನವಾಗಿ ಆಚರಿಸುತ್ತಿದ್ದಾರೆ. ಈ ದಿನದಂದು, ಭಾರತೀಯ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಮೌಲ್ಯಗಳನ್ನು ಕಡೆಗಣಿಸಲಾಯಿತು. ಮೂಲಭೂತ ಹಕ್ಕುಗಳನ್ನು ಅಮಾನತಿನಲ್ಲಿಡಲಾಯಿತು. ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕಲಾಯಿತು. ಹಲವಾರು ರಾಜಕೀಯ ನಾಯಕರು, ಸಾಮಾಜಿಕ ಕಾರ್ಯಕರ್ತರು, ವಿದ್ಯಾರ್ಥಿಗಳು ಮತ್ತು ಸಾಮಾನ್ಯ ನಾಗರಿಕರನ್ನು ಜೈಲಿಗೆ ಹಾಕಲಾಯಿತು” ಎಂದು ಹೇಳಿದ್ದಾರೆ.

ತುರ್ತು ಪರಿಸ್ಥಿತಿ ಹೇರಿದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ ಪ್ರಧಾನಿ ಮೋದಿ, “ನಮ್ಮ ಸಂವಿಧಾನದ ಆಶಯಗಳನ್ನು ಉಲ್ಲಂಘಿಸಿದ, ಸಂಸತ್ತಿನ ಧ್ವನಿಯನ್ನು ಹತ್ತಿಕ್ಕಿದ ಮತ್ತು ನ್ಯಾಯಾಲಯಗಳನ್ನು ನಿಯಂತ್ರಿಸಲು ಪ್ರಯತ್ನಿಸಲಾದ ರೀತಿಯನ್ನು ಯಾವುದೇ ಭಾರತೀಯ ಎಂದಿಗೂ ಮರೆಯುವುದಿಲ್ಲ. ಸಂವಿಧಾನದ 42ನೇ ತಿದ್ದುಪಡಿಯು ಅವರ ಕುತಂತ್ರಗಳಿಗೆ ಒಂದು ಪ್ರಮುಖ ಉದಾಹರಣೆಯಾಗಿದೆ. ಬಡವರು, ದುರ್ಬಲರು ಮತ್ತು ದೀನದಲಿತರನ್ನು ವಿಶೇಷವಾಗಿ ಗುರಿಯಾಗಿಸಲಾಯಿತು. ಅವರ ಘನತೆಯನ್ನು ಅವಮಾನಿಸಲಾಯಿತು” ಎಂದಿದ್ದಾರೆ.

ತುರ್ತು ಪರಿಸ್ಥಿತಿಯ ವಿರುದ್ಧದ ಹೋರಾಟದಲ್ಲಿ ದೃಢವಾಗಿ ನಿಂತ ಜನರನ್ನು ಶ್ಲಾಘಿಸಿದ ಪ್ರಧಾನಿ ” ಭಾರತದಾದ್ಯಂತದ ಎಲ್ಲಾ ವರ್ಗದ ಜನರು, ವೈವಿಧ್ಯಮಯ ಸಿದ್ಧಾಂತಗಳಿಂದ ಬಂದವರು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ರಕ್ಷಿಸಲು ಮತ್ತು ನಮ್ಮ ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಜೀವನವನ್ನು ಮುಡಿಪಾಗಿಟ್ಟ ಆದರ್ಶಗಳನ್ನು ಸಂರಕ್ಷಿಸಲು ಒಂದೇ ಗುರಿಯೊಂದಿಗೆ ಪರಸ್ಪರ ಒಗ್ಗಟ್ಟಿನಿಂದ ಕೆಲಸ ಮಾಡಿದರು. ಅವರ ಸಾಮೂಹಿಕ ಹೋರಾಟದಿಂದ ಆಗಿನ ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವವನ್ನು ಪುನಃಸ್ಥಾಪಿಸಲು ಮತ್ತು ಹೊಸದಾಗಿ ಚುನಾವಣೆ ನಡೆಸಲು ಸಾಧ್ಯವಾಯಿತು” ಎಂದು ಹೇಳಿದ್ದಾರೆ.

‘ನಮ್ಮ ಸಂವಿಧಾನದ ಮೌಲ್ಯಗಳನ್ನು ಬಲಪಡಿಸುವ ಭಾರತದ ದೂರದೃಷ್ಟಿಯನ್ನು ಸಾಕಾರಗೊಳಿಸಲು ಒಗ್ಗಟ್ಟಾಗಿ ಕೆಲಸ ಮಾಡುವ ಬದ್ಧತೆಯನ್ನು ಪುನರುಚ್ಚರಿಸುತ್ತೇನೆ. ನಾವು ಪ್ರಗತಿಯ ಹೊಸ ಎತ್ತರಕ್ಕೆ ತಲುಪೋಣ ಮತ್ತು ಬಡವರು, ದೀನದಲಿತರ ಕನಸುಗಳನ್ನು ನನಸುಗೊಳಿಸೋಣ’ ಎಂದು ಪ್ರಧಾನಿ ಬರೆದುಕೊಂಡಿದ್ದಾರೆ.

ಇರಾನ್-ಇಸ್ರೇಲ್ ಕದನವಿರಾಮವನ್ನು ಸ್ವಾಗತಿಸಿದ ಭಾರತ; ಅಮೆರಿಕ ಮತ್ತು ಕತಾರ್ ಪಾತ್ರಕ್ಕೆ ಮೆಚ್ಚುಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...