Homeಕರ್ನಾಟಕಆಯ್ಕೆಯಾಗಿ ವರ್ಷವಾದರೂ ನೇಮಕಾತಿ ಆದೇಶವಿಲ್ಲ: PUC ಉಪನ್ಯಾಸಕ ಅಭ್ಯರ್ಥಿಗಳ ಆಕ್ರೋಶ!

ಆಯ್ಕೆಯಾಗಿ ವರ್ಷವಾದರೂ ನೇಮಕಾತಿ ಆದೇಶವಿಲ್ಲ: PUC ಉಪನ್ಯಾಸಕ ಅಭ್ಯರ್ಥಿಗಳ ಆಕ್ರೋಶ!

ಹೈಕೋರ್ಟ್ ಆದೇಶದ ಪ್ರಕಾರ, ಯಾವುದೇ ಸರ್ಕಾರಿ ಹುದ್ದೆಯ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾದ 1 ವರ್ಷದೊಳಗೆ ಸಂಪೂರ್ಣ ಪ್ರಕ್ರಿಯೆ ಪೂರ್ಣಗೊಂಡು, ಅಭ್ಯರ್ಥಿಗಳು ಹುದ್ದೆಗೆ ವರದಿ ಮಾಡಿಕೊಳ್ಳಬೇಕು. ಅಧಿಸೂಚನೆ ಹೊರಡಿಸಿ 5 ವರ್ಷ ಕಳೆದಿದೆ. ಅಂತಿಮ ಪಟ್ಟಿ ಪ್ರಕಟವಾಗಿ 1 ವರ್ಷವಾಗಿದೆ. ಆದರೂ ನೇಮಕಾತಿ ಆದೇಶ ಸಿಕ್ಕಿಲ್ಲ.

- Advertisement -
- Advertisement -

ಸರ್ಕಾರಿ ಪದವಿ ಪೂರ್ವ ಕಾಲೇಜು (PUC) ಉಪನ್ಯಾಸಕರ ಹುದ್ದೆಗೆ ಆಯ್ಕೆಯಾಗಿರುವವರಿಗೆ ಈ ಕೂಡಲೇ ನೇಮಕಾತಿ ಪತ್ರ ನೀಡುವಂತೆ ಆದೇಶ ಹೊರಡಿಸಬೇಕೆಂದು ಆಗ್ರಹಿಸಿ ಉಪನ್ಯಾಸಕರಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳು ಕಳೆದ 3 ದಿನಗಳಿಂದ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಇದುವರೆಗೂ ಸರ್ಕಾರ ಈ ಕಡೆಗೆ ಎಳ್ಳಷ್ಟೂ ಗಮನಹರಿಸಿಲ್ಲ.

2015 ರಲ್ಲಿ ಪ್ರಾರಂಭವಾದ PUC ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯು ಕಾರಣಾಂತರಗಳಿಂದ ವಿಳಂಬವಾಗಿತ್ತು. ನಂತರ 2017ರಲ್ಲಿ ಮತ್ತೊಮ್ಮೆ ಅಧಿಸೂಚನೆ ಹೊರಡಿಸಿ, ಅರ್ಜಿ ಸಲ್ಲಿಸಲು ಮತ್ತೆ ಅವಕಾಶ ನೀಡಲಾಗಿತ್ತು. 2018 ರಲ್ಲಿ ಪರೀಕ್ಷೆ ನಡೆದು ಫಲಿತಾಂಶವೂ ಹೊರಬಿದ್ದಿತ್ತು. 2019 ಡಿಸಂಬರ್‌ನಲ್ಲಿ ಹುದ್ದೆಗೆ ಆಯ್ಕೆಯಾದವರು ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಇದನ್ನೂ ಓದಿ: ನೆಟ್‌ವರ್ಕ್ ಸಮಸ್ಯೆ: ಆನ್‌ಲೈನ್ ತರಗತಿಗಾಗಿ 5 ಕಿಮೀ ನಡೆಯುವ ವಿದ್ಯಾರ್ಥಿಗಳು!

ಆದರೆ ಇದಾಗಿ ಒಂದು ವರ್ಷ ಕಳೆದರೂ ಇನ್ನೂ ನೇಮಕಾತಿ ಪತ್ರವನ್ನು ನೀಡದೇ ಸರ್ಕಾರ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ವಂಚಿಸುತ್ತಿದೆ.

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಲ್ಲಿ ಒಬ್ಬರಾದ ಅಶೋಕ್ ಎಂಬುವವರು ಇದರ ಕುರಿತು ನಾನು ಗೌರಿ.ಕಾಂ ನೊಂದಿಗೆ ಮಾತನಾಡಿ, “ಇದರ ಹಿಂದೆ ಸರ್ಕಾರದ ಕೈವಾಡವಿದೆ. ನೇಮಕಾತಿ ಪ್ರಕ್ರಿಯೆ ಈಗಾಗಲೇ ವಿಳಂಬವಾಗಿದೆ. ಆದರೆ ಈಗ ಕೊರೊನಾ ಕಾರಣವೊಡ್ಡಿ ನಮಗೆ ವಂಚಿಸಲಾಗುತ್ತಿದೆ. ಈ ಅಧಿಸೂಚನೆ ಹೊರಬಿದ್ದಿದ್ದು ಕಳೆದ 5 ವರ್ಷಗಳ ಹಿಂದೆ. ಪರೀಕ್ಷೆ ನಡೆದು ಫಲಿತಾಂಶ ಬಂದು ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿದಾಗ ಯಾವ ಕೊರೊನಾ ರೋಗವೂ ಇರಲಿಲ್ಲ. ಆದರೂ ಸರ್ಕಾರ ಅಸಮರ್ಥನೀಯ ನೆಪವೊಡ್ಡುತ್ತಿದೆ” ಎಂದು ಹೇಳಿದರು.

ಇದನ್ನೂ ಓದಿ: ಬಾಕಿ ಸಂಬಳ ಹಾಗೂ ಇತರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ

“ನಮಗೆ ನೇಮಕಾತಿ ನೀಡಿದರೆ ಸಂಬಳ ನೀಡಬೇಕಾಗುತ್ತದೆ. ಬದಲಿಗೆ ಕೊರೊನಾ ನೆಪವೊಡ್ಡಿದರೆ ಆ ಹಣವನ್ನು ಉಳಿಸಿಕೊಳ್ಳಬಹುದು ಎಂಬ ಹುನ್ನಾರದಲ್ಲಿ ಈ ಸರ್ಕಾರ ಯೋಚಿಸುತ್ತಿದೆ. ಈಗಾಗಲೆ ಯೂಟ್ಯೂಬ್‌ ಮತ್ತು ಆನ್ಲೈನ್ ತರಗತಿಗಳು ಆರಂಭವಾಗಿದ್ದು, ಈಗಿರುವ ಉಪನ್ಯಾಸಕರಿಂದಲೇ ಸರಿದೂಗಿಸಿಕೊಳ್ಳಬಹುದು ಎಂದು ಸರ್ಕಾರ ಎಣಿಸುತ್ತಿದೆ. ಆದರೆ ಹೈಕೋರ್ಟ್ ಆದೇಶದ ಪ್ರಕಾರ, ಯಾವುದೇ ಸರ್ಕಾರಿ ಹುದ್ದೆಯ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾದ 1 ವರ್ಷದೊಳಗೆ ಸಂಪೂರ್ಣ ಪ್ರಕ್ರಿಯೆ ಪೂರ್ಣಗೊಂಡು, ಅಭ್ಯರ್ಥಿಗಳು ಹುದ್ದೆಗೆ ವರದಿ ಮಾಡಿಕೊಳ್ಳಬೇಕು. ಅಧಿಸೂಚನೆ ಹೊರಡಿಸಿ 5 ವರ್ಷ ಕಳೆದಿದೆ. ಅಂತಿಮ ಪಟ್ಟಿ ಪ್ರಕಟವಾಗಿ 1 ವರ್ಷವಾಗಿದೆ. ಆದರೂ ನಮಗೆ ನೇಮಕಾತಿ ಆದೇಶ ಸಿಕ್ಕಿಲ್ಲ.” ಎಂದು ಹೇಳಿದರು.

ಈಗಾಗಲೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು  ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಪ್ರತಿಭಟನಾಕಾರರಿಗೆ ಭರವಸೆ ನೀಡಿದ್ದಾರೆ. ಆದರೆ ಈ ಭರವಸೆಗೆ ಮಣಿಯದ ಪ್ರತಿಭಟನಾಕಾರರು, ನಿಯಮಾನುಸಾರ ನೇಮಕಾತಿ ಆದೇಶ ಹೊರಡಿಸುವಂತೆ ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ: 35,000 ಕ್ಕೂ ಹೆಚ್ಚು ಖಾಸಗಿ ಶಾಲಾ ಶಿಕ್ಷಕರು ವಜಾ: 8 ಅತಿಥಿ ಉಪನ್ಯಾಸಕರ ಆತ್ಮಹತ್ಯೆ!

ಸರ್ಕಾರ ಈ ಧೊರಣೆಯ ವಿರುದ್ಧ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯವನವರು ದನಿಯೆತ್ತಿದ್ದು, ಶೀಘ್ರವೇ ನೇಮಕಾತಿ ಆದೇಶ ನೀಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರತಿಭಾಟನಾ ನಿರತರನ್ನು ಭೇಟಿ ಮಾಡಿ, ಅವರನ್ನು ಬೆಂಬಲಿಸಿ, ಆದೇಶ ನಿಡುವಂತೆ ಸರ್ಕಾರವನ್ನು ಒತ್ತಾಯಿಸುವುದಾಗಿ ಭರವಸೆ ನೀಡಿದರು.


ಇದನ್ನೂ ಓದಿ: ಲಾಕ್‍ಡೌನ್ – ಮನೆಯಿಂದಲೇ ಕೆಲಸ, ಮನೆಕೆಲಸ ಮತ್ತು ಮಹಿಳೆ! – ಮಲ್ಲಿಗೆ ಸಿರಿಮನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...