Homeಮುಖಪುಟಕೃಷಿ ಸುಗ್ರೀವಾಜ್ಞೆಗಳಿಗೆ ವರ್ಷ: ಬಿಜೆಪಿ ಶಾಸಕರು, ಸಂಸದರ ಮನೆ ಮುಂದೆ ಪ್ರತಿಭಟನೆಗೆ ರೈತರ ಕರೆ

ಕೃಷಿ ಸುಗ್ರೀವಾಜ್ಞೆಗಳಿಗೆ ವರ್ಷ: ಬಿಜೆಪಿ ಶಾಸಕರು, ಸಂಸದರ ಮನೆ ಮುಂದೆ ಪ್ರತಿಭಟನೆಗೆ ರೈತರ ಕರೆ

- Advertisement -
- Advertisement -

ಕಳೆದ ವರ್ಷ ಸಾಂಕ್ರಾಮಿಕದ ಕಾರಣಕ್ಕಾಗಿ ಹೇರಲಾದ ಲಾಕ್‌ಡೌನ್‌ ಸಮಯದಲ್ಲಿ ಜೂನ್ 5ರಂದು ಸುಗ್ರೀವಾಜ್ಞೆಗಳ ಮೂಲಕ ಹೊಸ ಕೃಷಿ ಕಾನೂನುಗಳನ್ನು ಮೋದಿ ನೇತೃತ್ವದ ಸರ್ಕಾರ ಜಾರಿ ಮಾಡಿತ್ತು. ಅದಕ್ಕೆ ಒಂದು ವರ್ಷ ತುಂಬುತ್ತಿದ್ದು ಇದೇ ಜೂನ್ 5 ರಂದು ಕೃಷಿ ಕಾನೂನುಗಳನ್ನು ವಿರೋಧಿಸಿ ಬಿಜೆಪಿ ಸಂಸದರು ಮತ್ತು ಶಾಸಕರ ಕಚೇರಿಗಳ ಮುಂದೆ ಕೃಷಿ ಕಾನೂನುಗಳ ಪ್ರತಿಗಳನ್ನು ಸುಟ್ಟು `ಸಂಪೂರ್ಣ ಕ್ರಾಂತಿ ದಿನ’ವನ್ನಾಗಿ ಆಚರಿಸಲು ಸಂಯುಕ್ತ ಕಿಸಾನ್ ಮೋರ್ಚಾ ನಿರ್ಧರಿಸಿದೆ.

ಕೇಂದ್ರ ಸರ್ಕಾರ ಸುಗ್ರೀವಾಜ್ಞೆಗಳ ಮೂಲಕ ಜಾರಿಗೆ ತಂದಿದ್ದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಸೆಪ್ಟೆಂಬರ್ನಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಿತು. ಅವುಗಳಿಗೆ ರಾಷ್ಟ್ರಪತಿಯವರು ಸಹಿ ಹಾಕಿ ಅನಮೋದನೆ ನೀಡಿದ್ದರು. ಆದರೆ ಇವುಗಳ ವಿರುದ್ಧ ರೈತರು ಕಳೆದ ಸೆಪ್ಟಂಬರ್ನಿಂದಲೇ ಹೋರಾಟ ಆರಂಭಿಸಿದರು. ರೈತ ವಿರೋಧಿಯಾದ ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹಾಗೂ ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿಪಡಿಸುವ ಕಾನೂನು ಜಾರಿಗೆ ಒತ್ತಾಯಿಸಿ ಕಳೆದ ನವೆಂಬರ್ನಿಂದ ರೈತರು ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

1974 ರಲ್ಲಿ ಜಯಪ್ರಕಾಶ್ ನಾರಾಯಣ್ ಅವರು ಸಂಪೂರ್ಣ ಕ್ರಾಂತಿ’ ಎಂದು ಘೋಷಿಸಿ ಅಂದಿನ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಆಂದೋಲನವನ್ನು ಪ್ರಾರಂಭಿಸಿದ್ದರು. ಅದೇ ನೆನಪಿನಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಹೊಸ ಕೃಷಿ ಕಾಯ್ದೆಗಳ ಪ್ರತಿಗಳನ್ನು ಸುಟ್ಟು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಿದೆ. 1974ರ ಜೂನ್ 5ರಂದು ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಜಯಪ್ರಕಾಶ್ ನಾರಾಯಣ್ ಅವರು ಬಿಹಾರದ ಜನರಿಗೆಸಂಪೂರ್ಣ ಕ್ರಾಂತಿ ದಿವಸ್’ ಎಂದು ಆಚರಿಸಿಲು ಕರೆ ನೀಡಿದ್ದರು. ಹೊಸ ಸಾಮಾಜಿಕ ವ್ಯವಸ್ಥೆ ರೂಪಿಸಲು ಪ್ರತಿ ಹಳ್ಳಿಯಲ್ಲೂ `ಜನತಾ ಸರ್ಕಾರ್’ ರಚಿಸಿದ್ದರು.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಯುಕ್ತ ಕಿಸಾನ್ ಮೋರ್ಚಾ, ‘ಜೂನ್ 5ರಂದು ದೇಶಾದ್ಯಂತ ಸಂಪೂರ್ಣ ಕ್ರಾಂತಿ ದಿವಸ್ ಆಚರಿಸಲಾಗುವುದು ಎಂದು ತಿಳಿಸಿದೆ. ಅಂದು ಬಿಜೆಪಿ ಸಂಸದರು, ಶಾಸಕರು ಮತ್ತು ಜನಪ್ರತಿನಿಧಿಗಳ ಕಚೇರಿಗಳ ಮುಂದೆ ಮೂರು ಕೃಷಿ ಕಾನೂನುಗಳ ಪ್ರತಿಗಳನ್ನು ಸುಡುವಂತೆ ನಾವು ನಾಗರೀಕರಿಗೆ ಮನವಿ ಮಾಡುತ್ತೇವೆ. ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸುವಂತೆ ಹೇಳಿಕೆಯಲ್ಲಿ ತಿಳಿಸಿದೆ.

ಇದೇ ಸಂದರ್ಭದಲ್ಲಿ ಹೋರಾಟನಿರತ ರೈತರು ಮತ್ತು ಗ್ರಾಮಗಳ ಅಭಿವೃದ್ಧಿಗೆ ಕೊಡುಗೆ ನೀಡಿದ್ದ ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಪುಣ್ಯಸ್ಮರಣೆ ಅಂಗವಾಗಿ ಅವರಿಗೆ ಗೌರವ ಸಲ್ಲಿಸಿದರು.

ಚೌಧರಿ ಚರಣ್ ಸಿಂಗ್ ಅವರು ದೇಶವನ್ನುಆತ್ಮನಿರ್ಭರ್’ (ಸ್ವಾವಲಂಬಿ)ಯನ್ನಾಗಿ ಮಾಡಲು ಬಯಸಿದ್ದರು. ಇದರಲ್ಲಿ ರೈತರು, ಕಾರ್ಮಿಕರು ಮತ್ತು ಹಳ್ಳಿಗಳ ಜನರು ಸಂತೋಷದಿಂದ ಬದುಕಬಲ್ಲರು’. ಇಂದಿನ ಸರ್ಕಾರದ ಬಗ್ಗೆ ರೈತರಿಗಿರುವ ಅಪನಂಬಿಕೆ ಚೌಧರಿ ಚರಣ್ ಸಿಂಗ್ ಅವರನ್ನು ನೆನಪಿಸುತ್ತದೆ. ಅವರು ರೈತರ ಪ್ರತಿಯೊಂದು ಸಮಸ್ಯೆ ಮತ್ತು ನೋವನ್ನು ಸಮಾಜ ಮತ್ತು ಸರ್ಕಾರದ ಮುಂದೆ ಇರಿಸಿ ಪರಿಹರಿಸುತ್ತಿದ್ದರು’ ಎಂದು ರೈತರು ನೆನಪಿಸಿಕೊಂಡರು.

ರೈತ ಹೋರಾಟವನ್ನು ಬಲಪಡಿಸಲು ಪಂಜಾಬಿನ ದೋಬಾ ಪ್ರದೇಶದ ಅತಿ ಹೆಚ್ಚು ಸಂಖ್ಯೆಯಲ್ಲಿ ರೈತರು ಶನಿವಾರ ಪ್ರತಿಭಟನಾ ಗಡಿಗಳಿಗೆ ಬಂದಿದ್ದಾರೆ. ಆಂದೋಲನವನ್ನು ಮುನ್ನಡೆಸುವ ನಿಟ್ಟಿನಲ್ಲಿ ಇನ್ನೂ ಅನೇಕ ರೈತರು ಬಂದು ಸೇರುವ ನಿರೀಕ್ಷೆಯನ್ನು ಸಂಯುಕ್ತ ಕಿಸಾನ್ ಮೋರ್ಚಾ ವ್ಯಕ್ತಪಡಿಸಿದೆ.

ಕೃಪೆ: ಅನ್ನದ ಋಣ


ಇದನ್ನೂ ಓದಿ: ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ ಅಮೆರಿಕಾದ ಕೃಷಿಕರು, ತಜ್ಞರು ಮತ್ತು ರಾಜಕಾರಣಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...