Homeಕರ್ನಾಟಕಶೋಭಾ ಕರಂದ್ಲಾಚೆಗೆ ಈರುಳ್ಳಿ ಹಾರ ಹಾಕಿ ಪ್ರತಿಭಟನೆಗೆ ಯತ್ನ: ಸ್ಥಳದಿಂದ ಕಾಲ್ಕಿತ್ತ ಸಂಸದೆ...

ಶೋಭಾ ಕರಂದ್ಲಾಚೆಗೆ ಈರುಳ್ಳಿ ಹಾರ ಹಾಕಿ ಪ್ರತಿಭಟನೆಗೆ ಯತ್ನ: ಸ್ಥಳದಿಂದ ಕಾಲ್ಕಿತ್ತ ಸಂಸದೆ…

- Advertisement -
- Advertisement -

ಚಿಕ್ಕಮಗಳೂರು-ಉಡುಪಿ ಸಂಸದೆ ಶೋಭಾ ಕರಂದ್ಲಾಜೆಗೆ ಈರುಳ್ಳಿ ಹಾರ ಹಾಕಿ ಪ್ರತಿಭಟನೆ ನಡೆಸಲು ಕಾಂಗ್ರೆಸ್‌ ಕಾರ್ಯಕರ್ತರು ಯತ್ನಿಸಿದ್ದು, ಕೂಡಲೇ ಸಂಸದೆ ಸ್ಥಳದಿಂದ ಕಾಲ್ಕಿತ್ತ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಬೆಲೆಏರಿಕೆಯ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದರು. ಕೇಂದ್ರ ಸರ್ಕಾರ, ನರೇಂದ್ರ ಮೋದಿ ಮತ್ತು ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಘೋಷಣೆ ಕೂಗುತ್ತಿದ್ದರು. ಕೆಲಸದ ನಿಮತ್ತ ಅಲ್ಲಿಗ ಬಂದಿದ್ದ ಸಂಸದೆ ಪ್ರತಿಭಟನಾಕಾರರ ಬಳಿ ಮಾತಾಡಲು ತೆರಳಿದಾಗ ಪ್ರತಿಭಟನಾಕಾರರು ಮಾತಾಡಲು ನಿರಾಕರಿಸಿ ಜೋರಾಗಿ ಘೋಷಣೆ ಕೂಗಿದ್ದಾರೆ

ಅಲ್ಲದೇ ಶೋಭಾ ಕರಂದ್ಲಾಚೆಯವರಿಗೆ ಧಿಕ್ಕಾರ ಕೂಗಿದ್ದಲ್ಲದೇ ಈರುಳ್ಳಿ ಬೆಲೆ ಏರಿಕೆ ಖಂಡಿಸಿ ಸಂಸದೆಗೆ ಈರುಳ್ಳಿ ಹಾರ ಹಾಕಲು ಮುಂದಾಗಿದ್ದಾರೆ. ಆಗ ಮಧ್ರಪ್ರವೇಶಿಸಿದ ಬಿಜೆಪಿ ಮುಖಂಡರು ಮತ್ತು ಪೊಲೀಸರು ತಡೆ ಒಡ್ಡಿದರು. ಕೂಡಲೇ ಅಲ್ಲಿಂದ ಕಾಲ್ಕಿತ್ತ ಸಂಸದೆ ತನ್ನ ಕಾರಿನತ್ತ ತೆರಳಿದ್ದಾರೆ. ಹೋರಾಟಗಾರರು ಬಿಡದೇ ಅವರು ಕಾರಿನವರವರೆಗೆ ಹಿಂಬಾಲಿಸಿಕೊಂಡು ಬಂದು ಕಾರಿನೊಳಗೆ ಈರುಳ್ಳಿ ಹಾರ ತೂರಿದ್ದಾರೆ..

ಘಟನೆಯ ನಂತರ ಮಾತನಾಡಿದ ಸಂಸದ ಶೋಭಾ ಕರಂದ್ಲಾಜೆ ನಾಳೆ ಭಾರತ ಬಂದ್‌ಗೆ ಕರೆ ಕೊಟ್ಟಿರುವವರು ತುಕಡೆ ಗ್ಯಾಂಗ್‌ನವರು. ಅವರನ್ನು ಯಾರೂ ಬೆಂಬಲಿಸಬೇಡಿ. ಪೌರತ್ವ ಕಾಯ್ದೆಯಿಂದ ದೇಶಕ್ಕೆ ಒಳ್ಳೆಯದು ಆಗಲಿದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...