Homeಕರ್ನಾಟಕದಿಢೀರ್‌ ಕುಸಿದ ಈರುಳ್ಳಿ ಬೆಲೆ, ಕ್ವಿಂಟಾಲ್‌ ಕೇವಲ 150ರೂ : ಆಕ್ರೋಶಗೊಂಡು ದಲ್ಲಾಳಿಗಳನ್ನು ಅಟ್ಟಾಡಿಸಿದ ರೈತರು…

ದಿಢೀರ್‌ ಕುಸಿದ ಈರುಳ್ಳಿ ಬೆಲೆ, ಕ್ವಿಂಟಾಲ್‌ ಕೇವಲ 150ರೂ : ಆಕ್ರೋಶಗೊಂಡು ದಲ್ಲಾಳಿಗಳನ್ನು ಅಟ್ಟಾಡಿಸಿದ ರೈತರು…

- Advertisement -
- Advertisement -

ಮಂಗಳವಾರ ಮುಂಜಾನೆ ಈರುಳ್ಳಿ ಬೆಲೆ ದಿಢೀರ್ ಕುಸಿದ ಹಿನ್ನೆಲೆಯಲ್ಲಿ ದಲ್ಲಾಳಿ ಅಂಗಡಿಗಳ ಗ್ಲಾಸ್‌ಗಳನ್ನು ರೈತರು ಒಡೆದು ಪುಡಿಪುಡಿ ಮಾಡಿದ ಘಟನೆ ಗದಗ ಎಪಿಎಂಸಿಯಲ್ಲಿ ನಡೆದಿದೆ. ರೈತರ ಆಕ್ರೋಶಕ್ಕೆ ದಲ್ಲಾಳಿಗಳು ಅಂಗಡಿಗಳನ್ನು ಬಿಟ್ಟು ಪರಾರಿಯಾದರು.

ಆಕ್ರೋಶಗೊಂಡ ರೈತರು ಗದಗ ಎಪಿಎಂಸಿಯಿಂದ ಜನರಲ್ ಕಾರ್ಯಪ್ಪ ಸರ್ಕಲ್‌ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯ ಹೆದ್ದಾರಿ ತಡೆದರು. ಇದರಿಂದ ವಾಹನ ಸವಾರರು ಪರದಾಡುವಂತಾಯಿತು.
ಸ್ಥಳಕ್ಕೆ ಗದಗ ಎಸ್ಪಿ ಶ್ರೀನಾಥ್ ಜೋಷಿ, ಎಸಿ ಭೇಟಿ ನೀಡಿ ರೈತರ ಮನವೊಲಿಸಿದರು. ದಲ್ಲಾಳಿಗಳ ಜೊತೆ ಮಾತನಾಡಿ ಸೂಕ್ತ ಬೆಲೆ ಒದಗಿಸೋ ಪ್ರಯತ್ನ ಮಾಡೋ ಭರವಸೆ ಸಿಕ್ಕ ನಂತರ ರೈತರು ತಮ್ಮ ಪ್ರತಿಭಟನೆ ಹಿಂಪಡೆದರು. ಕ್ವಿಂಟಲ್ ಗೆ 4-5 ಸಾವಿರ ಇದ್ದ ಈರುಳ್ಳಿ ಬೆಲೆ ಈಗ ಏಕಾಏಕಿ ರೂ. 150 ಕ್ಕೆ ಕುಸಿದಿದ್ದು ರೈತರ ಆಕ್ರೋಶಕ್ಕೆ ಕಾರಣವಾಯಿತು.

ಗದಗ ಇಡೀ ರಾಜ್ಯಕ್ಕೆ ಉಳ್ಳಾಗಡ್ಡಿಯ ದೊಡ್ಡ ಮಾರುಕಟ್ಟೆ. ಗದಗಿನ ಎಲ್ಲಾ ತಾಲ್ಲೂಕುಗಳಲ್ಲೂ ಅಪಾರ ಪ್ರಮಾಣದಲ್ಲಿ ಪ್ರತಿವರ್ಷ ಉಳ್ಳಾಗಡ್ಡಿ ಬೆಳೆಯುತ್ತಾರೆ. ಕೆಲವೊಮ್ಮೆ ಬೆಳೆಯನ್ನು ಬೆಂಗಳೂರಿನ ಯಶವಂತಪುರ ಮಾರುಕಟ್ಟೆಗೆ, ಮುಂಬೈನ ನಾಸಿಕಕ್ಕೂ ಕಳಿಸಿ ಮಾರುತ್ತಾರೆ. ಇಲ್ಲಿನ ಈರುಳ್ಳಿಗೆ ಒಳ್ಳೆ ಬೆಲೆಯೂ ಇದೆ. ಈ ಸಲ ವಿಪರೀತ ಮಳೆಯಿಂದ ಸಾಕಷ್ಟು ಪ್ರಮಾಣದಲ್ಲಿ ಈರುಳ್ಳಿ ನಾಶವಾಗಿದೆ. ಕೊಳೆರೋಗದಿಂದಲೂ ಇಳುವರಿ ಕಡಿಮೆಯಾಗಿದೆ. ಆದರೆ, ಚೆನ್ನಾಗಿ ಬಂದ ಬೆಳೆಗೂ ಸರಿಯಾದ ಬೆಲೆ ಸಿಕ್ಕಿಲ್ಲ.

ಮೊದಲಿಗೆ ಕೇಂದ್ರ ಸರ್ಕಾರ ರಫ್ತು ನಿಷೇಧ ಹೇರಿದ್ದರಿಂದ ಧಾರಣೆ ಕುಸಿದಿತ್ತು. ನಂತರ ರಫ್ತು ನಿಷೇಧ ತೆಗೆದ ಮೇಲೂ ಧಾರಣೆಯೇನೂ ಏರಲಿಲ್ಲ. ಕಳೆದ ವರ್ಷ 7-8 ಸಾವಿರವಿದ್ದ ದರ ಈ ವರ್ಷ 4 ಸಾವಿರಕ್ಕೆ ಇಳಿಯಿತು. ಆದರೆ ಇಂದು ಮುಂಜಾನೆ ರೈತರಿಗೆ ದೊಡ್ಡ ಆಘಾತ ಕಾದಿತ್ತು. ಈರುಳ್ಳಿ ದರ ಏಕಾಏಕಿ ಕ್ವಿಂಟಾಲ್‌ಗೆ 150 ರೂಪಾಯಿಗೆ ಕುಸಿಯಿತು.

ಕ್ಷಣಕಾಲ ಕುಸಿದೇ ಹೋದ ರೈತ ಸಮೂಹ ನಂತರ ಈ ಮಾರುಕಟ್ಟೆ ವ್ಯವಸ್ಥೆಯ ವಿರುದ್ಧ ತಿರುಗಿ ಬಿದ್ದರು. ಅದರ ಪರಿಣಾಮವಾಗಿ ತಂದಿದ್ದ ಈರುಳ್ಳಿಯನ್ನು ಎಪಿಎಂಸಿ ಆವರಣ, ರಸ್ತೆಗಳಲ್ಲಿ ಚೆಲ್ಲಾಡಿದರು. ದಲ್ಲಾಳಿ ಅಂಗಡಿಗಳ ಗಾಜುಗಳನ್ನು ಈರುಳ್ಳಿ ಎಸೆದೇ ಪುಡಿಪುಡಿ ಮಾಡಿದರು. ಕುರ್ಚಿ ಟೇಬಲ್ಲುಗಳನ್ನು ಜಖಂಗೊಳಿಸಿದರು. ಭಯಭಿತರಾದ ದಲ್ಲಾಳಿ ಅಂಗಡಿಯ ವ್ಯಾಪಾರಸ್ಥರು ಎದ್ದು ಬಿದ್ದ್ದು ಓಡಿ ಹೋದರು.

ಈ ಪರಿಸ್ಥಿತಿಗೆ ಕಾರಣರಾದ ದಲ್ಲಾಳಿ ಅಂಗಡಿಯ ವಂಚಕ ವ್ಯಾಪಾರಿಗಳನ್ನು ಅಟ್ಟಾಡಿಸಿಕೊಂಡು ಹೋದರು. ತಮ್ಮ ಬೆಳೆಗೆ ಸೂಕ್ತ ಬೆಲೆ ಕೊಡಬೇಕು ಅಂತ ಆಗ್ರಹಿಸಿ ಎಪಿಎಂಸಿಯಿಂದ ಪ್ರತಿಭಟನೆ ಮಾಡ್ತಾ, ನಗರದ ಜನರಲ್ ಕಾರ್ಯಪ್ಪ ಸರ್ಕಲ್ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ, ರಾಜ್ಯ ಹೆದ್ದಾರಿ ಬಂದ್ ಮಾಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ಧೋರಣೆಗೆ ಉಳ್ಳಾಗಡ್ಡಿ ಇಂದು ಸಾಕ್ಷಿಯಾಗಿ ನಿಂತಿದೆ. ಈರುಳ್ಳಿ ಬೆಳೆದ ರೈತನ ಕಣ್ಣಲ್ಲಿ ಕಣ್ಣೀರು ಮಾತ್ರವಲ್ಲ, ಆಕ್ರೋಶವೂ ಇದೆ.

ಸಾಕು ಸಾಕಾಗಿದೆ : ಗಂಗಾಧರಯ್ಯ, ರೈತ.

ಗದಗ ಜಿಲ್ಲೆ ಈ ಬಾರಿಯ ಪ್ರವಾಹದಿಂದ ನಲುಗಿಹೋಗಿದೆ. ರೈತರು ಬೆಳೆದಿದ್ದ ಈರುಳ್ಳಿಯೆಲ್ಲಾ ನೀರು ಪಾಲಾಗಿತ್ತು. ಅಷ್ಟೋ ಇಷ್ಟೋ ಉಳಿದ ಬೆಳೆಯನ್ನು ಮಾರುಕಟ್ಟೆಗೆ ತಂದ್ರೆ ಕ್ವಿಂಟಲ್ ಈರುಳ್ಳಿಗೆ 100 ರಿಂದ 150 ರೂಪಾಯಿ ಮಾತ್ರ ಹರಾಜು ಕೂಗಲಾಗ್ತಿದೆ. ಇದು ನಮ್ಮ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಬೆಲೆಯ ಕಣ್ಣಾ ಮುಚ್ಚಾಲೆ ಆಟದಿಂದ ಇಂದು ರೈತರ ಆಕ್ರೋಶದ ಕಟ್ಟೆ ಇಂದು ಒಡೆದು ಹೋಯಿತು ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...