Homeಮುಖಪುಟಶಾಲೆಗಳ ಆನ್‌ಲೈನ್‌ ತರಗತಿ ಹ್ಯಾಕ್‌ ಮಾಡಿ ಅಶ್ಲೀಲ ವಿಡಿಯೋ ಪೋಸ್ಟ್‌‌ ಮಾಡಿದ ದುಷ್ಕರ್ಮಿಗಳು

ಶಾಲೆಗಳ ಆನ್‌ಲೈನ್‌ ತರಗತಿ ಹ್ಯಾಕ್‌ ಮಾಡಿ ಅಶ್ಲೀಲ ವಿಡಿಯೋ ಪೋಸ್ಟ್‌‌ ಮಾಡಿದ ದುಷ್ಕರ್ಮಿಗಳು

- Advertisement -
- Advertisement -

ಕೇರಳ ಶಾಲೆಗಳ ಆನ್‌ಲೈನ್ ತರಗತಿಗಳನ್ನು ಹ್ಯಾಕ್ ಮಾಡಿರುವ ದುಷ್ಕರ್ಮಿಗಳು ಅಶ್ಲೀಲ ವೀಡಿಯೊಗಳನ್ನು ಹಾಗೂ ಫೋಟೋಗಳನ್ನು ಪೋಸ್ಟ್ ಮಾಡುವ ಮೂಲಕ ದುಷ್ಕೃತ್ಯವೆಸಗಿದ್ದಾರೆ.

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಕನಿಷ್ಠ ಮೂರು ಘಟನೆಗಳಲ್ಲಿ ಜನಪ್ರಿಯ ವಿಡಿಯೋ ಕಾನ್ಫರೆನ್ಸಿಂಗ್ ಅಪ್ಲಿಕೇಶನ್ ಜೂಮ್ ಮತ್ತು ವಾಟ್ಸಾಪ್‌ಗೆ ದುಷ್ಕರ್ಮಿಗಳು ನುಸುಳಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಮಕ್ಕಳ ಆನ್‌ಲೈನ್ ಶಿಕ್ಷಣಕ್ಕಾಗಿ ತಾಳಿ ಮಾರಿಕೊಂಡ ಘಟನೆ ನನ್ನ ಹೃದಯ ಹಿಂಡುತ್ತಿದೆ: ಎಚ್‌ಡಿಕೆ

ಸಮಾಜ ಕಲ್ಯಾಣ ಇಲಾಖೆ ಮತ್ತು ಪೊಲೀಸರು ಶಾಲೆಗಳು ಮತ್ತು ಶಿಕ್ಷಕರಿಗೆ ಇಂತಹ ಕೃತ್ಯಗಳ ಬಗ್ಗೆ ಎಚ್ಚರದಿಂದಿರಬೇಕೆಂದು ಕೇಳಿಕೊಂಡಿದ್ದು, ಅಂತಹ ಪೋಸ್ಟ್‌ಗಳು ಮಕ್ಕಳ ಮೇಲೆ ಆಳವಾದ ಆಘಾತವನ್ನು ಉಂಟುಮಾಡಬಹುದು ಎಂದು ಹೇಳಿದ್ದಾರೆ.

ಘಟನೆಗಳ ಬಗ್ಗೆ ರಾಜ್ಯ ಪೊಲೀಸರ ವಿಶೇಷ ತಂಡ ತನಿಖೆ ಆರಂಭಿಸಿದ್ದು, ಜೂಮ್‌ನಲ್ಲಿನ ಲೋಪದೋಷಗಳನ್ನು ಬಹಿರಂಗಪಡಿಸಿದ ಮೊದಲ ಘಟನೆ ಎಡಪ್ಪಲ್‌ನ ಖಾಸಗಿ ಶಾಲೆಯಿಂದ ವರದಿಯಾಗಿತ್ತು.

ಎಡಪ್ಪಲ್‌ನ ಸಿಬಿಎಸ್‌ಇ ಶಾಲೆಯ ಅಧಿಕಾರಿಗಳು 7 ನೇ ತರಗತಿ ವಿದ್ಯಾರ್ಥಿಗಳಿಗಾಗಿ ಆನ್‌ಲೈನ್ ತರಗತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ತಮ್ಮ ನಗ್ನ ವೀಡಿಯೊಗಳನ್ನು ಲೈವ್-ಸ್ಟ್ರೀಮ್ ಮಾಡಿದ್ದಾರೆ ಎಂಬ ದೂರಿನೊಂದಿಗೆ ಮಲಪ್ಪುರಂನ ಚೈಲ್ಡ್ ಲೈನ್ ​​ಅಧಿಕಾರಿಗಳನ್ನು ಸಂಪರ್ಕಿಸಿದ್ದರು.

ಇದನ್ನೂ ಓದಿ: ಕೊರೊನಾ ಲಾಕ್‍ಡೌನ್ ಎದುರಾಗಿ ಆನ್‍ಲೈನ್ ಶಿಕ್ಷಣದ ಅಪಾಯ ಮತ್ತು ಸಮಸ್ಯೆಗಳು

ಶಾಲಾ ಮುಖ್ಯೋಪಾಧ್ಯಾಯರು ನೀಡಿದ ದೂರಿನ ಪ್ರಕಾರ, “ಆಗಸ್ಟ್ 17 ರಿಂದ ಆಗಸ್ಟ್ 21 ರವರೆಗೆ ದುಷ್ಕರ್ಮಿಯು ಜೂಮ್ ಮೂಲಕ ಆನ್‌ಲೈನ್ ತರಗತಿಗಳಿಗೆ ಸೇರಿದ್ದು, ಅಲ್ಲಿ ಅಶ್ಲೀಲ ಫೋಟೋಗಳು ಮತ್ತು ವೀಡಿಯೊಗಳನ್ನು ಕಳುಹಿಸಿದ್ದಾರೆ. ಈ ಘಟನೆಯು ಮಕ್ಕಳ ಮೇಲೆ ತೀವ್ರ ಪರಿಣಾಮ ಬೀರಿದೆ” ಎಂದು ದೂರಿನಲ್ಲಿ ತಿಳಿಸಲಾಗಿದೆ.

ಘಟನೆಗೆ ಶಿಕ್ಷಕರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದು, “ಇದು ಆಘಾತಕಾರಿ ಘಟನೆ. ಆ ಮನುಷ್ಯನ ನಿಜವಾದ ಉದ್ದೇಶ ನಮಗೆ ತಿಳಿದಿಲ್ಲ. ಆರಂಭದಲ್ಲಿ, ನಾವು ಅದನ್ನು ನಿಭಾಯಿಸಲು ಹೆಣಗಾಡಿದೆವು. ಶಾಲಾ ಆಡಳಿತ ಮಂಡಳಿಯು ಮಕ್ಕಳ ಕಲ್ಯಾಣ ಅಧಿಕಾರಿಗಳು ಮತ್ತು ಪೊಲೀಸರನ್ನು ಸಂಪರ್ಕಿಸಿದೆ ” ಎಂದು ಹೇಳಿದ್ದಾರೆ.

ಓದಿ: ಆನ್‌ಲೈನ್‌ನಲ್ಲಿ ಕಾನೂನು ಬಾಹಿರ ಆರೋಗ್ಯ ಸೇವೆ ನೀಡುವವರ ವಿರುದ್ದ ಕ್ರಮ ಕೈಗೊಳ್ಳಿ: ದೆಹಲಿ ಹೈಕೋರ್ಟ್

ಇತರ ಶಾಲೆಗಳ ಶಿಕ್ಷಕರು ಕೂಡ ಇದೇ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದ ಅವರು, “ಹೆಚ್ಚಿನ ಶಾಲಾ ಆಡಳಿತ ಮಂಡಳಿಗಳು ಪೊಲೀಸರನ್ನು ಸಂಪರ್ಕಿಸಲು ಸಿದ್ಧವಾಗಿಲ್ಲ” ಎಂದಿದ್ದಾರೆ.

ಮುಖ್ಯೋಪಾಧ್ಯಾಯರು ನೀಡಿದ ದೂರಿನ ಆಧಾರದ ಮೇಲೆ, ಕುಟ್ಟಿಪ್ಪುರಂ ಪೊಲೀಸರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯ ಸೆಕ್ಷನ್ 11 (I), 11(iii) ಮತ್ತು 12, ಐಟಿ ಕಾಯ್ದೆಯ ಸೆಕ್ಷನ್ 67 ಮತ್ತು ಐಪಿಸಿ ಸೆಕ್ಷನ್ 509 ರ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿದ್ದಾರೆ.

ಇದನ್ನೂ ಓದಿ: ಆನ್‌ಲೈನ್ ಶಿಕ್ಷಣ ಬೇಡ: ಹಲವು ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆಗೆ SFI ಕರೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...