Homeಮುಖಪುಟಆನ್‌ಲೈನ್‌ ಶಿಕ್ಷಣಕ್ಕೆ ನಿಷೇದ: ಕರ್ನಾಟಕ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ

ಆನ್‌ಲೈನ್‌ ಶಿಕ್ಷಣಕ್ಕೆ ನಿಷೇದ: ಕರ್ನಾಟಕ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ

'ಸಂವಿಧಾನದ ಕಲಂ 20 & 21A ಪ್ರಕಾರ ಇದು ಮಕ್ಕಳ ಮೂಲಭೂತ ಹಕ್ಕಾಗಿರುವ ಜೀವನ ಮತ್ತು ಶಿಕ್ಷಣದ ಹಕ್ಕನ್ನು ಉಲ್ಲಂಘಿಸಿದಂತಾಗುತ್ತದೆ' ಎಂದು ಕೋರ್ಟ್‌ ಹೇಳಿದೆ.

- Advertisement -
- Advertisement -

10ನೇ ತರಗತಿಯವರೆಗೂ ಆನ್‌ಲೈನ್‌ ಶಿಕ್ಷಣಕ್ಕೆ ನಿಷೇದ ಹೇರಿದ್ದ ಕರ್ನಾಟಕ ಸರ್ಕಾರದ ನಡೆಯನ್ನು ವಿರೋಧಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ.

‘ಸಂವಿಧಾನದ ಕಲಂ 20 & 21A ಪ್ರಕಾರ ಇದು ಮಕ್ಕಳ ಮೂಲಭೂತ ಹಕ್ಕಾಗಿರುವ ಜೀವನ ಮತ್ತು ಶಿಕ್ಷಣದ ಹಕ್ಕನ್ನು ಉಲ್ಲಂಘಿಸಿದಂತಾಗುತ್ತದೆ’ ಎಂದು ಕೋರ್ಟ್‌ ಹೇಳಿದೆ.

ಜೂನ್ 15 ಮತ್ತು 27 ರಂದು ರಾಜ್ಯ ಸರ್ಕಾರ ಎಲ್‌.ಕೆ.ಜಿ ಯಿಂದ 10ನೇ ತರಗತಿಯವರೆಗೂ ಆನ್‌ಲೈನ್ ಶಿಕ್ಷಣವನ್ನು ನಿಷೇಧಿಸಿ ಹೊರಡಿಸಿದ್ದ ಆದೇಶಕ್ಕೆ ನ್ಯಾ. ಅಭಯ್ ಶ್ರೀನಿವಾಸ ಓಕಾ ಮತ್ತು ನ್ಯಾ. ನಟರಾಜ್ ರಂಗಸ್ವಾಮಿಯವರಿದ್ದ ವಿಭಾಗೀಯ ಪೀಠವು ಮಧ್ಯಂತರ ತಡೆ ನೀಡಿದೆ.

ಅರ್ಜಿದಾರರು CBSC ಮತ್ತು ICSC ಅಡಿಯಲ್ಲಿರುವ ಶಾಲೆಗಳ ಮೇಲೆ ರಾಜ್ಯ ಸರ್ಕಾರಕ್ಕೆ ಯಾವುದೇ ನಿಯಂತ್ರಣವಿರುದಿಲ್ಲ. ಅಲ್ಲಿ ಆನ್‌ಲೈನ್ ಶಿಕ್ಷಣ ನೀಡಲಾಗುತ್ತಿದೆ. ಅಲ್ಲದೇ ಕೊರೊನಾ ಪರಿಸ್ಥಿತಿ ಯಾವಾಗ ನಿಯಂತ್ರಣಕ್ಕೆ ಬರುತ್ತದೆ ಎಂಬುದರ ಬಗ್ಗೆ ಯಾರಿಗೂ ಸ್ಪಷ್ಟತೆಯಿಲ್ಲ. ಇಂತಹ ಸಮಯದಲ್ಲಿ ಆನ್‌ಲೈನ್ ಶಿಕ್ಷಣಕ್ಕೆ ತಡೆ ನೀಡುವುದು ಮಕ್ಕಳ ಹಕ್ಕಿನ ಉಲ್ಲಂಘನೆಯಾಗಲಿದೆ ಎಂದು ವಾದಿಸಲಾಗಿದೆ.

ಇದನ್ನು ಅಲಿಸಿದ ಕೋರ್ಟ್, ಸರ್ಕಾರೀ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ. ಅಲ್ಲದೇ ಕೋರ್ಟ್‌ ಆನ್‌ಲೈನ್‌ ತರಗತಿ ನಡೆಸುವ ಶಾಲೆಗಳಿಗೂ ಕೆಲವು ಷರತ್ತುಗಳನ್ನು ವಿಧಿಸಿದೆ. ಆನ್‌ಲೈನ್‌ ಶಿಕ್ಷಣವನ್ನು ಕಡ್ಡಾಯಗೊಳಿಸುವಂತಿಲ್ಲ, ಹೆಚ್ಚುವರಿ ಶುಲ್ಕ ವಸೂಲಿ ಮಾಡುವಂತಿಲ್ಲ, ಆನ್‌ಲೈನ್‌ ಸೌಲಭ್ಯವಿಲ್ಲದವರಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕು ಮತ್ತು ಅಂತವರಿಗೆ ಶಾಲೆ ಪುನರಾರಂಭದ ಬಳಿಕ ವಿಶೇಷ ತರಗತಿಗಳನ್ನು ನಡೆಸಲು ಸೂಚಿಸಿದೆ.

ಇದರ ಕುರಿತು ದೋಷಾರೋಪ ಪಟ್ಟಿ ಸಲ್ಲಿಸುವಂತೆ ರಾಜ್ಯಸರ್ಕಾರಕ್ಕೆ 4 ವಾರಗಳ ಗಡುವು ನೀಡಿದೆ. ಮೇಲುನೋಟಕ್ಕೆ ಅರ್ಜಿದಾರರ ಮೂಲಭೂತ ಹಕ್ಕು ಉಲ್ಲಂಘನೆಯಾಗಿರುವುದು ಕಂಡುಬರುತ್ತದೆ. ಅದಾಗ್ಯೂ ತಜ್ಞರ ಸಮಿತಿ ರಚನೆಗೆ ಅಡ್ಡಿಯಿಲ್ಲ. ಈ ವಿಷಯದಲ್ಲಿ ಕೋರ್ಟ್ ಮಧ್ಯ ಪ್ರವೇಶಿಸುವುದಿಲ್ಲ ಎಂದು ಹೇಳಿದೆ.


ಇದನ್ನೂ ಓದಿ : ಆನ್‌ಲೈನ್ ತರಗತಿಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಿ : ಸಿಸೋಡಿಯಾ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ‘ಸಂವಿಧಾನ ಮತ್ತು ಮೀಸಲಾತಿ’ಯನ್ನು ರದ್ದುಗೊಳಿಸಲು ಬಯಸುತ್ತಿದೆ: ಲಾಲು ಪ್ರಸಾದ್ ಯಾದವ್

0
ಬಿಜೆಪಿ ಸಂವಿಧಾನ ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತಿದೆ, ಸರ್ಕಾರಿ ಉದ್ಯೋಗ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರು ಕೂಡ ಮೀಸಲಾತಿಯನ್ನು ಪಡೆಯಬೇಕು, ಅವರ ಮೀಸಲಾತಿ ಪರವಾಗಿ ನಾನಿದ್ದೇನೆ ಎಂದು ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ)...