ಆನ್‌ಲೈನ್ ಜೂಜಾಟಕ್ಕೆ ಸಂಬಂಧಿಸಿದಂತೆ ಒಂದು ವಾರದೊಳಗೆ ಅಫಿಡವಿಟ್ ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದೆ. ಆನ್‌ಲೈನ್ ಬೆಟ್ಟಿಂಗ್ ಬಗ್ಗೆ ರಾಜ್ಯ ಸರ್ಕಾರ ಇನ್ನೂ ತನ್ನ ನಿಲುವನ್ನು ದಾಖಲಿಸಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಅಭಯ್ ಓಕಾ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ವಿಭಾಗೀಯ ಪೀಠವು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
ಆನ್‌ಲೈನ್ ಜೂಜಾಟಕ್ಕೆ ಸಂಬಂಧಿಸಿದಂತೆ 2020 ರ ನವೆಂಬರ್ 30 ರಂದು ನೋಟಿಸ್ ನೀಡಲಾಗಿದ್ದು, ಆರು ವಾರಗಳಲ್ಲಿ ಹೇಳಿಕೆ ಸಲ್ಲಿಸುವಂತೆ ರಾಜ್ಯ ಸರ್ಕಾರವನ್ನು ಕೋರಿತ್ತು. 2021 ರ ಏಪ್ರಿಲ್ ಎರಡನೇ ವಾರದವರೆಗೆ ಕೊರೊನಾ ಎರಡನೇ ಅಲೆಯ ವಿನಾಯಿತಿಯು ರಾಜ್ಯಕ್ಕೆ ಸಂಬಂಧಿಸಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಇದನ್ನೂ ಓದಿ: ಆನ್‌ಲೈನ್ ರಮ್ಮಿ ಗೇಮಿಂಗ್ ನಿಷೇಧಿಸಿ ಸುಗ್ರಿವಾಜ್ಞೆ ಹೊರಡಿಸಿದ ತಮಿಳುನಾಡು ಸರ್ಕಾರ!
ಜನವರಿ 12, 2021 ರಂದು ಕರ್ನಾಟಕ ರಾಜ್ಯ ಸರ್ಕಾರವು ಮೂರು ವಾರಗಳಲ್ಲಿ ಆಕ್ಷೇಪಣೆಗಳ ಹೇಳಿಕೆ ನೀಡಲಾಗುವುದು ಎಂದು ಹೈಕೋರ್ಟ್‌ಗೆ ಭರವಸೆ ನೀಡಿತ್ತು. ಆದಾಗ್ಯೂ ರಾಜ್ಯ ಸರ್ಕಾರ ಇದನ್ನು ಅನುಸರಿಸಲಿಲ್ಲ.
ಆನ್‌ಲೈನ್ ಜೂಜಾಟದ ಬಗ್ಗೆ ರಾಜ್ಯ ಸರ್ಕಾರ ಇನ್ನೂ ಕ್ಯಾಬಿನೆಟ್ ನಿರ್ಧಾರವನ್ನು ಮಂಡಿಸಿಲ್ಲ, ಜೊತೆಗೆ ಆಕ್ಷೇಪಣೆಗಳ ಹೇಳಿಕೆಯನ್ನು ಸಲ್ಲಿಸಲಿಲ್ಲ ಎಂದು ನ್ಯಾಯಪೀಠ ಟೀಕಿಸಿದೆ.ನ್ಯಾಯಾಲಯಕ್ಕೆ ನೀಡಿದ ಆಶ್ವಾಸನೆ ಮತ್ತು ಕಾಲಕಾಲಕ್ಕೆ ಹೊರಡಿಸಿದ ನಿರ್ದೇಶನಗಳನ್ನು ಪಾಲಿಸಲು ರಾಜ್ಯ ಸರ್ಕಾರವು ವಿಫಲವಾಗಿದೆ ಎಂದು ನ್ಯಾಯಪೀಠ ಹೇಳಿದೆ.
ಆನ್‌ಲೈನ್ ಜೂಜಾಟ ನಿಷೇಧಿಸುವ ಬಗ್ಗೆ ನ್ಯಾಯಾಲಯಕ್ಕೆ ನೀಡಿದ ಆಶ್ವಾಸನೆಗಳನ್ನು ಯಾಕೆ ಪಾಲಿಸಲಿಲ್ಲ ಎಂಬುದಕ್ಕೆ ರಾಜ್ಯ ಸರ್ಕಾರ ಕಾರಣಗಳನ್ನು ನೀಡುವ ನಿರೀಕ್ಷೆಯಿದೆ. ಅಫಿಡವಿಟ್ ಕ್ರಮ ತೆಗೆದುಕೊಳ್ಳುವ ಬಗ್ಗೆ ರಾಜ್ಯ ಸರ್ಕಾರವು ತನ್ನ ನಿಲುವನ್ನು ಸ್ಪಷ್ಟಪಡಿಸುತ್ತದೆ ಎಂದು ಲೈವ್ ಲಾ ವರದಿ ತಿಳಿಸಿದೆ.
ಇದನ್ನೂ ಓದಿ: ಭಾರತದಲ್ಲಿ ನಿತ್ಯ ಐದು ಕಸ್ಟಡಿ ಸಾವು; ಬಹುತೇಕರು ಮುಸ್ಲಿಮರು, ದಲಿತರು ಮತ್ತು ಅಂಚಿಗೆ ತಳ್ಳಲ್ಪಟ್ಟವರು!
ಎಲ್ಲಾ ಆನ್‌ಲೈನ್ ಜೂಜಾಟವನ್ನು ನಿಷೇಧಿಸುವಂತೆ ಕಾನೂನು ಕೋರಿ ಶರದಾ ಡಿ.ಆರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು. ಸಾಂಕ್ರಾಮಿಕ ರೋಗದ ಮಧ್ಯೆ ಸಮಾಜದ ಅಸಹಾಯಕ ವರ್ಗ ಮತ್ತು ವಿಶೇಷವಾಗಿ ಯುವಕರು ಆನ್‌ಲೈನ್ ಜೂಜಾಟಕ್ಕೆ ಬಲಿಯಾಗುತ್ತಿದ್ದಾರೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಹೈಕೋರ್ಟ್‌ನ ನಿರ್ದೇಶನದ ಮೇರೆಗೆ ಕೇರಳ ಸರ್ಕಾರ ಇತ್ತೀಚೆಗೆ ಆನ್‌ಲೈನ್ ಜೂಜಾಟವನ್ನು ಕಾನೂನು ಬಾಹಿರಗೊಳಿಸಿದೆ. ಮದ್ರಾಸ್ ಹೈಕೋರ್ಟ್ ಕೂಡ ಇತ್ತೀಚೆಗೆ ಇದೇ ರೀತಿಯ ಆದೇಶ ಹೊರಡಿಸಿದ್ದು, ಈ ಹಿನ್ನಲೆಯಲ್ಲಿ ತಮಿಳುನಾಡು ಸರ್ಕಾರವು ಸುಗ್ರೀವಾಜ್ಞೆಯನ್ನು ಹೊರಡಿಸಿತ್ತು. ಗುಜರಾತ್ ಹೈಕೋರ್ಟ್ ಕೂಡ ಇದೇ ರೀತಿಯ ಆದೇಶವನ್ನು ನೀಡಿದೆ.
ಆನ್‌ಲೈನ್ ಜೂಜಾಟದ ವಿರುದ್ಧ ದಾಖಲಾಗುವ ಯಾವುದೇ ಅರ್ಜಿಯನ್ನು ಪ್ರಾತಿನಿಧ್ಯವೆಂದು ಪರಿಗಣಿಸುವಂತೆ ದೆಹಲಿ ಹೈಕೋರ್ಟ್ ಭಾರತ ಮತ್ತು ದೆಹಲಿ ಸರ್ಕಾರಕ್ಕೆ ಆದೇಶಿಸಿತ್ತು.
ಇದನ್ನೂ ಓದಿ: ವಿಲಕ್ಷಣ ಘಟನೆ: ಹೆಂಡತಿಯನ್ನೇ ಪಣಕ್ಕಿಟ್ಟು ಜೂಜು – ಆಸಿಡ್ ದಾಳಿ!


