Homeಮುಖಪುಟಲೋಕಸಭೆಯಲ್ಲಿ ಆನ್‌ಲೈನ್ ಗೇಮಿಂಗ್ ಮಸೂದೆಗೆ ಅಂಗೀಕಾರ

ಲೋಕಸಭೆಯಲ್ಲಿ ಆನ್‌ಲೈನ್ ಗೇಮಿಂಗ್ ಮಸೂದೆಗೆ ಅಂಗೀಕಾರ

- Advertisement -
- Advertisement -

ಹೆಚ್ಚುತ್ತಿರುವ ವ್ಯಸನ, ಹಣ ವರ್ಗಾವಣೆ ಮತ್ತು ಆರ್ಥಿಕ ವಂಚನೆ ಪ್ರಕರಣಗಳನ್ನು ತಡೆಯುವ ಗುರಿಯನ್ನು ಹೊಂದಿರುವ ಆನ್‌ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಮಸೂದೆ,2025 ಬುಧವಾರ (ಆ.20) ಲೋಕಸಭೆಯಲ್ಲಿ ಅಂಗೀಕಾರಗೊಂಡಿದೆ.

ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆಯೇ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವೆ ಅಶ್ವಿನಿ ವೈಷ್ಣವ್ ಅವರು ಮಸೂದೆಯನ್ನು ಮಂಡಿಸಿ ವಿವರಣೆ ನೀಡಿದರು. ಬಳಿಕ, ಧ್ವನಿ ಮತದ ಮೂಲಕ ಕೆಳಮನೆಯಲ್ಲಿ ಮಸೂದೆ ಅಂಗೀಕಾರಗೊಂಡಿತು.

ಮಸೂದೆ ಅಂಗೀಕಾರಗೊಂಡ ಕೂಡಲೇ, ಪ್ರತಿಪಕ್ಷಗಳ ಗದ್ದಲ ಹಿನ್ನೆಲೆ ಸ್ಪೀಕರ್ ಕಲಾಪವನ್ನು ಮುಂದೂಡಿದರು. ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳು ಲೋಕಸಭೆಯಲ್ಲಿ ಪ್ರತಿಭಟನೆ ನಡೆಸಿತು.

ಆನ್‌ಲೈನ್ ಹಣದ ಆಟಗಳಿಗೆ ಸಂಬಂಧಿಸಿದ ಜಾಹೀರಾತನ್ನು ನಿಷೇಧಿಸುವುದು, ಬ್ಯಾಂಕುಗಳು ಮತ್ತು ಇತರ ಹಣಕಾಸು ಸಂಸ್ಥೆಗಳು ಅಂತಹ ಯಾವುದೇ ಆಟಗಳಿಗೆ ಹಣಕಾಸು ಒದಗಿಸುವುದು ಅಥವಾ ವರ್ಗಾಯಿಸುವುದನ್ನು ನಿರ್ಬಂಧಿಸುವ ಈ ಮಸೂದೆ ಹೊಂದಿದೆ ಎಂದು ಸಚಿವ ವೈಷ್ಣವ್ ಹೇಳಿದ್ದಾರೆ.

ಪಿಟಿಐ ವರದಿಯ ಪ್ರಕಾರ, ಆನ್‌ಲೈನ್ ಫ್ಯಾಂಟಸಿ ಕ್ರೀಡೆಗಳಿಂದ ಆನ್‌ಲೈನ್ ಜೂಜಾಟ (ಪೋಕರ್, ರಮ್ಮಿ ಮತ್ತು ಇತರ ಕಾರ್ಡ್ ಆಟಗಳು) ಮತ್ತು ಆನ್‌ಲೈನ್ ಲಾಟರಿಗಳವರೆಗೆ ಎಲ್ಲಾ ಆನ್‌ಲೈನ್ ಬೆಟ್ಟಿಂಗ್ ಮತ್ತು ಜೂಜಾಟ ಚಟುವಟಿಕೆಗಳನ್ನು ಈ ಮಸೂದೆಯು ನಿಷೇಧಿಸುತ್ತದೆ.

ಈ ಕ್ರಮವು ಜಾಗತಿಕ ಹೂಡಿಕೆದಾರರ ಗಮನ ಸೆಳೆದಿರುವ ಮತ್ತು ಡ್ರೀಮ್11, ಗೇಮ್ಸ್24X7 ಮತ್ತು ಮೊಬೈಲ್ ಪ್ರೀಮಿಯರ್ ಲೀಗ್‌ನಂತಹ ಫ್ಯಾಂಟಸಿ ಕ್ರೀಡಾ ಅಪ್ಲಿಕೇಶನ್‌ಗಳನ್ನು ಪೋಷಿಸಿದ ದೇಶದ 3.8 ಬಿಲಿಯನ್ ಡಾಲರ್ ಗೇಮಿಂಗ್ ಉದ್ಯಮಕ್ಕೆ ಹೊಡೆತ ನೀಡಲಿದೆ ಎಂದು ವರದಿ ಹೇಳಿದೆ.

ಈ ಮಸೂದೆಯು ಆನ್‌ಲೈನ್ ಹಣದ ಗೇಮಿಂಗ್ ಅನ್ನು ಶಿಕ್ಷಾರ್ಹ ಅಪರಾಧವನ್ನಾಗಿ ಮಾಡುತ್ತದೆ. ಇದರಲ್ಲಿ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು/ಅಥವಾ ರೂ.1 ಕೋಟಿಯವರೆಗೆ ದಂಡ ವಿಧಿಸಬಹುದು.

ಲೋಕಸಭೆಯಲ್ಲಿ ಗದ್ದಲ: ಮಸೂದೆಗಳ ಪ್ರತಿ ಹರಿದು ವಿಪಕ್ಷಗಳ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...