ಲೋಕಸಭೆಯಲ್ಲಿ ಆನ್‌ಲೈನ್ ಗೇಮಿಂಗ್ ಮಸೂದೆಗೆ ಅಂಗೀಕಾರ

ಹೆಚ್ಚುತ್ತಿರುವ ವ್ಯಸನ, ಹಣ ವರ್ಗಾವಣೆ ಮತ್ತು ಆರ್ಥಿಕ ವಂಚನೆ ಪ್ರಕರಣಗಳನ್ನು ತಡೆಯುವ ಗುರಿಯನ್ನು ಹೊಂದಿರುವ ಆನ್‌ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಮಸೂದೆ,2025 ಬುಧವಾರ (ಆ.20) ಲೋಕಸಭೆಯಲ್ಲಿ ಅಂಗೀಕಾರಗೊಂಡಿದೆ. ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆಯೇ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವೆ ಅಶ್ವಿನಿ ವೈಷ್ಣವ್ ಅವರು ಮಸೂದೆಯನ್ನು ಮಂಡಿಸಿ ವಿವರಣೆ ನೀಡಿದರು. ಬಳಿಕ, ಧ್ವನಿ ಮತದ ಮೂಲಕ ಕೆಳಮನೆಯಲ್ಲಿ ಮಸೂದೆ ಅಂಗೀಕಾರಗೊಂಡಿತು. ಮಸೂದೆ ಅಂಗೀಕಾರಗೊಂಡ ಕೂಡಲೇ, ಪ್ರತಿಪಕ್ಷಗಳ ಗದ್ದಲ ಹಿನ್ನೆಲೆ ಸ್ಪೀಕರ್ ಕಲಾಪವನ್ನು ಮುಂದೂಡಿದರು. ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳು ಲೋಕಸಭೆಯಲ್ಲಿ … Continue reading ಲೋಕಸಭೆಯಲ್ಲಿ ಆನ್‌ಲೈನ್ ಗೇಮಿಂಗ್ ಮಸೂದೆಗೆ ಅಂಗೀಕಾರ