Homeಮುಖಪುಟರೈಲ್ವೇ ಖಾಸಗೀಕರಣದ ವಿರುದ್ಧ ಆನ್‌ಲೈನ್ ಸಹಿ ಸಂಗ್ರಹ: ನೀವೂ ಭಾಗವಹಿಸಲು ಇಲ್ಲಿದೆ ವಿವರ...

ರೈಲ್ವೇ ಖಾಸಗೀಕರಣದ ವಿರುದ್ಧ ಆನ್‌ಲೈನ್ ಸಹಿ ಸಂಗ್ರಹ: ನೀವೂ ಭಾಗವಹಿಸಲು ಇಲ್ಲಿದೆ ವಿವರ…

ಖಾಸಗೀಕರಣ ಎಂದರೆ ಅಲ್ಲಿ ಲಾಭವಿಲ್ಲದೇ ಯಾವ ಉದ್ಯಮಿಯೂ ಏನೂ ಮಾಡಲಾರ. ಹಾಗಾಗಿ “ರೈಲ್ವೇ ಸರ್ವೀಸಿನಿಂದ ರೈಲ್ವೇ ಬಿಜಿನೆಸ್” ಆಗುವುದರಲ್ಲಿ ಅನುಮಾನವಿಲ್ಲ.

- Advertisement -
- Advertisement -

ಭಾರತೀಯ ರೈಲ್ವೇ ಕ್ಷೇತ್ರವನ್ನು ಖಾಸಗೀಕರಣಗೊಳಿಸುತ್ತಿರುವ ಕೇಂದ್ರ ಸರ್ಕಾರದ ಈ ಪ್ರಕ್ರಿಯೆಯ ವಿರುದ್ಧ ಸಹಿ ಸಂಗ್ರಹ ಅಭಿಯಾನವನ್ನು ನಡೆಸಲಾಗುತ್ತಿದ್ದು, ಇದಕ್ಕೆ ಸಮ್ಮತಿಯಿರುವವರು ತಮ್ಮ ಹೆಸರು ಮತ್ತು ಸಂಪರ್ಕ ಸಂಖ್ಯೆಯನ್ನು ನೋಂದಾಯಿಸಿಕೊಳ್ಳಬಹುದಾಗಿದೆ.

ಈ ದೇಶದ ಪ್ರಮುಖ ಸಾರ್ವಜನಿಕ ಸಾರಿಗೆ ಒಡೆತನವಾದ ಭಾರತೀಯ ರೈಲ್ವೆಯಲ್ಲಿ ಖಾಸಗಿ ಹೂಡಿಕೆಗೆ ಕೇಂದ್ರ ಸರ್ಕಾರ ಅವಕಾಶ ನೀಡಿರುವ ನಿರ್ಧಾರವು ಅತ್ಯಂತ ಜನ ವಿರೋಧಿ ಮತ್ತು ಕಾರ್ಮಿಕ ವಿರೋಧಿಯಾದದ್ದು. ಜನಸಾಮಾನ್ಯರ ತೆರಿಗೆ ಮೊತ್ತ ಹಾಗೂ ರೈಲ್ವೆ ಕಾರ್ಮಿಕರು ಸುರಿಸಿದ ರಕ್ತ ಮತ್ತು ಬೆವರಿನ ಶ್ರಮದಿಂದ ಸ್ಥಾಪಿತವಾದ ಮತ್ತು ಅಭಿವೃದ್ಧಿಗೊಂಡ ಭಾರತಿಯ ರೈಲ್ವೆಗೆ ಸೇರಿದ ರೈಲ್ವೆ ಮಾರ್ಗಗಳನ್ನು, ನಿಲ್ದಾಣಗಳನ್ನು, ರೈಲ್ವೆ ಕೈಗಾರಿಕೆಗಳು ಹಾಗೂ ಇತರ ಮೂಲಸೌಕರ್ಯಗಳನ್ನು ಕಾರ್ಪೋರೇಟ್ ಕಂಪೆನಿಗಳಿಗೆ ಬರೀ ಪುಡಿಗಾಸಿಗೆ ನೀಡಲಾಗುತ್ತಿದ್ದು, ಆ ಮೂಲಕ ಸಾಮಾನ್ಯ ಜನರನ್ನು ಲೂಟಿ ಮಾಡಲು ಖಾಸಗೀಯವರಿಗೆ ಅವಕಾಶ ನೀಡುವುದು ಇದರ ಉದ್ದೇಶವಾಗಿದೆ.

ಇದನ್ನೂ ಓದಿ: ರೈಲ್ವೇ ಖಾಸಗೀಕರಣಕ್ಕೆ ಚಾಲನೆ: ಮುಂದಿನ ಕರಾಳ ದಿನಗಳಿಗೆ ಹಸಿರು ನಿಶಾನೆ

ಜುಲೈ 1 ರಂದು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕೇಂದ್ರ ಸರ್ಕಾರ 109 ಕ್ಕೂ ಹೆಚ್ಚು ಪ್ರಯಾಣಿಕರ ರೈಲು ಸೇವೆಗಳ ಮಾರ್ಗಗಳಲ್ಲಿ ಸರ್ಕಾರದ ಜೊತೆಗೆ ಭಾಗವಹಿಸಲು ಇಚ್ಚಿಸುವ ಅರ್ಹ ಖಾಸಗಿ ಕಂಪೆನಿಗಳಿಗೆ ರೈಲ್ವೆ ಇಲಾಖೆಯಲ್ಲಿ ಹೂಡಿಕೆ ಮಾಡಲು ಮುಕ್ತ ಆಹ್ವಾನ ನೀಡಿದೆ. ಅಲ್ಲದೆ, 30,000 ಕೋಟಿ ರೂ. ವರೆಗೆ ಖಾಸಗಿ ಹೂಡಿಕೆಗೆ ಅವಕಾಶ ಕಲ್ಪಿಸಿದೆ. ಈ ಮೂಲಕ ಐತಿಹಾಸಿಕ ಭಾರತೀಯ ರೈಲ್ವೆಯನ್ನೂ ಖಾಸಗೀಕರಣ ಮಾಡಲು ಹೊರಟಿದೆ.

ಇದನ್ನೂ ಓದಿ: ಖಾಸಗೀಕರಣ ಪ್ರಕ್ರಿಯೆ: ರೈಲ್ವೇ ಮಂಡಳಿಯ 7 ಕಾರ್ಖಾನೆಗಳನ್ನು ವಿಲೀನಗೊಳಿಸಿದ ಕೇಂದ್ರ ಸರ್ಕಾರ

ಬೆಂಕಿಯಿಂದ ಬಾಣಲೆಗೆ;

ಈಗಾಗಲೇ ಖಾಸಗೀ ಶಾಲೆಗಳು, ಖಾಸಗೀ ಆಸ್ಪತ್ರೆಗಳು, ಖಾಸಗೀ ವಿಮಾನಗಳು ಹೀಗೆ ಖಾಸಗಿಕರಣದಿಂದ ಬಳಲಿಹೋಗಿರುವ ಜನಕ್ಕೆ ಸರ್ಕಾರ ಮತ್ತೊಂದು ಹೊಡೆತ ನೀಡಿದೆ.

ಭಾರತೀಯ ರೈಲ್ವೆಯಿಂದ ಸುಮಾರು 12 ಲಕ್ಷ ರೈಲ್ವೆ ಸಿಬ್ಬಂದಿ ಜೀವನ ರೂಪಿಸಿಕೊಂಡಿದ್ದಾರೆ. ಇದೀಗ ಖಾಸಗಿ ರೈಲುಗಳ ಸಂಚಾರದಿಂದ ಮುಂದಿನ ವರ್ಷಗಳಲ್ಲಿ ಈ 12 ಲಕ್ಷ ನೌಕರರ ಜೀವನೋಪಾಯದ ಪ್ರಶ್ನೆ ಎದುರಾಗುತ್ತದೆ. ಹಲವು ವಲಯಗಳಲ್ಲಿ ಖಾಸಗೀಕರಣದಿಂದ ಸಾವಿರಾರು ಸರ್ಕಾರಿ ಉದ್ಯೋಗ ನಷ್ಟ ಆದ ಉದಾಹರಣೆಗಳು ನಮ್ಮ ಕಣ್ಣಮುಂದೆಯೇ ಇವೆ. ಇನ್ನು ಖಾಸಗಿ ಪ್ಯಾಸೆಂಜರ್ ರೈಲು ಓಡುವುದರಿಂದ ಮಾಸಿಕ ಪಾಸ್ ಸೇರಿದಂತೆ ಸರ್ಕಾರ ನೀಡುತ್ತಿದ್ದ ರಿಯಾಯ್ತಿ ಟಿಕೆಟ್‍ಗಳಿಗೆ ಕೂಡ ಕುತ್ತು ಬೀಳಲಿದೆ.

ಮೊದಲಿಗೆ ಸಣ್ಣ ಪ್ರಮಾಣದಲ್ಲಿ ಆರಂಭವಾಗಲಿರುವ ಖಾಸಗಿ ರೈಲು ಸಂಚಾರ, ತದನಂತರ ರೈಲ್ವೆ ಇಲಾಖೆಯ ರೈಲುಗಳು ಸರಿಯಾದ ಸಮಯಕ್ಕೆ ದೊರಕದಿರುವುದು ಸೇರಿದಂತೆ ಸಾಕಷ್ಟು ಸಮಸ್ಯೆಗಳು ಉದ್ಭವಿಸಲಿದ್ದು (ಈಗ ಇರುವ ಸಣ್ಣ ಸಮಸ್ಯೆಗಳನ್ನು ಮಾಧ್ಯಮಗಳ ಮೂಲಕ ಬೃಹತ್ತಾಗಿ ಬಿಂಬಿಸಿ) ಪ್ರಯಾಣಿಕರು ಖಾಸಗಿ ರೈಲುಗಳಲ್ಲಿ ಸಂಚಾರ ಮಾಡಬೇಕಾದ ಅನಿವಾರ್ಯತೆಯನ್ನು ಸೃಷ್ಟಿಮಾಡಲಾಗುತ್ತದೆ. ಬಹುತೇಕ ಮಾರ್ಗಗಳಿಗೆ ಕೇವಲ ಖಾಸಗಿ ರೈಲುಗಳನ್ನು ಬಿಡುವ ಮೂಲಕ, ಪ್ರಯಾಣಿಕರಿಗೆ ಹೊರೆಯಾದರೂ ಖಾಸಗಿ ಬಂಡವಾಳದಾರರಿಗೆ ಅನುಕೂಲ ಮಾಡಿಕೊಡುವ ಸಂದರ್ಭ ಬರಬಹುದು. ಟಿಕೆಟ್ ದರ ನಿಗದಿ ಮಾಡಲು ಸರ್ವಸ್ವತಂತ್ರರು ಎಂದು ಈಗಾಗಲೇ ತಿಳಿಸಲಾಗಿದೆ. ಅಂದರೆ ಪೆಟ್ರೋಲ್, ಡೀಸೆಲ್ ದರ ಏರಿಕೆಯನ್ನು ಒಮ್ಮೆ ಜ್ಞಾಪಕ ಮಾಡಿಕೊಂಡರೆ ಮುಂದಿನ ದಿನಗಳ ಪರಿಸ್ಥಿತಿ ಹೇಗಿರಲಿದೆ ಎನ್ನುವ ಲೆಕ್ಕಾಚಾರ ಕಣ್ಣ ಮುಂದೆ ಹಾದು ಹೋಗುತ್ತದೆ.

ಇದನ್ನೂ ಓದಿ: 40 ಐಟಿಐಗಳ ಖಾಸಗೀಕರಣಕ್ಕೆ ಮುಂದಾದ ಯೋಗಿ ಸರ್ಕಾರ: ವಿದ್ಯಾರ್ಥಿಗಳ ತೀವ್ರ ಪ್ರತಿಭಟನೆ

ರೈಲು, ಬಡವರ ಸಂಚಾರಕ್ಕೆ ಹೇಳಿ ಮಾಡಿಸಿದ್ದ ಸಂಚಾರ ವ್ಯವಸ್ಥೆ. ಆದರೆ ಮುಂದಿನ ದಿನಗಳಲ್ಲಿ ಮಾಸಿಕ ಪಾಸ್ ಅಷ್ಟೇ ಅಲ್ಲ, ಬೇರೆ ಎಲ್ಲಾ ಸೌಲಭ್ಯಗಳಿಗೂ ಕತ್ತರಿ ಬೀಳಲಿದೆ. ಜೊತೆಗ ಖಾಸಗಿ ಬಸ್ ಲಾಬಿ ನಡೆಯುವ ರೀತಿಯಲ್ಲೇ ಮುಂದಿನ ದಿನಗಳಲ್ಲಿ ಖಾಸಗಿ ರೈಲು ಕಂಪನಿಗಳ ಲಾಬಿ ನಡೆಯಲಿದೆ. 30 ವರ್ಷದ ತನಕ ಹೆದ್ದಾರಿಯನ್ನು ನಿರ್ವಹಣೆ ಮಾಡಬೇಕು ಎಂದು ಒಪ್ಪಂದ ಮಾಡಿಕೊಂಡು ಜೀವನ ಪರ್ಯಂತ ಟೋಲ್ ಸಂಗ್ರಹಿಸುವ ಖಾಸಗಿ ಕಂಪನಿಗಳಂತೆಯೇ ಸುಲಿಗೆ ಮಾಡುವುದು ಶತಸಿದ್ಧ ಎನ್ನಬಹುದು.

ಇನ್ನು, ಕಡಿಮೆ ನಿರ್ವಹಣೆ, ಕಡಿಮೆ ಸಾಗಣೆ ಸಮಯ, ಉದ್ಯೋಗ ಸೃಷ್ಟಿಯನ್ನು ಹೆಚ್ಚಿಸುವುದು, ಸುರಕ್ಷತೆ ಹಾಗೂ ಪ್ರಯಾಣಿಕರಿಗೆ ವಿಶ್ವ ದರ್ಜೆಯ ಪ್ರಯಾಣದ ಅನುಭವವನ್ನು ಒದಗಿಸುವ ಸಲುವಾಗಿ ಖಾಸಗಿ ಹೂಡಿಕೆದಾರರಿಗೆ ಅವಕಾಶ ನೀಡಲಾಗುತ್ತದೆ ಎಂದು ಹೇಳಿಕೊಂಡು ಪ್ರಧಾನಿ ನರೇಂದ್ರ ಮೋದಿ ಅತ್ಯಾಪ್ತ ಬಳಗದ ಉದ್ಯಮಿಗಳೇ ಸರ್ಕಾರ ಘೋಷಿಸಿರುವ ಈ ಬಿಡ್ಡಿಂಗ್ ಪಡೆಯುವ ಎಲ್ಲಾ ಸಾಧ್ಯತೆಗಳಿವೆ ಅಥವಾ ಆ ಬಿಡ್ಡಿಂಗ್‍ನಲ್ಲಿ ಬಿಜೆಪಿಗೆ ಆಪ್ತರಾಗಿರುವ ಉದ್ಯಮಿಗಳು ಷೇರು ಪಡೆಯುವ ಸಾಧ್ಯತೆಯೂ ಇದೆ. ಖಾಸಗೀಕರಣ ಎಂದರೆ ಅಲ್ಲಿ ಲಾಭವಿಲ್ಲದೇ ಯಾವ ಉದ್ಯಮಿಯೂ ಏನೂ ಮಾಡಲಾರ. ಹಾಗಾಗಿ “ರೈಲ್ವೇ ಸರ್ವೀಸಿನಿಂದ ರೈಲ್ವೇ ಬಿಜಿನೆಸ್” ಆಗುವುದರಲ್ಲಿ ಅನುಮಾನವಿಲ್ಲ.

ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು, ವಿಶ್ವದರ್ಜೆ ರೈಲಿನಲ್ಲಿ ಸಂಚಾರ ಮಾಡಬಹುದು ಎಂದು ಬೀಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ಸಾಮಾನ್ಯ ಜನರ ಬದುಕು ಈಗಾಗಲೇ ಇರುವ ಸಮಸ್ಯೆಗಳೊಟ್ಟಿಗೆ ಇದೂ ಸೇರಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗುತ್ತದೆ. ಬದುಕು ದುಬಾರಿಯಾಗುತ್ತದೆ.

ಇದನ್ನೂ ಓದಿ:ಖಾಸಗೀಕರಣದ ವಿರುದ್ಧ ಬಿಪಿಸಿಎಲ್ ನೌಕರರಿಂದ 48 ಗಂಟೆಗಳ ಮುಷ್ಕರ

ಯಾವ ಕಾಲದಲ್ಲೂ ಪ್ರಭುತ್ವಗಳಿಗೆ ಜನಸಾಮಾನ್ಯರ ಚಿಂತೆ ಇದ್ದಂತಿಲ್ಲ. ಹಾಗಾಗಿಯೇ ತಾವು ವಿರೋಧ ಪಕ್ಷದಲ್ಲಿದ್ದಾಗ ಆಡಳಿತ ಪಕ್ಷ ಜಾರಿಗೆ ತರುವ ಕಾನೂನು-ಕಾಯ್ದೆಗಳ ಬಗ್ಗೆ ಅಸಹಕಾರ ತೋರಿ, ಪ್ರತಿಭಟಿಸುತ್ತಿದ್ದವರು, ತಾವು ಅಧಿಕಾರಕ್ಕೆ ಬಂದ ನಂತರ ಅದೇ ಕೆಲಸವನ್ನ ಇನ್ನೂ ಅಚ್ಚುಕಟ್ಟಾಗಿ ಮಾಡುತ್ತಾರೆ. 15 ವರ್ಷಗಳ ಹಿಂದೆಯೇ ರೈಲ್ವೇ ಖಾಸಗೀಕರಣದ ಕೆಲಸ ನಡೆದಾಗ ಇದೇ ಬಿಜೆಪಿ ಪಕ್ಷ ವಿರೋಧಿಸಿತ್ತು. ಆದರೆ ಈಗ ಬಿಜೆಪಿ ಅಧಿಕಾರದ ಗದ್ದುಗೆ ಏರಿದ್ದು ಗಾಯದ ಮೇಲೆ ಬರೆ ಎಳೆಯುತ್ತಿದೆ. ಅದರಲ್ಲೂ 2014 ರಿಂದ ಈಚೆಗೆ ಸರ್ಕಾರಿ ಒಡೆತನದ ಉದ್ಯಮಗಳನ್ನು ಖಾಸಗಿಯವರಿಗೆ ಮಾರಾಟ ಮಾಡುತ್ತಿರುವುದು ಹೆಚ್ಚಾಗುತ್ತಲೇ ಇದೆ. ಇನ್ನೂ ಕಳವಳಕಾರಿಯಾದ ವಿಷಯವೆಂದರೆ ರೈಲ್ವೇ ಇಲಾಖೆಯಲ್ಲಿ ಈಗಾಗಲೇ ದುಡಿಯುತ್ತಿರುವವರಿಗೆ ಇದರ ಪರಿವೆಯೇ ಇಲ್ಲದಿರುವುದು. ಇಷ್ಟು ದೊಡ್ಡ ಮತ್ತು ಲಾಭದಾಯಕ ರೈಲ್ವೇ ಸೇವೆಯನ್ನು ಖಾಸಗೀಕರಣಗೊಳಿಸುವ ಉದ್ದೇಶವಾದರೂ ಏನು? ಇದರ ವಿರುದ್ಧ ಸಾಕಷ್ಟು ಹೋರಾಟಗಳೂ ನಡೆದಿವೆಯಾದರೂ ಅವು ದೇಶದಾದ್ಯಂತ ಸಂಘಟಿತವಾಗಿ ಆಗಿಲ್ಲ. ಎಲ್ಲಿಯವರೆಗೆ ದೇಶದ ಮತ್ತು ಸಾಮಾನ್ಯ ಜನರ ಸಮಸ್ಯೆ ನಮ್ಮದಲ್ಲ ಎಂದು ಈ ನಾಗರಿಕ ಸಮಾಜ ಸುಮ್ಮನಿರುತ್ತದೆಯೋ ಅಲ್ಲಿಯವರೆಗೂ ಇಂತಹ ದಬ್ಬಾಳಿಕೆಗಳಿಗೆ ಕೊನೆಯಿಲ್ಲ.

ಹಾಗಾಗಿ, ರೈಲ್ವೇ ಖಾಸಗೀಕರಣದ ವಿರುದ್ಧದ ಅಭಿಯಾನ ಸಮಿತಿಯೊಂದು ರಚನೆಯಾಗಿದ್ದು, ಆನ್‌ಲೈನ್‌ನಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿದೆ. ಇದಕ್ಕೆ ನಿಮ್ಮ ಸಮ್ಮತಿಯಿದ್ದರೆ, ನೀವೂ ಈ ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗವಹಿಸಬಹುದು.

ಇದರಲ್ಲಿ ಭಾಗವಹಿಸಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಬ್ಯಾಂಕುಗಳ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...