Homeಮುಖಪುಟಕೇಂದ್ರದ 82 ಕಾರ್ಯದರ್ಶಿಗಳಲ್ಲಿ ನಾಲ್ವರು ಮಾತ್ರ ಪರಿಶಿಷ್ಟ ಸಮುದಾಯಕ್ಕೆ ಸೇರಿದವರು: ಸಚಿವ ಜಿತೇಂದ್ರ ಸಿಂಗ್

ಕೇಂದ್ರದ 82 ಕಾರ್ಯದರ್ಶಿಗಳಲ್ಲಿ ನಾಲ್ವರು ಮಾತ್ರ ಪರಿಶಿಷ್ಟ ಸಮುದಾಯಕ್ಕೆ ಸೇರಿದವರು: ಸಚಿವ ಜಿತೇಂದ್ರ ಸಿಂಗ್

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿವಿಧ ಸಚಿವಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 82 ಕಾರ್ಯದರ್ಶಿಗಳಲ್ಲಿ, ಕೇವಲ ನಾಲ್ವರು ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ಸಮುದಾಯಗಳಿಗೆ ಸೇರಿದವರಾಗಿದ್ದಾರೆ ಎಂದು ರಾಜ್ಯಸಭೆಗೆ ಸಚಿವ ಜಿತೇಂದ್ರ ಸಿಂಗ್ ಮಾಹಿತಿ ನೀಡಿದರು.

ಎಲ್ಲ ಸಚಿವಾಲಯಗಳಲ್ಲಿ ಎಸ್‌ಸಿ / ಎಸ್‌ಟಿಗೆ ಸೇರಿದ ಕಾರ್ಯದರ್ಶಿಗಳ ಸಂಖ್ಯೆ ಎಷ್ಟು ಎಂದು ಸಿಪಿಐ(ಎಂ) ಸಂಸದ ಕೆ.ಸೋಮಪ್ರಸಾದ್ ಕೇಳಿದ್ದರು. ಈ ಪ್ರಶ್ನೆಗೆ ಉತ್ತರಿಸಿದ ಸಚಿವ ಜಿತೇಂದ್ರ ಸಿಂಗ್, ವಿಕಲಚೇತನರ ಸಬಲೀಕರಣ ಇಲಾಖೆ, ಭೂ ಸಂಪನ್ಮೂಲ ಇಲಾಖೆ, ಔಷಧ ಇಲಾಖೆ ಮತ್ತು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದಲ್ಲಿ ಎಸ್‌ಸಿ / ಎಸ್‌ಟಿ ಸಮುದಾಯಕ್ಕೆ ಸೇರಿದ ತಲಾ ಒಬ್ಬೊಬ್ಬ ಕಾರ್ಯದರ್ಶಿ ಇದ್ದಾರೆ. ಅಂದರೆ ಕೇವಲ ನಾಲ್ಕು ಇಲಾಖೆಗಳಲ್ಲಿ ಕೇವಲ ನಾಲ್ಕು ಎಸ್ ಸಿ, ಎಸ್ ಟಿ ಸಮುದಾಯಕ್ಕೆ ಸೇರಿದ ಕಾರ್ಯದರ್ಶಿಗಳಿದ್ದಾರೆ ಎಂದು ಮಾಹಿತಿ ನೀಡಿದರು.

ದೇಶದ ಪ್ರತಿಷ್ಠಿತ 20 IIM ಗಳಲ್ಲಿ ಕೇವಲ 11 ಜನ ದಲಿತ ಪ್ರಾಧ್ಯಾಪಕರು ಮಾತ್ರ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವ ರಮೇಶ್ ಪ್ರೋಖ್ರಿಯಾಲ್‌ ಉತ್ತರಿಸಿದ್ದಾರೆ. ಅತಿದೊಡ್ಡ IIM ಗಳು ಸೇರಿದಂತೆ 12 IIM ಗಳಲ್ಲಿ ಒಬ್ಬರೂ ದಲಿತ ಪ್ರಾಧ್ಯಾಪಕರಿಲ್ಲ ಎಂಬ ಸತ್ಯ ಬೆಳಕಿಗೆ ಬಂದಿದೆ.

ಈ ಬೆಳವಣಿಗೆಯ ನಂತರ ದೇಶದ ಎಲ್ಲಾ IIM ಗಳು ಸಹ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್‌ ಅನುಸರಿಸುವಂತೆ ಎಂಎಚ್‌ಆರ್‌ಡಿ ಸಚಿವರು ಸುತ್ತೋಲೆ ಹೊರಡಿಸಿದ್ದಾರೆ. 2019ರ ಕಾಯ್ದೆಯಂತೆ ಎಸ್ಸಿ 15%, ಎಸ್ಟಿ 7.5%, ಒಬಿಸಿ 27% ಮತ್ತು ಇತರ ಆರ್ಥಿಕ ಹಿಂದುಳಿದ ಸಮುದಾಯಗಳಿಗೆ 10% ಮೀಸಲಾತಿಯನ್ನು ಕಡ್ಡಾಯಗೊಳಿಸಬೇಕಾಗಿದೆ.

ಆದರೆ IIM ಗಳ ನಿರ್ದೇಶಕರು ಕೇಂದ್ರದ ಈ ನಿರ್ಧಾರವನ್ನು ಪಾಲಿಸಲು ಪ್ರತಿರೋಧ ವ್ಯಕ್ತಪಡಿಸಿದ್ದಾರೆ ಎಂದು ದಿ ಹಿಂದೂ ಪತ್ರಿಕೆ ವರದಿ ಮಾಡಿದೆ.

2011 ರ ಜನಗಣತಿಯ ಅಂಕಿ ಅಂಶಗಳ ಪ್ರಕಾರ 20.14 ಕೋಟಿ ಜನ ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದಾರೆ. ಶೇ. 16.6 ರಷ್ಟು ದಲಿತರು, ಶೇ. 8.6 ರಷ್ಟು ಎಸ್‌ಟಿ ಜನರಿದ್ದಾರೆ ಎಂದು ಮಾಹಿತಿ ಲಭ್ಯವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...