Homeಮುಖಪುಟಮನುಷ್ಯನಾದವನಿಗೆ ಮಾತ್ರ ದುಃಖಿಸಲು ಸಾಧ್ಯ: ಸಾವರ್ಕರ್‌ ವಿವಾದದ ಬಳಿಕ ರಾಹುಲ್‌ರನ್ನು ಹೊಗಳಿದ ಸಂಜಯ್‌ ರಾವುತ್‌

ಮನುಷ್ಯನಾದವನಿಗೆ ಮಾತ್ರ ದುಃಖಿಸಲು ಸಾಧ್ಯ: ಸಾವರ್ಕರ್‌ ವಿವಾದದ ಬಳಿಕ ರಾಹುಲ್‌ರನ್ನು ಹೊಗಳಿದ ಸಂಜಯ್‌ ರಾವುತ್‌

- Advertisement -
- Advertisement -

ಉದ್ಧವ್‌ ಠಾಕ್ರೆ ನೇತೃತ್ವದ ಶಿವಸೇನಾ ಬಣದ ನಾಯಕ ಸಂಜಯ್ ರಾವುತ್‌ ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕರೆ ಮಾಡಿ ಯೋಗಕ್ಷೇಮ ವಿಚಾರಿಸಿದ್ದಾರೆ. ಆರ್‌ಎಸ್‌ಎಸ್‌ ನಾಯಕ ವಿ.ಡಿ.ಸಾವರ್ಕರ್‌ ಕುರಿತು ರಾಹುಲ್ ಆಡಿದ್ದ ಮಾತುಗಳಿಂದಾಗಿ ಮೈತ್ರಿ ಪಕ್ಷಗಳಲ್ಲಿ ಒಡಕು ಮೂಡಿಸುತ್ತಿದೆ ಎಂದು ಚರ್ಚೆಯಾಗುತ್ತಿರುವ ಹೊತ್ತಿನಲ್ಲಿ ಸಂಜಯ್‌ ರಾವುತ್‌ ಅವರು ರಾಹುಲ್‌ ಗಾಂಧಿಯವರನ್ನು ಹೊಗಳಿದ್ದಾರೆ.

“ನನಗೆ ಕರೆ ಮಾಡಿ ಮಾತನಾಡಿರುವುದು ರಾಹುಲ್ ಗಾಂಧಿಯವರ ಮಾನವೀಯತೆಯನ್ನು ತೋರುತ್ತದೆ. ಬಿಡುವಿಲ್ಲದ ತಮ್ಮ ಯಾತ್ರೆಯ ನಡುವೆಯೂ ತಮ್ಮ ರಾಜಕೀಯ ಸಹೋದ್ಯೋಗಿಗೆ ಕಾಳಜಿ ವ್ಯಕ್ತಪಡಿಸಿದ್ದಾರೆ” ಎಂದು ರಾವುತ್‌ ಮೆಚ್ಚುಗೆ ಸೂಚಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾರತ್ ಜೋಡೋ ಯಾತ್ರೆಯಲ್ಲಿ ನಿರತರಾಗಿದ್ದಾಗಲೂ ರಾಹುಲ್ ರಾತ್ರಿ ನನಗೆ ಕರೆ ಮಾಡಿದರು. ಅವರು ನನ್ನ ಆರೋಗ್ಯದ ಬಗ್ಗೆ ಕೇಳಿದರು. ‘ನಿಮ್ಮ ಬಗ್ಗೆ ನಮಗೆ ಚಿಂತೆಯಾಗಿದೆ’ ಎಂದರು. ರಾಜಕೀಯ ಮಿತ್ರನನ್ನು ನಕಲಿ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ದುಃಖಿಸಲು ಸಾಧ್ಯವಾಗುವುದು ಮನುಷ್ಯನಿಗೆ ಮಾತ್ರ. 110 ದಿನಗಳ ಕಾಲ ಜೈಲಿನಲ್ಲಿ ಚಿತ್ರಹಿಂಸೆ ನೀಡಲಾಯಿತು” ಎಂದು ಸಂಜಯ್ ರಾವುತ್ ಮರಾಠಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಇಂಗ್ಲಿಷ್‌ನಲ್ಲಿ ಮತ್ತೊಂದು ಪೋಸ್ಟ್ ಮಾಡಿರುವ ರಾವುತ್‌, “ಕೆಲವು ವಿಷಯಗಳ ಬಗ್ಗೆ ಬಲವಾದ ಭಿನ್ನಾಭಿಪ್ರಾಯಗಳ ನಡುವೆಯೂ, ನಿಮ್ಮ ರಾಜಕೀಯ ಸಹೋದ್ಯೋಗಿಯನ್ನು ವಿಚಾರಿಸುವುದು ಮಾನವೀಯತೆಯ ಸಂಕೇತವಾಗಿದೆ. ರಾಜಕೀಯದ ಕಹಿ ಗಳಿಗೆಯಲ್ಲಿ, ಇಂತಹ ಕ್ರಿಯೆಗಳು ಅಪರೂಪವಾಗುತ್ತಿವೆ. ರಾಹುಲ್‌ಜಿ ತಮ್ಮ ಯಾತ್ರೆಯನ್ನು ಪ್ರೀತಿ ಮತ್ತು ಸಹಾನುಭೂತಿಯ ಮೇಲೆ ಕೇಂದ್ರೀಕರಿಸಿದ್ದಾರೆ. ಹೀಗಾಗಿ ಯಾತ್ರೆಗೆ ಭಾರೀ ಪ್ರತಿಕ್ರಿಯೆ ಸಿಗುತ್ತಿದೆ” ಎಂದು ರಾವುತ್‌ ಹೊಗಳಿದ್ದಾರೆ.

ಸಾವರ್ಕರ್‌ ಕುರಿತು ರಾಹುಲ್‌ ವಾಗ್ದಾಳಿ ನಡೆಸಿದ್ದರು. ಹೀಗಾಗಿ ಸೈದ್ಧಾಂತಿಕವಾಗಿ ಭಿನ್ನಾಭಿಪ್ರಾಯ ಹೊಂದಿರುವ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಯನ್ನು ಮುರಿಯುವ ಬಗ್ಗೆ ಠಾಕ್ರೆ ಬಣವು ಸುಳಿವು ನೀಡಿತ್ತು. ಇದಾದ ನಂತರ ರಾಹುಲ್ ಗಾಂಧಿಯವರ ಕಾಳಜಿಯ ಬಗ್ಗೆ ಶಿವಸೇನಾ ನಾಯಕ ಸಂಜಯ್‌ ರಾವುತ್ ಮಾಡಿರುವ ಪೋಸ್ಟ್‌- ಈ ವಿವಾದವನ್ನು ಸಮತೂಗಿಸುವ ಸೂಚನೆಯಂತೆ ಕಾಣುತ್ತಿದೆ.

ಭಾರತ್ ಜೋಡೋ ಯಾತ್ರೆಯು ಮಹಾರಾಷ್ಟ್ರಕ್ಕೆ ಕಾಲಿಟ್ಟ ಬಳಿಕ ರಾಹುಲ್ ಗಾಂಧಿಯವರು ಮಾತನಾಡುತ್ತಾ, “ವಿ.ಡಿ.ಸಾವರ್ಕರ್‌ರವರು ಜೈಲಿನಲ್ಲಿದ್ದಾಗ ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆದಿದ್ದರು” ಎಂದು ಟೀಕಿಸಿದ್ದರು. “ಬ್ರಿಟಿಷರಿಗೆ ಕ್ಷಮೆ ಕೋರುವ ಮೂಲಕ ಮಹಾತ್ಮಾ ಗಾಂಧಿ, ಜವಾಹರಲಾಲ್ ನೆಹರೂ ಮತ್ತು ಸರ್ದಾರ್ ಪಟೇಲ್ ಅವರಂತಹ ಸ್ವಾತಂತ್ರ್ಯದ ಐಕಾನ್‌ಗಳಿಗೆ ಸಾವರ್ಕರ್‌‌ ದ್ರೋಹ ಮಾಡಿದ್ದರು” ಎಂದು ಬೇಸರ ವ್ಯಕ್ತಪಡಿಸಿದ್ದರು.

ಈ ಹೇಳಿಕೆಗಳು ಶಿವಸೇನೆಯ ಎರಡೂ ಬಣಗಳನ್ನು ಕೆರಳಿಸಿತು. ಕಾಂಗ್ರೆಸ್‌ನೊಂದಿಗಿನ ಸಂಬಂಧದ ಬಗ್ಗೆ ಪ್ರತಿಸ್ಪರ್ಧಿ ಏಕನಾಥ್ ಶಿಂಧೆ ಬಣ ಕುಟುಕಿತ್ತು. ಕಾಂಗ್ರೆಸ್ ಜೊತೆಗಿನ ಮೈತ್ರಿ ವಿಚಾರವಾಗಿ ಉದ್ಧವ್‌ ಠಾಕ್ರೆ ಬಣವು ಟೀಕೆಯನ್ನು ಎದುರಿಸಿತು.

ಉದ್ಧವ್ ಠಾಕ್ರೆ ಪ್ರತಿಕ್ರಿಯಿಸಿ, “ನಮ್ಮ ಪಕ್ಷವು ಸಾವರ್ಕರ್ ಬಗ್ಗೆ ಅಪಾರವಾದ ಗೌರವ ಹೊಂದಿದೆ” ಎಂದಿದ್ದರು. ಎನ್‌ಡಿಟಿವಿ ಜೊತೆ ಮಾತನಾಡಿದ್ದ ಸಂಜಯ್ ರಾವುತ್, “ಸಾವರ್ಕರ್ ಅವರ ವಿಷಯ ನಮಗೆ ಮುಖ್ಯವಾಗಿದೆ. ನಾವು ಸಾವರ್ಕರ್‌‌ ಸಿದ್ಧಾಂತವನ್ನು ನಂಬುತ್ತೇವೆ. ಕಾಂಗ್ರೆಸ್‌ ಈ ವಿಷಯವನ್ನು ತರಬಾರದಿತ್ತು” ಎಂದು ಅಭಿಪ್ರಾಯಪಟ್ಟಿದ್ದರು.

ಇದನ್ನೂ ಓದಿರಿ: ಚಿಕ್ಕಮಗಳೂರು: ‘ಕಳ್ಳ’ ಎಂದು ಕರೆದು ಬಿಜೆಪಿ ಶಾಸಕರನ್ನು ಅಟ್ಟಾಡಿಸಿದ ಗ್ರಾಮಸ್ಥರು!

ಪಕ್ಷದ ಮತ್ತೊಬ್ಬ ನಾಯಕ, ಶಿವಸೇನಾ ಸಂಸದ ಅರವಿಂದ್ ಸಾವಂತ್ ಒಂದು ಹೆಜ್ಜೆ ಮುಂದೆ ಹೋಗಿ, “ನಾವು ಎಂವಿಎ (ಮಹಾ ವಿಕಾಸ್ ಅಘಾಡಿ ಒಕ್ಕೂಟದಲ್ಲಿ) ಮುಂದುವರಿಯುವುದಿಲ್ಲ ಎಂದು ಸಂಜಯ್ ರಾವುತ್ ಹೇಳಿಕೆ ನೀಡಿದ್ದಾರೆ. ಇದು ಪಕ್ಷದಿಂದ ನೀಡಲಾದ ಗಂಭೀರ ಪ್ರತಿಕ್ರಿಯೆಯಾಗಿದೆ. ಉದ್ಧವ್ ಠಾಕ್ರೆ ಅವರು ಶೀಘ್ರದಲ್ಲೇ ಹೇಳಿಕೆ ನೀಡಲಿದ್ದಾರೆ” ಎಂದಿದ್ದರು.

ವಿವಾದ ಭುಗಿಲೆದ್ದ ಬಳಿಕ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಪ್ರತಿಕ್ರಿಯಿಸಿ, “ರಾಹುಲ್ ಗಾಂಧಿ ಯಾರನ್ನೂ ಅವಮಾನಿಸಿಲ್ಲ. ಆದರೆ ಐತಿಹಾಸಿಕ ಸತ್ಯವನ್ನು ಮಾತ್ರ ಹೇಳಿದ್ದಾರೆ. ನಾನು ಇಂದು ಸಂಜಯ್ ರಾವುತ್ ಅವರೊಂದಿಗೆ ಮಾತನಾಡಿದ್ದೇನೆ. ನಾವು ಭಿನ್ನಾಭಿಪ್ರಾಯವನ್ನು ಒಪ್ಪಿಕೊಳ್ಳುತ್ತೇವೆ. ಇದು ಮಹಾ ವಿಕಾಸ್ ಅಘಾಡಿಯನ್ನು ದುರ್ಬಲಗೊಳಿಸುತ್ತದೆ ಎಂಬುದು ಸುಳ್ಳು. ಈ ಹೇಳಿಕೆ ಮೈತ್ರಿ ಮೇಲೆ ಪರಿಣಾಮ ಬೀರುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...