Homeಮುಖಪುಟಒಂದೇ ಕ್ಷೇತ್ರದಲ್ಲಿ ಸ್ಪರ್ಧೆ: ಸ್ವಕ್ಷೇತ್ರ ಬಿಟ್ಟು ನಂದಿಗ್ರಾಮದಲ್ಲಿ ಕಣಕ್ಕಿಳಿಯಲಿರುವ ಮಮತಾ ಬ್ಯಾನರ್ಜಿ!

ಒಂದೇ ಕ್ಷೇತ್ರದಲ್ಲಿ ಸ್ಪರ್ಧೆ: ಸ್ವಕ್ಷೇತ್ರ ಬಿಟ್ಟು ನಂದಿಗ್ರಾಮದಲ್ಲಿ ಕಣಕ್ಕಿಳಿಯಲಿರುವ ಮಮತಾ ಬ್ಯಾನರ್ಜಿ!

291 ಕ್ಷೇತ್ರಗಳಲ್ಲಿ ಟಿಎಂಸಿಯು 50 ಮಹಿಳೆಯರಿಗೆ, 42 ಮುಸ್ಲಿಮರಿಗೆ, 79 ಪರಿಶಿಷ್ಟ ಜಾತಿ & 17 ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ.

- Advertisement -
- Advertisement -

ಭಾರೀ ಕುತೂಹಲ ಹುಟ್ಟಿಸಿರುವ ಪಶ್ಛಿಮ ಬಂಗಾಳ ಚುನಾವಣೆಯಲ್ಲಿ ಸ್ವಕ್ಷೇತ್ರ ಬಿಟ್ಟು ನಂದಿಗ್ರಾಮದಲ್ಲಿ ಕಣಕ್ಕಿಳಿಯುವುದಾಗಿ ಬಂಗಾಳ ಸಿಎಂ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ. ಒಟ್ಟು 294 ಕ್ಷೇತ್ರಗಳಲ್ಲಿ 291 ಕ್ಷೇತ್ರಗಳಿಗೆ ಟಿಎಂಸಿ ಅಭ್ಯರ್ಥಿಗಳನ್ನು ಇಂದು ಅವರು ಘೋಷಿಸಿದ್ದಾರೆ.

ನಂದಿಗ್ರಾಮವು ಈ ಹಿಂದೆ ಟಿಎಂಸಿಯ ಪ್ರಭಾವಿ ನಾಯಕನಾಗಿದ್ದ ಮತ್ತು ಈಗ ಬಿಜೆಪಿಗೆ ಪಕ್ಷಾಂತರ ಮಾಡಿರುವ ಸುವೇಂಧು ಅಧಿಕಾರಿಯ ಪ್ರಬಲ ನೆಲೆಯಾಗಿದೆ. ಸದ್ಯ ಕೋಲ್ಕತ್ತಾದ ಭವಾನಿಪೋರ್ ಪ್ರತಿನಿಧಿಸುತ್ತಿರುವ ಮಮತಾ ಬ್ಯಾನರ್ಜಿಯವರು ತಮ್ಮ ಸುರಕ್ಷಿತ ಸ್ಥಾನವನ್ನು ತೆರವುಗೊಳಿಸಿ ಕಠಿಣ ನಂದಿಗ್ರಾಮದಲ್ಲಿ ಸ್ಪರ್ಧಿಸುವುದಾಗಿ ಮತ್ತು ಅದೊಂದೇ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ತೀರ್ಮಾನಿಸಿದ್ದಾರೆ.

ಟಿಎಂಸಿಯ ಅಭ್ಯರ್ಥಿಗಳಲ್ಲಿ ಮಹಿಳೆಯರಿಗೆ, ದಲಿತರಿಗೆ ಮತ್ತು ಮುಸ್ಲಿಮರಿಗೆ ಹೆಚ್ಚಿನ ಸೀಟುಗಳನ್ನು ನೀಡಲಾಗಿದೆ. 291 ಕ್ಷೇತ್ರಗಳಲ್ಲಿ 50 ಮಹಿಳೆಯರಿಗೆ, 42 ಮುಸ್ಲಿಮರಿಗೆ, 79 ಪರಿಶಿಷ್ಟ ಜಾತಿ ಮತ್ತು 17 ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ. 80 ವರ್ಷ ಮೇಲ್ಪಟ್ಟವರಿಗೆ ಟಿಕೆಟ್ ನೀಡಿಲ್ಲ.

ನಂದಿಗ್ರಾಮ ಸುವೇಂಧು ಅಧಿಕಾರಿಯವರ ಪ್ರಬಲ ನೆಲೆಯಾದ್ದರಿಂದ ಮಮತಾ ಬ್ಯಾನರ್ಜಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳು ಹರಿದಾಡಿದ್ದವು. ಅದಕ್ಕೆ ತೆರೆ ಎಳೆದಿರುವ ಮಮತಾ ಬ್ಯಾನರ್ಜಿ ತಾವು ತೆರವುಗೊಳಿಸುವ ಭವಾನಿಪೋರ್ ಕ್ಷೇತ್ರದಿಂದ ಅವರ ಸಂಪುಟದ ವಿದ್ಯುತ್ ಸಚಿವ ಸೋವಾಂಡೇಬ್ ಚಟ್ಟೋಪಾಧ್ಯಾಯರು ಸ್ಪರ್ಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ.

ಟಿಎಂಸಿ ತ್ಯಜಿಸಿ ಬಿಜೆಪಿ ಸೇರಿರುವ ಸುವೇಂಧು ಅಧಿಕಾರಿ ನಂದಿಗ್ರಾಮದ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ ಎನ್ನಲಾಗಿದೆ. ಅವರನ್ನು ಮಮತಾ ಬ್ಯಾನರ್ಜಿಯವರ ಬಲಗೈ ಎಂದು ಕರೆಯಲಾಗುತ್ತಿತ್ತು. ನಂದಿಗ್ರಾಮದಲ್ಲಿ ಟಾಟಾ ಕಂಪನಿಯ ಕಾರು ತಯಾರಿಕ ಘಟಕಕ್ಕಾಗಿ ರೈತರಿಂದ ಬಲವಂತವಾಗಿ ಭೂಮಿ ವಶಪಡಿಸಿಕೊಳ್ಳಲು ಮುಂದಾಗಿದ್ದಾಗ ಅದನ್ನು ವಿರೋಧಿಸಿ ಸುವೇಂಧು ಅಧಿಕಾರಿ ಟಿಎಂಸಿ ಅಭಿಯಾನದ ನೇತೃತ್ವ ವಹಿಸಿದ್ದರು. ಅವರು ನಿನ್ನೆಯ ಚುನಾವಣಾ ಪ್ರಚಾರದಲ್ಲಿ ಮಾತನಾಡಿ ಇಲ್ಲಿ ಮಮತಾ ಬ್ಯಾನರ್ಜಿ ಸ್ಪರ್ಧಿಸಿದರೆ ಅವರನ್ನು 50,000 ಮತಗಳ ಅಂತರದಿಂದ ಸೋಲಿಸುತ್ತೇನೆ ಎಂದಿದ್ದರು. ಆ ಸವಾಲು ಸ್ವೀಕರಿಸಿರುವ ಮಮತಾ ಬ್ಯಾನರ್ಜಿ ಅದೇ ಕ್ಷೇತ್ರದಲ್ಲಿ ಸ್ಪರ್ಧಿಸಲು ಮುಂದಾಗಿದ್ದಾರೆ. ಆದರೆ ಸುವೇಂಧು ಬಿಜೆಪಿ ಅಭ್ಯರ್ಥಿಯೇ ಎಂಬುದನ್ನು ಪ್ರಧಾನಿ ನಿರ್ಧರಿಸಲಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ನಂದಿಗ್ರಾಮ ನನ್ನ ಅದೃಷ್ಟದ ಕ್ಷೇತ್ರ. ಅದು ನನ್ನ ಹಿರಿಯ ಸಹೋದರಿಯಂತೆ. ನಾನು ಪ್ರತಿನಿಧಿಸುತ್ತಿರುವ ಭವಾನಿಪೋರ್ ಕಿರಿಯ ಸಹೋದರಿಯಿದ್ದಂತೆ. ನಾನು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಬಹುದು. ಅಥವಾ ನಂದಿಗ್ರಾಮವೊಂದರಲ್ಲೇ ಸ್ಪರ್ಧಿಸಲಿದ್ದು, ಭವಾನಿಪೋರ್‌ನಲ್ಲಿ ನಮ್ಮ ಪಕ್ಷದ ಇತರ ನಾಯಕರು ಸ್ಪರ್ಧಿಸಬಹುದು” ಎಂದು ಈ ಹಿಂದೆ ಮಮತಾ ಬ್ಯಾನರ್ಜಿ ಹೇಳಿದ್ದರು.

ಮೂರು ಕ್ಷೇತ್ರಗಳಿಲ್ಲಿ ಟಿಎಂಸಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲ್ಲ. ಅವುಗಳನ್ನು ಮೈತ್ರಿ ಪಕ್ಷಗಳಿಗೆ ಬಿಟ್ಟುಕೊಡಲು ಮಮತಾ ಬ್ಯಾನರ್ಜಿ ನಿರ್ಧರಿಸಿದ್ದಾರೆ.


ಇದನ್ನೂ ಓದಿ: ದೀದಿ ನಿಜವಾದ ಬಂಗಾಳಿ ಟೈಗರ್‌: ಮಮತಾ ಬ್ಯಾನರ್ಜಿಗೆ ಬೆಂಬಲ ನೀಡಿದ ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...