Homeಮುಖಪುಟಸರ್ವಾಧಿಕಾರಿ ಸರ್ಕಾರ ಮಾತ್ರ ಹೀಗಿರಲು ಸಾಧ್ಯ: ಯುಪಿ ಸರ್ಕಾರದ ವಿರುದ್ದ ರಾಜಸ್ಥಾನ ಸಿಎಂ

ಸರ್ವಾಧಿಕಾರಿ ಸರ್ಕಾರ ಮಾತ್ರ ಹೀಗಿರಲು ಸಾಧ್ಯ: ಯುಪಿ ಸರ್ಕಾರದ ವಿರುದ್ದ ರಾಜಸ್ಥಾನ ಸಿಎಂ

- Advertisement -
- Advertisement -

ವಿರೋಧ ಪಕ್ಷದ ನಾಯಕರನ್ನು ಕಾನೂನುಬಾಹಿರವಾಗಿ ಬಂಧಿಸುವುದು ಪ್ರಜಾಪ್ರಭುತ್ವ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಹೇಳಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಕಾಂಗ್ರೆಸ್‌ನ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಇತರರು ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಹತ್ಯೆಗೀಡಾದ ರೈತರ ಕುಟುಂಬಗಳನ್ನು ಭೇಟಿ ಮಾಡುವುದನ್ನು ತಡೆದ ಕ್ರಮವನ್ನು ಖಂಡಿಸಿದ್ದಾರೆ.

ಛತ್ತೀಸ್‌ಗಡದ ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ ಮತ್ತು ಪಂಜಾಬ್‌ ಉಪ ಮುಖ್ಯಮಂತ್ರಿ ಎಸ್. ಎಸ್. ರಾಂಧವಾ ಅವರನ್ನು ಬಿಜೆಪಿ ನೇತೃತ್ವದ ಉತ್ತರ ಪ್ರದೇಶ ಸರ್ಕಾರವು ರಾಜ್ಯ ಪ್ರವೇಶಿಸುವುದನ್ನು ತಡೆದಿದೆ ಎಂದು ಗೆಹ್ಲೋಟ್‌ ಹೇಳಿದ್ದಾರೆ.

“ಸರ್ವಾಧಿಕಾರಿ ಸರ್ಕಾರ ಮಾತ್ರ ಇದನ್ನು ಮಾಡಲು ಸಾಧ್ಯ. ಉತ್ತರ ಪ್ರದೇಶ ಆಡಳಿತಾರೂಢ ಬಿಜೆಪಿ ಪ್ರಜಾಪ್ರಭುತ್ವವನ್ನು ಕೊನೆಗೊಳಿಸಲು ಬಯಸುತ್ತಿದೆಯೇ? ಈ ರೀತಿಯಾದ ನಾಗರಿಕ ಹಕ್ಕುಗಳ ಉಲ್ಲಂಘನೆ ಸಂವಿಧಾನದ ಮನೋಭಾವಕ್ಕೆ ವಿರುದ್ಧವಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರೈತರ ವಿರುದ್ಧ ದೊಣ್ಣೆ ಎತ್ತಲು ಕಾರ್ಯಕರ್ತರಿಗೆ ಕರೆ ನೀಡಿದ ಹರ್ಯಾಣ ಸಿಎಂ: ವಿಡಿಯೋ ವೈರಲ್‌

“ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮತ್ತು ಇತರ ನಾಯಕರನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿರುವುದನ್ನು ನಾನು ಬಲವಾಗಿ ಖಂಡಿಸುತ್ತೇನೆ. ಅವರು ದೇಶದ ಪ್ರಮುಖ ವಿರೋಧ ಪಕ್ಷದ ನಾಯಕಿಯಾಗಿದ್ದು, ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ನಿನ್ನೆ ಹತ್ಯೆಗೀಡಾದ ರೈತರ ಕುಟುಂಬಗಳನ್ನು ಭೇಟಿ ಮಾಡಲು ಹೋಗುತ್ತಿದ್ದರು…ವಿರೋಧ ಪಕ್ಷಗಳ ನಾಯಕರನ್ನು ಕಾನೂನುಬಾಹಿರವಾಗಿ ಬಂಧಿಸುವುದು ಪ್ರಜಾಪ್ರಭುತ್ವ ಮೌಲ್ಯಗಳಿಗೆ ವಿರುದ್ಧವಾಗಿದೆ” ಎಂದು ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ.

ಪ್ರಿಯಾಂಕಾ ಗಾಂಧಿಯವರ ಬೆಂಗಾವಲನ್ನು ಲಖನೌದಲ್ಲಿ ಉತ್ತರ ಪ್ರದೇಶದ ಪೊಲೀಸರು ತಡೆದಿದ್ದರು.

“ನಿನ್ನೆ ಹಿಂಸಾಚಾರದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ಪ್ರಿಯಾಂಕಾ ಅವರು ನಿಲ್ಲಲಿದ್ದಾರೆ. ಕರ್ತವ್ಯ ನಿರ್ವಹಿಸುವುದಕ್ಕಾಗಿ ಅವರನ್ನು ತಡೆದಿರುವುದು ಅನ್ಯಾಯ” ಎಂದು ಗೆಹ್ಲೋಟ್ ಹೇಳಿದ್ದಾರೆ.

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಒಕ್ಕೂಟ ಸರ್ಕಾರದ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಮತ್ತು ಇತರ ಹಲವು ವ್ಯಕ್ತಿಗಳ ವಿರುದ್ಧ ಎಫ್‌ಐಆರ್‌‌ ದಾಖಲಿಸಲಾಗಿದೆ. ಹತ್ಯೆಗೀಡಾದ ಎಂಟು ಜನರಲ್ಲಿ ನಾಲ್ಕು ರೈತರಾಗಿದ್ದು, ನಾಲ್ಕು ಜನರು ಬಿಜೆಪಿ ಕಾರ್ಯಕರ್ತರಾಗಿದ್ದಾರೆ. ಅವರು ಬೆಂಗಾವಲಿನಲ್ಲಿ ಸಚಿವರನ್ನು ಸ್ವಾಗತಿಸಲು ಬಂದಿದ್ದರು.

ಇದನ್ನೂ ಓದಿ: ಯುಪಿ ರೈತರ ಹತ್ಯೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ- ಬಿಜೆಪಿ ವಿರುದ್ಧ ಆಕ್ರೋಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...