Homeಕರ್ನಾಟಕಅಂತಿಮ ಸೆಮಿಸ್ಟರ್ ಬಿಟ್ಟು ಉಳಿದೆಲ್ಲಾ‌ ವಿದ್ಯಾರ್ಥಿಗಳು ಪಾಸ್: ಸರ್ಕಾರದ ಮಹತ್ವದ ನಿರ್ಧಾರ

ಅಂತಿಮ ಸೆಮಿಸ್ಟರ್ ಬಿಟ್ಟು ಉಳಿದೆಲ್ಲಾ‌ ವಿದ್ಯಾರ್ಥಿಗಳು ಪಾಸ್: ಸರ್ಕಾರದ ಮಹತ್ವದ ನಿರ್ಧಾರ

ಪ್ರಸಕ್ತ ಶೈಕ್ಷಣಿಕ ವರ್ಷದ ಅಂತಿಮ ಸೆಮಿಸ್ಟರ್‌ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಯುಜಿಸಿ ಮಾರ್ಗಸೂಚಿ ಅನ್ವಯ ಸೆಪ್ಟೆಂಬರ್ ಅಂತ್ಯದೊಳಗೆ ಪರೀಕ್ಷೆ ನಡೆಸಲೂ ನಿರ್ಧರಿಸಿದೆ.

- Advertisement -
- Advertisement -

ಕೊರೊನಾ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರ ಕೈಕೊಂಡಿರುವ ರಾಜ್ಯ ಸರ್ಕಾರ 2019-20ನೇ ಸಾಲಿನಲ್ಲಿ ಎಂಜಿನಿಯರಿಂಗ್ ಸೇರಿ ಇತರ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಧ್ಯಂತರ ಸೆಮಿಸ್ಟರ್ (intermediate Semester) ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆಯೇ ಮುಂದಿನ ಹಂತಕ್ಕೆ ಉತ್ತೀರ್ಣಗೊಳಿಸುವುದಾಗಿ ಪ್ರಕಟಿಸಿದೆ. ಜೊತೆಗೆ, ಪ್ರಸಕ್ತ ಶೈಕ್ಷಣಿಕ ವರ್ಷದ ಅಂತಿಮ ಸೆಮಿಸ್ಟರ್‌ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಯುಜಿಸಿ ಮಾರ್ಗಸೂಚಿ ಅನ್ವಯ ಸೆಪ್ಟೆಂಬರ್ ಅಂತ್ಯದೊಳಗೆ ಪರೀಕ್ಷೆ ನಡೆಸಲೂ ನಿರ್ಧರಿಸಿದೆ.

ವಿದ್ಯಾರ್ಥಿಗಳ ಆರೋಗ್ಯ ಮತ್ತು ಭವಿಷ್ಯವನ್ನು ಗಣನೆಗೆ ತೆಗೆದುಕೊಂಡು ಶಿಕ್ಷಣ ತಜ್ಞರು, ವಿವಿಗಳ ಕುಲಪತಿಗಳ ಜತೆ ನಿರಂತರ ಸಮಾಲೋಚನೆ ನಡೆಸಿದ ನಂತರ ಈ ಮಹತ್ವದ ನಿರ್ಧಾರ ಕೈಕೊಳ್ಳಲಾಗಿದೆ. ತೀರ್ಮಾನವನ್ನು ಕೈಗೊಳ್ಳುವ ಮುನ್ನ ಯುಜಿಸಿ ಮಾಡಿರುವ ಶಿಫಾರಸುಗಳು ಹಾಗೂ ಅದರ ನಿಯಮಾವಳಿಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ. ಈ ನಿರ್ಧಾರ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ (2019-20) ಮಾತ್ರ ಸೀಮಿತವಾಗಿರುತ್ತದೆ. ಸರಕಾರದ ಈ ನಿರ್ಧಾರಕ್ಕೆ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ವಜೂಭಾಯಿ ವಾಲ ಅವರು ಹಸಿರು ನಿಶಾನೆ ತೋರಿಸಿದ್ದಾರೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಕೋವಿಡ್ ಇಡೀ ಶೈಕ್ಷಣಿಕ ವ್ಯವಸ್ಥೆಯನ್ನು ಬುಡಮೇಲು ಮಾಡಿದೆ. ಸಕಾಲಕ್ಕೆ ತರಗತಿಗಳು ನಡೆಸಲು ಸಾಧ್ಯವಾಗಲಿಲ್ಲ. ಲಾಕ್‌ಡೌನ್‌ ಸಂದರ್ಭದಲ್ಲಿ ಆನ್‌ಲೈನ್‌ ಮೂಲಕ ಶಿಕ್ಷಣ ನೀಡಿದ್ದು, ಒಳ್ಳೆಯ ಪ್ರತಿಕ್ರಿಯೆ ಕೂಡ ಬಂದಿದೆ. ಸಾಧ್ಯವಾದಷ್ಟು ಎಲ್ಲರನ್ನೂ ತಲುಪಲು ಪ್ರಾಮಾಣಿಕ ಪ್ರಯತ್ನ ನಡೆಸಲಾಯಿತು. ಇದರ ನಡುವೆ ಕೆಲವು ದಿನಗಳು ತರಗತಿಗಳನ್ನು ನಡೆಸಿ, ಪರೀಕ್ಷೆ ಮಾಡುವ ಚಿಂತನೆಯೂ ಇತ್ತು. ಆದರೆ, ಕೋವಿಡ್‌ ವ್ಯಾಪಕವಾಗಿ ಹಬ್ಬುತ್ತಿರುವ ಕಾರಣಕ್ಕೆ ಅವೆಲ್ಲವನ್ನೂ ಕೈಬಿಟ್ಟು ಮಧ್ಯಂತರ ಸೆಮಿಸ್ಟರ್‌ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲು ನಿರ್ಧರಿಸಲಾಯಿತು. ಅಂತಿಮ ವರ್ಷ/ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ, ಸೆಪ್ಟೆಂಬರ್‌ ತಿಂಗಳ ಅಂತ್ಯದೊಳಗೆ ಪರೀಕ್ಷೆಗಳನ್ನು (ಆನ್‌ಲೈನ್‌/ಆಫ್‌‌ಲೈನ್‌) ನಡೆಸಲು ಆಯಾ ವಿಶ್ವವಿದ್ಯಾಲಯಗಳಿಗೇ ಸೂಚಿಸಲಾಗಿದೆ ಎಂದು ಅವರು ವಿವರಿಸಿದರು.

ಮಧ್ಯಂತರ ಸೆಮಿಸ್ಟರ್‌/ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಆಂತರಿಕ ಮೌಲ್ಯಮಾಪನ (internal marks) ಮತ್ತು ಹಿಂದಿನ ಸೆಮಿಸ್ಟರ್‌/ವರ್ಷದ ಅಂಕಗಳ (50:50) ಸಮಗ್ರ ಮೌಲ್ಯಮಾಪನದ (comprehensive evaluation) ಆಧಾರದ ಮೇಲೆ ತೇರ್ಗಡೆ ಮಾಡಲಾಗುತ್ತದೆ. ಹಿಂದಿನ ವರ್ಷದ ಅಂಕಗಳು ಇಲ್ಲದ ವಿದ್ಯಾರ್ಥಿಗಳನ್ನು (ಉದಾ: ಮೊದಲ ಸೆಮಿಸ್ಟರ್‌ ವಿದ್ಯಾರ್ಥಿಗಳು) ಪೂರ್ಣ ಅಂತರಿಕ ಮೌಲ್ಯಮಾಪನದ ಮೂಲಕವೇ ಉತ್ತೀರ್ಣಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು.

ಇದರ ನಡುವೆಯೂ ತಮ್ಮ ಅಂಕಗಳನ್ನು ಉತ್ತಮಗೊಳಿಸಿಕೊಳ್ಳಬೇಕೆನ್ನುವ ವಿದ್ಯಾರ್ಥಿಗಳು ಸೆಮಿಸ್ಟರ್‌ನಲ್ಲಿ ಪ್ರತ್ಯೇಕವಾಗಿ ಪರೀಕ್ಷೆಗಳನ್ನು ಬರೆಯಲು ಅವಕಾಶ ನೀಡಲಾಗುವುದು. ಬ್ಯಾಕ್‌ಲಾಗ್‌ ವಿಷಯಗಳ ಕ್ಯಾರಿ ಓವರ್‌ಗೂ ಅವಕಾಶ ಇರುತ್ತದೆ ಎಂದು ಡಿಸಿಎಂ ತಿಳಿಸಿದರು.

ವಿದ್ಯಾರ್ಥಿಗಳ ಶೈಕ್ಷಣಿಕ ಮೌಲ್ಯಮಾಪನ ಮತ್ತು ಅವರ ಉದ್ಯೋಗ- ಮತ್ತಿತರ ಭವಿಷ್ಯಕ್ಕೆ ಧಕ್ಕೆಯಾಗದಂತೆ ಅಂತಿಮ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ. ಉನ್ನತ ಶಿಕ್ಷಣ ಪದ್ಧತಿಯಲ್ಲಿ ಶೈಕ್ಷಣಿಕ ಮೌಲ್ಯಮಾಪನ ಅಗತ್ಯ. ಆದ್ದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಕ್ಷಮತೆಯನ್ನು ಗಣನೆಗೆ ತೆಗೆದುಕೊಳ್ಳಲೇಬೇಕಾಗುತ್ತದೆ. ಉದ್ಯೋಗದಾತ ಕಂಪನಿಗಳು ಕೂಡ ಉದ್ಯೋಗಾಕಾಂಕ್ಷಿಗಳ ಶೈಕ್ಷಣಿಕ ಗುಣಮಟ್ಟ ಹಾಗೂ ಅವರು ಗಳಿಸಿರುವ ಶ್ರೇಣಿಯನ್ನು ಗುರುತಿಸುತ್ತವೆ. ಇವರಿಗೆ ಪರೀಕ್ಷೆ ನಡೆಸದಿದ್ದರೆ ಭವಿಷ್ಯದಲ್ಲಿ ತೊಂದರೆಯಾಗುವುದು ಖಚಿತ. ಹೀಗಾಗಿ ಈ ಪರೀಕ್ಷೆಗೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಎಲ್ಲ ವಿವಿಗಳಿಗೆ ಸೂಚಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಾಹಿತಿ ನೀಡಿದರು.

2020-21ರ ಶೈಕ್ಷಣಿಕ ಸಾಲಿನ ಮೊದಲ ಸೆಮಿಸ್ಟರ್’ಗೆ ಸೆಪ್ಟೆಂಬರ್ 1 ರಿಂದಲೇ ಆನ್‌ಲೈನ್ ತರಗತಿಗಳು ಹಾಗೂ ಅಕ್ಟೋಬರ್ 1 ರಿಂದ ನೇರ ತರಗತಿಗಳು ಆರಂಭವಾಗುತ್ತವೆ. ಅದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ವಿವಿಗಳು, ಕಾಲೇಜುಗಳಿಗೆ ಸೂಚಿಸಲಾಗಿದೆ ಎಂದಿದ್ದಾರೆ.

ಕೊರೊನಾ ಇಡೀ ಶೈಕ್ಷಣಿಕ ವ್ಯವಸ್ಥೆಗೆ ದೊಡ್ಡ ಪೆಟ್ಟು ನೀಡಿದೆ. ವಿದ್ಯಾರ್ಥಿಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜತೆಗೆ ಅವರ ಭವಿಷ್ಯದ ಬಗ್ಗೆಯೂ ನಿರ್ಧರಿಸುವ ಸವಾಲು ಸರಕಾರದ ಮುಂದಿತ್ತು. ಶಿಕ್ಷಣ ತಜ್ಞರು, ವಿವಿಗಳ ಕುಲಪತಿಗಳ ಜತೆ ಸಮಾಲೋಚನೆ ನಡೆಸಿದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.


ಇದನ್ನೂ ಓದಿ: ಸೆಪ್ಟಂಬರ್‌‌ನಲ್ಲಿ ಸ್ನಾತಕೋತ್ತರ ಹಾಗೂ ಪದವಿ ಪರೀಕ್ಷೆಗಳು: ಯುಜಿಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...