Homeಮುಖಪುಟ'ನಿಷೇಧಿಸಿರುವುದು ದಿಢೀರ್ ತ್ರಿವಳಿ ತಲಾಖ್ ಮಾತ್ರ, ತಲಾಖ್-ಇ-ಅಹ್ಸಾನ್ ಅಲ್ಲ': ಬಾಂಬೆ ಹೈಕೋರ್ಟ್

‘ನಿಷೇಧಿಸಿರುವುದು ದಿಢೀರ್ ತ್ರಿವಳಿ ತಲಾಖ್ ಮಾತ್ರ, ತಲಾಖ್-ಇ-ಅಹ್ಸಾನ್ ಅಲ್ಲ’: ಬಾಂಬೆ ಹೈಕೋರ್ಟ್

- Advertisement -
- Advertisement -

ಮುಸ್ಲಿಂ ಮಹಿಳೆಯರ (ವಿವಾಹದ ಹಕ್ಕುಗಳ ರಕ್ಷಣೆ) ಕಾಯ್ದೆ-2019 ‘ತಲಾಖ್-ಇ-ಬಿದತ್’ ಹೆಸರಿನ ದಿಢೀರ್‌ ಮತ್ತು ಬದಲಿಸಲಾಗದ ವಿಚ್ಛೇದನ ನೀಡುವ ಪದ್ದತಿಗೆ ಮಾತ್ರ ಅನ್ವಯಿಸುತ್ತದೆ, ಅಲ್ಲದೆ ಇಸ್ಲಾಂನಲ್ಲಿ ‘ತಲಾಖ್-ಇ-ಅಹ್ಸಾನ್’ ಎಂದು ಕರೆಯಲಾಗುವ ಸಾಂಪ್ರಾದಯಿಕ ವಿಚ್ಛೇದನಕ್ಕೆ ಅಲ್ಲ ಎಂದು ಬಾಂಬೆ ಹೈಕೋರ್ಟ್‌ ಬುಧವಾರ (ಏ.23) ಸ್ಪಷ್ಟಪಡಿಸಿರುವುದಾಗಿ barandbench.com ವರದಿ ಮಾಡಿದೆ.

ದಿಢೀರ್ ತ್ರಿವಳಿ ತಲಾಖ್ ನಿಷೇಧಿಸುವ ಕಾಯ್ದೆಯಡಿ ಮುಸ್ಲಿಂ ವ್ಯಕ್ತಿ ಮತ್ತು ಅವರ ಪೋಷಕರ ವಿರುದ್ಧ ದಾಖಲಾಗಿದ್ದ ಪೊಲೀಸ್ ಪ್ರಕರಣವನ್ನು ರದ್ದುಗೊಳಿಸುವಾಗ ನ್ಯಾಯಾಲಯ ಈ ಹೇಳಿಕೆ ನೀಡಿದೆ.

ತಲಾಖ್-ಎ-ಅಹ್ಸಾನ್ ವಿಧಾನವನ್ನು ಅನುಸರಿಸಿ ಗಂಡ ತನ್ನ ಹೆಂಡತಿಗೆ ವಿಚ್ಛೇದನ ನೀಡಿದ್ದರು. ಈ ವಿಧಾನದಡಿಯಲ್ಲಿ ತಲಾಖ್ ಅನ್ನು ಒಮ್ಮೆ ಉಚ್ಚರಿಸಲಾಗುತ್ತದೆ ಮತ್ತು ವಿಚ್ಛೇದನ ಜಾರಿಗೆ ಬರಲು 90 ದಿನಗಳ ಕಾಯುವ ಅವಧಿ ಇರುತ್ತದೆ. ಇಸ್ಲಾಮಿಕ್ ಕಾನೂನಿನಡಿಯ ಈ ವಿಚ್ಛೇದನ ಮಾರ್ಗವು ಇನ್ನೂ ಕಾನೂನು ಬದ್ದವಾಗಿ ಇದೆ.

ತಲಾಖ್-ಎ-ಅಹ್ಸಾನ್ ವಿಧಾನದಲ್ಲಿ ವಿಚ್ಛೇದ ನೀಡಿದ್ದ ವ್ಯಕ್ತಿ ಮತ್ತು ಅವರ ಪೋಷಕರ ಮೇಲೆ 2019ರ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆಂದು ಆರೋಪಿಸಿ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ್ದರು.

ನ್ಯಾಯಮೂರ್ತಿ ವಿಭಾ ಕಂಕಣವಾಡಿ ಮತ್ತು ನ್ಯಾಯಮೂರ್ತಿ ಸಂಜಯ್ ದೇಶಮುಖ್ ಅವರಿದ್ದ ಪೀಠವು, ಈ ಪ್ರಕರಣದ ವಿಚ್ಛೇದನದ ರೂಪವು ನಿಷೇಧಿತ ವರ್ಗದ ಅಡಿಯಲ್ಲಿ ಬರುವುದಿಲ್ಲ ಎಂದು ಹೇಳಿದೆ.

ಪ್ರಕರಣದಲ್ಲಿ, ದಂಪತಿ 2022ರಲ್ಲಿ ವಿವಾಹವಾಗಿದ್ದರು. ಬಳಿಕ ಕೆಲ ತಿಂಗಳುಗಳ ಕಾಲ ಭಾರತದ ವಿವಿಧ ನಗರಗಳಲ್ಲಿ ಒಟ್ಟಿಗೆ ವಾಸವಿದ್ದರು. ವೈವಾಹಿಕ ಭಿನ್ನಾಭಿಪ್ರಾಯಗಳನ್ನು ಉಂಟಾದ ನಂತರ, ಪತಿ ಡಿಸೆಂಬರ್ 2023ರಲ್ಲಿ ಸಾಕ್ಷಿಗಳ ಸಮ್ಮುಖದಲ್ಲಿ ಒಂದು ಬಾರಿ ತಲಾಖ್ ಎಂದು ಉಚ್ಚರಿಸಿದ್ದರು. ಅದನ್ನು ಅನುಸರಿಸಿ ಔಪಚಾರಿಕ ನೋಟಿಸ್ ನೀಡಿದ್ದರು.

90 ದಿನಗಳ ಕಾಯುವ ಅವಧಿಯಲ್ಲಿ ದಂಪತಿ ಮತ್ತೆ ಒಂದಾಗಲು ಸಾಧ್ಯವಾಗಿರಲಿಲ್ಲ. ಇದರಿಂದಾಗಿ ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ವಿಚ್ಛೇದನವು ಊರ್ಜಿತವಾಗಿತ್ತು.

ಆದರೆ, ವಿಚ್ಛೇದಿತ ಮಹಿಳೆ ಜಲಗಾಂವ್‌ನ ಭೂಸಾವಲ್ ಬಜಾರ್ ಪೇಠ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. 2019ರ ಕಾಯ್ದೆಯಡಿಯಲ್ಲಿ ವಿಚ್ಛೇದನವು ಕಾನೂನುಬಾಹಿರವಾಗಿದೆ. ತನ್ನ ಅತ್ತೆ ಮಾವ ಕೂಡ ನನಗೆ ತಲಾಖ್ ನೀಡಿರುವುದನ್ನು ಬೆಂಬಲಿಸಿದ್ದಾರೆ. ಅವರನ್ನೂ ಕೂಡ ತಪ್ಪಿತಸ್ಥರನ್ನಾಗಿ ಮಾಡಬೇಕು ಎಂದು ಆಗ್ರಹಿಸಿದ್ದರು.

ತಲಾಖ್-ಎ-ಅಹ್ಸಾನ್ ವಿಧಾನವನ್ನು ತಾನು ಅನುಸರಿಸಿದ್ದೇನೆ ಎಂದು ಮಹಿಳೆಯ ವಿಚ್ಛೇದಿತ ಪತಿ ನ್ಯಾಯಾಲಯದಲ್ಲಿ ವಾದಿಸಿದ್ದರು. ಇದು ತಲಾಖ್-ಎ-ಬಿದತ್ (ದಿಢೀರ್ ತ್ರಿವಳಿ ತಲಾಖ್) ನಂತೆ ಅಲ್ಲ. ಮುಸ್ಲಿಂ ವೈಯಕ್ತಿಕ ಕಾನೂನಿನಲ್ಲಿ ತಲಾಖ್-ಎ-ಅಹ್ಸಾನ್ ಅನ್ನು ಮಾನ್ಯ ಮತ್ತು ಅಂಗೀಕೃತ ವಿಚ್ಛೇದನದ ರೂಪವೆಂದು ಗುರುತಿಸಿದ ಹಿಂದಿನ ನ್ಯಾಯಾಲಯದ ತೀರ್ಪುಗಳನ್ನು ಅವರ ವಕೀಲರು ಉಲ್ಲೇಖಿಸಿದ್ದರು. ಈ ನಿರ್ಧಾರದಲ್ಲಿ ನಮ್ಮದು ಯಾವುದೇ ಪಾತ್ರವಿಲ್ಲ ಎಂದು ಅತ್ತೆ-ಮಾವ ಹೇಳಿದ್ದರು.

ತಲಾಖ್-ಎ-ಅಹ್ಸಾನ್ ಮೂಲಕ ವಿಚ್ಛೇಧನ ನೀಡಿದ್ದರೂ, ಅದನ್ನು ವಾಪಸ್ ತೆಗೆದುಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ, ಇದು 2019ರ ಕಾನೂನಿನ ಉಲ್ಲಂಘಣೆಯಾಗಿದೆ ಎಂದು ಮಹಿಳೆ ವಾದಿಸಿದ್ದರು.

ಆದರೆ, ಹೈಕೋರ್ಟ್ ಮಹಿಳೆಯ ವಾದವನ್ನು ಒಪ್ಪಿಲ್ಲ. ಯಾವುದೇ ಮಾತುಕತೆಗಳು ಇಲ್ಲದೆ, ತಕ್ಷಣ ತಲಾಖ್ ನೀಡುವುದನ್ನು ಮಾತ್ರ ನಿಷೇಧಿಸಲಾಗಿದೆ. ಅರ್ಜಿದಾರರು ವಿಚಾರಣೆ ಎದುರಿಸಬೇಕು ಎಂದು ಸೂಚಿಸುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗುತ್ತದೆ. ಆದ್ದರಿಂದ ವಿಚಾರಣೆ ಮತ್ತು ಎಫ್‌ಐಆರ್‌ ರದ್ದುಗೊಳಿಸಲಾಗುತ್ತಿದೆ ಎಂದಿದೆ.

ಪಹಲ್ಗಾಮ್ ದಾಳಿ | ಸರ್ವಪಕ್ಷ ಸಭೆಯಿಂದ ಸಣ್ಣ ಪಕ್ಷಗಳನ್ನು ಕೈಬಿಟ್ಟ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿದ ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...