Homeಮುಖಪುಟ'ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ'..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

- Advertisement -
- Advertisement -

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ.

ಚುನಾವಣಾ ಪ್ರಚಾರದ ಭಾಗವಾಗಿ ಗೋಪಾಲಕೃಷ್ಣನ್ ಕ್ಷೇತ್ರದಲ್ಲಿ ಬೃಹತ್ ಹೋರ್ಡಿಂಗ್ಸ್ ಹಾಕಿಸಿದ್ದು, ಅದರಲ್ಲಿ 1977ರಿಂದ ಇಲ್ಲಿಯವರೆ ಕ್ಷೇತ್ರದ ಶಾಸಕರಾದವರ ಹೆಸರನ್ನು ಹಾಕಲಾಗಿದೆ. “ನೀವು ಗಮನಿಸಿಲ್ವಾ..? 50 ವರ್ಷಗಳ ನಿರ್ಲಕ್ಷ್ಯ, ಇದು ಬದಲಾಗಬೇಕು. ಬದಲಾವಣೆಗಾಗಿ ಬಿ. ಗೋಪಾಲಕೃಷ್ಣನ್ ಅವರನ್ನು ಬೆಂಬಲಿಸಿ” ಎಂದು ಬರೆಯಲಾಗಿದೆ.

ಈ ಹೋರ್ಡಿಂಗ್ಸ್ ಮೂಲಕ ಗೋಪಾಲಕೃಷ್ಣನ್ ಅವರು, ಇದುವರೆಗೆ ಕ್ಷೇತ್ರದಲ್ಲಿ ಬರೀ ಮುಸ್ಲಿಮರೇ ಶಾಸಕರಾಗಿದ್ದಾರೆ. ಈ ಬಾರಿ ಹಿಂದೂವನ್ನು ಶಾಸಕನನ್ನಾಗಿ ಮಾಡಿ ಎಂದು ಪರೋಕ್ಷವಾಗಿ ಹೇಳಿದ್ದಾರೆ. ಮುಸ್ಲಿಮರು ಶಾಸಕರಾಗಿರುವುದೇ ದೊಡ್ಡ ತಪ್ಪು ಅಥವಾ ಅಪಾಯ ಎಂಬಂತೆ ಬಿಂಬಿಸಿದ್ದಾರೆ.

ಹೋರ್ಡಿಂಗ್ಸ್‌ನಲ್ಲಿ ಯಾವುದೇ ಧರ್ಮವನ್ನು ನೇರವಾಗಿ ಉಲ್ಲೇಖಿಸಿಲ್ಲ. ಆದರೂ, ಬರೀ ಮುಸ್ಲಿಂ ಶಾಸಕರ ಹೆಸರುಗಳೇ ಇರುವುದರಿಂದ ಅದನ್ನು ಬಿಡಿಸಿ ಹೇಳುವ ಅಗತ್ಯ ಇಲ್ಲ. ಕೋಮು ಆಧಾರದ ಮೇಲೆ ಜನರನ್ನು ವಿಭಜಿಸಿ ಮತ ಪಡೆಯಲು ಗೋಪಾಲಕೃಷ್ಣನ್ ಪ್ರಯತ್ನಿಸುತ್ತಿರುವುದು ಸ್ಪಷ್ಟವಾಗಿದೆ.

ಈ ಹಿಂದಿನ ಗೋಪಾಲಕೃಷ್ಣನ್ ಅವರ ಹೇಳಿಕೆಗಳು ಇಸ್ಲಾಮೋಫೋಬಿಕ್ ಆಗಿದ್ದರಿಂದ, ಈಗ ಅವರು ಹಾಕಿರುವ ಹೋರ್ಡಿಂಗ್ಸ್ ಕೂಡ ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ.

ಈ ಹಿಂದೆ, ಗೋಪಾಲಕೃಷ್ಣನ್ ಅವರು, ಗುರುವಾಯೂರು ಕಳೆದ 50 ವರ್ಷಗಳಲ್ಲಿ ಹಿಂದೂ ಶಾಸಕರನ್ನು ಆಯ್ಕೆ ಮಾಡಿಲ್ಲ ಎಂದು ಹೇಳಿದ್ದರು. ಗುರುವಾಯೂರಿನಂತಹ ರಾಷ್ಟ್ರೀಯ ಯಾತ್ರಾ ಕೇಂದ್ರವನ್ನು ಹಿಂದೂ ಶಾಸಕರು ಏಕೆ ಪ್ರತಿನಿಧಿಸಿಲ್ಲ ಎಂದು ಅವರು ಪ್ರಶ್ನಿಸಿದ್ದರು. ಎಲ್‌ಡಿಎಫ್ ಮತ್ತು ಯುಡಿಎಫ್ ಹಿಂದೂ ಸಮುದಾಯದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲ್ಲ ಎಂದು ಆರೋಪಿಸಿದ್ದರು.

ಈ ಹೇಳಿಕೆಗೆ ಸಂಬಂಧಿಸಿದಂತೆ ಗೋಪಾಲಕೃಷ್ಣನ್ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿತ್ತು. ಆಯೋಗ ದೂರನ್ನು ಗುರುವಾಯೂರು ದೇವಸ್ಥಾನ ಠಾಣೆ ಪೊಲೀಸರಿಗೆ ವರ್ಗಾಯಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿತ್ತು. ಪೊಲೀಸರು ಗೋಪಾಲಕೃಷ್ಣನ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್ 192 (ಗಲಭೆಯನ್ನು ಉಂಟುಮಾಡುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಪ್ರಚೋದನೆ ನೀಡುವುದು) ಮತ್ತು 1951ರ ಜನಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 125ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಸೆಕ್ಷನ್ ಧರ್ಮದ ಆಧಾರದಲ್ಲಿ ದ್ವೇಷವನ್ನು ಹರಡುವುದಕ್ಕೆ ಸಂಬಂಧಿಸಿದೆ.

ಪ್ರಕರಣ ದಾಖಲಾಗಿದ್ದರೂ, ಗೋಪಾಲಕೃಷ್ಣನ್ ತಮ್ಮ ಕೋಮುವಾದಿ ಹೇಳಿಕೆಗಳನ್ನು ಮುಂದುವರಿಸಿದ್ದಾರೆ. ಗುರುವಾಯೂರು ದೇವಸ್ಥಾನವನ್ನು ಉಲ್ಲೇಖಿಸಿ ಕೋಮು ಧ್ರುವೀಕರಣದ ಹೇಳಿಕೆ ನೀಡುತ್ತಲೇ ಇದ್ದಾರೆ.

ಧಾರ್ಮಿಕ ನೆಲೆಯಲ್ಲಿ ಪ್ರಚಾರ ಮಾಡುವ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ, ಅವರು ತಮ್ಮ ಹೇಳಿಕೆಗಳಿಗೆ ಬದ್ಧರಾಗಿದ್ದೇನೆ ಎಂದಿದ್ದು, ಅವುಗಳನ್ನು ಪುನರಾವರ್ತಿಸುವುದಾಗಿಯೂ ತಿಳಿಸಿದ್ದಾರೆ.

ಗೋಪಾಲಕೃಷ್ಣನ್ ವಿರುದ್ಧ ಸಲ್ಲಿಸಲಾದ ದೂರನ್ನು ಪರಿಗಣಿಸುವಂತೆ ಮಾ.27ರಂದು ಕೇರಳ ಹೈಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು. ಕೇರಳ ವಿದ್ಯಾರ್ಥಿ ಒಕ್ಕೂಟದ (ಕೆಎಸ್‌ಯು) ನಾಯಕ ಗೋಕುಲ್ ಗುರುವಾಯೂರು ಅವರು ಹೈಕೋರ್ಟ್ ಮೊರೆ ಹೋಗಿದ್ದರು.

ಗೋಪಾಲಕೃಷ್ಣನ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಎಲ್‌ಡಿಎಫ್ ಅಭ್ಯರ್ಥಿ ಎನ್.ಕೆ. ಅಕ್ಬರ್, ದೇಶದಲ್ಲಿ ಎಲ್‌ಪಿಜಿ ಕೊರತೆಯಂತಹ ವಿಷಯಗಳ ಕುರಿತು ಟೀಕೆಗಳನ್ನು ಎದುರಿಸುತ್ತಿರುವ ಬಿಜೆಪಿ ಇಂತಹ ತಂತ್ರಗಳನ್ನು ಆಶ್ರಯಿಸುತ್ತಿದೆ ಎಂದಿದ್ದಾರೆ. ಯುಡಿಎಫ್ ಅಭ್ಯರ್ಥಿ ಪಿ.ಎಂ. ಸಾದಿಕಲಿ ಕೂಡ ಗೋಪಾಲಕೃಷ್ಣನ್ ಹೇಳಿಕೆಯನ್ನು ಟೀಕಿಸಿದ್ದು, ಚುನಾವಣೆಗೆ ಮುನ್ನ ಬಿಜೆಪಿ ಕೋಮು ವಿಭಜನೆಗೆ ಪ್ರಯತ್ನಿಸುತ್ತಿದೆ. ಆದರೆ, ಅದು ಕೇರಳದಲ್ಲಿ ಯಶಸ್ವಿಯಾಗುವುದಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...