Homeಕರ್ನಾಟಕಪ್ರಚೋದನಕಾರಿಯಾಗಿ ಮಾತನಾಡುವವರು ಮಾತ್ರ ದ್ವೇಷ ಭಾಷಣ ತಡೆ ಮಸೂದೆಯನ್ನು ವಿರೋಧಿಸುತ್ತಾರೆ : ಸಿಎಂ ಸಿದ್ದರಾಮಯ್ಯ

ಪ್ರಚೋದನಕಾರಿಯಾಗಿ ಮಾತನಾಡುವವರು ಮಾತ್ರ ದ್ವೇಷ ಭಾಷಣ ತಡೆ ಮಸೂದೆಯನ್ನು ವಿರೋಧಿಸುತ್ತಾರೆ : ಸಿಎಂ ಸಿದ್ದರಾಮಯ್ಯ

ಕುಂಬಳಕಾಯಿ ಕಳ್ಳ ಎಂದರೆ ಬಿಜೆಪಿಯವರು ಹೆಗಲು ಮುಟ್ಟಿ ನೋಡಿಕೊಳ್ಳುವುದು ಏಕೆ?

- Advertisement -
- Advertisement -

ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ದ್ವೇಷ ಭಾಷಣ ತಡೆ ಮಸೂದೆಯನ್ನು ವಿರೋಧಿಸುತ್ತಾರೆ. ಸುಮ್ಮನೆ ಯಾರ ವಿರುದ್ದವೂ ಪ್ರಕರಣ ದಾಖಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿ ಸೋಮವಾರ (ಡಿ.22) ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಳ್ಳುವುತ್ತಿರುವುದು ಏಕೆ? ಎಂದು ಪ್ರಶ್ನಿಸಿದರು.

ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು ರೂಪಿಸಲಾಗಿದೆ ಎಂಬ ಬಿಜೆಪಿಗರ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಎಲ್ಲಾ ಪಕ್ಷದವರಿಗೂ ಕಾನೂನು ಅನ್ವಯವಾಗುತ್ತದೆ. ಬಿಜೆಪಿಯವರು ಮಾತ್ರ ಏಕೆ ವಿರೋಧಿಸುತ್ತಿದ್ದಾರೆ? ದ್ವೇಷ ಭಾಷಣದಿಂದ ಸಮಾಜದಲ್ಲಿ ಶಾಂತಿ ನೆಲೆಸುತ್ತದೆಯೇ? ಸಮಾಜದಲ್ಲಿ ಶಾಂತಿ, ಭ್ರಾತೃತ್ವ ಕಾಪಾಡಲು ಈ ಮಸೂದೆ ಜಾರಿ ಮಾಡಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ದ್ವೇಷ ಭಾಷಣ ಹೆಚ್ಚಾಗುತ್ತಿದೆ. ಬಿಜೆಪಿಯವರು ಮಸೂದೆಯನ್ನು ತೀವ್ರವಾಗಿ ವಿರೋಧಿಸುತ್ತಿರುವುದು ಅವರು ದ್ವೇಷ ಭಾಷಣ ಮಾಡುತ್ತಾರೆ ಎಂಬ ಕಾರಣಕ್ಕಾಗಿ ಎಂದು ಹೇಳಿದರು.

ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆ ಆಗುವಾಗ ಲಪಟಾಯಿಸುವ ಪ್ರಶ್ನೆ ಉದ್ಭವಿಸುವುದಿಲ್ಲ.
ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ. ಪರಿಶೀಲಿಸಿ ಬಿಡುಗಡೆ ಮಾಡಲಾಗುವುದು ಎಂದರು. 23 ತಿಂಗಳ ಮೊತ್ತವನ್ನು ಹಣವಿಲ್ಲದೆ ಕೊಡಲು ಸಾಧ್ಯವಾಗುತ್ತಿತ್ತೇ? ಎಂದು ಪ್ರಶ್ನಿಸಿದರು.

ಪಕ್ಷಕ್ಕಿಂತ ಯಾರು ದೊಡ್ಡವರಲ್ಲ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಿಎಂ, ಅದು ಒಪ್ಪಬೇಕಾದ ವಿಚಾರ. ಯಾರು ಪಕ್ಷಕ್ಕಿಂತ ದೊಡ್ಡವರಾಗಲು ಸಾಧ್ಯವಿಲ್ಲ ಎಂದರು.

ನಾಯಕತ್ವ ಬದಲಾವಣೆ ರಾಹುಲ್ ಗಾಂಧಿ ತೀರ್ಮಾನಿಸಬೇಕು:

ನಾಯಕತ್ವ ಬದಲಾವಣೆ ವಿಚಾರವನ್ನು ರಾಹುಲ್ ಗಾಂಧಿಯವರು ತೀರ್ಮಾನಿಸಬೇಕು. ಅವರು ಏನು ತೀರ್ಮಾನಿಸುತ್ತಾರೋ ಅದಕ್ಕೆ ನಾವು ಬದ್ಧ ಎಂದು ಇದೇ ಸಂದರ್ಭದಲ್ಲಿ ಸಿಎಂ ಹೇಳಿದರು.

ಪಕ್ಷದ ಅಧ್ಯಕ್ಷರನ್ನು ಭೇಟಿ ಮಾಡಿದರೆ ತಪ್ಪೇನು?

ಮಾಜಿ ಸಚಿವ ಕೆ.ಎನ್ ರಾಜಣ್ಣ ನಿನ್ನೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ಭೇಟಿ ಮಾಡಲಿ, ಡಿ.ಕೆ ಶಿವಕುಮಾರ್ ಅವರು ಪಕ್ಷದ ಅಧ್ಯಕ್ಷರು, ಅವರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದರು.

ಅಧಿಕಾರದಲ್ಲಿದ್ದಾಗ ನಾನು ಮಾಡಿದೆ, ಅವರು ಮಾಡಿದರು ಎನ್ನುವುದು ಮುಖ್ಯವಲ್ಲ

ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಮಾಡಿದ್ದು ನಾನೇ ಎಂದು ಉಪಮುಖ್ಯಮಂತ್ರಿಗಳು ಹೇಳಿದ್ದಾರೆ ಎಂಬ ಸುದ್ದಿಗಾರರು ಹೇಳಿದಾಗ, ಅಧಿಕಾರದಲ್ಲಿದ್ದಾಗ ನಾನು ಮಾಡಿದೆ, ಅವರು ಮಾಡಿದರು ಎನ್ನುವುದು ಮುಖ್ಯವಲ್ಲ. ಆದರ ಪ್ರಶ್ನೆಯೇ ಇಲ್ಲ. ಎಸ್.ಎಂ ಕೃಷ್ಣಾ ಅವರು ಆಗ ಮುಖ್ಯಮಂತ್ರಿಗಳಿದ್ದರು, ಸರ್ಕಾರ ಮಾಡಿತ್ತು ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...