Homeಕರ್ನಾಟಕ‘ಹಿಂದಿ ಮಾತನಾಡುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರವಾಸ ಭಾಗ್ಯ’ - ಈ ನಿಯಮ ಕೇಂದ್ರ ಅಥವಾ ರಾಜ್ಯ...

‘ಹಿಂದಿ ಮಾತನಾಡುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರವಾಸ ಭಾಗ್ಯ’ – ಈ ನಿಯಮ ಕೇಂದ್ರ ಅಥವಾ ರಾಜ್ಯ ಸರ್ಕಾರ ಮಾಡಿಲ್ಲ: ಸಚಿವ ನಾಗೇಶ್‌‌ ಸ್ಪಷ್ಟನೆ

- Advertisement -
- Advertisement -

ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಕರ್ನಾಟಕದಿಂದ ಹೊರ ರಾಜ್ಯಕ್ಕೆ ಪ್ರವಾಸಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಹಿಂದಿ ಹಾಗೂ ಇಂಗ್ಲೀಷ್ ಭಾಷೆ ಜ್ಞಾನ ಕಡ್ಡಾಯ ಎಂಬ ಸೂಚನೆಯನ್ನು ಒಕ್ಕೂಟ ಸರ್ಕಾರವಾಗಲಿ, ರಾಜ್ಯ ಸರ್ಕಾರವಾಗಲಿ ನೀಡಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಬುಧವಾರ ಸ್ಪಷ್ಟಪಡಿಸಿದ್ದಾರೆ.

ಒಕ್ಕೂಟ ಸರ್ಕಾರವು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ‘ಏಕ್‌ ಭಾರತ್‌ ಶ್ರೇಷ್ಠ ಭಾರತ್‌’ ಎಂಬ ಕಾರ್ಯಕ್ರಮದಡಿ ‘ಹೊರ ರಾಜ್ಯಗಳಿಗೆ ವಿದ್ಯಾರ್ಥಿಗಳ ಭೇಟಿ’ ಎಂಬ ಯೋಜನೆ ಹಾಕಿಕೊಂಡಿತ್ತು. ಈ ಯೋಜನೆಯ ಅನ್ವಯ ಕರ್ನಾಟಕದಿಂದ 50 ವಿದ್ಯಾರ್ಥಿಗಳು ಉತ್ತರಾಖಂಡ ರಾಜ್ಯ ಪ್ರವಾಸ ಮಾಡಲಿದ್ದಾರೆ. ಆದರೆ, ಈ ಪ್ರವಾಸಕ್ಕೆ ವಿದ್ಯಾರ್ಥಿಗಳು ಆಯ್ಕೆ ಆಗಬೇಕಾದರೆ ‘ಹಿಂದಿ ಭಾಷೆ’ ಮಾತನಾಡಲು ಬರಬೇಕು ಎಂದು ಶಿಕ್ಷಣ ಇಲಾಖೆ ಷರತ್ತನ್ನು ಇಟ್ಟು ಸುತ್ತೋಲೆ ಹೊರಡಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಲಾಖೆಯ ಸುತ್ತೋಲೆಯಲ್ಲಿ, “ಭಾರತ ಸರ್ಕಾರವು 75ನೇ ವರ್ಷದ ಆಜಾದಿ ಕಾ ಅಮೃತ‌ ಮಹೋತ್ಸವ್ ಅಂಗವಾಗಿ ಏಕ್‌ ಭಾರತ್‌ ಶ್ರೇಷ್ಠ ಭಾರತ್‌ ಎಂಬ ಕಾರ್ಯಕ್ರಮದಡಿ ಹೊರ ರಾಜ್ಯಗಳಿಗೆ ವಿದ್ಯಾರ್ಥಿಗಳ ಭೇಟಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ತಮ್ಮ ಕಾಲೇಜಿನಲ್ಲಿ ಪ್ರಸ್ತುತ ಪಿಯುಸಿ ಓದುತ್ತಿರುವವರ ಪೈಕಿ ‘ಹಿಂದಿ ಭಾಷೆ’ಯಲ್ಲಿ ಮಾತನಾಡುವ ಮತ್ತು ತಂತ್ರಜ್ಞಾನದ ತಿಳಿವಳಿಕೆ, ಸಾಂಸ್ಕೃತಿಕ, ಕ್ರೀಡಾಸ್ಫೂರ್ತಿ ಹೊಂದಿರುವ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಕಳುಹಿಸಲು ತಿಳಿಸಿದೆ” ಎಂದು ಉಪನಿರ್ದೇಶಕರು ತಿಳಿಸಿದ್ದರು.

ಇದನ್ನೂ ಓದಿ: ಒಕ್ಕೂಟ ಸರ್ಕಾರದ ಯೋಜನೆ: ‘ಹಿಂದಿ’ ಮಾತನಾಡುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರವಾಸ ಭಾಗ್ಯ!

ಈ ಬಗ್ಗೆ ಪ್ರತಿಕ್ರಿಯಿಸಿದ್ದ ಬೆಂಗಳೂರು ದಕ್ಷಿಣ ಉಪನಿರ್ದೇಶಕ ಆನಂದ ರಾಜು ಅವರು,“ಪ್ರವಾಸಕ್ಕೆ ಆಯ್ಕೆ ಮಾಡುವಾಗ ಹಿಂದಿ ಅಥವಾ ಇಂಗ್ಲಿಷ್‌ ಮಾತನಾಡಲು ಬರುವ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವಂತೆ ಸರ್ವಶಿಕ್ಷಾ ಅಭಿಯಾನದ ಸಭೆಯಲ್ಲಿ ತಿಳಿಸಿದ್ದಾರೆ. ಬೆಂಗಳೂರು ದಕ್ಷಿಣ ಮತ್ತು ಉತ್ತರದಿಂದ ತಲಾ ಇಬ್ಬರು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು” ಎಂದು ಹೇಳಿದ್ದರು.

ಈ ಷರತ್ತಿನಿಂದಾಗಿ ಉತ್ತರ ಭಾರತದಿಂದ ಬಂದು ಇಲ್ಲಿ ನೆಲೆಸಿರುವ ಹಿಂದಿ ಭಾಷಿಕರು ಅಥವಾ ಇಂಗ್ಲಿಷ್‌ ಮಾಧ್ಯಮದಲ್ಲಿ ಓದಿದ ವಿದ್ಯಾರ್ಥಿಗಳು ಮಾತ್ರ ಈ ಪ್ರವಾಸಕ್ಕೆ ಆಯ್ಕೆಯಾಗಿ ಕನ್ನಡ ಮಾಧ್ಯಮದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅವಕಾಶ ವಂಚಿತರಾಗುವುದಿಲ್ಲವೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರ, “ಹೌದು ಅಂತಹ ಮಕ್ಕಳು ವಂಚಿತರಾಗುತ್ತಾರೆ. ಆದರೆ ಸರ್ಕಾರದ ಆದೇಶ ಇದೆ” ಎಂದು ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದರು.

ಪದವಿಪೂರ್ವ ಶಿಕ್ಷಣ ಇಲಾಖೆಯ ಬೆಂಗಳೂರು ದಕ್ಷಿಣ ಜಿಲ್ಲೆಯ ಉಪನಿರ್ದೇಶಕರು, ಪದವಿಪೂರ್ವ ಕಾಲೇಜಿಗೆ ಹೊರಡಿಸಿರುವ ಈ ಷರತ್ತು ರಾಜ್ಯದಾತ್ಯಂತ ಭಾರಿ ಚರ್ಚೆಗೆ ಒಳಪಟ್ಟಿದ್ದು, ಆಕ್ರೋಶ ವ್ಯಕ್ತವಾಗಿತ್ತು. ವಿವಾದದ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರು, “ಹಿಂದಿ ಭಾಷೆ ಬಲ್ಲ ಮಕ್ಕಳಿಗೆ ಮಾತ್ರ ಪ್ರವಾಸ – ಕನ್ನಡಕ್ಕೆ ಬಗೆಯುವ ದ್ರೋಹ” ಎಂದು ಕಿಡಿ ಕಾರಿದ್ದರು.

ಇದನ್ನೂ ಓದಿ: ಹಿಂದಿ ಭಾಷೆ ಬಲ್ಲ ಮಕ್ಕಳಿಗೆ ಮಾತ್ರ ಪ್ರವಾಸ – ಕನ್ನಡಕ್ಕೆ ಬಗೆಯುವ ದ್ರೋಹ: ಎಚ್‌ಡಿಕೆ ಆಕ್ರೋಶ

ಇದೀಗ ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌, “ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಕರ್ನಾಟಕದಿಂದ ಹೊರ ರಾಜ್ಯಕ್ಕೆ ಪ್ರವಾಸಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಹಿಂದಿ/ಇಂಗ್ಲೀಷ್ ಭಾಷೆ ಜ್ಞಾನ ಕಡ್ಡಾಯ ಎಂಬ ಸೂಚನೆಯನ್ನು ಕೇಂದ್ರ ಸರ್ಕಾರವಾಗಲಿ, ರಾಜ್ಯ ಸರ್ಕಾರವಾಗಲಿ ನೀಡಿಲ್ಲ” ಎಂದು ಹೇಳಿದ್ದಾರೆ.

“ಈ ಗೊಂದಲಕ್ಕೆ ಕಾರಣವಾದ ಅಧಿಕಾರಿ/ಸಿಬ್ಬಂದಿ ವಿರುದ್ಧ ಇಲಾಖೆಯಿಂದ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಭರವಸೆ ನೀಡಿದ್ದಾರೆ.

ರಾಜ್ಯದ ವಿದ್ಯಾರ್ಥಿಗಳನ್ನು ಉತ್ತರಾಖಂಡಕ್ಕೆ ಕಳುಹಿಸುವ ಜವಾಬ್ದಾರಿ ಹೊತ್ತಿರುವ ಆರ್‌ಎನ್‌ಎಸ್‌ ಕಾಲೇಜಿನ ಉಪನ್ಯಾಸಕಿ ಡಾ. ಪಲ್ಲವಿ ಅವರು ಮಾತನಾಡುತ್ತಾ, “ಜವಾಹರಲಾಲ್‌ ನೆಹರೂ ಕೇಂದ್ರೀಯ ವಿದ್ಯಾಲಯ, ನವೋದಯ ವಿದ್ಯಾಲಯಗಳಿಂದ ತಲಾ ಮೂರು ವಿದ್ಯಾರ್ಥಿಗಳು, ಸಿಬಿಎಸ್‌ಇ ಮತ್ತು ರಾಜ್ಯ ಪಠ್ಯಕ್ರಮದಿಂದ 19 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಿದ್ದೇವೆ. ವಿದ್ಯಾರ್ಥಿ, ವಿದ್ಯಾರ್ಥಿನಿ, ಎಸ್ಸಿ ಎಸ್ಟಿ ಇತರೆ ಹಿಂದುಳಿದ ವರ್ಗ ಹೀಗೆ ಎಲ್ಲರಿಗೂ ಅವಕಾಶ ಕಲ್ಪಿಸಲಾಗಿದೆ. ಆದರೆ, ಹಿಂದಿ ಭಾಷೆ ಬರುವ ವಿದ್ಯಾರ್ಥಿಗಳನ್ನು ಮಾತ್ರ ಆಯ್ಕೆ ಮಾಡಬೇಕು ಎಂಬ ನಿಯಮ ಇಲ್ಲ” ಎಂದು ಸುತ್ತೋಲೆಗೆ ವ್ಯತಿರಿಕ್ತ ಹೇಳಿಕೆ ನೀಡಿದ್ದರು.‌

ಇದನ್ನೂ ಓದಿ: ಬಹುಜನ ಭಾರತ; ಇಂಗ್ಲಿಷ್ ಜೊತೆ ಹಿಂದಿಯೂ ಆಡಳಿತ ಭಾಷೆಯೇ ವಿನಾ ರಾಷ್ಟ್ರಭಾಷೆ ಅಲ್ಲ

ಒಕ್ಕೂಟ ಸರ್ಕಾರದ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶದಲ್ಲಿಯೂ ಹಿಂದಿ ಅಥವಾ ಇಂಗ್ಲಿಷ್‌ ಭಾಷೆ ಬಲ್ಲ ವಿದ್ಯಾರ್ಥಿಗಳನ್ನು ಮಾತ್ರ ಆಯ್ಕೆ ಮಾಡಬೇಕು ಎಂಬ ನಿರ್ದೇಶನ ನೀಡಿಲ್ಲ. ಹಾಗಿದ್ದರೆ ಕರ್ನಾಟಕ ಸರ್ಕಾರವೇ ಉದ್ದೇಶಪೂರ್ವಕವಾಗಿ ಹಿಂದಿ ಹೇರಲು ಹೊರಟಿದೆಯೇ ಎಂಬ ಅನುಮಾನವನ್ನು ಕೂಡಾ ಸಾಮಾಜಿಕ ಕಾರ್ಯಕರ್ತರು ವ್ಯಕ್ತಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂತಾ ಅಯ್ಯೊಗ್ಯರೆಲ್ಲಾ ಶಿಕ್ಷಣ ಮಂತ್ರಿ,ಇದು ಈ ನಾಡಿನ ದುರ್ದೈವ.

LEAVE A REPLY

Please enter your comment!
Please enter your name here

- Advertisment -

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಸಿದ 37 ಭಾರತೀಯ ಹಡಗುಗಳು

ಇಸ್ರೇಲ್-ಯುಎಸ್ ಜಂಟಿ ದಾಳಿಯ ನಂತರ, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಭಾರತೀಯ ಹಡಗುಗಳು ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ಭಾರತೀಯ ಧ್ವಜ ಹೊಂದಿರುವ 37 ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ನೀರಿನಲ್ಲಿ ಸಿಲುಕಿಕೊಂಡಿವೆ. 37 ಹಡಗುಗಳು...

ಪಾಲ್ಘರ್: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟೆಂಪೋ: 28 ವರ್ಷದ ಚಾಲಕ ಸಜೀವ ದಹನ, ಕ್ಲೀನರ್ ಗೆ ಗಾಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟೆಂಪೋಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಜಾಬ್‌ನ 28 ವರ್ಷದ ಚಾಲಕ ಸುಟ್ಟು ಕರಕಲಾಗಿದ್ದು, ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ಜನನಿಬಿಡ...

ಗುಜರಾತ್| ಅಂತರ್ಧರ್ಮೀಯ ದಂಪತಿಗೆ ಪೊಲೀಸರ ರಕ್ಷಣೆ; ‘ಲವ್ ಜಿಹಾದ್’ ಎಂದು ಕೂಗಿದ ವಿಎಚ್‌ಪಿ

ಮಾರ್ಚ್ 3 ರಂದು ಗುಜರಾತ್‌ನ ಅಹಮದಾಬಾದ್‌ನ ಮೆಟ್ರೋ ನ್ಯಾಯಾಲಯದ ಸಂಕೀರ್ಣದೊಳಗಿನ ವಿವಾಹ ನೋಂದಣಿ ಕಚೇರಿಯು ಅವ್ಯವಸ್ಥೆಯ ತಾಣವಾಯಿತು. ಗಾಂಧಿನಗರದ ಹಿಂದೂ ಮಹಿಳೆಯೊಬ್ಬರು ನಗರದ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಲು ಬಂದ ನಂತರ ಹಿಂದುತ್ವ ಸಂಘಟನೆಯ...

ಖಮೇನಿ ಹತ್ಯೆ ಕುರಿತು ಪೋಸ್ಟ್‌ : ನ್ಯಾಷನಲ್ ಕಾನ್ಫರೆನ್ಸ್ ಸಂಸದ, ಶ್ರೀನಗರದ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್

ದಾರಿತಪ್ಪಿಸುವ ಆನ್‌ಲೈನ್ ವಿಷಯವನ್ನು ಹಂಚಿಕೊಂಡ ಆರೋಪದ ಮೇಲೆ ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಅಗಾ ಸೈಯದ್ ರೂಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್ ಜುನೈದ್ ಅಝೀಂ ಮಟ್ಟು ವಿರುದ್ಧ...

ಒಡಿಶಾ| ಮೇಕೆ ಕಳ್ಳತನ ಶಂಕೆಯಿಂದ 14 ವರ್ಷದ ಬಾಲಕನನ್ನು ಹೊಡೆದು ಕೊಂದ ಗುಂಪು; 12 ಜನರ ಬಂಧನ

ಒಡಿಶಾದ ಮಯೂರ್‌ಭಂಜ್ ಜಿಲ್ಲೆಯಲ್ಲಿ ಮೇಕೆ ಕಳ್ಳತನದ ಶಂಕೆಯಿಂದ ಗ್ರಾಮಸ್ಥರು ಥಳಿಸಿದರಿಂದ 14 ವರ್ಷದ ಬಾಲಕನೊಬ್ಬ ಸಾವನ್ನಪ್ಪಿ, ಇನ್ನೊಬ್ಬ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಟಿರಿಂಗ್ ಪೊಲೀಸ್ ಠಾಣೆ ವ್ಯಾಪ್ತಿಯ ಇಂಡೋಖೋಲಿ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಪಶ್ಚಿಮ ಏಷ್ಯಾದಲ್ಲಿ ಸಿಲುಕಿದ್ದ ಮಹಾರಾಷ್ಟ್ರದ 164 ಪ್ರವಾಸಿಗರು ಮನೆಗೆ ಮರಳಿದ್ದಾರೆ: ಶಿವಸೇನೆ

ಮುಂಬೈ: ಅಮೆರಿಕ-ಇಸ್ರೇಲ್-ಇರಾನ್ ಸಂಘರ್ಷದಿಂದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಸಿಲುಕಿಕೊಂಡಿದ್ದ ಮಹಾರಾಷ್ಟ್ರದ ಒಟ್ಟು 164 ಪ್ರವಾಸಿಗರು ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ವ್ಯವಸ್ಥೆ ಮಾಡಿದ ಎರಡು ವಿಮಾನಗಳಲ್ಲಿ ಮನೆಗೆ ಮರಳಿದ್ದಾರೆ ಎಂದು ಶಿವಸೇನಾ ಪದಾಧಿಕಾರಿಯೊಬ್ಬರು ಬುಧವಾರ...

‘ಇದು ಟ್ರಂಪ್ ವಾಗ್ದಾನ ಮಾಡಿದ ರಕ್ಷಣೆ’: 165 ಮಕ್ಕಳ ಸಾಮೂಹಿಕ ಸಮಾಧಿಯ ಫೋಟೋ ಹಂಚಿಕೊಂಡ ಇರಾನ್; ಮರುಗಿದ ಮಾನವ ಜಗತ್ತು

ದಕ್ಷಿಣ ಇರಾನ್‌ನ ಮಿನಾಬ್ ನಗರದ ಬಾಲಕಿಯರ ಶಾಲೆಯೊಂದರ ಮೇಲೆ ಶನಿವಾರ (ಫೆ.28) ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಸಾವನ್ನಪ್ಪಿದ 165 ವಿದ್ಯಾರ್ಥಿನಿಯರು ಮತ್ತು ಸಿಬ್ಬಂದಿಯ ಬೃಹತ್ ಅಂತಿಮ ಸಂಸ್ಕಾರ ಮೆರವಣಿಗೆ ಮಂಗಳವಾರ (ಮಾ.3)...

ಖಮೇನಿ ಪುತ್ರ ಮೊಜ್ತಬಾ ಅವರನ್ನು ಸರ್ವೋಚ್ಚ ನಾಯಕನನ್ನಾಗಿ ಹೆಸರಿಸಿದ ಇರಾನ್ ತಜ್ಞರ ಸಭೆ?

ದಿವಂಗತ ಅಯತೊಲ್ಲಾ ಅಲಿ ಖಮೇನಿಯವರ ಪುತ್ರ 56 ವರ್ಷದ ಮೊಜ್ತಬಾ ಖಮೇನಿ ಅವರನ್ನು ತಜ್ಞರ ಸಭೆಯು ಇರಾನ್‌ನ ಹೊಸ ಸರ್ವೋಚ್ಚ ನಾಯಕನನ್ನಾಗಿ ಆಯ್ಕೆ ಮಾಡಿದೆ ಎಂದು ಬಲ್ಲ ಮೂಲಗಳನ್ನು ಉಲ್ಲೇಖಿಸಿ ಇರಾನ್ ಅಂತಾರಾಷ್ಟ್ರೀಯ...

ಲೋಕಸಭೆ ಹಕ್ಕುಬಾಧ್ಯತಾ ಸಮಿತಿಗೆ 15 ಸದಸ್ಯರ ಆಯ್ಕೆ; ರವಿಶಂಕರ್ ಪ್ರಸಾದ್ ನೇತೃತ್ವ

ಹದಿನೆಂಟನೇ ಲೋಕಸಭೆ ರಚನೆಯಾಗಿ ಸುಮಾರು ಎರಡು ವರ್ಷಗಳ ನಂತರ, ಸ್ಪೀಕರ್ ಓಂ ಬಿರ್ಲಾ ಅವರು ಮಂಗಳವಾರ (ಮಾ.3) ಹಕ್ಕುಬಾಧ್ಯತಾ ಸಮಿತಿಗೆ 15 ಸದಸ್ಯರನ್ನು ನಾಮನಿರ್ದೇಶನ ಮಾಡಿದ್ದಾರೆ. ಸದನ ಮತ್ತು ಅದರ ಸದಸ್ಯರ ಹಕ್ಕುಚ್ಯುತಿಗೆ...

ಪಶ್ಚಿಮ ಬಂಗಾಳ : ಚುನಾವಣೆ ಹೊಸ್ತಿಲಲ್ಲಿ ತ್ವರಿತಗೊಂಡ ಸಿಎಎ ಜಾರಿ ಪ್ರಕ್ರಿಯೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಪ್ರಕ್ರಿಯೆಯು ಅತ್ಯಂತ ವೇಗ ಪಡೆದುಕೊಂಡಿದೆ. ಇತ್ತೀಚಿನ ಬೆಳವಣಿಗೆಗಳು ರಾಜ್ಯದ ರಾಜಕೀಯ ಸಮೀಕರಣಗಳನ್ನು ಬದಲಿಸುವ ಮುನ್ಸೂಚನೆ ನೀಡುತ್ತಿವೆ. ಕೇಂದ್ರ ಗೃಹ ಸಚಿವಾಲಯವು...