Homeಕರ್ನಾಟಕಚನ್ನರಾಯಪಟ್ಟಣ ರೈತ ಹೋರಾಟ ಬೆಂಬಲಿಸಿ ಸಾಹಿತಿ, ಚಿಂತಕರಿಂದ ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ

ಚನ್ನರಾಯಪಟ್ಟಣ ರೈತ ಹೋರಾಟ ಬೆಂಬಲಿಸಿ ಸಾಹಿತಿ, ಚಿಂತಕರಿಂದ ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ

- Advertisement -
- Advertisement -

ರೈತರು ನಡೆಸುತ್ತಿರುವ ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ರಾಜ್ಯದ ಹಿರಿಯ ಸಾಹಿತಿಗಳು, ಚಿಂತಕರು, ವಿಜ್ಞಾನಿಗಳು, ಸ್ವಾಮೀಜಿಗಳು, ಚಿತ್ರನಟರು ಮತ್ತು ಹೋರಾಟಗಾರರು ಬೆಂಬಲ ವ್ಯಕ್ತಪಡಿಸಿದ್ದು, ಯಾವುದೇ ಕಾರಣಕ್ಕೂ ರೈತರಿಂದ ಭೂಮಿಯನ್ನು ಕಿತ್ತುಕೊಳ್ಳಬಾರದು ಎಂದು ಆಗ್ರಹಿಸಿ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪ್ಪಟ್ಟಣದ ರೈತರು ಕಳೆದ 1000 ದಿನಗಳಿಗಿಂತಲೂ ಹೆಚ್ಚು ಕಾಲದಿಂದ ತಮ್ಮ ಭೂಮಿಯನ್ನು ಉಳಿಸಲು ಹೋರಾಟವನ್ನು ನಡೆಸುತ್ತಲೆ ಬಂದಿದ್ದಾರೆ. ಚನ್ನರಾಯಪಟ್ಟಣ ರೈತ ಹೋರಾಟ

ತುರ್ತು ವಿಚಾರವೊಂದನ್ನು ತಮ್ಮ ಗಮನಕ್ಕೆ ತರಲು ಈ ಬಹಿರಂಗ ಪತ್ರ ಬರಿಯುತ್ತಿದ್ದೇವೆ ಎಂದು ಮುಖ್ಯಮಂತ್ರಿಗೆ ಹೇಳಿರುವ ಅವರು, “ಚನ್ನರಾಯಪಟ್ಟಣದ ವಿಚಾರ ರೈತರು ಹಾಗೂ ಸರ್ಕಾರದ ನಡುವೆ, ಜನಪರ ಸಂಘಟನೆಗಳು ಹಾಗೂ ಸರ್ಕಾರದ ನಡುವೆ ಸಂಘರ್ಷದ ವಿಚಾರವಾಗಿ ಪರಿವರ್ತನೆಯಾಗುತ್ತಿರುವುದನ್ನು ಕಂಡು ನಾವು ಕಳವಳಗೊಂಡಿದ್ದೇವೆ. ಸರ್ಕಾರ ಏಕೆ ಈ ರೀತಿ ಹಟ ಹಿಡಿದಿದೆ ಎಂಬುದು ನಮಗೆ ಅರ್ಥವಾಗದಾಗಿದೆ.” ಎಂದು ಹೇಳಿದ್ದಾರೆ.

ಅಭಿವೃದ್ದಿ ಯೋಜನೆಗಳಿಗೆ ಭೂಮಿ ಬೇಕಾಗುತ್ತದೆ ಎಂಬುದನ್ನು ನಾವೂ ಒಪ್ಪುತ್ತೇವೆ. ಆದರೆ ಅದಕ್ಕೊಂದು ರೀತಿನೀತಿ ಇರಬೇಕಲ್ಲವೇ ಎಂದು ಪತ್ರವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದೆ.

“ಚನ್ನರಾಯಪಟ್ಟಣದ ಭೂಮಿ ಫಲವತ್ತಾದ ಕೃಷಿ ಭೂಮಿಯಾಗಿದೆ, ಸಾವಿರಾರು ಜನ ಅದನ್ನು ನಂಬಿ ಬದುಕುತ್ತಿದ್ದಾರೆ. ಎಲ್ಲದಕ್ಕಿಂತ ಹೆಚ್ಚಾಗಿ ಅವರು ಈ ಭೂಮಿಯನ್ನು ಕಂಪನಿಗಳಿಗೆ ಕೊಡಲು ತಮಗೆ ಒಪ್ಪಿಗೆ ಇಲ್ಲ ಎಂದು ಸ್ಪಷ್ಟವಾಗಿ ಸರ್ಕಾರದ ಗಮನಕ್ಕೆ ತಂದಿದ್ದಾರೆ” ಎಂದು ಪತ್ರ ಹೇಳಿದೆ.

“ಕಳೆದ ಎರಡು ವರ್ಷಗಳಿಂದ ಸತತ ಹೋರಾಟ ನಡೆಸಿದ್ದಾರೆ. ರೈತರ ಕೂಗನ್ನು ಕೇಳಿಸಿಕೊಳ್ಳದೆ ಬಿಜೆಪಿ ಸರ್ಕಾರ ಈ ಭೂ ಸ್ವಾಧೀನ ಪ್ರಕ್ರಿಯೆಯನ್ನು ಪ್ರಾರಂಭಿಸಿತ್ತು. ಆಗ ನಿಮ್ಮ ಪಕ್ಷವೂ ಇದನ್ನು ವಿರೋಧಿಸಿತ್ತು. ನೀವೇ ಖುದ್ದು ಹೋರಾಟ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ನೀಡಿದ್ದಿರಿ. ಈಗ ಏಕೆ ಆ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲೇಬೇಕು ಎಂದು ನಿಮ್ಮ ಸರ್ಕಾ ರ ಪಟ್ಟು ಹಿಡಿದಿದೆ ಅರ್ಥವಾಗುತ್ತಿಲ್ಲ” ಎಂದು ಅವರು ಮುಖ್ಯಮಂತ್ರಿಯನ್ನು ಕೇಳಿದ್ದಾರೆ.

“ರೈತರಿಗೀಗ ಅಂತಿಮ ಅಧಿಸೂಚನೆ ಹೋಗಿದೆ. ರೈತರು ಆತಂಕಿತರಾಗಿದ್ದಾರೆ. ಅವರ ಬೆಂಬಲಕ್ಕೆ ಕರ್ನಾಟಕದ ಸಮಸ್ತ ಸಂಘಟನೆಗಳೂ ನಿಂತಿವೆ. ಜೂನ್‌ 25ಕ್ಕೆ ದೇವನ ಹಳ್ಳಿ ಚಲೋಗೆ ಕರೆ ನೀಡಿವೆ. ಸರ್ಕಾರ ರೈತಪರ ನಿಲುವು ತೆಗೆದುಕೊಳ್ಳುವ ತನಕ ದೇವನಹಳ್ಳಿಯಿಂದ ವಾಪಾಸ್‌ ಬರುವುದಿಲ್ಲ ಎಂದು ಹೇಳುತ್ತಿದ್ದಾರೆ. ಈ ಸಂಘರ್ಷ ರೈತರಿಗಾಗಲೀ, ಸರ್ಕಾರಕ್ಕಾಗಲೀ, ರಾಜ್ಯಕ್ಕಾಗಲೀ ಒಳಿತನ್ನು ಮಾಡುವುದಿಲ್ಲ.” ಎಂದು ಪತ್ರವೂ ಹೇಳಿದೆ.

ನೀವು ಜನರ ಭಾವನೆಗಳನ್ನು ಅರ್ಥಮಾಡಿಕೊಳ್ಳಬಲ್ಲವರು ಎಂದು ಹೇಳಿರುವ ಪತ್ರವೂ, ಮುಖ್ಯಮಂತ್ರಿ ವಿಚಾರದಲ್ಲಿ ಮಧ್ಯಪ್ರವೇಶ ಮಾಡಬೇಕು ಎಂದು ಕೋರಿದೆ. ಸಮಸ್ಯೆಯನ್ನು ಬಗೆಹರಿಸಿ ರಾಜ್ಯಕ್ಕೆ ಉತ್ತಮ ಸಂದೇಶ ನೀಡಬೇಕು ಎಂದು ಪತ್ರವೂ ಮನವಿ ಮಾಡಿದ್ದು, ಜೊತೆಗೆ ನೀವು ನಮ್ಮನ್ನು ನಿರಾಸೆಗೊಳಿಸುವುದಿಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದೆ.

ಹಿರಿಯ ಸಾಹಿತಿಗಳಾದ ಡಾ.ಬರಗೂರು ರಾಮಚಂದ್ರಪ್ಪ, ಡಾ.ಕೆ ಮರುಳಸಿದ್ದಪ್ಪ, ಬಾನು ಮುಷ್ತಾಕ್, ಎಸ್.ಜಿ.ಸಿದ್ದರಾಮಯ್ಯ, ಬಂಜಗೆರೆ ಜಯಪ್ರಕಾಶ್, ಡಾ.ಹಿಂದೂಧರ ಹೊನ್ನಾಪುರ, ಡಾ.ಎಚ್.ಎಲ್ ಪುಷ್ಪ, ಡಾ.ವಿಜಯಮ್ಮ, ಡಾ. ಜಾಣಗೆರೆ ವೆಂಕಟರಾಮಯ್ಯ, ಎಲ್ ಎನ್ ಮುಕುಂದರಾಜ್, ಡಾ.ಎನ್ ಗಾಯತ್ರಿ, ಡಾ.ಕೆ.ನೀಲ, ಕೆ.‍ಷರೀಪ, ಚಿತ್ರನಟರಾದ ಪ್ರಕಾಶ್ ರಾಜ್, ಬಿ. ಸುರೇಶ್, ವಿಜ್ಞಾನಿಗಳಾದ ಪ್ರೋ. ಪ್ರಜ್ವಲ್ ಶಾಸ್ತ್ರಿ, ಡಾ.ಸವ್ಯಸಾಚಿ ಚಟರ್ಜಿ, ಡಾ.ವಾಣಿ ಚಾಟರ್ಜಿ ಮತ್ತು ಸಾಣೆಹಳ್ಳಿ ಮಠದ ಪಂಡಿತಾರಾದ್ಯ ಶಿವಾಚಾರ್ಯ ಸ್ವಾಮಿಜಿ ಅವರು ಪತ್ರಕ್ಕೆ ಸಹಿ ಹಾಕಿದ್ದಾರೆ. ಚನ್ನರಾಯಪಟ್ಟಣ ರೈತ ಹೋರಾಟ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ದೇವನಹಳ್ಳಿ| ಕೆಐಎಡಿಬಿ ಅಂತಿಮ ಅಧಿಸೂಚನೆ ಪ್ರತಿ ಸುಟ್ಟು ಆಕ್ರೋಶ; ಸರ್ಕಾರದ ವಿರುದ್ಧ ಸೆಟೆದು ನಿಂತ ಚನ್ನರಾಯಪಟ್ಟಣ ರೈತರು

ದೇವನಹಳ್ಳಿ| ಕೆಐಎಡಿಬಿ ಅಂತಿಮ ಅಧಿಸೂಚನೆ ಪ್ರತಿ ಸುಟ್ಟು ಆಕ್ರೋಶ; ಸರ್ಕಾರದ ವಿರುದ್ಧ ಸೆಟೆದು ನಿಂತ ಚನ್ನರಾಯಪಟ್ಟಣ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...