ಇನ್ನುಮುಂದೆ ಬಾಹ್ಯಾಕಾಶ ಕ್ಷೇತ್ರದಲ್ಲಿ ಖಾಸಗಿ ವಲಯವೂ ಭಾಗವಹಿಸಬಹುದು ಎಂಬ ನಿರ್ಣಯಕ್ಕೆ ಜೂನ್ ತಿಂಗಳಿನಲ್ಲಿಯೇ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕ್ಷೇತ್ರದಲ್ಲಿ ಖಾಸಗಿ ವಲಯದ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಪ್ರಧಾನಿ ಇಂದು ಬಾಹ್ಯಾಕಾಶ ಕ್ಷೇತ್ರದ ಪ್ರಮುಖ ಕೈಗಾರಿಕೆಗಳು, ಉದ್ಯಮಗಳು ಮತ್ತು ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸಿದರು.
ಇದನ್ನೂ ಓದಿ: ಮುಷ್ಕರ ವಾಪಸ್ ಪಡೆದ ಸಾರಿಗೆ ನೌಕರರು: ಇಂದು ಸಂಜೆಯಿಂದಲೇ ಬಸ್‌ಗಳ ಸಂಚಾರ ಆರಂಭ
ಈ ಕುರಿತು ಟ್ವೀಟ್ ಮಾಡಿರುವ ಎಎನ್‌ಐ,”ಖಾಸಗಿ ವಲಯದವರು ಬಾಹ್ಯಾಕಾಶ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ಉತ್ತೇಜಿಸಲು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಬಾಹ್ಯಾಕಾಶ ಕ್ಷೇತ್ರದ ಪ್ರಮುಖ ಕೈಗಾರಿಕೆಗಳು, ಉದ್ಯಮಗಳು ಮತ್ತು ಶಿಕ್ಷಣ ತಜ್ಞರೊಂದಿಗೆ ಇಂದು ಸಂವಹನ ನಡೆಸಿದರು. 2020 ರ ಜೂನ್‌ನಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಭಾರತೀಯ ಖಾಸಗಿ ವಲಯವನ್ನು ಬಾಹ್ಯಾಕಾಶ ಕ್ಷೇತ್ರದ ಚಟುವಟಿಕೆಗಳಿಗೆ ಪಾಲುದಾರರನ್ನಾಗಿ ಮಾಡುವ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ” ಎಂದು ವರದಿ ಮಾಡಿದೆ.
ಇದನ್ನೂ ಓದಿ: ‘ಶೂದ್ರ’ ಪದಬಳಕೆ: ಪ್ರಗ್ಯಾ ಠಾಕೂರ್‌ಗೆ ತಿರುಗೇಟು ಕೊಟ್ಟ ಮೀನಾ ಕಂದಸಾಮಿ
Union Cabinet led by the PM Modi took the historic decision in June 2020 to open up Space sector & enable participation of the Indian private sector in the entire gamut of space activities: PMO https://t.co/y3zgQutVp0
— ANI (@ANI) December 14, 2020
ಇದನ್ನೂ ಓದಿ: ಭಾರತದ ಆರ್ಥಿಕತೆ ಕುಸಿಯುತ್ತಿದ್ದರೂ ಅದಾನಿ ಕಂಪನಿ ಮಾತ್ರ ಬೆಳೆಯುತ್ತಿರುವುದು ಹೇಗೆ?
ಭಾರತದ ಸರ್ಕಾರಿ ಸ್ವಾಮ್ಯದಲ್ಲಿರುವ ಬಹುತೇಕ ಎಲ್ಲಾ ವಲಯಗಳನ್ನು ಖಾಸಗಿಯವರಿಗೆ ಬಿಟ್ಟುಕೊಡುತ್ತಿರುವ ಮೋದಿ ಸರ್ಕಾರದ ಮತ್ತೊಂದು ನಿರ್ಧಾರವಿದು. ಈಗಾಗಲೇ ಖಾಸಗೀಕರಣದ ಕರಾಳ ಪರಿಣಾಮಗಳನ್ನು ಎದುರಿಸುತ್ತಿರುವ ಭಾರತ, ಕೇಂದ್ರ ಸರ್ಕಾರದ ಈ ಕ್ರಮದಿಂದ ಏನೆಲ್ಲಾ ಸಕಾರಾತ್ಮಕ ಮತ್ತು ನಕಾರಾತ್ಮಕ ಪರಿಣಾಗಳನ್ನು ಎದುರಿಸಬೇಕಾಗಬಹುದು ಎಂಬುದನ್ನು ಕಾದು ನೋಡಬೇಕಿದೆ.
ಈಗಾಗಲೇ ರೈತ ಬೆಳೆಯುವ ತರಕಾರಿಯಿಂದ ಹಿಡಿದು ವಿಮಾನಯಾನ, ವಿಮಾನ ನಿಲ್ದಾಣದವರೆಗೆ ಎಲ್ಲವೂ ಅಂಬಾನಿ-ಅದಾನಿಯ ಪಾಲಾಗಿದೆ. ಇದೀಗ ಬಾಹ್ಯಾಕಾಶ ಕ್ಷೇತ್ರವನ್ನು ಖಾಸಗಿ ವಲಯಕ್ಕೆ ಮುಕ್ತಗೊಳಿಸಿರುವುದರಿಂದ ಉಪಗ್ರಹ ಉಡಾವಣೆ, ರಾಕೆಟ್ ತಯಾರಿಕೆ ಸೇರಿದಂತೆ ಮುಂತಾದ ತಾಂತ್ರಿಕ ಉಪಕರಣಗಳನ್ನು ತಯಾರಿಸುವ ಜವಾಬ್ದಾರಿಗಳು ಅಂಬಾನಿ-ಅದಾನಿಯ ಹೆಗಲ ಮೇಲೆ ಬೀಳಬಹುದು. ಹಾಗಾಗಿ ಇನ್ನುಮುಂದೆ ಉಪಗ್ರಹ ತಯಾರಿಕೆ ಮತ್ತು ಉಡಾವಣೆಗೆ ಸಂಬಂಧಿಸಿದ ಎಲ್ಲಾ ಉತ್ಪನ್ನಗಳನ್ನು ಇವರ ಕಂಪನಿಯಿಂದಲೇ ತಯಾರಾಗಬಹುದು? ಈ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ಸಂಸ್ಥೆಗಳು ನೆಲಕಚ್ಚಬಹುದು? ಇನ್ನು ಇಲ್ಲಿನ ನೌಕರರ ಪರಿಸ್ಥಿತಿ?
ಸರ್ಕಾರವೇ ಎಷ್ಟು ಭಾರವನ್ನು ಹೊರಲು ಸಾಧ್ಯ! ಹಾಗಾಗಿಯೇ ಅಂಬಾನಿ-ಅದಾನಿಯೂ ಸ್ವಲ್ಪ ಭಾರ ಹೊರಲಿ ಎಂದು ಅವರಿಗೆ ಸರ್ಕಾರಿ ಸ್ವಾಮ್ಯದಲ್ಲಿರುವ ಪ್ರಮುಖ ಉದ್ಯಮಗಳನ್ನು ಮಾರಲಾಗುತ್ತಿದೆ ಅಷ್ಟೆ!
ಇದನ್ನೂ ಓದಿ: ರೈತರು ವಿಷ ಸೇವಿಸಿದಾಗ ಕಾಳಜಿ ವಹಿಸದವರು ಪಿಜ್ಜಾ ತಿನ್ನುವಾಗ ಟೀಕೆ ಮಾಡುತ್ತಾರೆ – ದಿಲ್ಜಿತ್…


