Homeಮುಖಪುಟಓಪನ್‌ಎಐ ಬಗ್ಗೆ ಗಂಭೀರ ಆರೋಪ ಮಾಡಿದ್ದ ಮಾಜಿ ಉದ್ಯೋಗಿ ಸುಚಿರ್ ಬಾಲಾಜಿ ಶವವಾಗಿ ಪತ್ತೆ

ಓಪನ್‌ಎಐ ಬಗ್ಗೆ ಗಂಭೀರ ಆರೋಪ ಮಾಡಿದ್ದ ಮಾಜಿ ಉದ್ಯೋಗಿ ಸುಚಿರ್ ಬಾಲಾಜಿ ಶವವಾಗಿ ಪತ್ತೆ

- Advertisement -
- Advertisement -

ಕೃತಕ ಬುದ್ಧಿಮತ್ತೆ (Artificial Intelligence) ಸಂಸ್ಥೆ ಓಪನ್ ಎಐ (OpenAi) ಕಾರ್ಯಾಚಟುವಟಿಕೆಗಳು ಕಾನೂನನ್ನು ಉಲ್ಲಂಘಿಸುತ್ತಿವೆ ಎಂದು ಆರೋಪಿಸಿದ್ದ ಸಂಸ್ಥೆಯ ಮಾಜಿ ಉದ್ಯೋಗಿ ಸುಚಿರ್ ಬಾಲಾಜಿ ಸ್ಯಾನ್ ಫ್ರಾನ್ಸಿಸ್ಕೋದ ಅವರ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಭಾರತ ಮೂಲದ 26 ವರ್ಷದ ಸುಚಿರ್ ಬಾಲಾಜಿ ನವೆಂಬರ್ 26ರಂದು ಮೃತಪಟ್ಟಿದ್ದು, ತಡವಾಗಿ ವಿಷಯ ಬೆಳಕಿಗೆ ಬಂದಿದೆ ಎಂದು ಕೆಲ ಮಾಧ್ಯಮ ವರದಿಗಳು ಹೇಳಿವೆ.

ಬಾಲಾಜಿ ಅವರು ಇತ್ತೀಚೆಗೆ ಓಪನ್ ಎಐಯ ಕಾರ್ಯಚಟುವಟಿಕೆಗಳ ಬಗ್ಗೆ ಬಹಿರಂಗ ಟೀಕೆ ಮಾಡಿ ಗಮನ ಸೆಳೆದಿದ್ದರು. ವಿಶೇಷವಾಗಿ ಚಾಟ್‌ಜಿಪಿಟಿಯಂತಹ ಅದರ ಎಐ ವ್ಯವಸ್ಥೆಗಳ ತರಬೇತಿಯಲ್ಲಿ ಹಕ್ಕುಸ್ವಾಮ್ಯ ಉಲ್ಲಂಘನೆಗಳ ಬಗ್ಗೆ ಆರೋಪಿಸಿದ್ದರು. ಈ ಬೆನ್ನಲ್ಲೇ ಅವರು ಶವವಾಗಿ ಪತ್ತೆಯಾಗಿರುವುದು ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ.

ಸುಚಿರ್ ಬಾಲಾಜಿಯವರ ಸಾವಿಗೆ ಹಲವು ಟೆಕ್ ಗಣ್ಯರು ಸಂತಾಪ ಸೂಚಿಸಿದ್ದಾರೆ. ಉದ್ಯಮಿ ಹಾಗೂ ಟೆಸ್ಲಾ ಕಂಪನಿಯ ಮುಖ್ಯಸ್ಥ ಎಲಾನ್‌ ಮಸ್ಕ್ ಕೂಡ ಪ್ರತಿಕ್ರಿಯಿಸಿದ್ದಾರೆ. ಎಲಾನ್ ಮಸ್ಕ್‌ ಕೂಡ ಓಪನ್‌ ಎಐ ವಿರುದ್ದ ಈ ಹಿಂದೆ ಕೆಲವು ಆರೋಪಗಳನ್ನು ಮಾಡಿದ್ದರು.

ಓಪನ್ ಎಐ ಸಂಸ್ಥೆಯಲ್ಲಿ ಸಂಶೋಧಕರಾಗಿದ್ದ ಸುಚಿರ್ ಬಾಲಾಜಿಯವರು ಕಳೆದ ಆಗಸ್ಟ್‌ನಲ್ಲಿ ಕಂಪನಿಯನ್ನು ತೊರೆದಿದ್ದರು. ಆ ಬಳಿಕ ಅವರು ನ್ಯೂಯಾರ್ಕ್‌ ಟೈಮ್ಸ್‌ಗೆ ಬರೆದ ಲೇಖನದಲ್ಲಿ ಓಪನ್ ಎಐ ‘ಚಾಟ್‌ಜಿಪಿಟಿ’ಗೆ ತರಬೇತಿ ನೀಡಲು ಕಾಪಿ ರೈಟ್‌ ವಸ್ತುಗಳನ್ನು ಬಳಸುತ್ತಿದೆ ಎಂದು ಆರೋಪಿಸಿದ್ದರು. ಅಮೆರಿಕದ ಕಾಪಿ ರೈಟ್ ನಿಯಮಗಳನ್ನು ಉಲ್ಲಂಘಿಸುತ್ತಿದೆ ಎಂದಿದ್ದರು.

ವರದಿಗಳ ಪ್ರಕಾರ, ಸುಚಿರ್ ಬಾಲಾಜಿಯ ಶವ ದೊರೆತಿರುವ ಅಪಾರ್ಟ್‌ಮೆಂಟ್‌ನಲ್ಲಿ ಮಹಜರು ನಡೆಸಿರುವ ಸ್ಯಾನ್‌ ಫ್ರಾನ್ಸಿಸ್ಕೋ ಪೊಲೀಸರು, ಬಾಲಾಜಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿನ ಹಿಂದೆ ಯಾವುದೇ ಅಪರಾಧ ಕೃತ್ಯ ನಡೆದಿರುವುದಕ್ಕೆ ಪುರಾವೆಗಳಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಆಂತರಿಕ, ಬಾಹ್ಯ ಕಲಹ : ನಿರಾಶ್ರಿತರಾದ 1.1 ಮಿಲಿಯನ್ ಸಿರಿಯಾ ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...